ಹುತಾತ್ಮ ಯೋಧರ ಸೌಲಭ್ಯ ಪೊಲೀಸ್‌ಗೂ ಸಿಗಲಿ


Team Udayavani, Oct 22, 2018, 3:06 PM IST

dvg-1.jpg

ದಾವಣಗೆರೆ: ಕರ್ತವ್ಯಪಾಲನೆ ಸಂದರ್ಭದಲ್ಲಿ ಮರಣವನ್ನಪ್ಪುವಂತಹ ಪೊಲೀಸ್‌ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಹುತಾತ್ಮ ಸೈನಿಕರಿಗೆ ದೊರೆಯುವಂತೆ ಎಲ್ಲ ರೀತಿಯ ಸೌಲಭ್ಯ ದೊರೆಯುವಂತಾಗಬೇಕು ಎಂದು ಜಿಲ್ಲಾಧಿಕಾರಿ ಡಾ| ಬಗಾದಿ ಗೌತಮ್‌ ಆಶಿಸಿದ್ದಾರೆ.

ಭಾನುವಾರ ಜಿಲ್ಲಾ ಪೊಲೀಸ್‌ ಕಚೇರಿ ಆವರಣದಲ್ಲಿ ಪೊಲೀಸ್‌ ಹುತಾತ್ಮರ ದಿನಾಚರಣೆ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ದೇಶದ ರಕ್ಷಣೆ ಇತರೆ ಸಂದರ್ಭದಲ್ಲಿ ಹುತಾತ್ಮರಾಗುವಂತಹ ಸೈನಿಕರ ಕುಟುಂಬಕ್ಕೆ ಮನೆ, ಆರೋಗ್ಯ, ಮಕ್ಕಳ ವಿದ್ಯಾಭ್ಯಾಸಕ್ಕೆ ಸೌಲಭ್ಯ ನೀಡಲಾಗುತ್ತದೆ. ಅದೇ ಮಾದರಿಯ ಸೌಲಭ್ಯ ದೇಶದ ಒಳಗಿನ ಸೈನಿಕರಾದ ಪೊಲೀಸ್‌ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ದೊರಕಿಸಿಕೊಡುವ ನಿಟ್ಟಿನಲ್ಲಿ ಇಲಾಖೆಯ ಹಿರಿಯ
ಅಧಿಕಾರಿಗಳು ಗಮನ ನೀಡಬೇಕು ಎಂದರು.

ನಾಗರಿಕ ಸಮಾಜದ ರಕ್ಷಣೆಯಲ್ಲಿ ಸದಾ ಮುಂಚೂಣಿಯಲ್ಲಿರುವ ಪೊಲೀಸ್‌ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ನೆರವು ನೀಡುವವರು ಇದ್ದಾರೆ. ಸರ್ಕಾರ, ಪೊಲೀಸ್‌ ಜೊತೆಗೆ ಇತರೆ ಇಲಾಖೆ, ಸಂಘ-ಸಂಸ್ಥೆಗಳು, ಸ್ವಯಂ ಸೇವಾ ಸಂಸ್ಥೆಗಳು, ದಾನಿಗಳಿಂದ ದೇಣಿಗೆ ಸಂಗ್ರಹಿಸಿ, ಅದನ್ನು ಕರ್ತವ್ಯಪಾಲನೆ ಸಂದರ್ಭದಲ್ಲಿ ಹುತಾತ್ಮರಾಗುವಂತಹ ಪೊಲೀಸ್‌ ಅಧಿಕಾರಿಗಳು ಮತ್ತು ಸಿಬ್ಬಂದಿ ಕುಟುಂಬಕ್ಕೆ ಬಳಕೆ ಮಾಡುವಂತಹ ಸಾಂಸ್ಥಿಕ ಜವಾಬ್ದಾರಿ ಸಂಸ್ಥೆ ಪ್ರಾರಂಭಿಸುವತ್ತ ಸಂಬಂಧಿತರು ಆದ್ಯತೆ ನೀಡಬೇಕು ಎಂದು ತಿಳಿಸಿದರು.

ಕಳೆದ ಸೆ.1 ರಿಂದ ಆ. 31ರ ವರೆಗೆ ರಾಜ್ಯದಲ್ಲಿ 15 ಜನ ಪೊಲೀಸ್‌ ಅಧಿಕಾರಿಗಳು, ಸಿಬ್ಬಂದಿ ಒಳಗೊಂಡಂತೆ ದೇಶದ್ಯಾಂತ 414 ಜನರು ಹುತಾತ್ಮರಾಗಿದ್ದಾರೆ. ಪೊಲೀಸ್‌ ಇಲಾಖೆ ಜೊತೆಗೆ ಸಿಆರ್‌ಪಿಎಫ್‌, ಬಿಎಸ್‌ಎಫ್‌ ಇತರೆ ರಕ್ಷಣಾ ಪಡೆಗಳ ಅಧಿಕಾರಿಗಳು, ಸಿಬ್ಬಂದಿ ಹುತಾತ್ಮರಾಗಿದ್ದಾರೆ. ಸಾರ್ವಜನಿಕರು, ಆಸ್ತಿ ರಕ್ಷಣೆಯ ಕರ್ತವ್ಯದಲ್ಲಿ ಹುತಾತ್ಮರಾದವರನ್ನು ಪ್ರತಿಯೊಬ್ಬರು ಸ್ಮರಿಸುವ ಮೂಲಕ ಗೌರವ ಸಲ್ಲಿಸಬೇಕು ಎಂದು ತಿಳಿಸಿದರು.

ಕರ್ನಾಟಕ ಹೊರತುಪಡಿಸಿದಂತೆ ಇತರೆ ರಾಜ್ಯಗಳಲ್ಲಿ ಅತಿ ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸ್‌ ಇಲಾಖೆ ಜೊತೆಗೆ ಸಿಆರ್‌ಪಿಎಫ್‌, ಬಿಎಸ್‌ ಎಫ್‌ ಇತರೆ ರಕ್ಷಣಾ ಪಡೆಗಳ ಅಧಿಕಾರಿಗಳು, ಸಿಬ್ಬಂದಿ ಹುತಾತ್ಮರಾಗಿದ್ದಾರೆ. ಕರ್ನಾಟಕಕ್ಕೆ ಹೋಲಿಕೆ ಮಾಡಿದಲ್ಲಿ ಇತರೆ ರಾಜ್ಯಗಳಲ್ಲಿ ಗಲಭೆ, ಮಾವೋವಾದ, ಭಯೋತ್ಪಾದಕ ಚಟುವಟಿಕೆಗಳ ಸಂಖ್ಯೆ ಹೆಚ್ಚು. ಕರ್ನಾಟಕದಲ್ಲಿ ಶಾಂತಿಯುತ ವಾತಾವರಣ ಇದೆ. ಅದಾಗ್ಯೂ ನಮ್ಮಲ್ಲಿ 15 ಅಧಿಕಾರಿಗಳು ಮತ್ತು ಸಿಬ್ಬಂದಿ ಹುತಾತ್ಮರಾಗಿದ್ದಾರೆ. ರಾಯಚೂರು ಜಿಲ್ಲೆಯಲ್ಲಿ ಚುನಾವಣಾ ಕಾರ್ಯಕ್ಕೆ ನಿಯೋಜಿತರಾಗಿದ್ದ ಪಿಎಸ್‌ಐ ಒಬ್ಬರು ಸಾವನ್ನಪ್ಪಿದ್ದರು ಎಂದು ಸ್ಮರಿಸಿದರು.

ಯಾವುದೇ ರೀತಿಯ ಸಮಾಜಘಾತುಕ, ವಿಧ್ವಂಸಕ ಕೃತ್ಯಗಳು ನಡೆದ ಕ್ಷಣಗಳಲ್ಲಿ ರಕ್ಷಣಾ ಕಾರ್ಯಕ್ಕೆ ಬರುವರು ದೇಶದ ಒಳಗಿನ ಸೈನಿಕರಾದ ಪೊಲೀಸರು. ಕೆಲವೊಮ್ಮೆ ಘಟನೆಗೆ ಪ್ರತಿಕ್ರಿಯಿಸುವುದಕ್ಕೂ ಸಮಯವೇ ಇರುವುದಿಲ್ಲ. ಆದರೂ, ಸಾರ್ವಜನಿಕರ ರಕ್ಷಣೆಗೆ ಧಾವಿಸಬೇಕಾಗುತ್ತದೆ. ಮುಂಬೈ ದಾಳಿಯ ಸಂದರ್ಭದಲ್ಲಿ ಪೊಲೀಸ್‌ ಅಧಿಕಾರಿ ಹೇಮಂತ್‌ ಕರ್ಕರೆಗೆ ಭಯೋತ್ಪಾದಕರು ದಾಳಿ ಮಾಡಿದ್ದಾರೆ ಎಂಬುದೇ ಗೊತ್ತಾಗದ ಕಾರಣಕ್ಕೆ ಸರ್ವಿಸ್‌ ಪಿಸ್ತೂಲ್‌ ನೊಂದಿಗೆ ರಕ್ಷಣಾ ಕಾರ್ಯಕ್ಕೆ ಮುಂದಾಗಿ, ಕೊನೆಗೆ ಹುತಾತ್ಮರಾದರು ಎಂದು ತಿಳಿಸಿದರು.

ಉತ್ತರ ಭಾರತದಲ್ಲಿ ದೇವಮಾನವರೊಬ್ಬರ ಬಂಧನದ ಸಂದರ್ಭದಲ್ಲಿ ಏಕಾಏಕಿ ಗಲಭೆ ಉಂಟಾಯಿತು. ಅದನ್ನು ನಿಯಂತ್ರಿಸುವ ವೇಳೆ ಅನೇಕರು ಪೊಲೀಸ್‌ ಅಧಿಕಾರಿಗಳು, ಸಿಬ್ಬಂದಿ ಬಲಿಯಾಗಬೇಕಾಯಿತು. ಹಿಂದೆ ಕಾನೂನು ಮತ್ತು ಸುವ್ಯವಸ್ಥೆಗೆ ಮಾತ್ರವೇ ಇದ್ದ ಪೊಲೀಸ್‌ ಅಧಿಕಾರಿಗಳು, ಸಿಬ್ಬಂದಿ ಈಗ ಕಾನೂನು, ಸುವ್ಯವಸ್ಥೆ ಜೊತೆಗೆ ಪ್ರಕೃತಿ ವಿಕೋಪ ಇತರೆ ಸಂದರ್ಭದಲ್ಲೂ ಕರ್ತವ್ಯ ನಿಭಾಯಿಸಬೇಕಾಗುತ್ತದೆ. ಇಂತಹ ಘಟನೆಗಳ ಅವಲೋಕಿಸಿದರೆ ಕಾಲ ಬದಲಾವಣೆಗೆ ತಕ್ಕಂತೆ ಪೊಲೀಸ್‌ ಇಲಾಖೆ ಎದುರಿಸಬೇಕಾದ ಸವಾಲುಗಳು ಹೆಚ್ಚಾಗುತ್ತಿವೆ ಎಂಬುದು ಗೊತ್ತಾಗುತ್ತದೆ. ಅಂತಹ ಸವಾಲುಗಳನ್ನು ಪೊಲೀಸ್‌ ಇಲಾಖೆ ಅತಿ ಸಮರ್ಥವಾಗಿ ನಿಭಾಯಿಸುತ್ತಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಜಿಲ್ಲಾ ರಕ್ಷಣಾಧಿಕಾರಿ ಆರ್‌. ಚೇತನ್‌ ಮಾತನಾಡಿ, 1959 ಅ. 21 ರಂದು ಲಡಾಖ್‌ನ ಆಸ್ಟ್ರಿಂಗ್‌ ಪ್ರದೇಶದಲ್ಲಿ ಸಿಆರ್‌ಪಿಎಫ್‌ ಡಿಎಸ್ಪಿ ಕರಣ್‌ಸಿಂಗ್‌ ಮತ್ತವರ ತಂಡ ಗಸ್ತುನಲ್ಲಿದ್ದಾಗ ಚೀನಾ ಸೈನಿಕರು ಎಕೆ-47 ಮುಂತಾದ ಅತ್ಯಾಧುನಿಕ ಶಸ್ತ್ರಾಸ್ತ್ರಗಳೊಂದಿಗೆ ದಾಳಿ ಮಾಡಿದರು. ಸಾಮಾನ್ಯ ಬಂದೂಕುಗಳೊಂದಿಗೆ ಕರಣ್‌ಸಿಂಗ್‌ ಮತ್ತವರ ತಂಡ ಧೈರ್ಯ, ಸಾಹಸ, ವಿರೋಚಿತ ಹೋರಾಟ ನಡೆಸಿತು. ಆ ದಾಳಿಯಲ್ಲಿ 10 ಜನರು ವೀರಮರಣ ಹೊಂದಿದರು. 9 ಜನರನ್ನು ಚೀನಿ ಸೈನಿಕರು ಬಂಧಿಸಿದರು. ಕರ್ತವ್ಯಪಾಲನೆಯಲ್ಲಿ ಹುತಾತ್ಮರಾದ ಸಿಆರ್‌ಪಿಎಫ್‌ ಯೋಧರ ಸ್ಮರಣೆಗಾಗಿ, ಪ್ರತಿ ವರ್ಷ ಅ. 21 ರಂದು ಪೊಲೀಸ್‌ ಹುತಾತ್ಮರ ದಿನಾಚರಣೆ ನಡೆಯುತ್ತಿದೆ ಎಂದರು.

ಹೆಚ್ಚುವರಿ ಪೊಲೀಸ್‌ ಅಧೀಕ್ಷಕ ಟಿ.ಎಸ್‌.ಉದೇಶ್‌ ಇತರರು ಇದ್ದರು. ನಾಗರಿಕರು, ಸ್ವಯಂ ಸೇವಾ ಸಂಸ್ಥೆ, ಸಂಘಗಳ ಪದಾಧಿಕಾರಿಗಳು, ಮಾಧ್ಯಮದವರು, ನಿವೃತ್ತರು ಹುತಾತ್ಮರ ಸ್ಮಾರಕಕ್ಕೆ ಪುಷ್ಪಗುತ್ಛ ಸಮರ್ಪಿಸುವ ಮತ್ತು ಗಾಳಿಯಲ್ಲಿ ಮೂರು ಸುತ್ತು ಗುಂಡು ಹಾರಿಸುವ ಮೂಲಕ ಗೌರವ ಸಲ್ಲಿಸಲಾಯಿತು.

ಟಾಪ್ ನ್ಯೂಸ್

Laxmi-Heebalakar1

ಸಿ.ಟಿ.ರವಿ ಮನಸ್ಸಲ್ಲೇ ಕೊಳೆ ತುಂಬಿದೆ, ಫೆನಾಯಿಲ್‌ ಹಾಕಿ ತೊಳೆದುಕೊಳ್ಳಲಿ: ಸಚಿವೆ ಲಕ್ಷ್ಮೀ

Kalaburagi-Acci

Kalaburagi: ಟಿಟಿ ಟಯರ್‌ ಸ್ಫೋಟಗೊಂಡು ಸರಣಿ ಅಪಘಾತ; ಮೂವರು ಸ್ಥಳದಲ್ಲೇ ಮೃತ್ಯು!

Jagadambika-Pal-(JPC)

Waqf Issue: ನಾಳೆಯಿಂದ ಜೆಪಿಸಿ ಎದುರು ಕರ್ನಾಟಕ ಸೇರಿ 6 ರಾಜ್ಯಗಳ ಪ್ರತಿನಿಧಿಗಳು ಹಾಜರು

ಪತ್ನಿಗಾಗಿ ಕೆಲಸದಿಂದ ನಿವೃತ್ತಿ ಪಡೆದ ಪತಿ; ಬೀಳ್ಕೊಡುಗೆ ಕಾರ್ಯಕ್ರಮದಲ್ಲೇ ಪತ್ನಿ ಮೃತ್ಯು

ಪತ್ನಿಗಾಗಿ ಕೆಲಸದಿಂದ ನಿವೃತ್ತಿ ಪಡೆದ ಪತಿ; ಬೀಳ್ಕೊಡುಗೆ ಕಾರ್ಯಕ್ರಮದಲ್ಲೇ ಪತ್ನಿ ಮೃತ್ಯು

Manipal: ಹಿರಿಯ ವೈದ್ಯೆ ಡಾ. ಆಶಾ ಭಟ್ ನಿಧನ

Manipal: ಹಿರಿಯ ವೈದ್ಯೆ ಡಾ. ಆಶಾ ಭಟ್ ನಿಧನ

ಕಾಲ್ತುಳಿತ ಪ್ರಕರಣ: ಅಲ್ಲು, ʼಪುಷ್ಪ-2ʼ ತಂಡದಿಂದ ರೇವತಿ ಕುಟುಂಬಕ್ಕೆ 2 ಕೋಟಿ ರೂ. ಪರಿಹಾರ

ಕಾಲ್ತುಳಿತ ಪ್ರಕರಣ: ಅಲ್ಲು, ʼಪುಷ್ಪ-2ʼ ತಂಡದಿಂದ ರೇವತಿ ಕುಟುಂಬಕ್ಕೆ 2 ಕೋಟಿ ರೂ. ಪರಿಹಾರ

Munirtahana–Egg

Egg Thrown: ಬಿಜೆಪಿ ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆತ; ಮೂವರ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-dvg

Davangere:ಡಾ| ಬಿ.ಆರ್. ಅಂಬೇಡ್ಕರ್ ಅವಹೇಳನ; ಶಾ ರಾಜೀನಾಮೆಗೆ ಒತ್ತಾಯಿಸಿ ಬೃಹತ್ ಪ್ರತಿಭಟನೆ

1-dvg

Davanagere:ಅಮಿತ್ ಶಾರನ್ನು ಸಂಪುಟದಿಂದ ವಜಾ ಮಾಡಬೇಕೆಂದು ಒತ್ತಾಯಿಸಿ ಅರೆಬೆತ್ತಲೆ ಮೆರವಣಿಗೆ

sullia

Davanagere: ವೃದ್ಧೆ ಮೇಲೆ ಅತ್ಯಾ*ಚಾರ; ಯುವಕನಿಗೆ 10 ವರ್ಷ ಕಠಿಣ ಶಿಕ್ಷೆ

MP-R

Davanagere: ಬಿಜೆಪಿ-ಕಾಂಗ್ರೆಸ್‌ ಹೊಂದಾಣಿಕೆ ಆರೋಪದ ಬಗ್ಗೆ ರೇಣುಕಾಚಾರ್ಯ ಸ್ಪಷ್ಟನೆ

Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ‌ ಕಾಂಗ್ರೆಸ್ ಶಾಸಕ

Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ‌ ಕಾಂಗ್ರೆಸ್ ಶಾಸಕ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

byndoor

Siddapura: ಪಾದಚಾರಿಗೆ ಪಿಕಪ್‌ ವಾಹನ ಢಿಕ್ಕಿ; ಗಂಭೀರ

Laxmi-Heebalakar1

ಸಿ.ಟಿ.ರವಿ ಮನಸ್ಸಲ್ಲೇ ಕೊಳೆ ತುಂಬಿದೆ, ಫೆನಾಯಿಲ್‌ ಹಾಕಿ ತೊಳೆದುಕೊಳ್ಳಲಿ: ಸಚಿವೆ ಲಕ್ಷ್ಮೀ

6

Bantwal: ತುಂಬೆ ಜಂಕ್ಷನ್‌; ಸರಣಿ ಅಪಘಾತ

Untitled-1

Kasaragod ಅಪರಾಧ ಸುದ್ದಿಗಳು: ವಿದ್ಯಾರ್ಥಿನಿಯರಿಗೆ ಕಿರುಕುಳ; ಕೇಸು ದಾಖಲು

Brahmavar

Brahmavar: ಆರೂರು; ಬೆಂಕಿ ತಗಲಿ ಗಾಯಗೊಂಡಿದ್ದ ಮಹಿಳೆ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.