ಸುಗ್ರೀವಾಜ್ಞೆ ರೈತರು-ಕಾರ್ಮಿಕರಿಗೆ ಮಾರಕ
Team Udayavani, Sep 20, 2020, 6:17 PM IST
ಜಗಳೂರು: ಭೂಸುಧಾರಣೆ ಹಾಗೂ ಎಪಿಎಂಸಿ ತಿದ್ದುಪಡಿ ಕಾಯ್ದೆಯನ್ನು ವಿರೋಧಿಸಿ ಭಾರತ ಕಮೂನಿಸ್ಟ್ ಪಕ್ಷದ ವತಿಯಿಂದ ಪ್ರತಿಭಟನೆ ನಡೆಸಿ ಉಪತಹಶೀಲ್ದಾರ್ ಧನಪಾಲ ಶೆಟ್ಟಿ ಅವರಿಗೆ ಮನವಿ ಸಲ್ಲಿಸಲಾಯಿತು.
ದೇಶದಲ್ಲಿ ಕೋವಿಡ್ ಸಾಂಕ್ರಾಮಿಕ ಪಿಡುಗಿನ ವಿರುದ್ಧ ಸೆಣಸಾಡುವ ಸಮಯದಲ್ಲಿ ಸರಕಾರ ಜಾರಿಗೊಳಿಸಿರುವ ಕರ್ನಾಟಕ ಭೂ ಸುಧಾರಣಾ 2020, ಎಪಿಎಂಸಿ ಕಾಯ್ದೆ ತಿದ್ದುಪಡಿ ಸುಗ್ರೀವಾಜ್ಞೆ, ಕೈಗಾರಿಕಾ ವ್ಯಾಜ್ಯಗಳು ಮತ್ತು ಇತರೆ ಕಾಯ್ದೆ ತಿದ್ದುಪಡಿ ಸುಗ್ರೀವಾಜ್ಞೆಗಳು ರೈತ ಹಾಗೂ ಕಾರ್ಮಿಕರ ಮೇಲೆ ಗಂಭೀರ ಪರಿಣಾಮ ಬೀರಲಿವೆ. ಇಡೀ ಕೃಷಿ ಕ್ಷೇತ್ರವನ್ನು ಕಾರ್ಪೋರೆಟ್ ಕಂಪನಿಗಳ ಸುಪ ರ್ದಿಗೆ ವಹಿಸಲು ಸರ್ಕಾರಹುನ್ನಾರ ನಡೆಸಿದೆ. ಕೂಡಲೇ ಕರ್ನಾಟಕ ವಿಧಾನಸಭೆಯಲ್ಲಿ ಅಂಗೀಕಾರಕ್ಕೆ ಬರುತ್ತಿರುವ ಈ ಮೂರು ಸುಗ್ರೀವಾಜ್ಞೆಗಳನ್ನು ಶಾಸನವಾಗದಂತೆ ನೋಡಿಕೊಳ್ಳಬೇಕೆಂದು ಪ್ರತಿಭಟನಾಕಾರರು ಒತ್ತಾಯಿಸಿದರು.
ಸಮಸ್ಯೆಗೆ ಸ್ಪಂದಿಸದ ಅಧಿಕಾರಿಗಳನ್ನು ವರ್ಗಾವಣೆ ಮಾಡಿ: ಇದೇ ವೇಳೆ ರಾಜ್ಯ ಕಟ್ಟಡ ಕಟ್ಟುವ ಮತ್ತು ಕಲ್ಲು ಹೊಡೆಯುವಕ್ವಾರಿ ಕಾರ್ಮಿಕರ ಸಂಘದ ವತಿಯಿಂದ ತಾಲೂಕಾಡಳಿತಕ್ಕೆ ಮನವಿ ಸಲ್ಲಿಸಲಾಯಿತು. ಕಟ್ಟಡ ಕಾರ್ಮಿಕರು ಮಂಡಳಿಗೆ ಸಹಾಯಧನ ಕೋರಿ ಅರ್ಜಿ ಸಲ್ಲಿಸಿ ವರ್ಷಗಳೇ ಕಳೆದರೂ ಸರಕಾರದ ಸೌಲಭ್ಯಗಳು ಸಿಗುತ್ತಿಲ್ಲ ಕಾರ್ಮಿಕರ ಮಕ್ಕಳ ಶೈಕ್ಷಣಿಕ ಉದ್ದೇಶಕ್ಕೆ ಪ್ರೋತ್ಸಾಹಧನ, ಮದುವೆ, ವೈದ್ಯಕೀಯ, ವಯೋವೃದ್ಧರಿಗೆ ಪಿಂಚಣಿ, ವಸತಿ ಸೇರಿದಂತೆ ಅಕಾಲಿಕ ಮರಣ ಹೊಂದಿದರೆ ಅಂತಹವರಿಗೆ ಸಹಾಯಧನ ನೀಡುತ್ತಿಲ್ಲ. ಕಾರ್ಮಿಕ ಇಲಾಖೆ ಅಧಿ ಕಾರಿಗಳು ಸರಕಾರದ ನಿಯಮವನ್ನು ಗಾಳಿಗೆ ತೂರಿ ನಿರ್ಲಕ್ಷ್ಯ ವಹಿಸಿದ್ದಾರೆ. ಕಾರ್ಮಿಕರ ಸಮಸ್ಯೆಗಳಿಗೆ ಸ್ಪಂದಿಸದ ಅಧಿಕಾರಿಗಳನ್ನು ವರ್ಗಾವಣೆ ಮಾಡಬೇಕೆಂದು ಆಗ್ರಹಿಸಿದರು.
ಭಾರತ ಕಮ್ಯೂನಿಸ್ಟ್ ಪಕ್ಷದ ಕಾರ್ಯದರ್ಶಿ ಮಹಮ್ಮದ್ ಭಾಷಾ, ಸಹ ಕಾರ್ಯದರ್ಶಿ ಭಾಗ್ಯಮ್ಮ, ಖಜಾಂಚಿ ಹಾಲಮ್ಮ, ಮಾದಿಹಳ್ಳಿ ಮಂಜಪ್ಪ, ಕರಿಬಸಪ್ಪ, ಶಾಂತವೀರಮ್ಮ, ಚನ್ನಮ್ಮ, ಶಶಿಕಲಾ, ಕಟ್ಟಡ ಕಾರ್ಮಿಕರ ಸಂಘದ ಅಧ್ಯಕ್ಷ ವೀರಣ್ಣ, ಯುವರಾಜ್, ಮಧು, ರಮೇಶ್, ಖಾದರ್ ಷರೀಫ್, ಮಹಮ್ಮದ್ ಖಯೀಂ, ತಿಪ್ಪೇಸ್ವಾಮಿ, ಮಹಮ್ಮದ್ ಅಲಿ, ಬಸವರಾಜ್, ನಾಗರಾಜ್, ಸುರೇಶ್, ನೌಷಾದ್, ಚೇತನ್ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere: ಇನ್ಶೂರೆನ್ಸ್ ಹಣಕ್ಕಾಗಿ ಸಂಬಂಧಿಯ ಕೊಲೆ; 24 ಗಂಟೆಯೊಳಗೆ ನಾಲ್ವರ ಬಂಧನ
Davanagere: ದೇವಸ್ಥಾನಗಳ ಆಸ್ತಿಗಳ ರಕ್ಷಣೆಗೆ ರಾಜ್ಯ ಸರ್ಕಾರ ಮುಂದಾಗಬೇಕು: ಪೇಜಾವರ ಶ್ರೀ
ಅಂಗಡಿಯಲ್ಲಿ ಬಿಟ್ಟು ಹೋಗಿದ್ದ 1.20 ಲ.ರೂ ಹಿಂದಿರುಗಿಸಿ ಮಾನವೀಯತೆ ಮೆರೆದ ಶಾಸಕ ಬಸವಂತಪ್ಪ
Waqf Protest: ರೇಣುಕಾಚಾರ್ಯ, ಗಾಯಿತ್ರಿ ಸಿದ್ದೇಶ್ವರ ಸೇರಿ ಹಲವರು ಪೊಲೀಸ್ ವಶಕ್ಕೆ
Waqf Property: “ವಕ್ಫ್ ಆಸ್ತಿ ಕಬಳಿಕೆ ವಿರುದ್ಧ ಸಿಎಂ ಸಿಬಿಐ, ಎಸ್‌ಐಟಿ ತನಿಖೆ ಮಾಡಿಸಲಿ”
MUST WATCH
ಹೊಸ ಸೇರ್ಪಡೆ
Niveus Mangalore Marathon 2024: ನ.10: ನೀವಿಯಸ್ ಮಂಗಳೂರು ಮ್ಯಾರಥಾನ್
Ghaati: ಸ್ವೀಟಿ ಅಲ್ಲ ಘಾಟಿ; ಫಸ್ಟ್‌ಲುಕ್‌ನಲ್ಲಿ ಅನುಷ್ಕಾ ಸಿನಿಮಾ
Brahmavara ಬಂಟರ ಯಾನೆ ನಾಡವರ ಸಂಘ: ನಾಳೆ ನೂತನ ಪದಾಧಿಕಾರಿಗಳ ಪದಪ್ರದಾನ
Afghanistan Cricketer: ಏಕದಿನ ಕ್ರಿಕೆಟ್ ಗೆ ವಿದಾಯ ಘೋಷಿಸಿದ ಅಫ್ಘಾನ್ ಆಲ್‌ರೌಂಡರ್
Mangaluru: ಡಿ. 7: ಮುಂಬಯಿಯಲ್ಲಿ ವಿಶ್ವ ಬಂಟರ ಸಮಾಗಮ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.