ಕೃಷಿ ಪಂಪ್ ಸೆಟ್ ಗೆ ಆಧಾರ ಲಿಂಕ್ ಖಂಡಿಸಿ ಸೆ. 4ರಂದು ಪ್ರತಿಭಟನೆ: ಕೋಡಿಹಳ್ಳಿ ಚಂದ್ರಶೇಖರ್
Team Udayavani, Aug 30, 2024, 12:58 PM IST
ದಾವಣಗೆರೆ: ಕೃಷಿ ಪಂಪ್ ಸೆಟ್ ಗಳಿಗೆ ಆಧಾರ ಲಿಂಕ್ ಖಂಡಿಸಿ ಸೆ. 4ರಂದು ರಾಜ್ಯಾದ್ಯಂತ ಪ್ರತಿಭಟನೆ ನಡೆಸಲಾಗುತ್ತದೆ. ಎಲ್ಲಾ ಜಿಲ್ಲೆಗಳಲ್ಲಿ ವಿದ್ಯುತ್ ಕಚೇರಿ ಮುಂದೆ ಪ್ರತಿಭಟನೆ ನಡೆಸಲಾಗುತ್ತದೆ ಎಂದು ರೈತ ಸಂಘದ ರಾಜ್ಯಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ (Kodihalli Chandrasekhar) ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇಂದ್ರ ಸರ್ಕಾರ ಭೂ ಸಂಬಂಧಿ ಕಾಯ್ದೆ ಜಾರಿ ಮಾಡಿತ್ತು. ಆಗ 11 ತಿಂಗಳ ಸತತ ಹೋರಾಟ ನಡೆದ ಪರಿಣಾಮ ಕೇಂದ್ರ ಕೈ ಬಿಟ್ಟಿತು. ಆದರೆ, ರಾಜ್ಯದಲ್ಲಿದ್ದ ಬಿಜೆಪಿ ಸರ್ಕಾರ ಕಾಯ್ದೆ ಜಾರಿ ಮಾಡಿತು. ಆಗ ವಿಪಕ್ಷ ನಾಯಕರಾಗಿದ್ದ ಸಿದ್ದರಾಮಯ್ಯ ಮುಂದಿನ ಚುನಾವಣೆ ವೇಳೆ ನಮ್ಮನ್ನು ಬೆಂಬಲಿಸಿ, ನಾವು ಕಾನೂನು ಹಿಂತೆಗೆದುಕೊಳ್ಳುತ್ತೇವೆ ಎಂದು ಭರವಸೆ ನೀಡಿದ್ದರು. ಆದರೆ, ಈಗ 13 ತಿಂಗಳ ಕಳೆದರೂ ಇದುವರೆಗೆ ಅವರ ಭರವಸೆ ಈಡೇರಿಸಿಲ್ಲ. ಸಿಎಂ ಸಿದ್ದರಾಮಯ್ಯ ಅವರು ಕೊಟ್ಟ ಮಾತಿನಂತೆ ಕಾನೂನು ರದ್ದುಮಾಡಿ ಪರಿಷತ್ ನಲ್ಲಿ ಬಹುಮತ ಸಿಕ್ಕ ಬಳಿಕ ಸಂಪೂರ್ಣ ಹಿಂಪಡೆಯುವ ಕೆಲಸ ಮಾಡುವ ಕೆಲಸ ಮಾಡಬೇಕಿತ್ತು. ಆದರೆ, ಸಿದ್ದರಾಮಯ್ಯ ಸೋಗಲಾಡಿತನ ತೋರಿಸುತ್ತಿದ್ದಾರೆ ಎಂದು ಟೀಕಿಸಿದರು.
ಇಂದು ಎಲ್ಲ ರಾಜಕೀಯ ಪಕ್ಷಗಳು ಬಹುರಾಷ್ಟ್ರೀಯ ಕಂಪನಿಯ ಗುಲಾಮರಾಗಿದ್ದಾರೆ. ರೈತರ ಸಮ್ಮತಿ ಇಲ್ಲದೆ ಪಂಪ್ ಸೆಟ್ ಗೆ ಮೀಟರ್ ಅಳವಡಿಸಿದರೆ ಅದನ್ನು ಕಿತ್ತು ಬೀದಿ ಬೀದಿಗಳಲ್ಲಿ ಎಸೆಯುತ್ತೇವೆ ಎಂದರು.
ಮೊದಲು ಸ್ವಾಮಿನಾಥನ್ ವರದಿಯಂತೆ ರೈತರ ಬೆಳೆಗಳಿಗೆ ಬೆಲೆ ಕೊಡುವ ವ್ಯವಸ್ಥೆ ಮಾಡಿದ ಬಳಿಕ ಸರ್ಕಾರ ಮೀಟರ್ ಹಾಕಿ ಬಿಲ್ ಕೊಡಲಿ. ಅಲ್ಲಿಯವರೆಗೆ ಮೀಟರ್ ಅಳವಡಿಸುವ ಆಲೋಚನೆ ಕೈ ಬಿಡಬೇಕು ಎಂದು ಕೋಡಿಹಳ್ಳಿ ಚಂದ್ರಶೇಖರ್ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nyamathi: ಕಾಡುಪ್ರಾಣಿಗಳಿಗೆ ಇರಿಸಿದ್ದ 32 ನಾಡ ಬಾಂಬ್ ಗಳು ಪತ್ತೆ
Davangere:ಡಾ| ಬಿ.ಆರ್. ಅಂಬೇಡ್ಕರ್ ಅವಹೇಳನ; ಶಾ ರಾಜೀನಾಮೆಗೆ ಒತ್ತಾಯಿಸಿ ಬೃಹತ್ ಪ್ರತಿಭಟನೆ
Davanagere:ಅಮಿತ್ ಶಾರನ್ನು ಸಂಪುಟದಿಂದ ವಜಾ ಮಾಡಬೇಕೆಂದು ಒತ್ತಾಯಿಸಿ ಅರೆಬೆತ್ತಲೆ ಮೆರವಣಿಗೆ
Davanagere: ವೃದ್ಧೆ ಮೇಲೆ ಅತ್ಯಾ*ಚಾರ; ಯುವಕನಿಗೆ 10 ವರ್ಷ ಕಠಿಣ ಶಿಕ್ಷೆ
Davanagere: ಬಿಜೆಪಿ-ಕಾಂಗ್ರೆಸ್ ಹೊಂದಾಣಿಕೆ ಆರೋಪದ ಬಗ್ಗೆ ರೇಣುಕಾಚಾರ್ಯ ಸ್ಪಷ್ಟನೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Ullala; ನೇಮದ ಗದ್ದೆಯಲ್ಲಿ ತ್ಯಾಜ್ಯ ರಾಶಿ: ವೈದ್ಯನಾಥ ದೈವದ ಕೋಪಾವೇಶ
Security ನೀಡುವಂತೆ ಕೇಂದ್ರ ಸಚಿವರಿಗೆ ಸ್ನೇಹಮಯಿ ಪತ್ರ
Puttur: ನಿಯಂತ್ರಣ ತಪ್ಪಿ ಗುಂಡಿಗೆ ಬಿದ್ದ ಕಾರು; ಮೂವರ ದುರ್ಮರಣ
INDvsAUS: ವಿಚಿತ್ರ ರೀತಿಯಲ್ಲಿ ಔಟಾದ ರಿಷಭ್ ಪಂತ್ ವಿರುದ್ದ ಕಿಡಿಕಾರಿದ ಗಾವಸ್ಕರ್
Hathras: ಶಾಲೆಗೆ ರಜೆ ಸಿಗಬೇಕೆಂದು 2ನೇ ತರಗತಿ ಮಗುವನ್ನು ಕೊಂದ ವಿದ್ಯಾರ್ಥಿ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.