ಪೊಲೀಸ್‌ ದೌರ್ಜನ್ಯ: ಯುವಕ ಆತ್ಮಹತ್ಯೆಗೆ ಯತ್ನ


Team Udayavani, Feb 10, 2017, 12:35 PM IST

dvg5.jpg

ದಾವಣಗೆರೆ: ಅಪಘಾತ ಪ್ರಕರಣವೊಂದರಲ್ಲಿ ಬೇಕಾಗಿದ್ದ ಆರೋಪಿಯ ಸಹೋದರನ ಮೇಲೆ ಪೊಲೀಸರು ಹಲ್ಲೆ ಮಾಡಿದ ಪರಿಣಾಮ, ಆ ಯುವಕ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಗುರುವಾರ ನಗರದಲ್ಲಿ ನಡೆದಿದೆ. ತಾಲ್ಲೂಕಿನ ಲೋಕಿಕೆರೆ ನಿವಾಸಿ ನಾಗರಾಜ (28) ವಿಷಸೇವಿಸಿ, ತೀವ್ರ ಅಸ್ವಸ್ಥಗೊಂಡು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.  

ಅಪಘಾತ ಪ್ರಕರಣವೊಂದರಲ್ಲಿ ನಾಗರಾಜನ ಸಹೋದರಅರುಣ್‌ ಪೊಲೀಸರಿಗೆ ಬೇಕಾಗಿದ್ದ. ವಿಚಾರಣೆ ನಡೆಸುವ ನೆಪದಲ್ಲಿ ನಾಗರಾಜ್‌ ಮೇಲೆ ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಬುಧವಾರ ಸಂಜೆ 4 ಗಂಟೆಗೆ ಹದಡಿ ರಸ್ತೆಯಲ್ಲಿನ ಗ್ರಾಮಾಂತರ ಠಾಣೆಗೆ ನಾಗರಾಜ್‌ನನ್ನು ಕರೆದೊಯ್ದಿದ್ದರು. ರಾತ್ರಿ 8 ಗಂಟೆಯವರೆಗೆ ಆತನನ್ನು ವಿಚಾರಣೆಗೆ ಒಳಪಡಿಸಿದ್ದಾರೆ.

ಈ ವೇಳೆ ಆತನ ಮೇಲೆ ದೈಹಿಕ ಹಲ್ಲೆ ಮಾಡಿದ್ದಾರೆ ಎನ್ನಲಾಗಿದೆ. ಪೊಲೀಸ್‌ ಠಾಣೆಯಿಂದ ಬಂದ ನಂತರ ನಾಗರಾಜ್‌ ದಾವಣಗೆರೆಯ ಸಿದ್ದವೀರಪ್ಪ ಬಡಾವಣೆಯಲ್ಲಿನ ಆತನ ಅಕ್ಕನ ಮನೆಗೆ ಹೋಗಿ, ನಡೆದ ವೃತ್ತಾಂತವನ್ನೆಲ್ಲಾ ತಿಳಿಸಿದ್ದಾನೆ. ಬೆಳಗ್ಗೆ 6 ಗಂಟೆಗೆ ಎದ್ದು ಮನೆಯಿಂದ ತಾನು ಕೆಲಸ ಮಾಡುತ್ತಿದ್ದ ಟ್ರಾನ್ಸ್‌ಪೊàರ್ಟ್‌ ಕಂಪನಿಗೆ ಹೋಗುವುದಾಗಿ ತಿಳಿಸಿ, ಹೊರಬಂದಿದ್ದಾನೆ.

ಆದರೆ, ಕೆಲಹೊತ್ತಿನಲ್ಲೇ ಆತ ವಿಷ ಸೇವಿಸಿದ್ದು, ಶಿವಪ್ಪಯ್ಯ ವೃತ್ತದಲ್ಲಿದ್ದು ಕಣ್ಣು ಮಂಜಾಗುತ್ತಿರುವುದಾಗಿ ತನ್ನ ಅಕ್ಕನಿಗೆ ದೂರವಾಣಿ ಮೂಲಕ ತಿಳಿಸಿದ್ದಾನೆ. ಈ ವೇಳೆ ಆತನಿದ್ದ ಸ್ಥಳಕ್ಕೆ ಧಾವಿಸಿದ ಅಕ್ಕ ಮತ್ತು ಭಾವ ತಕ್ಷಣ ನಾಗರಾಜ್‌ನನ್ನು ಆಸ್ಪತ್ರೆಗೆ ಸೇರಿಸಿದ್ದಾರೆ. ನಾಗರಾಜ್‌ ಪತ್ರವೊಂದನ್ನು ಬರೆದಿದ್ದು, ಅದರಲ್ಲಿ ಪಿಎಸ್‌ಐ ಶ್ರೀಧರ್‌ ಎಂಬುವವರು ನನ್ನ ಮೇಲೆ ಮಾರಣಾಂತಿಕ ಹಲ್ಲೆ ಮಾಡಿದ್ದಾರೆ.

ವಿಚಾರಣೆ ನೆಪದಲ್ಲಿ ನನ್ನನ್ನು ತೀವ್ರವಾಗಿ ಅವಮಾನಿಸಿದ್ದಾರೆ. ನಾನು ಯಾವುದೇ ತಪ್ಪುಮಾಡದೇ ಇದ್ದರೂ ನನ್ನನ್ನು ಅಪರಾಧಿ ಹಾಗೆ ನೋಡಿದರು. ನೀವು ಇದೇ ರೀತಿ ಮಾಡುವುದಾದರೆ ನಾನು ವಿಷ ಕುಡಿದು ಸಾಯುತ್ತೇನೆ ಎಂದು ಹೇಳಿದಾಗಲೂ ಅವರು ಅಮಾನವೀಯವಾಗಿ ವರ್ತಿಸಿದ್ದಾರೆ.

ಕುಡಿದು ಸಾಯಿ ಎಂದು ಹೀಯಾಳಿಸಿದ್ದಾರೆ. ಇದೇ ಕಾರಣಕ್ಕೆ ನಾನು ಮನ ನೊಂದು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ. ನನ್ನ ಸಾವಿಗೆ ಪೊಲೀಸರು ಕಾರಣ ಎಂದು ತಿಳಿಸಿರುವುದಾಗಿ ಆತನ ಸಹೋದರಿ ವನಿತಾ ಪತ್ರಿಕೆಗೆ ಮಾಹಿತಿ ನೀಡಿದ್ದಾರೆ. 

ಟಾಪ್ ನ್ಯೂಸ್

Parameshwar

Waqf issue; ಬಿಜೆಪಿಯಿಂದ ಕೋಮು ಗಲಭೆಗೆ ಯತ್ನ: ಕಾಂಗ್ರೆಸ್‌

Chaluvarayaswamy

Kumaraswamy ಅವರಿಗೆ ಜತೆಗಿರುವಾಗ ಕೊಚ್ಚೆ ವಾಸನೆ ಬರಲಿಲ್ಲವೇ?: ಚಲುವರಾಯಸ್ವಾಮಿ ತಿರುಗೇಟು

Mangaluru-Sahakara

Mangaluru: ಸಹಕಾರ ಆಂದೋಲನ ಜನರ ಆಂದೋಲನವಾಗಲಿ: ಸಚಿವ ಕೆ.ಎನ್‌.ರಾಜಣ್ಣ

1-reee

BJP; 50 ಅಲ್ಲ ,100 ಕೋಟಿ ರೂ. ಆಮಿಷ: ಶಾಸಕ ರವಿ ಗಣಿಗ!

BBK11: ಏರು ಧ್ವನಿಯಲ್ಲೇ ತರಾಟೆಗೆ ತೆಗೆದುಕೊಂಡ ಕಿಚ್ಚ.. ಚೈತ್ರಾ ಕುಂದಾಪುರ ಕಕ್ಕಾಬಿಕ್ಕಿ

BBK11: ಏರು ಧ್ವನಿಯಲ್ಲೇ ತರಾಟೆಗೆ ತೆಗೆದುಕೊಂಡ ಕಿಚ್ಚ.. ಚೈತ್ರಾ ಕುಂದಾಪುರ ಕಕ್ಕಾಬಿಕ್ಕಿ

PKL 2024 : ಬುಲ್ಸ್‌ : 8ನೇ ಸೋಲಿನ ನಂಟು

PKL 2024 : ಬುಲ್ಸ್‌ : 8ನೇ ಸೋಲಿನ ನಂಟು

Santhosh-lad

Dharawad: ಬಿಜೆಪಿಯವರಿಗೆ ವಕ್ಫ್ ಬಿಟ್ಟು ಬೇರೆ ವಿಷಯವೇ ಇಲ್ಲ: ಸಚಿವ ಸಂತೋಷ್‌ ಲಾಡ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

School-Chikki

Davanagere: ಮೊಟ್ಟೆ ವಿತರಣೆಯಲ್ಲಿ ಲೋಪ; ಮುಖ್ಯ ಶಿಕ್ಷಕಿ, ದೈಹಿಕ ಶಿಕ್ಷಣ ಶಿಕ್ಷಕ ಅಮಾನತು

Omission in egg distribution, head teacher, physical education teacher suspended

Davanagere: ಮೊಟ್ಟೆ ವಿತರಣೆಯಲ್ಲಿ ಲೋಪ; ಮುಖ್ಯ ಶಿಕ್ಷಕಿ, ದೈಹಿಕ ಶಿಕ್ಷಣ ಶಿಕ್ಷಕ ಅಮಾನತು

renukaacharya

BJP;ಯತ್ನಾಳ್ ರನ್ನು ತಡೆಯದಿದ್ದರೆ ನಾನೂ ಪ್ರತ್ಯೇಕ ಪಾದಯಾತ್ರೆ ಮಾಡುತ್ತೇನೆ:ರೇಣುಕಾಚಾರ್ಯ

DVG-Rail

Save Life: ಆಯತಪ್ಪಿ ಬಿದ್ದು ರೈಲಿನಡಿ ಸಿಲುಕುತ್ತಿದ್ದ ಪ್ರಯಾಣಿಕನ ಕಾಪಾಡಿದ ಹೋಂಗಾರ್ಡ್‌!

Receive Kantraj report and reveal: Anjaney’s appeal to CM

Davanagere: ಕಾಂತರಾಜ್‌ ವರದಿ ಸ್ವೀಕರಿಸಿ ಬಹಿರಂಗಪಡಿಸಿ: ಸಿಎಂಗೆ ಆಂಜನೇಯ ಮನವಿ

MUST WATCH

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

ಹೊಸ ಸೇರ್ಪಡೆ

Parameshwar

Waqf issue; ಬಿಜೆಪಿಯಿಂದ ಕೋಮು ಗಲಭೆಗೆ ಯತ್ನ: ಕಾಂಗ್ರೆಸ್‌

Chaluvarayaswamy

Kumaraswamy ಅವರಿಗೆ ಜತೆಗಿರುವಾಗ ಕೊಚ್ಚೆ ವಾಸನೆ ಬರಲಿಲ್ಲವೇ?: ಚಲುವರಾಯಸ್ವಾಮಿ ತಿರುಗೇಟು

Mangaluru-Sahakara

Mangaluru: ಸಹಕಾರ ಆಂದೋಲನ ಜನರ ಆಂದೋಲನವಾಗಲಿ: ಸಚಿವ ಕೆ.ಎನ್‌.ರಾಜಣ್ಣ

Lokayukta

MUDA ಮಾಜಿ ಆಯುಕ್ತ ನಟೇಶ್‌ಗೆ ಲೋಕಾ ನೋಟಿಸ್‌

1-reee

BJP; 50 ಅಲ್ಲ ,100 ಕೋಟಿ ರೂ. ಆಮಿಷ: ಶಾಸಕ ರವಿ ಗಣಿಗ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.