ಪ್ರವಾಸಿ ತಾಣ ಅಭಿವೃದ್ದಿಗೆ ಸರ್ಕಾರಕ್ಕೆ ಪ್ರಸ್ತಾವನೆ
ಕೊಡತಾಳು, ತೀರ್ಥರಾಮೇಶ್ವರ ಹಾಗೂ ಗೆಡ್ಡೆ ರಾಮೇಶ್ವರ ಪ್ರವಾಸಿ ತಾಣವಾಗಿ ಮಾರ್ಪಾಡು: ರೇಣು
Team Udayavani, May 3, 2022, 4:44 PM IST
ಹೊನ್ನಾಳಿ: ಕೊಡತಾಳು, ತೀರ್ಥರಾಮೇಶ್ವರ ಹಾಗೂ ಗೆಡ್ಡೆರಾಮೇಶ್ವರಗಳನ್ನು ಪ್ರವಾಸಿ ತಾಣಗಳನ್ನಾಗಿ ಮಾಡಲು ಯೋಜನೆ ರೂಪಿಸಲಾಗಿದೆ. ಈಗಾಗಲೇ ಡಿಪಿಆರ್ ಮಾಡಿಸಿ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಹೇಳಿದರು.
ನ್ಯಾಮತಿ ತಾಲೂಕಿನ ಕೊಡತಾಳು ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಕಣಿವೆ ವೀರಭದ್ರೇಶ್ವರ ದೇವಾಲಯ ಲೋಕಾರ್ಪಣೆ ಮತ್ತು ಗೋಪುರ ಕಳಸಾರೋಹಣ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು. ಸವಳಂಗ-ಕೊಡತಾಳು ರಸ್ತೆಯಲ್ಲಿ ಸಾಕಷ್ಟು ಅಪಘಾತಗಳು ನಡೆಯುತ್ತಿವೆ. ಹಾಗಾಗಿ ಗ್ರಾಮಸ್ಥರು ಕೆರೆಗೆ ತಡೆಗೋಡೆ ನಿರ್ಮಾಣ ಮಾಡುವಂತೆ ಮನವಿ ಮಾಡಿದ್ದಾರೆ. ಇದೀಗ ರಸ್ತೆ ಅಗಲೀಕರಣ ಮಾಡಿ ತಡೆಗೋಡೆ ನಿರ್ಮಾಣ ಮಾಡಲು ನಾಲ್ಕು ಕೋಟಿ ರೂ. ಅನುದಾನ ನೀಡಲಾಗುವುದು ಎಂದರು.
ಈ ಹಿಂದೆ ಕಣಿವೆ ವೀರಭದ್ರೇಶ್ವರ ದೇವಾಲಯದಲ್ಲಿ ಬೋಜನಾಲಯ ನಿರ್ಮಾಣಕ್ಕೆ 5 ಲಕ್ಷ ರೂ. ಹಾಗೂ ದೇವಾಲಯಕ್ಕೆ 3 ಲಕ್ಷ ರೂ. ನೀಡಿದ್ದೇನೆ. ದೇವಾಲಯಕ್ಕೆ ಹೋಗುವ ರಸ್ತೆ ಹಾಳಾಗಿದ್ದು, ರಸ್ತೆ ನಿರ್ಮಿಸಿಕೊಡುವಂತೆ ದೇವಾಲಯ ಸಮಿತಿಯವರು ಮನವಿ ಮಾಡಿದ್ದು, 1 ಕೋಟಿ ರೂ. ನೀಡಲಾಗಿದ್ದು, ದೇವಾಲಯಕ್ಕೆ ತೆರಳುವ ರಸ್ತೆ ಡಾಂಬರ್ ರಸ್ತೆ ಅಥವಾ ಸಿಸಿ ರಸ್ತೆ ಮಾಡಬೇಕು ಎನ್ನುವುದನ್ನು ದೇವಾಲಯದ ಸಮಿತಿಯವರು ನಿರ್ಧರಿಸಿ ತಿಳಿಸಿದರೆ ಮತ್ತಷ್ಟು ಅನುದಾನ ನೀಡುವುದಾಗಿ ಭರವಸೆ ನೀಡಿದರು.
ಕೊಡತಾಳು ಗ್ರಾಮವನ್ನು ಆದರ್ಶ ಗ್ರಾಮಕ್ಕೆ ಆಯ್ಕೆ ಮಾಡಿ 40 ಲಕ್ಷ ರೂಪಾಯಿ ಅನುದಾನದಲ್ಲಿ ಅಭಿವೃದ್ಧಿಪಡಿಸಲಾಗಿದೆ. ಸೇವಾಲಾಲ್ ಸಾಂಸ್ಕೃತಿಕ ಕೇಂದ್ರಕ್ಕೆ 10 ಲಕ್ಷ ರೂ. ಅನುದಾನ ನೀಡಿರುವುದಾಗಿ ತಿಳಿಸಿದರು.
ಮಾಜಿ ಶಾಸಕ ಡಿ.ಜಿ. ಶಾಂತನಗೌಡ, ಶಿಕ್ಷಕಿ ಬನಶಂಕರಮ್ಮ, ನಿವೃತ್ತ ಉಪನ್ಯಾಸಕ ಎಸ್.ಆರ್. ಬಸವರಾಜಪ್ಪ, ಜಯಣ್ಣ ಮಾತನಾಡಿದರು. ಒಡೆಯರ್ ಚೆನ್ನಮಲ್ಲಿಕಾರ್ಜುನ ಶಿವಾಚಾರ್ಯ ಸ್ವಾಮೀಜಿ, ಶ್ರೀಪತಿ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ, ಗಿರಿಸಿದ್ದೇಶ್ವರ ಶಿವಾಚಾರ್ಯ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು.
ಫಲವನಹಳ್ಳಿ ಏತ ನೀರಾವರಿ ಯೋಜನೆಗೆ 83 ಕೋಟಿ ರೂ. ಅನುದಾನ ಬಿಡುಗಡೆಯಾಗಿದೆ. ಶೀಘ್ರ ಟೆಂಡರ್ ಪ್ರಕ್ರಿಯೆ ನಡೆದು ಗ್ರಾಮಗಳಿಗೆ ಶುದ್ಧ ಕುಡಿಯುವ ನೀರು ಪೂರೈಕೆ ಮಾಡಲಾಗುವುದು. -ಎಂ.ಪಿ. ರೇಣುಕಾಚಾರ್ಯ ಸಿಎಂ ರಾಜಕೀಯ ಕಾರ್ಯದರ್ಶಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere: ಬಿಜೆಪಿ-ಕಾಂಗ್ರೆಸ್ ಹೊಂದಾಣಿಕೆ ಆರೋಪದ ಬಗ್ಗೆ ರೇಣುಕಾಚಾರ್ಯ ಸ್ಪಷ್ಟನೆ
Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ ಕಾಂಗ್ರೆಸ್ ಶಾಸಕ
Davangere: 2021ರಲ್ಲಿ ಅಪ್ರಾಪ್ತೆಯನ್ನು ಅಪಹರಿಸಿ ಅತ್ಯಾಚಾರವೆಸಗಿದ್ದವನಿಗೆ ಶಿಕ್ಷೆ ಪ್ರಕಟ
Davanagere: ಪಾಠ ಮಾಡುತ್ತಿದ್ದಾಗಲೇ ಹೃದಯಾಘಾತ; ಶಿಕ್ಷಕ ಸಾವು
ಸಾರಿಗೆ ಬಸ್ ಡಿಪೋ ಪ್ರಾರಂಭಿಸಬೇಕು ಎಂದು ಒತ್ತಾಯಿಸಿ ದಾವಣಗೆರೆ ತಲುಪಿದ ಪಾದಯಾತ್ರೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kundapura ದೊಡ್ಡಾಸ್ಪತ್ರೆಗೆ ವೈದ್ಯರ ಕೊರತೆ
Nelamangala: ಐಷಾರಾಮಿ ಕಾರಿನ ಮೇಲೆ ಬಿದ್ದ ಕಂಟೈನರ್… ಒಂದೇ ಕುಟುಂಬದ 6 ಮಂದಿ ಸಾ*ವು
Google Layoffs: ಉನ್ನತ ಹುದ್ದೆಯ ಉದ್ಯೋಗಿಗಳ ವಜಾ: ಗೂಗಲ್ ಸಿಇಒ ಸುಂದರ್ ಪಿಚೈ
Arrest Warrant: ರಾಬಿನ್ ಉತ್ತಪ್ಪ ವಿರುದ್ದ ಬಂಧನ ವಾರೆಂಟ್; ಜೈಲು ಪಾಲಾಗ್ತಾರಾ ಕ್ರಿಕೆಟಿಗ
Mangaluru: ಕರಾವಳಿ ಉತ್ಸವದಲ್ಲಿ ಹೆಲಿಕಾಪ್ಟರ್ ಮೂಲಕ ನಗರದ ದರ್ಶನಕ್ಕೆ ಅವಕಾಶ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.