ಕೇಂದ್ರ-ರಾಜ್ಯದ ಜನ ವಿರೋಧಿ ನೀತಿಗೆ ಖಂಡನೆ


Team Udayavani, Oct 14, 2020, 5:17 PM IST

dg-tdy-1

ದಾವಣಗೆರೆ: ಕೇಂದ್ರ, ರಾಜ್ಯ ಸರ್ಕಾರ ರೈತ, ಜನ ವಿರೋಧಿ ನೀತಿ ಅನುಸರಿಸುತ್ತಿವೆ. ದೇಶದಲ್ಲಿ ಮಹಿಳೆಯರ ಮೇಲಿನ ಅತ್ಯಾಚಾರ, ದೌರ್ಜನ್ಯ, ಹಲ್ಲೆ ತಡೆಗಟ್ಟಲು ವಿಫಲವಾಗಿವೆ ಎಂದು ಆರೋಪಿಸಿ ಆಲ್‌ ಇಂಡಿಯಾ ಡೆಮಾಕ್ರಟಿಕ್‌ ಸ್ಟೂಡೆಂಟ್ಸ್‌ ಆರ್ಗನೈಸೇಷನ್  ಕಾರ್ಯಕರ್ತರು ಮಂಗಳವಾರ ತಾಲೂಕು ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ಕೋವಿಡ್‌ ಮಹಾಮಾರಿಯಿಂದ ಈಗಾಗಲೇ ಸಂಕಷ್ಟದಲ್ಲಿರುವ ರೈತ-ಕಾರ್ಮಿಕರಿಗೆ ಕೇಂದ್ರ ಸರ್ಕಾರ ಅಂಗೀಕರಿಸಿರುವ ಎಪಿಎಂಸಿ, ಅಗತ್ಯವಸ್ತುಗಳು, ವಿದ್ಯುತ್‌, ಭೂ ಸುಧಾರಣೆ ಕಾಯ್ದೆಗಳಂತ ಮುಂತಾದ ನೀತಿಗಳು ಗಾಯದ ಮೇಲೆ ಬರೆ ಎಳೆದಂತಾಗಿವೆ. ದೇಶದಲ್ಲಿ ಬಡತನ,ನಿರುದ್ಯೋಗಳಂತಹ ಹಲವಾರು ಸಮಸ್ಯೆಗಳು ತಾಂಡವವಾಡುತ್ತಿದ್ದರೂ ಚಕಾರ ಎತ್ತದ ಸರ್ಕಾರಗಳು ಜನವಿರೋಧಿ ನೀತಿ ಜಾರಿಗೊಳಿಸುತ್ತಿವೆ ಎಂದು ಪ್ರತಿಭಟನಾಕಾರರು ದೂರಿದರು.

ದೇಶದಾದ್ಯಂತ ರೈತ-ಕಾರ್ಮಿಕರು ಬೀದಿಗಿಳಿದು ಹೋರಾಟ ಮಾಡುತ್ತಿದ್ದಾರೆ.ಹೋರಾಟಕ್ಕೆ ಹಲವಾರು ಪ್ರಗತಿಪರ ಸಂಘಟನೆಗಳು ಬೆಂಬಲ ವ್ಯಕ್ತ ಪಡಿಸುತ್ತಿದ್ದು ಆಳುವ ಸರ್ಕಾರಗಳು ಮಾತ್ರ ಯಾವುದೇ ಪ್ರತಿಕ್ರಿಯೆ ನೀಡದೆ ಮೌನವಹಿಸಿರುವುದು ಮತ್ತು ಹೆಸರಿಗಷ್ಟೇ ಈ ನೀತಿಗಳ ವಿರುದ್ಧಮಾತನಾಡುತ್ತಿರುವ ವಿರೋಧ ಪಕ್ಷಗಳುಬಂಡವಾಳಶಾಹಿಗಳ ಬಾಲಬಡುಕುತನವನ್ನು ತೋರಿಸುತ್ತದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

2019 ರಲ್ಲಿ ಸಲ್ಲಿಸಿದ್ದ ಆರೋಪ ಪಟ್ಟಿಯಲ್ಲಿನ ಒಟ್ಟು ಅತ್ಯಾಚಾರ ಪ್ರಕರಣಗಳಲ್ಲಿ ಶೇ. 89.5ರಷ್ಟುವಿಚಾರಣೆಗೆ ಒಳಪಟ್ಟಿಲ್ಲ. 2019 ವರೆಗೂ ನ್ಯಾಯಾಲಯದಲ್ಲಿ ದಾಖಲಾಗಿದ್ದ 1,62,741 ಪ್ರಕರಣಗಳಲ್ಲಿ 24,848 ಆ ವರ್ಷ ಹೊಸದಾಗಿ ದಾಖಾಲಾದ ಪ್ರಕರಣಗಳು.ಆದರೆ 2019 ರ ಅಂತ್ಯದೊಂದಿಗೆ ಕೇವಲ 17,109 ಪ್ರಕರಣಗಳು ಮಾತ್ರ ಇತ್ಯರ್ಥಗೊಂಡಿದೆ. ಇನ್ನು ನ್ಯಾಯಲಯಇತ್ಯರ್ಥ ಪಡಿಸಿದ ಶೇ.70 ಕ್ಕಿಂತ ಹೆಚ್ಚಿನ ಪ್ರಕರಣಗಳಲ್ಲಿ ಶಿಕ್ಷೆಯೇ ಆಗಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ಸಂಜೆ ನಗರದ ಜಯದೇವ ವೃತ್ತದಲ್ಲಿ 6.30ಕ್ಕೆ ಕ್ಯಾಂಡಲ್‌ ಲೈಟ್‌ ಹಿಡಿದು ಶ್ರದ್ಧಾಂಜಲಿ ಸಲ್ಲಿಸಲಾಯಿತು.ಜಿಲ್ಲಾ ಅಧ್ಯಕ್ಷೆ ಜೆ. ಸೌಮ್ಯ, ಉಪಾಧ್ಯಕ್ಷೆನಾಗಜ್ಯೋತಿ, ಕಾರ್ಯದರ್ಶಿ ಪೂಜಾ, ಟಿ.ಎಸ್‌. ಸುಮನ್‌, ಪುಷ್ಪಾ, ಕಾವ್ಯ, ರಾಜೇಶ್‌, ಕಿರಣ್‌ ಮಾಳಿಗೆ ಇತರರು ಇದ್ದರು.

ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹ :

 ದಾವಣಗೆರೆ: ಮಟ್ಟಿಕಲ್ಲು ಕೊಳೆಗೇರಿ ಪ್ರದೇಶದಲ್ಲಿನ ನಿವಾಸಿಗಳಿಗೆ ಹಕ್ಕುಪತ್ರ, ಮನೆ ಕಟ್ಟಿಸಿಕೊಡುವುದು ಒಳಗೊಂಡ ಂತೆ ವಿವಿಧಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಭಾರತ್‌ಕಮ್ಯೂನಿಸ್ಟ್‌ ಪಕ್ಷ(ಸಿಪಿಐ) ನೇತೃತ್ವದಲ್ಲಿಕೊಳೆಗೇರಿ ನಿವಾಸಿಗಳು ಮಂಗಳವಾರ ಮಹಾ ನಗರ ಪಾಲಿಕೆ ಎದುರು ಪ್ರತಿಭಟನೆ ನಡೆಸಿದರು.

ಮಟ್ಟಿಕಲ್ಲು ಕೊಳಚೆ ಪ್ರದೇಶದಲ್ಲಿನ ಜನರಿಗೆ ಅನುಕೂಲ ಆಗುವಂತೆ ಶೌಚಾಲಯ, ಸಿಮೆಂಟ್‌ ರಸ್ತೆ ನಿರ್ಮಾಣ, ಹಕ್ಕುಪತ್ರ ಮತ್ತುಮನೆ ಕಟ್ಟಿಸಿಕೊಡಿ ಎಂದು ಹಲವಾರು ವರ್ಷಗಳಿಂದ ಪ್ರತಿಭಟಿಸಿ, ಮನವಿ ಸಲ್ಲಿಸುತ್ತಲೇ ಬರಲಾಗುತ್ತಿದೆ. ಹೋರಾಟದಸಂದರ್ಭದಲ್ಲಿ ನೀಡಿದಂತಹ ಯಾವುದೇ ಭರವಸೆ ಕಾರ್ಯರೂಪಕ್ಕೆ ಬಂದಿಲ್ಲ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.

ಮಟ್ಟಿಕಲ್ಲು ಕೊಳಚೆ ಪ್ರದೇಶದಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗ, ಹಿಂದುಳಿದ ವರ್ಗದವರೇ ಹೆಚ್ಚಾಗಿ ವಾಸ ಮಾಡುತ್ತಿದ್ದಾರೆ. ಬಹಳ ಬಡತನದ ಜೀವನ ಸಾಗಿಸುತ್ತಿದ್ದಾರೆ. ಹಸಿ ಹುಲ್ಲು ಮಾರಾಟ, ಛತ್ರಗಳಲ್ಲಿ ಊಟದ ಎಲೆ ತೆಗೆಯುವ, ಮುಸುರೆಪಾತ್ರೆ ತೊಳೆಯುವ ಕೆಲಸ ಮಾಡುತ್ತಿದ್ದಾರೆ. 40 ವರ್ಷಗಳಿಂದ ಈ ಪ್ರದೇಶದಲ್ಲಿ ವಾಸಮಾಡುತ್ತಿದ್ದಾರೆ. ವಯಸ್ಸಾಗಿ ಎಷ್ಟೋ ನಿವಾಸಿಗಳು ಮರಣ ಹೊಂದಿದ್ದಾರೆ. ಎರಡನೇ ಪೀಳಿಗೆ ಜೀವನ ಅಲ್ಲಿಯೇ ಸಾಗಿಸುತ್ತಿದ್ದಾರೆ. ಅನೇಕರಿಗೆ ಮನೆಯ ಹಕ್ಕುಪತ್ರ ನೀಡಿಲ್ಲ. ಮನೆ ಇಲ್ಲದವರಿಗೆ ಮನೆ ಕಟ್ಟಿಸಿಕೊಡಬೇಕು ಎಂದು ಒತ್ತಾಯಿಸಿದರು.

ಸ್ವಚ್ಛ ಭಾರತ ಯೋಜನೆ ಅಡಿಯಲ್ಲಿ ಶೌಚಾಲಯ ಕಟ್ಟಿಸಿ ಕೊಡೋಕೆ ಆಗುತ್ತಿಲ್ಲ. ನಗರದ ಹೃದಯ ಭಾಗದಲ್ಲಿರುವ ಸ್ಲಂ ನಿವಾಸಿಗಳು ತೀವ್ರ ತೊಂದರೆ ಆನುಭವಿಸುತ್ತಿದ್ದಾರೆ. ರಾತ್ರಿಯಾಗುವುದನ್ನ ಕಾಯುವಂತಹ ಸ್ಥಿತಿಯೂ ಇದೆ. ಕೂಡಲೇ ಶೌಚಾಲಯ, ಸಿಮೆಂಟ್‌ ರಸ್ತೆ ನಿರ್ಮಾಣ ಮಾಡಬೇಕು ಎಂದು ಒತ್ತಾಯಿಸಿದರು. ಮಳೆ ಬಂದರೆ ಗುಡಿಸಲ ಒಳಗೆ ಮಳೆ ನೀರು ತುಂಬಿಕೊಳ್ಳುತ್ತದೆ. ಮಹಾನಗರಪಾಲಿಕೆ ಮೂಲಭೂತ ಸೌಲಭ್ಯ ಬೇಡಿಕೆಈಡೇರಿಸಿ ಸಮಸ್ಯೆ ಮುಕ್ತಿಗೊಳಿಸಬೇಕೆಂದುಭಾರತ ಕಮ್ಯುನಿಸ್ಟ್‌ ಪಕ್ಷ ಒತ್ತಾಯಿಸುತ್ತದೆ. ಬೇಡಿಕೆ ಈಡೇರಿಸದಿದ್ದರೆ ಮಹಾನಗರ ಪಾಲಿಕೆ ಮುಂದೆ ನಿರಂತರ ಧರಣಿ ಮಾಡಲಾಗುವುದು ಎಂದು ಎಚ್ಚರಿಸಿದರು.

ಜಿಲ್ಲಾ ಕಾರ್ಯದರ್ಶಿ ಎಚ್‌.ಕೆ. ರಾಮಚಂದ್ರಪ್ಪ, ತಾಲೂಕು ಕಾರ್ಯದರ್ಶಿ ಆವರಗೆರೆ ವಾಸು, ಷಣ್ಮುಖಸ್ವಾಮಿ ,ಕೆರನಹಳ್ಳಿ ರಾಜು, ಎಂ.ಬಿ. ಶಾರದಮ್ಮ,ಕಂಚಿಕೆರೆ ಹನುಮಂತಪ್ಪ, ಚಿನ್ನಪ್ಪ, ನಿಟ್ಟುವಳ್ಳಿ ಬಸಣ್ಣ, ಗದಿಗೇಶ್‌, ಸುಧಮ್ಮ, ಇತರರಿದ್ದರು.

ಟಾಪ್ ನ್ಯೂಸ್

1-lok-sabha

BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು

CT Ravi

Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಪೊಲೀಸರ ವಶಕ್ಕೆ

Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು

Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು

dhankar (2)

Jagdeep Dhankhar; ರಾಜ್ಯಸಭಾ ಸಭಾಪತಿ ವಿರುದ್ದದ ಪ್ರತಿಪಕ್ಷಗಳ ಅವಿಶ್ವಾಸ ನಿರ್ಣಯ ತಿರಸ್ಕೃತ

Mollywood: ಸೂಪರ್‌ ಸ್ಟಾರ್ ಮೋಹನ್‌ ಲಾಲ್‌ಗೆ ‘ಆವೇಶಮ್‌ʼ ನಿರ್ದೇಶಕ ಆ್ಯಕ್ಷನ್ ಕಟ್

Mollywood: ಸೂಪರ್‌ ಸ್ಟಾರ್ ಮೋಹನ್‌ ಲಾಲ್‌ಗೆ ‘ಆವೇಶಮ್‌ʼ ನಿರ್ದೇಶಕ ಆ್ಯಕ್ಷನ್ ಕಟ್

ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜೀನಾಮೆ ನೀಡುವುದು ಉತ್ತಮ: ಲಾಲು ಪ್ರಸಾದ್ ಯಾದವ್

ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜೀನಾಮೆ ನೀಡುವುದು ಉತ್ತಮ: ಲಾಲು ಪ್ರಸಾದ್ ಯಾದವ್ ಕಿಡಿ

Is Ashwin made a hasty decision: Is this how much Kohli is worth in the dressing room?

BGT 24: ಆತುರದ ನಿರ್ಧಾರ ಮಾಡಿದ್ರಾ ಅಶ್ವಿನ್ :‌ ಟೀಂ ಇಂಡಿಯಾದಲ್ಲಿ ಕೊಹ್ಲಿ ಬೆಲೆ ಇಷ್ಟೇನಾ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ‌ ಕಾಂಗ್ರೆಸ್ ಶಾಸಕ

Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ‌ ಕಾಂಗ್ರೆಸ್ ಶಾಸಕ

7-dvg

Davangere: 2021ರಲ್ಲಿ ಅಪ್ರಾಪ್ತೆಯನ್ನು ಅಪಹರಿಸಿ ಅತ್ಯಾಚಾರವೆಸಗಿದ್ದವನಿಗೆ ಶಿಕ್ಷೆ ಪ್ರಕಟ

byndoor

Davanagere: ಪಾಠ ಮಾಡುತ್ತಿದ್ದಾಗಲೇ ಹೃದಯಾಘಾತ; ಶಿಕ್ಷಕ ಸಾವು

ಸಾರಿಗೆ ಬಸ್ ಡಿಪೋ ಪ್ರಾರಂಭಿಸಬೇಕು ಎಂದು ಒತ್ತಾಯಿಸಿ ದಾವಣಗೆರೆ ತಲುಪಿದ ಪಾದಯಾತ್ರೆ

ಸಾರಿಗೆ ಬಸ್ ಡಿಪೋ ಪ್ರಾರಂಭಿಸಬೇಕು ಎಂದು ಒತ್ತಾಯಿಸಿ ದಾವಣಗೆರೆ ತಲುಪಿದ ಪಾದಯಾತ್ರೆ

1—-kumr-renuka

BJP; ಕುಮಾರ್ ಬಂಗಾರಪ್ಪ ರಾಜ್ಯಾಧ್ಯಕ್ಷನಾಗುವುದು ತಿರುಕನ ಕನಸು: ರೇಣುಕಾಚಾರ್ಯ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-lok-sabha

BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು

CT Ravi

Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಪೊಲೀಸರ ವಶಕ್ಕೆ

Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು

Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು

dhankar (2)

Jagdeep Dhankhar; ರಾಜ್ಯಸಭಾ ಸಭಾಪತಿ ವಿರುದ್ದದ ಪ್ರತಿಪಕ್ಷಗಳ ಅವಿಶ್ವಾಸ ನಿರ್ಣಯ ತಿರಸ್ಕೃತ

Yakshagana Tenku

Yakshagana;ಕನ್ನಡ ಭಾಷೆಯ ಮೌಲ್ಯವನ್ನು ಉಳಿಸುವಲ್ಲಿ ಸಾರ್ವಕಾಲಿಕ ಕೊಡುಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.