ತೈಲೋತ್ಪನ್ನ ಬೆಲೆ ಏರಿಕೆ ಖಂಡಿಸಿ ಪ್ರತಿಭಟನೆ
Team Udayavani, Jul 8, 2020, 11:03 AM IST
ಹರಿಹರ: ಪೆಟ್ರೋಲ್, ಡೀಸೆಲ್ ಬೆಲೆ ಎರಿಕೆ ಖಂಡಿಸಿ ಕೇಂದ್ರ ಸರ್ಕಾರದ ವಿರುದ್ಧ ಮಂಗಳವಾರ ತಾಲೂಕು ಬ್ಲಾಕ್ ಕಾಂಗ್ರೆಸ್ ವತಿಯಿಂದ ಮಂಗಳವಾರ ಪ್ರತಿಭಟನೆ ನಡೆಸಲಾಯಿತು.
ನಗರದ ಫಕ್ಕೀರಸ್ವಾಮಿ ಮಠದಿಂದ ಪ್ರತಿಭಟನೆಯಲ್ಲಿ ಮಿನಿ ವಿಧಾನಸೌಧಕ್ಕೆ ಆಗಮಿಸಿ ತಹಶೀಲ್ದಾರ್‌ಗೆ ಮನವಿ ಸಲ್ಲಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಎಸ್. ರಾಮಪ್ಪ, ಕೋವಿಡ್ ಲಾಕ್‌ಡೌನ್‌ನಿಂದ ಸಂಕಷ್ಟದಲ್ಲಿರುವ ಜನರ ನೆರವಿಗೆ ಬರುವ ಬದಲು ಗಾಯದ ಮೇಲೆ ಬರೆ ಎಳೆದಂತೆ ತೈಲೋತ್ಪನ್ನಗಳ ಬೆಲೆ ಏರಿಕೆ ಮಾಡಿರುವುದು ಖಂಡನೀಯ ಎಂದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಲ್.ಬಿ. ಹನುಮಂತಪ್ಪ ಮಾತನಾಡಿ. ಕೇಂದ್ರ ಮತ್ತು ರಾಜ್ಯದಲ್ಲಿ ಅಧಿಕಾರದಲ್ಲಿರುವ ಬಿಜೆಪಿ ಕೋವಿಡ್ ನಿಯಂತ್ರಿಸುವಲ್ಲಿ ಸಂಪೂರ್ಣ ವಿಫಲವಾಗಿದೆ. ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಮೂಲಕ ಜನ ಸಾಮಾನ್ಯರನ್ನು ಲೂಟಿ ಮಾಡಲು ಅವಕಾಶ ನೀಡುವುದಿಲ್ಲ. ಕೂಡಲೇ ಬೆಲೆ ಇಳಿಸದಿದ್ದರೆ ಉಗ್ರ ಹೋರಾಟ ಮಾಡಲಾಗುವುದು ಎಂದು ಎಚ್ಚರಿಸಿದರು. ಜಿಪಂ ಮಾಜಿ ಸದಸ್ಯ ಎನ್. ನಾಗೇಂದ್ರಪ್ಪ ಮಾತನಾಡಿದರು. ಮಲೇಬೆನ್ನೂರು ಬ್ಲಾಕ್ ಕಾಂಗ್ರೆಸ್ ಆಧ್ಯಕ್ಷ ಆಬೀದ್ ಅಲಿ, ನಗರಸಭಾ ಸದಸ್ಯರಾದ ಎಸ್.ಎಂ. ವಸಂತ್, ಮೊಹಮ್ಮದ್ ಅಲೀ, ಕೆ.ಜಿ. ಸಿದ್ದೇಶ್, ಶಂಕರ ಖಟಾವಕರ್, ಬಾಬುಲಾಲ್, ಮುಖಂಡರಾದ ಬಿ. ರೇವಣಸಿದ್ದಪ್ಪ, ಪರಶುರಾಮ ಕಾಟೆÌ, ಜಿಗಳಿ ಆನಂದಪ್ಪ, ಕೆ. ಜಡಿಯಪ್ಪ, ಜಿ.ವಿ. ವೀರೇಶ್, ತಿಪ್ಪೇಶ್, ನೇತ್ರಾವತಿ, ಭಾಗ್ಯದೇವಿ, ಪಾರ್ವತಿ, ವಿದ್ಯಾ ಗಡದ್ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davangere:ಡಾ| ಬಿ.ಆರ್. ಅಂಬೇಡ್ಕರ್ ಅವಹೇಳನ; ಶಾ ರಾಜೀನಾಮೆಗೆ ಒತ್ತಾಯಿಸಿ ಬೃಹತ್ ಪ್ರತಿಭಟನೆ
Davanagere:ಅಮಿತ್ ಶಾರನ್ನು ಸಂಪುಟದಿಂದ ವಜಾ ಮಾಡಬೇಕೆಂದು ಒತ್ತಾಯಿಸಿ ಅರೆಬೆತ್ತಲೆ ಮೆರವಣಿಗೆ
Davanagere: ವೃದ್ಧೆ ಮೇಲೆ ಅತ್ಯಾ*ಚಾರ; ಯುವಕನಿಗೆ 10 ವರ್ಷ ಕಠಿಣ ಶಿಕ್ಷೆ
Davanagere: ಬಿಜೆಪಿ-ಕಾಂಗ್ರೆಸ್ ಹೊಂದಾಣಿಕೆ ಆರೋಪದ ಬಗ್ಗೆ ರೇಣುಕಾಚಾರ್ಯ ಸ್ಪಷ್ಟನೆ
Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ ಕಾಂಗ್ರೆಸ್ ಶಾಸಕ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.