ಕೇಂದ್ರ-ರಾಜ್ಯ ಸರ್ಕಾರ ವಿರುದ್ಧ ಆಕ್ರೋಶ
Team Udayavani, Jan 2, 2021, 4:11 PM IST
ದಾವಣಗೆರೆ; ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ರೈತ, ಕಾರ್ಮಿಕ ವಿರೋಧಿ ನೀತಿ ಅನುಸರಿಸುತ್ತಿವೆ ಎಂದು ಆರೋಪಿಸಿಸೋಮವಾರ ಜಯದೇವ ವೃತ್ತದಲ್ಲಿ ಸಿಐಟಿಯು ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಕೇಂದ್ರ ಸರ್ಕಾರದ ರೈತ ಮತ್ತು ಕಾರ್ಮಿಕ ವಿರೋಧಿ ಕಾಯ್ದೆಗಳ ಪ್ರತಿಗಳನ್ನುಹರಿದುಹಾಕುವ ಮೂಲಕ ಹೊಸ ವರ್ಷದದಿನವನ್ನು ಆಚರಿಸಿದರು. “ಕಾರ್ಮಿಕಹಕ್ಕುಗಳನ್ನು ಉಳಿಸುತ್ತೇವೆ, ರೈತರ ಬದುಕನ್ನುರಕ್ಷಿಸುತ್ತೇವೆ, ಕಾರ್ಪೋರೇಟ್ ಹಿಡಿತದಿಂದ ದೇಶವನ್ನು ಕಾಪಾಡುತ್ತೇವೆ’ ಎಂಬ ಪ್ರತಿಜ್ಞೆಯೊಂದಿಗೆ ಹೊಸ ವರ್ಷದ ದಿನವನ್ನುಸ್ವಾಗತಿಸಿದರು.
ಕೇಂದ್ರ ಸರ್ಕಾರ ಎಲ್ಲಾ ನಾಲ್ಕು ಕಾರ್ಮಿಕಸಂಹಿತೆಗಳನ್ನು ರದ್ದುಗೊಳಿಸಬೇಕು.ಮೂರು ಕೃಷಿ ಕಾನೂನುಗಳನ್ನು ವಾಪಸ್ ಪಡೆಯಬೇಕು.. ಎಲ್ಲಾ ರೀತಿಯ ಖಾಸಗೀಕರಣವನ್ನು ಕೂಡಲೇ ನಿಲ್ಲಿಸಬೇಕು. ಆದಾಯ ತೆರಿಗೆಯ ಮಿತಿಯಿಂದಹೊರಗಿರುವ ಎಲ್ಲಾ ಕುಟುಂಬಗಳಿಗೂಮಾಸಿಕ 7,500 ನಗದು ಹಣ ವರ್ಗಾವಣೆ ಮಾಡಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.
ಬಡವರಿಗೆ ಪ್ರತಿಯೊಬ್ಬರಿಗೂ ಪ್ರತಿತಿಂಗಳು 10 ಕೆ.ಜಿ. ಆಹಾರ ಧಾನ್ಯಗಳನ್ನುಉಚಿತವಾಗಿ ನೀಡಬೇಕು. ಗ್ರಾಮೀಣಉದ್ಯೋಗ ಖಾತರಿ ಯೋಜನೆಯಡಿಯಲ್ಲಿವಾರ್ಷಿಕ 200 ದಿನಗಳ ಕೆಲಸ ಮತ್ತು ದಿನಕ್ಕೆ700 ರೂಪಾಯಿ ಕೂಲಿ ನೀಡಬೇಕು, ನಗರ ಪ್ರದೇಶಗಳಿಗೂ ಈ ಯೋಜನೆ ವಿಸ್ತರಿಸಬೇಕು.ಹೊಸ ಪಿಂಚಣಿ ಯೋಜನೆ ರದ್ದುಗೊಳಿಸಿ ಹಳೆ ಪಿಂಚಣಿ ವ್ಯವಸ್ಥೆ ಜಾರಿಗೆ ತರಬೇಕು. ಎಲ್ಲಾ ಅಸಂಘಟಿತ ಕಾರ್ಮಿಕರಿಗೆ ಸಾಮಾಜಿಕ ರಕ್ಷಣಾಯೋಜನೆಗಳನ್ನು ವಿಸ್ತರಿಸಬೇಕು. ಉಚಿತವಾಗಿಸಾರ್ವತ್ರಿಕ ಆರೋಗ್ಯ ರಕ್ಷಣೆಯನ್ನು ಎಲ್ಲರಿಗೂ ಜಾರಿಗೊಳಿಸಬೇಕು ಎಂದು ಆಗ್ರಹಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davangere: 2021ರಲ್ಲಿ ಅಪ್ರಾಪ್ತೆಯನ್ನು ಅಪಹರಿಸಿ ಅತ್ಯಾಚಾರವೆಸಗಿದ್ದವನಿಗೆ ಶಿಕ್ಷೆ ಪ್ರಕಟ
Davanagere: ಪಾಠ ಮಾಡುತ್ತಿದ್ದಾಗಲೇ ಹೃದಯಾಘಾತ; ಶಿಕ್ಷಕ ಸಾವು
ಸಾರಿಗೆ ಬಸ್ ಡಿಪೋ ಪ್ರಾರಂಭಿಸಬೇಕು ಎಂದು ಒತ್ತಾಯಿಸಿ ದಾವಣಗೆರೆ ತಲುಪಿದ ಪಾದಯಾತ್ರೆ
BJP; ಕುಮಾರ್ ಬಂಗಾರಪ್ಪ ರಾಜ್ಯಾಧ್ಯಕ್ಷನಾಗುವುದು ತಿರುಕನ ಕನಸು: ರೇಣುಕಾಚಾರ್ಯ
Davanagere: ಮುಂಬರುವ ಫೆಬ್ರವರಿಯಲ್ಲಿ ಬಿಎಸ್‌ವೈ ಜನ್ಮದಿನ ಅದ್ಧೂರಿ ಆಚರಣೆ: ರೇಣುಕಾಚಾರ್ಯ
MUST WATCH
ಹೊಸ ಸೇರ್ಪಡೆ
Ambedkar row: ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜಕೀಯ ಬಿಟ್ಟು ಹೋಗಲಿ ಎಂದ ಲಾಲು ಪ್ರಸಾದ್
Hydarabad: ಹೊಸ ವರ್ಷಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಿದ ಪೊಲೀಸರು, ಏನೇನಿದೆ ಮಾರ್ಗಸೂಚಿಯಲ್ಲಿ
Lok Adalat: ಲೋಕ್ ಅದಾಲತ್‌ನಲ್ಲಿ 38.8 ಲಕ್ಷ ವ್ಯಾಜ್ಯ ಇತ್ಯರ್ಥ
Bengaluru: ಒಬಾಮಾ ಭೇಟಿ ವೇಳೆ ಸ್ಫೋಟ ಸಂಚು: ಡಿ.23ಕ್ಕೆ ಶಿಕ್ಷೆ ಪ್ರಕಟ
Fraud: ಸಿಬಿಐ ಸೋಗಿನಲ್ಲಿ ವೃದ್ಧೆಗೆ 1.24 ಕೋಟಿ ರೂ. ವಂಚನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.