ಸೈನಿಕನ ವಿರುದ್ಧ ತನಿಖೆಗೆ ಆಕ್ರೋಶ
Team Udayavani, Jan 13, 2017, 11:51 AM IST
ದಾವಣಗೆರೆ: ಸೈನಿಕರಿಗೆ ನೀಡಲಾಗುವ ಆಹಾರದ ಗುಣಮಟ್ಟ ಕಳಪೆಯಾಗಿದೆ ಎಂಬುದನ್ನು ಮೊಬೈಲ್‌ನಲ್ಲಿ ಚಿತ್ರಿಸಿ, ಜಾಹೀರು ಮಾಡಿದ್ದ ಸೈನಿಕನ ವಿರುದ್ಧ ಕ್ರಮ ಕೈಗೊಳ್ಳಲು ಮುಂದಾದ ಕೇಂದ್ರ ಸರ್ಕಾರದ ನಡೆ ಖಂಡಿಸಿ, ಕಾಂಗ್ರೆಸ್ ಕಾರ್ಯಕರ್ತರು ಗುರುವಾರ ಪ್ರತಿಭಟನೆ ನಡೆಸಿದರು.
ಪಾಲಿಕೆ ಆವರಣದ ಗಾಂಧಿ ಪ್ರತಿಮೆ ಮುಂದೆ ಜಮಾಯಿಸಿದ ಕಾರ್ಯಕರ್ತರು, ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ಅಳಲು ತೋಡಿಕೊಂಡ ಸೈನಿಕನ ವಿರುದ್ಧ ಕ್ರಮಕ್ಕೆ ಮುಂದಾಗುವ ಕೇಂದ್ರ ಸರ್ಕಾರದ ನಡೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಪ್ರತಿಭಟನಾನಿರತರನ್ನು ಉದ್ದೇಶಿಸಿ ಮಾತನಾಡಿದ ಮುಖಂಡರು, ಬಿಜೆಪಿ ತಾನು ದೇಶ ಪ್ರೇಮಿ, ಸೈನಿಕರ ಪರ ಎಂಬುದಾಗಿ ಹೇಳಿಕೊಳ್ಳುತ್ತದೆ.
ಪ್ರತೀ ಬಾರಿ ಸೈನಿಕರು ಹುತಾತ್ಮರಾದಾಗ ನಮನ ಸಲ್ಲಿಸುತ್ತದೆ. ಇಂತಹ ಪಕ್ಷ ಇದೀಗ ವ್ಯತಿರಿಕ್ತವಾಗಿ ನಡೆದುಕೊಳ್ಳುತ್ತಿದೆ. ದೇಶ ಕಾಯುವ ಯೋಧನೋರ್ವ ತಮಗೆ ನೀಡುವ ಊಟ ಕಳಪೆಯಾಗಿದೆ ಎಂಬುದನ್ನು ಬಯಲಿಗೆಳೆದ ಎಂಬ ಕಾರಣಕ್ಕಾಗಿ ಆತನ ವಿರುದ್ಧ ತನಿಖೆ ನಡೆಸಲು ಆದೇಶ ಮಾಡಿದೆ.
ಆ ಮೂಲಕ ತನ್ನ ಸೈನಿಕ ಪ್ರೇಮ ಕೇವಲ ರಾಜಕೀಯಕ್ಕೆಎಂಬುದನ್ನು ಸಾಬೀತು ಪಡಿಸಿದೆ ಎಂದರು. ದೇಶ ಕಾಯುವ ಸೈನಿಕರಿಗೆ ಎಲ್ಲಾ ರೀತಿಯ ಸವಲತ್ತು ಕೊಡಬೇಕು. ಬೇರೆ ಯಾವುದರಲ್ಲಿ ಲೋಪವಾದರೂ ಸರಿ, ಆದರೆ, ಸೈನಿಕರ ವಿಷಯದಲ್ಲಿ ಇಂತಹ ಲೋಪ ಆಗಬಾರದು. ಸೈನಿಕರು ಹಗಲಿರುಳು ದೇಶದ ಗಡಿ ಕಾಯುತ್ತಾರೆ.
ಅಂತಹವರ ಆರೋಗ್ಯ ಸರಿಯಾಗಿ ಇರಬೇಕಾದುದು ಅನಿವಾರ್ಯ. ಚಳಿ, ಮಳೆ, ಬಿಸಿಲು ಎನ್ನದೆ ದುಡಿಯುವ ಸೈನಿಕರಿಗೆ ಉತ್ತಮ ಗುಣಮಟ್ಟದ ಆಹಾರ ನೀಡಲು ಕೂಡಲೇ ಕೇಂದ್ರ ಸರ್ಕಾರ ಕ್ರಮ ಕೈಗೊಳ್ಳಬೇಕು. ಅವರಿಗೆ ನೀಡುವ ಆಹಾರದ ಗುಣಮಟ್ಟವನ್ನು ಆಗಿಂದಾಗ್ಗೆ ಪರೀಕ್ಷೆ ಮಾಡಬೇಕು ಎಂದು ಅವರು ಆಗ್ರಹಿಸಿದರು.
ಕೆಎಸ್‌ಐಸಿ ಮಾಜಿ ಅಧ್ಯಕ್ಷ ಡಿ. ಬಸವರಾಜ್, ಪಾಲಿಕೆ ಸದಸ್ಯರಾದ ದಿನೇ ಶೆಟ್ಟಿ, ಎಂ. ಹಾಲೇಶ್, ಮಖಂಡರಾದ ಬಿ.ಎಚ್. ವೀರಭದ್ರಪ್ಪ, ಆಯೂಬ್‌ಪೈಲ್ವಾನ್, ಜಯಣ್ಣ, ಅಜ್ಜಂಪುರ ಶೆಟ್ರಾ ಮೃತ್ಯುಂಜಯ, ಕೇರಂ ಗಣೇಶ್, ಎ. ನಾಗರಾಜ, ಮಹಾದೇವಮ್ಮ, ಮೊಹಮದ್ ಮುಜಾಹೀದ್ ಪಾಷ, ಶ್ರೀಕಾಂತ ಬಗರೆ ಪ್ರತಿಭಟನೆ ನೇತೃತ್ವ ವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davangere:ಡಾ| ಬಿ.ಆರ್. ಅಂಬೇಡ್ಕರ್ ಅವಹೇಳನ; ಶಾ ರಾಜೀನಾಮೆಗೆ ಒತ್ತಾಯಿಸಿ ಬೃಹತ್ ಪ್ರತಿಭಟನೆ
Davanagere:ಅಮಿತ್ ಶಾರನ್ನು ಸಂಪುಟದಿಂದ ವಜಾ ಮಾಡಬೇಕೆಂದು ಒತ್ತಾಯಿಸಿ ಅರೆಬೆತ್ತಲೆ ಮೆರವಣಿಗೆ
Davanagere: ವೃದ್ಧೆ ಮೇಲೆ ಅತ್ಯಾ*ಚಾರ; ಯುವಕನಿಗೆ 10 ವರ್ಷ ಕಠಿಣ ಶಿಕ್ಷೆ
Davanagere: ಬಿಜೆಪಿ-ಕಾಂಗ್ರೆಸ್ ಹೊಂದಾಣಿಕೆ ಆರೋಪದ ಬಗ್ಗೆ ರೇಣುಕಾಚಾರ್ಯ ಸ್ಪಷ್ಟನೆ
Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ ಕಾಂಗ್ರೆಸ್ ಶಾಸಕ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಪತ್ನಿಗಾಗಿ ಕೆಲಸದಿಂದ ನಿವೃತ್ತಿ ಪಡೆದ ಪತಿ; ಬೀಳ್ಕೊಡುಗೆ ಕಾರ್ಯಕ್ರಮದಲ್ಲೇ ಪತ್ನಿ ಮೃತ್ಯು
Manipal: ಹಿರಿಯ ವೈದ್ಯೆ ಡಾ. ಆಶಾ ಭಟ್ ನಿಧನ
Banahatti: ತಾಂತ್ರಿಕ ಸೌಲಭ್ಯಗಳನ್ನು ನೀಡುವ ನಿಟ್ಟಿನಲ್ಲಿ ಬದ್ಧಳಾಗಿದ್ದೇನೆ: ಉಮಾಶ್ರೀ
Road Mishap; ದ್ವಿಚಕ್ರ ವಾಹನ-ಲಾರಿ ನಡುವೆ ಅಪಘಾತ: ದಂಪತಿ ಸಾವು
ಕಾಲ್ತುಳಿತ ಪ್ರಕರಣ: ಅಲ್ಲು, ʼಪುಷ್ಪ-2ʼ ತಂಡದಿಂದ ರೇವತಿ ಕುಟುಂಬಕ್ಕೆ 2 ಕೋಟಿ ರೂ. ಪರಿಹಾರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.