ಪ್ರತಿ ಮನೆಗೆ ನಲ್ಲಿ ನೀರು ವ್ಯವಸ್ಥೆ
ಅರಕೆರೆ ಕೆರೆಗೆ ನೀರು ತುಂಬಿಸುವ ಕಾರ್ಯ ಶೀಘ್ರ: ಶಾಸಕ ರೇಣುಕಾಚಾರ್ಯ
Team Udayavani, Nov 15, 2020, 5:20 PM IST
ಹೊನ್ನಾಳಿ: ಮುಂದಿನ ದಿನಗಳಲ್ಲಿ ಮನೆ ಮನೆಗಳಿಗೆನಲ್ಲಿ ನೀರು ಸರಬರಾಜು ಮಾಡುವ ವ್ಯವಸ್ಥೆ ಮಾಡಲಾಗುವುದು ಎಂದು ಸಿಎಂ ರಾಜಕೀಯ ಕಾರ್ಯದರ್ಶಿ ಶಾಸಕ ಎಂ.ಪಿ. ರೇಣುಕಾಚಾರ್ಯ ಹೇಳಿದರು.
ತಾಲೂಕಿನ ಅರಕೆರೆ ಗ್ರಾಮದಲ್ಲಿ ಶನಿವಾರ ಗ್ರಾಮ ಪಂಚಾಯಿತಿ ಕಟ್ಟಡ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು. 2008ರಲ್ಲಿ ನಾನು ಮೊದಲ ಬಾರಿ ಶಾಸಕನಾದ ಸಂದರ್ಭದಲ್ಲಿ ಅರಕೆರೆಗ್ರಾಮಕ್ಕೆ ಕುಡಿಯುವ ನೀರು ಸರಬರಾಜು ವ್ಯವಸ್ಥೆ ಮಾಡಿದ್ದೆ. ಈಗ ಸರ್ಕಾರದ ಯೋಜನೆಯಂತೆ ಮನೆಗಳಿಗೆ ನೀರು ತಲುಪಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಅರಕೆರೆ ಭಾಗದ ಕೆರೆಗಳಿಗೆ ನೀರು ತುಂಬಿಸುವ ಕಾರ್ಯಕ್ಕೆ ಶೀಘ್ರದಲ್ಲಿಯೇ ಚಾಲನೆ ನೀಡಲಾಗುವುದು. ಇದಕ್ಕಾಗಿ 49 ಕೋಟಿ ರೂ. ಅನುದಾನ ಬಿಡುಗಡೆಗೆ ಸರ್ಕಾರ ಈಗಾಗಲೇ ಒಪ್ಪಿಗೆ ನೀಡಿದೆ. ನ್ಯಾಮತಿ ಮತ್ತು ಹೊನ್ನಾಳಿ ತಾಲೂಕುಗಳನ್ನು ಸಮಗ್ರವಾಗಿ ಅಭಿವೃದ್ಧಿಪಡಿಸಿ ರಾಜ್ಯದಲ್ಲಿಯೇ ಅಭಿವೃದ್ಧಿ ಹೊಂದಿದ ತಾಲೂಕುಗಳನ್ನಾಗಿ ಮಾಡುವ ಮಹದಾಸೆ ನನ್ನದು ಎಂದರು.
ನರೇಂದ್ರ ಮೋದಿಯವರು ಕೇಂದ್ರದಲ್ಲಿ ಅಧಿಕಾರದ ಚುಕ್ಕಾಣಿ ಹಿಡಿದ ನಂತರ ಭಾರತದ ಚಿತ್ರಣವೇ ಬದಲಾಗಿದೆ. ಒಂದು ಕಾಲದಲ್ಲಿ ಭಾರತದ ಬಗ್ಗೆ ವಿಶ್ವದಲ್ಲೆಡೆ ತಾತ್ಸಾರ ಮನೋಭಾವ ಇತ್ತು. ಇಂದು ನರೇಂದ್ರ ಮೋದಿಯವರ ಸ್ವತ್ಛ ಆಡಳಿತ ಹಾಗೂ ಇತರ ಅಂಶಗಳಿಂದವಿಶ್ವದಲ್ಲಿಯೇ ಭಾರತ ಮೊದಲ ಸ್ಥಾನದಲ್ಲಿನಿಲ್ಲುವಂತಾಗಿದೆ ಇದು ಹೆಮ್ಮೆಯ ವಿಷಯವಾಗಿದೆ ಎಂದು ಬಣ್ಣಿಸಿದರು.
ರಾಜ್ಯದಲ್ಲಿ ಬಿ.ಎಸ್. ಯಡಿಯೂರಪ್ಪ ಜನ ಮೆಚ್ಚುವ ಆಡಳಿತ ನೀಡುತ್ತಿದ್ದಾರೆ. ಇಳಿ ವಯಸ್ಸಿನಲ್ಲಿರಾಜ್ಯಕ್ಕೆ ಉತ್ತಮ ಆಡಳಿತ ನೀಡುತ್ತಿರುವುದು ಹಾಗೂ ಹಲವಾರು ಯೋಜನೆಗಳನ್ನು ಸಾಮಾನ್ಯ ಜನರಿಗಾಗಿ ರೂಪಿಸುತ್ತಿದ್ದಾರೆ ಎಂದು ತಿಳಿಸಿದರು.
ಜಿಪಂ ಅಧ್ಯಕ್ಷೆ ದೀಪಾ ಜಗದೀಶ್ ಮಾತನಾಡಿ, ಅಭಿವೃದ್ಧಿ ಹರಿಕಾರರಾಗಿರುವ ಸಿಎಂ ರಾಜಕೀಯಕಾರ್ಯದರ್ಶಿ ಎಂ.ಪಿ. ರೇಣುಕಾಚಾರ್ಯ ಅವರು ಸದಾ ಅಭಿವೃದ್ಧಿ ಬಗ್ಗೆ ಚಿಂತನೆ ನಡೆಸುತ್ತಾರೆ. ಅವಳಿ ತಾಲೂಕುಗಳಿಗೆ ಅವಶ್ಯವಾಗಿರುವ ಕಾಮಗಾರಿಗಳನ್ನು ಹಮ್ಮಿಕೊಳ್ಳುತ್ತಿದ್ದಾರೆ. ಇಂತಹ ಶಾಸಕರು ನಿರಂತರವಾಗಿ ಗೆಲುವು ಸಾ ಧಿಸಬೇಕು ಎಂದು ಆಶಿಸಿದರು.
ಗ್ರಾಮದ ಯುವ ಮುಖಂಡ ಅರಕೆರೆ ನಾಗರಾಜ್ ಮಾತನಾಡಿ, ರೇಣುಕಾಚಾರ್ಯರವರು ಶಾಸಕರಾದ ನಂತರ ನಮ್ಮ ಗ್ರಾಮ ಅಭಿವೃದ್ಧಿ ಸಾಧಿಸಿದೆ. ಗ್ರಾಮದ ತೋಟ, ಹೊಲ, ಗದ್ದೆಗಳಿಗೆ ಹೋಗಿ ಬರಲು ಸಿಮೆಂಟ್ ರಸ್ತೆಗಳಾಗಿವೆ. ಗ್ರಾಮಕ್ಕೆ 30 ಕೋಟಿ ರೂ. ಅನುದಾನದ ಕಾಮಗಾರಿಗಳು ಈಗಾಗಲೇ ನಡೆದಿದೆ. ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಅನುದಾನ ಹರಿದು ಬರಲಿದೆ ಎಂದರು.
ಜಿಪಂ ಸದಸ್ಯರಾದ ಎಂ.ಆರ್. ಮಹೇಶ್, ಸುರೇಂದ್ರ ನಾಯ್ಕ, ತಾಂಡಾ ಅಭಿವೃದ್ಧಿ ನಿಗಮದ ನಿರ್ದೇಶಕ ಮಾರುತಿ ನಾಯ್ಕ, ಎಪಿಎಂಸಿ ನಿರ್ದೇಶಕ ಜಿ.ವಿ. ರಾಜು, ತಾಪಂ ಇಒ ಎಸ್.ಎಲ್. ಗಂಗಾಧರಮೂರ್ತಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davangere:ಡಾ| ಬಿ.ಆರ್. ಅಂಬೇಡ್ಕರ್ ಅವಹೇಳನ; ಶಾ ರಾಜೀನಾಮೆಗೆ ಒತ್ತಾಯಿಸಿ ಬೃಹತ್ ಪ್ರತಿಭಟನೆ
Davanagere:ಅಮಿತ್ ಶಾರನ್ನು ಸಂಪುಟದಿಂದ ವಜಾ ಮಾಡಬೇಕೆಂದು ಒತ್ತಾಯಿಸಿ ಅರೆಬೆತ್ತಲೆ ಮೆರವಣಿಗೆ
Davanagere: ವೃದ್ಧೆ ಮೇಲೆ ಅತ್ಯಾ*ಚಾರ; ಯುವಕನಿಗೆ 10 ವರ್ಷ ಕಠಿಣ ಶಿಕ್ಷೆ
Davanagere: ಬಿಜೆಪಿ-ಕಾಂಗ್ರೆಸ್ ಹೊಂದಾಣಿಕೆ ಆರೋಪದ ಬಗ್ಗೆ ರೇಣುಕಾಚಾರ್ಯ ಸ್ಪಷ್ಟನೆ
Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ ಕಾಂಗ್ರೆಸ್ ಶಾಸಕ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Pushpa 2: ಖಾಕಿಗೆ ಸವಾಲು ಹಾಕುವ ʼಪುಷ್ಪ-2ʼ ಹಾಡು ರಿಲೀಸ್; ವಿವಾದದ ಬೆನ್ನಲ್ಲೇ ಡಿಲೀಟ್
IRCTC Down: ತಾಂತ್ರಿಕ ದೋಷ- ರೈಲು ಟಿಕೆಟ್ ಬುಕ್ಕಿಂಗ್ ಸಮಸ್ಯೆ-ಪ್ರಯಾಣಿಕರ ಆಕ್ರೋಶ
Kazakhstan: ವಿಮಾನ ದುರಂತ ಸಂದರ್ಭದ ಕೊನೆಯ ಕ್ಷಣದ ಭಯಾನಕ ವಿಡಿಯೋ ವೈರಲ್…
Belagavi: ಮಹಾತ್ಮ ಗಾಂಧಿ ಪುತ್ಥಳಿ ಅನಾವರಣಗೊಳಿಸಿದ ಸಿಎಂ ಸಿದ್ದರಾಮಯ್ಯ
Bengaluru: ಚಲಿಸುತ್ತಿದ್ದ ರೈಲಿಗೆ ಸಿಲುಕಿ ಇಬ್ಬರು ಯುವಕರು ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.