ಕೋವಿಡ್ ಅಬ್ಬರದಲ್ಲೂ ಪೋಕ್ಸೋ ಪ್ರಕರಣ ಆರ್ಭಟ!

ಪ್ರಸಕ್ತ ಕೋವಿಡ್ಅ ವರ್ಷದಲ್ಲೇ ಈವರೆಗೆ 35 ಪ್ರಕರಣ ದಾಖಲು

Team Udayavani, Oct 10, 2020, 5:40 PM IST

DG-TDY-1

ಸಾಂದರ್ಭಿಕ ಚಿತ್ರ

ದಾವಣಗೆರೆ: ಇಡೀ ವಿಶ್ವವನ್ನೇ ಕಾಡುತ್ತಿರುವ ಕೋವಿಡ್ ವೈರಸ್‌ ಅಬ್ಬರದ ಮಧ್ಯೆಯೂ ಕಾಮಾಂಧರ ಕಾಮುಕ ವೈರಸ್‌ ಅಪ್ರಾಪ್ತೆಯರನ್ನು ಕಾಡುತ್ತಲೇ ಇದ್ದು ಜಿಲ್ಲೆಯಲ್ಲಿ ಪೋಕ್ಸೋ ( POSCO- protection of children from of sexual offence act) ಪ್ರಕರಣಗಳು ನಿರಂತರವಾಗಿ ದಾಖಲಾಗುತ್ತಲೇ ಇರುವುದು ಪೋಷಕರಲ್ಲಿ ಕಳವಳ ಮೂಡಿಸಿದೆ.

ಈ ವರ್ಷದ ಆರಂಭದಿಂದಲೇ ಕೋವಿಡ್ ವೈರಸ್‌ ವಿಶ್ವವನ್ನು ಕಾಡುತ್ತ ಮಹಾಮಾರಿಯಾಗಿ ಮಾರ್ಪಟ್ಟಿದೆ. ಕೋವಿಡ್ ಹರಡುವುದನ್ನು ತಡೆಯಲು ಲಾಕ್‌ಡೌನ್‌ ನಂಥ ಕ್ರಮಗಳನ್ನು ಪಾಲಿಸುತ್ತ ಬರಲಾಗಿದೆ.ಇಂಥ ಆತಂಕದ ಸಂದರ್ಭದಲ್ಲಿಯೂ ಅಪ್ರಾಪ್ತ ಬಾಲಕಿಯರ ಮೇಲಿನ ಅತ್ಯಾಚಾರ, ಲೈಂಗಿಕ ಕಿರುಕುಳ, ಹಿಂಸೆಯಂಥ ಪ್ರಕರಣಗಳು ಮುಂದುವರಿದಿರುವುದು ಪ್ರಜ್ಞಾವಂತ ಸಮಾಜ ತಲೆ ತಗ್ಗಿಸುವಂತೆ ಮಾಡಿದೆ.

ಅಪ್ರಾಪ್ತೆಯರ ಮೇಲಿನ ಅತ್ಯಾಚಾರ, ಲೈಂಗಿಕ ಕಿರುಕುಳ, ಹಿಂಸೆಯಂಥ ಪ್ರಕರಣಗಳಿಗೆ ಸಂಬಂಧಿಸಿ ಜನವರಿಯಿಂದ ಇಲ್ಲಿಯವರೆಗೆ ಜಿಲ್ಲೆಯಲ್ಲಿ ಒಟ್ಟು 35 ಪೋಕ್ಸೋ ಪ್ರಕರಣಗಳು ದಾಖಲಾಗಿವೆ. ಜಿಲ್ಲಾ ಕೇಂದ್ರ ದಾವಣಗೆರೆ ತಾಲೂಕಿನಲ್ಲಿ ಅತಿ ಹೆಚ್ಚು ಅಂದರೆ 14ಪ್ರಕರಣಗಳು ದಾಖಲಾಗಿವೆ. ಚನ್ನಗಿರಿ ತಾಲೂಕಿನಲ್ಲಿ ಎಂಟು, ಹರಿಹರ ತಾಲೂಕಿನಲ್ಲಿ ಏಳು, ಜಗಳೂರುತಾಲೂಕಿನಲ್ಲಿ ಐದು, ಹೊನ್ನಾಳಿ ತಾಲೂಕಿನಲ್ಲಿ ಒಂದು ಪ್ರಕರಣಗಳು ದಾಖಲಾಗಿವೆ.

ಕಳೆದ ವರ್ಷ ಜಿಲ್ಲೆಯಲ್ಲಿ ಒಟ್ಟು 54 ಪ್ರಕರಣಗಳು ದಾಖಲಾಗಿದ್ದು, ಆಗಲೂ ದಾವಣಗೆರೆ ತಾಲೂಕಿನಲ್ಲಿ ಯೇ ಅತಿಹೆಚ್ಚು ಅಂದರೆ 29 ಪ್ರಕರಣಗಳು ದಾಖಲಾಗಿದ್ದವು. ಇನ್ನುಳಿದಂತೆ ಚನ್ನಗಿರಿ ತಾಲೂಕಿನಲ್ಲಿ 10, ಹರಿಹರ ತಾಲೂಕಿನಲ್ಲಿ ಐದು, ಹೊನ್ನಾಳಿ ತಾಲೂಕಿನಲ್ಲಿ ನಾಲ್ಕು, ಜಗಳೂರು ಹಾಗೂ ನ್ಯಾಮತಿ ತಾಲೂಕಿನಲ್ಲಿ ತಲಾ ಮೂರು ಪ್ರಕರಣಗಳು ದಾಖಲಾಗಿದ್ದವು.

ಎಲ್ಲವೂ ವಿಚಾರಣೆ, ತನಿಖೆ ಹಂತದಲ್ಲಿವೆ: ಪ್ರಸಕ್ತ ವರ್ಷ ದಾಖಲಾಗಿರುವ 35 ಪ್ರಕರಣಗಳಲ್ಲಿ 19  ಪ್ರಕರಣಗಳು ನ್ಯಾಯಾಲಯಗಳಲ್ಲಿ ವಿಚಾರಣೆಗೆ ಬಾಕಿ ಇವೆ. ಇನ್ನು 15ಪ್ರಕರಣಗಳು ತನಿಖಾ ಹಂತದಲ್ಲಿದ್ದು ಒಂದು ಪ್ರಕರಣವನ್ನು ಬೇರೆ ಜಿಲ್ಲೆಗೆ ವರ್ಗಾಯಿಸಲಾಗಿದೆ. ಕಳೆದ ವರ್ಷ 2019ರಲ್ಲಿಜಿಲ್ಲೆಯಲ್ಲಿ 54 ಪೋಕ್ಸೋಪ್ರಕರಣಗಳು ದಾಖಲಾಗಿದ್ದವು. ಇವುಗಳಲ್ಲಿ 38 ಪ್ರಕರಣಗಳುನ್ಯಾಯಾಲಯದಲ್ಲಿ ವಿಚಾರಣೆಗೆ ಬಾಕಿ ಇವೆ. 13 ಪ್ರಕರಣಗಳ ತನಿಖೆ ನಡೆಯುತ್ತಿದೆ. ಒಂದುಪ್ರಕರಣ ಸುಳ್ಳು ಎಂಬುದು ಸಾಬೀತಾಗಿದೆ. ಎರಡು ಪ್ರಕರಣಗಳು ಬೇರೆ ಜಿಲ್ಲೆಗೆ ವರ್ಗ ಮಾಡಲಾಗಿದೆ. ಒಟ್ಟಾರೆ ಪೋಕ್ಸೋ ಪ್ರಕರಣಗಳು ಜಿಲ್ಲೆಯಲ್ಲಿ ನಿರಂತರವಾಗಿ ದಾಖಲಾಗುತ್ತಿರುವುದು ಜಿಲ್ಲೆಯ ಹೆಣ್ಣು ಮಕ್ಕಳ ಪೋಷಕರಲ್ಲಿ ಆತಂಕ ಸೃಷ್ಟಿಸಿದ್ದು ಬಾಲಕಿಯರ ರಕ್ಷಣೆಗಾಗಿ ವಿಶೇಷ ಯೋಜನೆಯ ಅಗತ್ಯತೆ ಎದ್ದು ಕಾಣುತ್ತಿದೆ.

ಹಲವು ಪ್ರಕರಣ ದಾಖಲಾಗುವುದೇ ಇಲ್ಲ! :  ಅಪ್ರಾಪ್ತ ಬಾಲಕಿಯರ ಮೇಲಿನ ಅತ್ಯಾಚಾರ, ಲೈಂಗಿಕ ಕಿರುಕುಳದಂಥ ಘಟನೆಗಳು ನಾನಾ ರೀತಿಯಲ್ಲಿ ಅಲ್ಲಲ್ಲಿ ನಡೆಯುತ್ತಲೇ ಇವೆ. ಆದರೆ, ಇವುಗಳಲ್ಲಿ ಬಹುತೇಕ ಪ್ರಕರಣಗಳನ್ನು ಸ್ಥಳೀಯವಾಗಿಯೇ ಮುಚ್ಚಿಹಾಕುವ ಪ್ರಯತ್ನ ಅವ್ಯಾಹತವಾಗಿ ನಡೆಯುತ್ತಲೇ ಇವೆ. ಕಿರುಕುಳಕ್ಕೊಳಗಾದ ಅಪ್ರಾಪ್ತ ಬಾಲಕಿಯರ ಪೋಷಕರು ಪೊಲೀಸ್‌ ಠಾಣೆ ಮೆಟ್ಟಿಲೇರಲು ಹಿಂಜರಿಯುತ್ತಿರುವುದೇ ಪ್ರಕರಣ ಬೆಳಕಿಗೆ ಬಾರದೇ ಇರಲು ಕಾರಣವಾಗಿದೆ. ಇಂಥ ಪ್ರಕರಣಗಳಲ್ಲಿ ಸಿಲುಕಿದಕಾರಣದಿಂದಾಗಿಯೇ ಅನೇಕ ಬಾಲಕಿಯರು ಅರ್ಧಕ್ಕೇ ಶಾಲೆ ಬಿಡುತ್ತಿರುವುದು ವಿಷಾದನೀಯ ಸಂಗತಿ

ನಿರಂತರ ಜಾಗೃತಿ…: ಪೋಕ್ಸೋಪ್ರಕರಣಗಳಲ್ಲಿ ಶೇ.60ಕ್ಕೂ ಹೆಚ್ಚು ಪ್ರಕರಣಗಳು ಹದಿಹರೆಯದ ಪ್ರೇಮ ಪ್ರಕರಣಗಳೇ ಆಗಿವೆ. ಅಪ್ರಾಪ್ತ ಬಾಲಕಿಯರು ಇಂಥ ದೌರ್ಜನ್ಯದಿಂದ ದೂರ ಉಳಿಯಲು ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಹಾಗೂ ಸಾಂತ್ವನ ಕೇಂದ್ರಗಳ ಮೂಲಕ ನಿರಂತರ ಅರಿವು ಮೂಡಿಸಲಾಗುತ್ತಿದೆ. ಕೋವಿಡ್ ಕಾರಣದಿಂದಾಗಿ ಅಂಗನವಾಡಿ, ಶಾಲೆಗಳು ಸದ್ಯ ಬಂದ್‌ ಆಗಿದ್ದು, ಅವು ತೆರೆದ ಬಳಿಕ ಜಾಗೃತಿ ಕಾರ್ಯಕ್ರಮವನ್ನು ಮತ್ತೆ ಮುಂದುವರಿಸಲಾಗುವುದು.  -ಕೆ.ಎಚ್‌. ವಿಜಯಕುಮಾರ್‌, ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ

 

-ಎಚ್‌.ಕೆ. ನಟರಾಜ

ಟಾಪ್ ನ್ಯೂಸ್

1-havy

Havyaka Sammelana; ಅಡಿಕೆ ಬೆಳೆಗಾರರ ಹಿತ ರಕ್ಷಣೆಗೆ ಕೇಂದ್ರ ಬದ್ಧ: ಸಚಿವ ಜೋಶಿ

Kharge (2)

Manmohan Singh ಅಂತ್ಯಕ್ರಿಯೆ ಸ್ಮಾರಕ ನಿರ್ಮಿಸಬಹುದಾದ ಸ್ಥಳದಲ್ಲಿ ನಡೆಸಲು ಖರ್ಗೆ ಮನವಿ

1-weqeqw

Traffic; ಉಡುಪಿ ನಗರದಲ್ಲಿ 5 ದಿನ ರಸ್ತೆ ಮಾರ್ಗಗಳಲ್ಲಿ ಮಾರ್ಪಾಡು

Madikeri: ದ್ವಿಚಕ್ರ ವಾಹನ – ಟಿಟಿ ನಡುವೆ ಅಪಘಾತ; ಯುವಕ ದುರ್ಮರಣ

Madikeri: ದ್ವಿಚಕ್ರ ವಾಹನ – ಟಿಟಿ ನಡುವೆ ಅಪಘಾತ; ಯುವಕ ದುರ್ಮರಣ

Boxing: ವಿಶ್ವ ಬಾಕ್ಸಿಂಗ್‌ ಸಂಸ್ಥೆಯಿಂದ ಮಧ್ಯಂತರ ಏಷ್ಯನ್‌ ಮಂಡಳಿ

Boxing: ವಿಶ್ವ ಬಾಕ್ಸಿಂಗ್‌ ಸಂಸ್ಥೆಯಿಂದ ಮಧ್ಯಂತರ ಏಷ್ಯನ್‌ ಮಂಡಳಿ

Aranthodu: ಅಪ್ತಾಪ್ತ ವಯಸ್ಸಿನ ಯುವತಿಯ ಮೇಲೆ ಅತ್ಯಾಚಾರ; ಆರೋಪಿಯ ಸೆರೆ

Aranthodu: ಅಪ್ತಾಪ್ತ ವಯಸ್ಸಿನ ಯುವತಿಯ ಮೇಲೆ ಅತ್ಯಾಚಾರ; ಆರೋಪಿಯ ಸೆರೆ

Arrested: ಮೂವರು ಬುರ್ಖಾಧಾರಿ ಕಳ್ಳಿಯರ ಬಂಧನ

Arrested: ಮೂವರು ಬುರ್ಖಾಧಾರಿ ಕಳ್ಳಿಯರ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Nyamathi: ಕಾಡುಪ್ರಾಣಿಗಳಿಗೆ ಇರಿಸಿದ್ದ 32 ನಾಡ ಬಾಂಬ್‌ ಗಳು ಪತ್ತೆ

Nyamathi: ಕಾಡುಪ್ರಾಣಿಗಳಿಗೆ ಇರಿಸಿದ್ದ 32 ನಾಡ ಬಾಂಬ್‌ ಗಳು ಪತ್ತೆ

7-dvg

Davangere:ಡಾ| ಬಿ.ಆರ್. ಅಂಬೇಡ್ಕರ್ ಅವಹೇಳನ; ಶಾ ರಾಜೀನಾಮೆಗೆ ಒತ್ತಾಯಿಸಿ ಬೃಹತ್ ಪ್ರತಿಭಟನೆ

1-dvg

Davanagere:ಅಮಿತ್ ಶಾರನ್ನು ಸಂಪುಟದಿಂದ ವಜಾ ಮಾಡಬೇಕೆಂದು ಒತ್ತಾಯಿಸಿ ಅರೆಬೆತ್ತಲೆ ಮೆರವಣಿಗೆ

sullia

Davanagere: ವೃದ್ಧೆ ಮೇಲೆ ಅತ್ಯಾ*ಚಾರ; ಯುವಕನಿಗೆ 10 ವರ್ಷ ಕಠಿಣ ಶಿಕ್ಷೆ

MP-R

Davanagere: ಬಿಜೆಪಿ-ಕಾಂಗ್ರೆಸ್‌ ಹೊಂದಾಣಿಕೆ ಆರೋಪದ ಬಗ್ಗೆ ರೇಣುಕಾಚಾರ್ಯ ಸ್ಪಷ್ಟನೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-havy

Havyaka Sammelana; ಅಡಿಕೆ ಬೆಳೆಗಾರರ ಹಿತ ರಕ್ಷಣೆಗೆ ಕೇಂದ್ರ ಬದ್ಧ: ಸಚಿವ ಜೋಶಿ

puttige-4

Udupi; ಗೀತಾರ್ಥ ಚಿಂತನೆ 138 : ಅಭಿಮಾನತ್ಯಾಗವೇ ಮೋಕ್ಷದ ಮೊದಲ ಮೆಟ್ಟಿಲು

Kharge (2)

Manmohan Singh ಅಂತ್ಯಕ್ರಿಯೆ ಸ್ಮಾರಕ ನಿರ್ಮಿಸಬಹುದಾದ ಸ್ಥಳದಲ್ಲಿ ನಡೆಸಲು ಖರ್ಗೆ ಮನವಿ

1

Kasaragod Crime News: ಅವಳಿ ಪಾಸ್‌ಪೋರ್ಟ್‌; ಕೇಸು ದಾಖಲು

1-weqeqw

Traffic; ಉಡುಪಿ ನಗರದಲ್ಲಿ 5 ದಿನ ರಸ್ತೆ ಮಾರ್ಗಗಳಲ್ಲಿ ಮಾರ್ಪಾಡು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.