ಉತ್ಪನ್ನಗಳು ಪರಿಸರ ಪೂರಕವಾಗಿರಲಿ: ಡಾ| ಮಂಜಪ್ಪ
Team Udayavani, Jan 18, 2019, 6:30 AM IST
ದಾವಣಗೆರೆ: ಜನರು ಉತ್ಪಾದಿಸುವ ಉತ್ಪನ್ನಗಳು ಪರಿಸರದ ಮೇಲೆ ಪರಿಣಾಮ ಬೀರದಂತೆ ಜಾಗ್ರತೆ ವಹಿಸಬೇಕು ಎಂದು ಮಂಗಳೂರಿನ ಸಹ್ಯಾದ್ರಿ ಇಂಜಿನಿಯರಿಂಗ್ ಕಾಲೇಜಿನ ನಿರ್ದೇಶಕ ಡಾ| ಎಸ್. ಮಂಜಪ್ಪ ಹೇಳಿದರು.
ನಗರದ ಬಿಐಇಟಿಯ ಕಾಲೇಜಿನಲ್ಲಿ ಗುರುವಾರ ಕಾಲೇಜಿನ ಪರಿಸರ ಇಂಜಿನಿಯರಿಂಗ್‌ನ ಸ್ನಾತಕೋತ್ತರ ವಿಭಾಗ, ಸಿವಿಲ್ ಇಂಜಿನಿಯರಿಂಗ್ ವಿಭಾಗ, ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಸಂಯುಕ್ತಾಶ್ರಯದಲ್ಲಿ ಪರಿಸರ ಪರಿಣಾಮಗಳ ಅಧ್ಯಯನದಲ್ಲಿ ಇತ್ತೀಚಿನ ಬೆಳವಣಿಗೆಗಳ ಕುರಿತು ಹಮ್ಮಿಕೊಂಡಿರುವ ಮೂರು ದಿನಗಳ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.
ಜನರಿಗೆ ಆಹಾರ, ಇಂಧನ, ಆರೋಗ್ಯ ಭದ್ರತೆ ಅತ್ಯಗತ್ಯ. ಆದರೆ, ಅಂತಹ ಉತ್ಪನ್ನಗಳು ಪರಿಸರದ ಮೇಲೆ ಯಾವ ರೀತಿ ದುಷ್ಪರಿಣಾಮ ಬೀರುತ್ತವೆ ಎಂಬುದರ ಬಗ್ಗೆ ಪ್ರತಿಯೊಬ್ಬರು ಅವಲೋಕನ ಮಾಡಬೇಕು. ಪರಿಸರ ಪೂರಕವಾಗಿ ಕೃಷಿ ಮಾಡಲು ಮುಂದಾಗಬೇಕು ಎಂದರು.
ಆರೋಗ್ಯಕ್ಕಾಗಿ ಉತ್ಪಾದಿಸುವ ಔಷಧಿಗಳಿಗಾಗಿ ಅನೇಕ ರಸಾಯನಿಕಗಳು ಅಗತ್ಯವಾಗಿ ಬೇಕಾಗಿರುತ್ತದೆ. ಕೆಲವೊಂದು ರಸಾಯನಿಕ ಉತ್ಪನ್ನಗಳಿಗಿಂತ 100 ಪಟ್ಟು ಹೆಚ್ಚು ತ್ಯಾಜ್ಯ ಉತ್ಪಾದನೆಯಾಗುತ್ತಿದೆ. ಇದೆಲ್ಲದರ ಪರಿಣಾಮವಾಗಿ ಪರಿಸರದ ಮೇಲೆ ಹೆಚ್ಚಿನ ಒತ್ತಡ ಬೀಳುತ್ತದೆ ಎಂದು ಹೇಳಿದರು.
ಭಾರತ 1960ರಲ್ಲಿ ಬೇರೆ ಭಾಗಗಳಿಂದ ಆಹಾರ ಆಮದು ಮಾಡಿಕೊಳ್ಳುತ್ತಿತ್ತು. ಈಗ ಆಹಾರ ಖಾತ್ರಿ ದೊರೆಯುತ್ತಿದೆ. ಸಕ್ಕರೆ ಉತ್ಪಾದನೆಯಲ್ಲಿ ಎರಡನೇ ಮತ್ತು ಹಾಲು ಉತ್ಪಾದನೆಯಲ್ಲಿ ಮೊದಲ ಸ್ಥಾನದಲ್ಲಿದೆ. ಆದರೆ, ಈ ದಾರಿಯಲ್ಲಿ ಪರಿಸರದ ಮೇಲೆ ಅಪಾರ ಪರಿಣಾಮವಾಗಿದೆ ಎಂದು ಹೇಳಿದರು.
ಉದ್ಯಮಗಳು ಪರಿಸರದ ಮೇಲೆ ಒತ್ತಡ ಹೆಚ್ಚಿಸುತ್ತಿವೆ. ಇಂತಹ ಸಮಸ್ಯೆ ಬಗೆಹರಿಸಲು ಪರಿಸರ ಇಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿಗಳು ಇತರೆ ಎಲ್ಲಾ ವಿಜ್ಞಾನ ಹಾಗೂ ಸಾಮಾಜಿಕ ವಿಜ್ಞಾನ ವಿಭಾಗಗಳ ಸ್ನೇಹಿತರೊಂದಿಗೆ ಜೊತೆಗೂಡಿ ಹೊಸ ಹೊಸ ಆವಿಷ್ಕಾರಕ್ಕೆ ಮುಂದಾಗಬೇಕು ಎಂದರು.
ದಾವಣಗೆರೆ ವಿಶ್ವವಿದ್ಯಾನಿಲಯದ ಪರೀಕ್ಷಾಂಗ ಕುಲಸಚಿವ ಡಾ| ಬಸವರಾಜ್ ಬಣಕಾರ್ ಮಾತನಾಡಿ, ಈಗಿನ ಇಂಜಿನಿಯರ್‌ಗಳು ಸಹಜವಾಗಿ ಹಿತಕರ ವಾತಾವರಣ ಇರುವಂತಹ ಮನೆಗಳನ್ನು ನಿರ್ಮಾಣ ಮಾಡಲು ಮುಂದಾಗಬೇಕು. ಇದಕ್ಕೆ ಸಾಂಪ್ರದಾಯಿಕ ಮನೆಗಳು ಮಾದರಿಯಾಗಿವೆ ಎಂದು ಹೇಳಿದರು.
ಡಾ| ಜಿ.ಪಿ ದೇಸಾಯಿ ಪ್ರಾಸ್ತಾವಿಕವಾಗಿ ಮಾತನಾಡಿದರು. ದಾವಿವಿ ಸಿಂಡಿಕೇಟ್ ಮಾಜಿ ಸದಸ್ಯ ಸಿ.ಎಚ್. ಮುರಿಗೇಂದ್ರಪ್ಪ, ಸಿವಿಲ್ ಇಂಜಿನಿಯರಿಂಗ್ ವಿಭಾಗದ ಮುಖ್ಯಸ್ಥ ಡಾ| ಎಚ್.ಬಿ. ಅರವಿಂದ್, ಮಾಲಿನ್ಯ ನಿಯಂತ್ರಣ ಮಂಡಳಿ ಪ್ರಾಂತೀಯ ವಿಭಾಗದ ಉಪ ಪರಿಸರ ಅಧಿಕಾರಿ ಎಸ್.ಸಿ. ಸುರೇಶ್, ಕಾಲೇಜು ಪ್ರಾಂಶುಪಾಲ ಕೆ.ಎಸ್. ಬಸವರಾಜಪ್ಪ, ಡಾ| ಬಿ.ಇ. ರಂಗಸ್ವಾಮಿ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere; ಸಿಲಿಂಡರ್ ಸ್ಫೋ*ಟ: ಆವರಿಸಿದ ದಟ್ಟ ಹೊಗೆ
Caste Census: ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಜಾತಿ ಗಣತಿ ವರದಿ ಮಂಡನೆ: ಸಿಎಂ
Kanaka Jayanthi: ಮುಂದಿನ ಮೂರುವರೆ ವರ್ಷವೂ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ: ಸಚಿವ ಭೈರತಿ
Davanagere: ವಿಪಕ್ಷಗಳು ಆಧಾರವಿಲ್ಲದೆ ಆರೋಪ ಮಾಡಬಾರದು: ಸಿಎಂ ಸಿದ್ದರಾಮಯ್ಯ
Davanagere: ಯುವಜನೋತ್ಸವಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Gadag: ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ನಡೆದ ದುರ್ಘಟನೆಗೆ ಒಂದು ವರ್ಷ…
Bird Flu: ಹಕ್ಕಿ ಜ್ವರಕ್ಕೆ 3 ಹುಲಿ, 1 ಚಿರತೆ ಸಾ*ವು… ಪ್ರಾಣಿಗಳಿಗೆ ಕ್ವಾರಂಟೈನ್
540 ಅಡಿ ಆಳದ ಬೋರ್ವೆಲ್ಗೆ ಬಿದ್ದ ಯುವತಿ: ಯುವಕನ ಜತೆ ಮನಸ್ತಾಪದಿಂದ ಆತ್ಮಹತ್ಯೆಗೆ ಯತ್ನ?
Delhi Assembly Election: ದೆಹಲಿ ವಿಧಾನಸಭೆ ಚುನಾವಣೆಗೆ ಇಂದು ದಿನಾಂಕ ನಿಗದಿ
ಬೆಳ್ಳಂಬೆಳಗ್ಗೆ ತುಮಕೂರಿನಲ್ಲಿ ಭೀಕರ ಅಪಘಾತ… ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.