ಬ್ಯಾನರ್-ಬಂಟಿಂಗ್ಸ್ ಹಚ್ಚಿದ್ರೆ ಕ್ರಿಮಿನಲ್ ಕೇಸ್
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹನುಮಂತರಾಯ ಎಚ್ಚರಿಕೆ
Team Udayavani, Sep 14, 2020, 5:57 PM IST
ದಾವಣಗೆರೆ: ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ದೊಡ್ಡ ದೊಡ್ಡ ಬ್ಯಾನರ್, ಬಂಟಿಂಗ್ಸ್, ಕಟೌಟ್ ಹಾಗೂ ಪೋಸ್ಟರ್ ಹಚ್ಚಬಾರದು. ಒಂದೇ ವೇಳೆ ಹಚ್ಚಿದರೆ ಗುತ್ತಿಗೆದಾರರು, ಮುದ್ರಣ ಮಾಲೀಕರು ಹಾಗೂ ಮುದ್ರಣ ಮಾಡಿಸಿದವರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಲಾಗುವುದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹನುಮಂತರಾಯ ಎಚ್ಚರಿಕೆ ನೀಡಿದರು.
ನಗರದ ಜಿಲ್ಲಾ ಪೊಲೀಸ್ ಕಚೇರಿ ಸಭಾಂಗಣದಲ್ಲಿ ನಡೆದ ಧಾರ್ಮಿಕ ಮುಖಂಡರು, ಬ್ಯಾನರ್ ಮತ್ತು ಬಂಟಿಂಗ್ಸ್ ಮುದ್ರಣ ಮಾಲೀಕರು ಹಾಗೂ ಬ್ಯಾನರ್ ಮತ್ತು ಬಂಟಿಂಗ್ಸ್‌ಗಳನ್ನು ಕಟ್ಟುವಂತಹ ಗುತ್ತಿಗೆದಾರರ ಸಭೆಯಲ್ಲಿ ಅವರು ಮಾತನಾಡಿದರು. ನಗರದ ವಿವಿಧ ವೃತ್ತಗಳಲ್ಲಿ ಹಬ್ಬ-ಹರಿದಿನಗಳು, ಜನ್ಮದಿನಾಚರಣೆ ಸೇರಿದಂತೆ ವಿವಿಧ ಕಾರ್ಯಕ್ರಮಗಳಿಗೆ ಸಂಬಂಧಿಸಿ ವಿವಿಧ ಸಂಘ ಸಂಸ್ಥೆಗಳ ಮುಖ್ಯಸ್ಥರು, ಮುಖಂಡರು ಟ್ರಾಫಿಕ್ ಸಿಗ್ನಲ್ ವೃತ್ತಗಳಲ್ಲಿ ದೊಡ್ಡ ಪ್ರಮಾಣದ ಬ್ಯಾನರ್, ಕಟೌಟ್‌ಗಳನ್ನು ಅಳವಡಿಸುತ್ತಿದ್ದಾರೆ. ಇದು ಸಿಸಿ ಕ್ಯಾಮರಾ, ಸಿಗ್ನಲ್ ದೀಪಗಳಿಗೆ ಅಡ್ಡವಾಗಿ ಸುಗಮ ಸಂಚಾರಕ್ಕೆ ತೊಡಕಾಗುತ್ತಿವೆ ಎಂದರು.
ಇದರಿಂದಾಗಿ ಟ್ರಾಫಿಕ್ ಸಿಗ್ನಲ್ ದೀಪಗಳು ವಾಹನ ಸವಾರರಿಗೆ ಗೋಚರಿಸದೇ ಲಘು ಅಪಘಾತಗಳುಹಾಗೂ ಮಾರಣಾಂತಿಕ ಅಪಘಾತಗಳು ಸಂಭವಿಸುತ್ತಿವೆ. ಈ ಬಗ್ಗೆ ಅನೇಕ ಬಾರಿ ಬ್ಯಾನರ್ ಮತ್ತು ಬಂಟಿಂಗ್ಸ್‌ಗಳನ್ನು ಕಟ್ಟುವಂತಹ ಗುತ್ತಿಗೆದಾರರಿಗೆ ಮೌಖೀಕ ಎಚ್ಚರಿಕೆ ನೀಡಿದರೂ ಅವರು ಅದೇ ಪ್ರವೃತ್ತಿಯನ್ನು ಮುಂದುವರೆಸಿಕೊಂಡು ಬಂದಿದ್ದಾರೆ. ಇನ್ನು ಮುಂದೆ ಹಾಗೆ ಮಾಡಿದರೆ ಬ್ಯಾನರ್ ಮತ್ತು ಬಂಟಿಂಗ್ಸ್‌ಗಳನ್ನು ಕಟ್ಟುವಂತಹ ಗುತ್ತಿಗೆದಾರರನ್ನು, ಬ್ಯಾನರ್ ಮತ್ತು ಬಂಟಿಂಗ್ಸ್‌ಗಳನ್ನು ಮುದ್ರಣ ಮಾಡುವ ಮಾಲೀಕರನ್ನು ಹಾಗೂ ಬ್ಯಾನರ್ ಮತ್ತು ಬಂಟಿಂಗ್ಸ್‌ಗಳನ್ನು ಮುದ್ರಣ ಮಾಡಿಸಿರುತ್ತಾರೋ ಅವರನ್ನು ಪ್ರಕರಣದಲ್ಲಿ ಸೇರಿಸಲಾಗುವುದು. ಅದೇ ರೀತಿ ಸರ್ಕಾರಿ ಸ್ವಾಮ್ಯದ ಆಸ್ತಿ ವಿರೋಪಗೊಳಿಸಿದ ಪ್ರಯುಕ್ತ ಕ್ರಿಮಿನಲ್ ಮೊಕದ್ದಮೆಯನ್ನೂ ದಾಖಲಿಸಲಾಗುವುದು ಎಂದು ತಿಳಿಸಿದರು.
ಸಭೆಯಲ್ಲಿ ಮಹಾನಗರ ಪಾಲಿಕೆ ಆಯುಕ್ತ ವಿಶ್ವನಾಥ ಮುದ್ದಜ್ಜಿ ,ಹೆಚ್ಚುವರಿ ಜಿಲ್ಲಾ ಪೊಲೀಸ್ ಅಧೀಕ್ಷಕರು ಹಾಗೂ ಗಣ್ಯರು ಸಭೆಯಲ್ಲಿದ್ದರು.
ಬ್ಯಾನರ್ ಮತ್ತು ಬಂಟಿಂಗ್ಸ್‌ಗಳನ್ನು ಅಳವಡಿಸಲು ಅನುಮತಿ ನೀಡುವ ಸಂದರ್ಭದಲ್ಲಿ ಸಿಸಿ ಕ್ಯಾಮರಾ, ಸಿಗ್ನಲ್ ದೀಪಕ್ಕೆ ಅಡ್ಡಿಯಾಗದಂತೆ ಅಳವಡಿಸುವ ಷರತ್ತಿನೊಂದಿಗೆ ಅನುಮತಿ ನೀಡಲಾಗುವುದು. ಇದನ್ನು ಉಲ್ಲಂಘಿಸಿದವರ ಮೇಲೆ ಪ್ರಕರಣ ದಾಖಲಿಸಿ ಕಾನೂನು ಕ್ರಮ ಜರುಗಿಸಲಾಗುವುದು. –ಹನುಮಂತರಾಯ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davangere: ಉತ್ತಮ ಹಿಂಗಾರು: ಬಂಪರ್ ಇಳುವರಿ ನಿರೀಕ್ಷೆಯಲ್ಲಿ ಬೆಳೆಗಾರರು
Nyamathi: ಕಾಡುಪ್ರಾಣಿಗಳಿಗೆ ಇರಿಸಿದ್ದ 32 ನಾಡ ಬಾಂಬ್ ಗಳು ಪತ್ತೆ
Davangere:ಡಾ| ಬಿ.ಆರ್. ಅಂಬೇಡ್ಕರ್ ಅವಹೇಳನ; ಶಾ ರಾಜೀನಾಮೆಗೆ ಒತ್ತಾಯಿಸಿ ಬೃಹತ್ ಪ್ರತಿಭಟನೆ
Davanagere:ಅಮಿತ್ ಶಾರನ್ನು ಸಂಪುಟದಿಂದ ವಜಾ ಮಾಡಬೇಕೆಂದು ಒತ್ತಾಯಿಸಿ ಅರೆಬೆತ್ತಲೆ ಮೆರವಣಿಗೆ
Davanagere: ವೃದ್ಧೆ ಮೇಲೆ ಅತ್ಯಾ*ಚಾರ; ಯುವಕನಿಗೆ 10 ವರ್ಷ ಕಠಿಣ ಶಿಕ್ಷೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Data Theft: ಕಂಪನಿಯ ಡೇಟಾ ಕದ್ದು 12.5 ಕೋಟಿ ವಂಚನೆ ಮಾಡಿದ ಬ್ಯಾಂಕ್ ಮ್ಯಾನೇಜರ್!
Out of Syllabus Review; ಪ್ರೇಮಿಗಳಿಗೆ ಹೊಸ ಸಿಲೆಬಸ್
INDvAUS; ಇತಿಹಾಸದಲ್ಲೇ ಮೊದಲ ಬಾರಿಗೆ…: 200 ವಿಕೆಟ್ ನೊಂದಿಗೆ ಹೊಸ ದಾಖಲೆ ಬರೆದ ಬುಮ್ರಾ
Aranthodu: ಉಡುಪಿಗೆ ಭತ್ತದ ಲೋಡ್ ಸಾಗಿಸುತ್ತಿದ್ದ ವೇಳೆ ಲಾರಿಗೆ ಆಕಸ್ಮಿಕ ಬೆಂಕಿ
Anandapura: ಬಸ್ ಹಾಗೂ ಕಾರು ಮುಖಾಮುಖಿ ಡಿಕ್ಕಿ; ಇಬ್ಬರು ಸ್ಥಳದಲ್ಲೇ ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.