ಸದನದಲ್ಲಿ ಮೇಲ್ಸೇತುವೆ ಹೋರಾಟ ಪ್ರಸ್ತಾಪ
Team Udayavani, Mar 27, 2017, 1:07 PM IST
ದಾವಣಗೆರೆ: ಅಶೋಕ ಚಿತ್ರಮಂದಿರ ಬಳಿಯ ರೈಲ್ವೆ ಹಳಿಗೆ ಮೇಲ್ಸೇತುವೆ ನಿರ್ಮಾಣ, ನಿರಂತರ ಧರಣಿ ವಿಷಯವನ್ನು ಸೋಮವಾರ ಜೆಡಿಎಸ್‌ನಿಂದ ವಿಧಾನ ಸಭೆಯಲ್ಲಿ ಪ್ರಸ್ತಾಪ ಮಾಡಲಾಗುವುದು ಎಂದು ಮಾಜಿ ಸಚಿವ, ಜೆಡಿಎಸ್ ನಾಯಕ ಬಂಡೆಪ್ಪ ಕಾಶೆಂಪುರ ತಿಳಿಸಿದ್ದಾರೆ.
ಮೇಲ್ಸೇತುವೆ ನಿರ್ಮಾಣಕ್ಕೆ ಆಗ್ರಹಿಸಿ ಜೆಡಿಎಸ್‌ನಿಂದ ಹಮ್ಮಿಕೊಂಡಿರುವ ನಿರಂತರ ಅಹೋರಾತ್ರಿ ಧರಣಿಯ 7ನೇ ದಿನವಾದ ಭಾನುವಾರ ಧರಣಿನಿರತರನ್ನು ಭೇಟಿಮಾಡಿ, ಹೋರಾಟದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ ಮಾತನಾಡಿದ ಅವರು, ಅಶೋಕ ರಸ್ತೆ ರೈಲ್ವೆ ಗೇಟ್ ಸಮಸ್ಯೆ ಕಳೆದ 40 ವರ್ಷಗಳಿಂದ ನಗರವನ್ನು ಕಾಡುತ್ತಿದೆ.
ಜನ ದಿನಂಪ್ರತಿ ಸಂಚಾರ ಸಮಸ್ಯೆಗೆ ಈಡಾಗುತ್ತಿದ್ದಾರೆ. ಎರಡು ವಿಧಾನ ಸಭಾ ಕ್ಷೇತ್ರಗಳ ಮಧ್ಯಭಾಜಕದಂತಿರುವ ರೈಲ್ವೆ ಹಳಿಯು ನಗರವನ್ನು ಇಬ್ಭಾಗ ಮಾಡಿದೆ. ಇದರ ಸಮಸ್ಯೆ ನಿವಾರಣೆ ಆಗಬೇಕಿದೆ ಎಂದರು. ಇಲ್ಲಿನ ಜನಪ್ರತಿನಿಧಿಗಳು ಈ ಕುರಿತು ನಿರಾಸಕ್ತಿ ಹೊಂದಿದ್ದಾರೆ. ಸೇತುವೆ ನಿರ್ಮಾಣಕ್ಕೆ ಮೂರು ವರ್ಷಗಳ ಹಿಂದೆಯೇ ಅನುದಾನ ಬಿಡುಗಡೆ ಆಗಿದೆ.
ಕಾಮಗಾರಿ ಕೈಗೊಳ್ಳುವ ಬದಲು ಪರಸ್ಪರ ಆರೋಪ, ಪ್ರತ್ಯಾರೋಪ ಮಾಡುತ್ತಾ ಕಾಮಗಾರಿ ಆರಂಭಿಸುವಲ್ಲಿ ವಿನಾ ಕಾರಣ ವಿಳಂಬ ನೀತಿ ಅನುಸರಿಸುತ್ತಿದ್ದಾರೆ. ಜೆಡಿಎಸ್ ಕಾರ್ಯಕರ್ತರು ಜನರ ಸಮಸ್ಯೆ ಮುಂದಿಟ್ಟುಕೊಂಡು ಇದೀಗ ಹೋರಾಟಕ್ಕೆ ಇಳಿದಿದ್ದಾರೆ. ಇದು ನಿಜಕ್ಕೂ ಉತ್ತಮ ಹೋರಾಟ. ಇದು ಸಫಲವಾಗುವವರಗೆ ಹೋರಾಟ ನಡೆಸಿ ಎಂದು ಕಾರ್ಯಕರ್ತರಿಗೆ ಕರೆಕೊಟ್ಟರು.
ವಿಧಾನ ಸಭಾ ಅಧಿವೇಶನ ನಡೆಯುತ್ತಿದೆ. ಸೋಮವಾರ ಶೂನ್ಯ ವೇಳೆಯಲ್ಲಿ ನಮ್ಮ ಪಕ್ಷದ ವಿಧಾನ ಸಭಾ ಉಪ ನಾಯಕ ವೈ. ಎಸ್.ವಿ. ದತ್ತಾರ ಮೂಲಕ ಈ ವಿಷಯವನ್ನು ಸದನದಲ್ಲಿ ಪ್ರಸ್ತಾಪ ಮಾಡಲಾಗುವುದು. ಜಿಲ್ಲಾ ಉಸ್ತುವಾರಿ ಸಚಿವ ಎಸ್. ಎಸ್. ಮಲ್ಲಿಕಾರ್ಜುನ್, ಲೋಕೋಪಧಿ ಯೋಗಿ ಇಲಾಖೆ ಸಚಿವ ಎಚ್.ಸಿ. ಮಹಾದೇವಪ್ಪನವರ ಮೇಲೆ ಒತ್ತಡ ಹೇರಿ, ಶೀಘ್ರ ಕಾಮಗಾರಿ ಆರಂಭಿಸಲು ಕ್ರಮ ವಹಿಸುವಂತೆ ಮನವಿಮಾಡಲಾಗುವುದು ಎಂದು ತಿಳಿಸಿದರು.
ಹೋರಾಟದ ರೂವಾರಿ, ಜೆಡಿಎಸ್ ಯುವ ಘಟಕದ ಜಿಲ್ಲಾಧ್ಯಕ್ಷ ಜೆ. ಅಮಾನುಲ್ಲಾ ಖಾನ್ ಮಾತನಾಡಿ, ನಗರದಸಮಸ್ಯೆ ಕುರಿತು ಜಿಲ್ಲಾಡಳಿತ, ರೈಲ್ವೆ ಇಲಾಖೆ ಆಧಿಕಾರಿಗಳು ಪರಸ್ಪರ ದೋಷಾರೋಪಣೆ ಮಾಡುತ್ತಾ ಕಾಲಹರಣ ಮಾಡುತ್ತಿದ್ದಾರೆ. ಮೂರು ವರ್ಷಗಳ ಹಿಂದೆ ಅನುದಾನ ಬಂದರೂ ಕಾಮಗಾರಿ ಆರಂಭಕ್ಕೆ ಯಾವುದೇ ಕ್ರಮ ಕೈಗೊಳ್ಳಲಾಗಿಲ್ಲ. ಜನರು ನಿರಂತರ ಸಮಸ್ಯೆಯಿಂದ ಬಳಲುತ್ತಿದ್ದಾರೆ ಎಂದರು.
ಜೆಡಿಎಸ್‌ನಿಂದ ಕಳೆದ 7 ದಿನಗಳಿಂದ ನಿರಂತರ ಅಹೋರಾತ್ರಿ ಧರಣಿ ನಡೆಸಲಾಗುತ್ತಿದೆ.ಆದರೂ ಯಾವುದೇ ಪರಿಹಾರ ಸೂಚಿಸುವಲ್ಲಿ ಜಿಲ್ಲಾಡಳಿತ ವಿಫಲವಾಗಿದೆ. ರೈಲ್ವೆ ಇಲಾಖೇ ಅಧಿಕಾರಿಗಳ ಜೊತೆ ಮಾತುಕತೆ ನಡೆಸಿ, ಕಾಮಗಾರಿ ಆರಂಭಕ್ಕೆ ಕ್ರಮ ವಹಿಸುವ ಬದಲು ಇಂದು, ನಾಳೆ ಎಂದು ನೆಪ ಹೇಳುತ್ತಿದ್ದಾರೆ ಎಂದರು.
ಪಕ್ಷದ ದಕ್ಷಿಣ ವಿಧಾನ ಸಭಾ ಕ್ಷೇತ್ರದ ಅಧ್ಯಕ್ಷ ಟಿ. ಅಸರ್, ಮುಖಂಡರಾದ ಅನೀಸ್‌ಪಾಷ, ಕೆ. ಮಂಜುಳ, ಬಾತಿ ಶಂಕರ್, ಕೆ. ಹನೀಫ್ ಸಾಬ್, ಖಾದರ್ ಬಾಷ, ಬಾಷಾಸಾಬ್, ಜಹಿರುದೀªನ್‌ಖಾನ್, ಅಹಮದ್‌ಬಾಷ, ಫಕೃದೀನ್, ಟಿ. ಮಹಮದ್ ಗೌಸ್, ಜೆ.ಎಂ. ಬಾಷ, ಕೆ.ಎಚ್. ಪ್ರಕಾಶ್, ಎ. ಶ್ರೀನಿವಾಸ್, ಹನುಮಂತ ರೆಡ್ಡಿ ಧರಣಿಯ ನೇತೃತ್ವ ವಹಿಸಿದ್ದರು. ಸಿಪಿಐಎಂಎಲ್‌ನ ಕೆ.ಎಲ್. ಭಟ್, ಇ. ಶ್ರೀನಿವಾಸ್ ಹೋರಾಟ ಬೆಂಬಲಿಸಿ, ಕೆಲಹೊತ್ತು ಧರಣಿಯಲ್ಲಿ ಪಾಲ್ಗೊಂಡರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere: ರಾಜ್ಯದಲ್ಲಿ ಕಾಂಗ್ರೆಸ್ ಸರಕಾರದಿಂದ ಅರಾಜಕತೆ ಸೃಷ್ಟಿ: ಜಗದೀಶ್ ಶೆಟ್ಟರ್
ಸಿ.ಟಿ.ರವಿ-ಸಚಿವೆ ಲಕ್ಷ್ಮೀ ದೂರು ಪ್ರಕರಣ: ಪೊಲೀಸರ ವರದಿ ಬಳಿಕ ನಿಯಮಾನುಸಾರ ಕ್ರಮ: ಹೊರಟ್ಟಿ
Davangere: ಉತ್ತಮ ಹಿಂಗಾರು: ಬಂಪರ್ ಇಳುವರಿ ನಿರೀಕ್ಷೆಯಲ್ಲಿ ಬೆಳೆಗಾರರು
Nyamathi: ಕಾಡುಪ್ರಾಣಿಗಳಿಗೆ ಇರಿಸಿದ್ದ 32 ನಾಡ ಬಾಂಬ್ ಗಳು ಪತ್ತೆ
Davangere:ಡಾ| ಬಿ.ಆರ್. ಅಂಬೇಡ್ಕರ್ ಅವಹೇಳನ; ಶಾ ರಾಜೀನಾಮೆಗೆ ಒತ್ತಾಯಿಸಿ ಬೃಹತ್ ಪ್ರತಿಭಟನೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Karkala: ಚಿನ್ನದಂಗಡಿ ಕಳ್ಳತನ: ಕುಖ್ಯಾತ ಸರಗಳ್ಳ ಅರೆಸ್ಟ್
ICC ವರ್ಷದ ಟೆಸ್ಟ್ ಕ್ರಿಕೆಟಿಗ ಪ್ರಶಸ್ತಿಗೆ ಜಸ್ಪ್ರೀತ್ ಬುಮ್ರಾ ಹೆಸರು
Contracter Case: ಸಿಐಡಿ ಮೇಲೆ ವಿಶ್ವಾಸವಿಲ್ಲ, ಸಿಬಿಐಗೆ ಕೊಡಿ: ಸಚಿನ್ ಸಹೋದರಿ ಸುರೇಖಾ
First Test Match: ಜಿಂಬಾಬ್ವೆ-ಅಫ್ಘಾನಿಸ್ಥಾನ ಟೆಸ್ಟ್ ಡ್ರಾ
Misuse; ಐಶ್ವರ್ಯ ಗೌಡ ವಿರುದ್ಧ ಪೊಲೀಸ್ ದೂರು ದಾಖಲಿಸಿದ ಡಿ.ಕೆ.ಸುರೇಶ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.