ಲೋಕಸಭೆ ಚುನಾವಣೆಗೆ ತಾಲೂಕಾಡಳಿತ ಸಿದ್ಧತೆ
Team Udayavani, Jan 14, 2019, 6:36 AM IST
ಹೊನ್ನಾಳಿ: ಮುಂಬರುವ ಲೋಕಸಭೆ ಚುನಾವಣೆಗೆ ತಾಲೂಕು ಆಡಳಿತ ಈಗಿನಿಂದಲೇ ಸಿದ್ಧತೆಗಳನ್ನು ಆರಂಭಿಸಿದೆ. ಹೊಸ ಮತದಾರರಾಗಿ ನೋಂದಣಿ ಮಾಡಿಕೊಂಡಿರುವ ತಾಲೂಕಿನ 3914 ಮತದಾರರಿಗೆ ಮತದಾರರ ಗುರುತಿನ ಕಾರ್ಡ್‌ನ್ನು ಜ.25 ರಂದು ನಡೆಯುವ ಮತದಾರರ ದಿನಾಚರಣೆಯಂದು ವಿತರಿಸಲು ಮತಗಟ್ಟೆ ಅಧಿಕಾರಿಗಳು ಸಿದ್ಧತೆ ಮಾಡಿಕೊಂಡಿದ್ದಾರೆ. ಜ.25 ರ ನಂತರ ಮತ್ತೂಮ್ಮೆ ನೂತನ ಯುವ ಮತದಾರರ ಸೇರ್ಪಡೆಗೆ ಅವಕಾಶ ನೀಡುವ ಸಾಧ್ಯತೆಗಳಿವೆ ಎಂದು ಮೂಲಗಳು ತಿಳಿಸಿವೆ.
ಈಗಾಗಲೇ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಲೋಕಸಭಾ ಚುನಾವಣೆ ಸಂಬಂಧ ಹಲವಾರು ಸಭೆಗಳು ಡಿಸಿ ನೇತೃತ್ವದಲ್ಲಿ ನಡೆದಿವೆ. ಚುನಾವಣೆಗೆ ನೇಮಕಗೊಂಡಿರುವ ಸೆಕ್ಟರ್ ಅಧಿಕಾರಿಗಳ ಸಭೆ ಜ. 14ರ ಸೋಮವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆಯಲಿದೆ.
ಮತಗಟ್ಟೆಗಳ ಕೇಂದ್ರಗಳ ಸ್ಥಿತಿಗತಿ ಕುರಿತು ತಾಲೂಕು ಆಡಳಿತ ಬಿಇಒ ಕಚೇರಿಯಿಂದ ವರದಿ ಕೇಳಿದ್ದು, ಅವಶ್ಯಕತೆ ಇರುವಲ್ಲಿ ದುರಸ್ತಿಗೆ ವ್ಯವಸ್ಥೆ ಮಾಡಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಈ ಬಗ್ಗೆ ಪತ್ರಿಕೆಯೊಂದಿಗೆ ಮಾತನಾಡಿದ ತಹಶೀಲ್ದಾರ್ ತುಷಾರ್ ಬಿ.ಹೊಸೂರ್, ಯುದ್ಧ ಕಾಲದಲ್ಲಿ ಶಸ್ತ್ರಾಭ್ಯಾಸ ಮಾಡುವ ಬದಲು ಈಗಿನಿಂದಲೇ ಸಿದ್ಧತೆ ಮಾಡಿಕೊಂಡರೆ ಆ ಸಂದರ್ಭದಲ್ಲಿ ಸಮಸ್ಯೆಯಾಗುವುದಿಲ್ಲ. ಆದ್ದರಿಂದ ಸಿದ್ಧತೆಗಳನ್ನು ಆರಂಂಭಿಸಿದ್ದೇವೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere: ಕಾಂತರಾಜ್ ವರದಿ ಸ್ವೀಕರಿಸಿ ಬಹಿರಂಗಪಡಿಸಿ: ಸಿಎಂಗೆ ಆಂಜನೇಯ ಮನವಿ
Davangere: ಮದುವೆಯಾಗುವುದಾಗಿ ಯುವತಿಯರಿಗೆ 62 ಲಕ್ಷ ರೂ.ಗೂ ಹೆಚ್ಚು ವಂಚಿಸಿದವನ ಬಂಧನ
Davangere: ಮಹಿಳೆಯ ಮೇಲೆ ಕರಡಿ ದಾಳಿ
Congress Govt.,: ಅಬಕಾರಿ ಡೀಲರ್‌ಗಳಿಂದ ಸರ್ಕಾರಕ್ಕೆ 900 ಕೋಟಿ ರೂ. ಸಲ್ಲಿಕೆ: ಅಶೋಕ್
Davanagere: ವಿಶೇಷ ತೆರಿಗೆ ಕಾರ್ಯಾಚರಣೆ: ಒಂದೇ ದಿನ 1.65 ಕೋಟಿ ತೆರಿಗೆ ಸಂಗ್ರಹ
MUST WATCH
ಹೊಸ ಸೇರ್ಪಡೆ
Manipal KMC Hospital: ಮಲ್ಪೆ ಬೀಚ್‌ನಲ್ಲಿ ಮಧುಮೇಹ ಜಾಗೃತಿ
UK; ಪ್ರಧಾನಿ ದೀಪಾವಳಿ ಪಾರ್ಟಿಯಲ್ಲಿ ಮದ್ಯ, ಮಾಂಸ: ಕೊನೆಗೂ ಕ್ಷಮೆ ಯಾಚನೆ
Kollegala: ಎತ್ತಿನಗಾಡಿಗೆ ಸಾಮ್ರಾಟ್ ಟರ್ಬೇ ವಾಹನ ಡಿಕ್ಕಿ; ಎತ್ತು ಸಾವು
Udupi: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್; ಉಡುಪಿ ಮಹಿಳಾ ವಿಭಾಗ ಆರಂಭ
ಕನಕಗಿರಿ:ಮಂಗಳೂರು ಮೂಲದ ಕುಟುಂಬ-ಸೌಹಾರ್ದತೆಗೆ ಸಾಕ್ಷಿ 4 ದಶಕದ ಸಕ್ಕರೆ ಗೊಂಬೆ ತಯಾರಿಕೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.