ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಪ್ರತಿಭಟನೆ
Team Udayavani, Jul 8, 2018, 5:39 PM IST
ಕೊನ್ನಾಳಿ: ಕರ್ನಾಟಕ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಫೆಡರೇಶನ್ ಸದಸ್ಯರು ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಪಟ್ಟಣದಲ್ಲಿ ಶನಿವಾರ ಪ್ರತಿಭಟನಾ ಮೆರವಣಿಗೆ ನಡೆಸಿ ತಹಶೀಲ್ದಾರ್‌ಗೆ ಮನವಿ ಸಲ್ಲಿಸಿದರು.
ಕೇಂದ್ರ ಸರ್ಕಾರ ಜಾರಿಗೆ ತರಲು ಹೊರಟಿರುವ ಪ್ಯಾಕೇಜ್ ಪದ್ಧತಿ, ಆಹಾರ ವಿತರಣೆ ಮತ್ತು ನಗದು ವರ್ಗಾವಣೆ ಕ್ರಮವನ್ನು ಕೈಬಿಡುವುದು, ಐಸಿಡಿಎಸ್ ಗೆ ಆಧಾರ ಕಾರ್ಡ್ ಕಡ್ಡಾಯಗೊಳಿಸಬಾರದು, ಖಾಸಗೀಕರಣ ಮಾಡಬಾರದು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಗೆ ಹೆಚ್ಚಿನ ಅನುದಾನವನ್ನು ಕೇಂದ್ರ ಸರ್ಕಾರದ ಬಜೆಟ್‌ನಲ್ಲಿ ನಿಗದಿಗೊಳಿಸಬೇಕು, ಕೇಂದ್ರ ಸರ್ಕಾರ ಘೋಷಿಸಿರುವ ಕನಿಷ್ಠ ವೇತನ ರೂ. 18 ಸಾವಿರ ಎಲ್ಲ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರಿಗೆ ನಿಗದಿಗೊಳಿಸಿ ಕಾರ್ಮಿಕರೆಂದು ಪರಿಗಣಿಸಬೇಕು, ರಾಜ್ಯದ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ತಮ್ಮ ಚುನಾವಣಾ ಪ್ರಣಾಳಿಕೆಯಲ್ಲಿ ಹೇಳಿಕೊಂಡಿರುವಂತೆ ಎಲ್ಲಾ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿರ ಕಾಯಮಾತಿ, ನಿವೃತ್ತಿ ವೇತನ ರೂ. 6 ಸಾವಿರ ಕೊಡಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.
ಕರ್ನಾಟಕ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಫೆಡರೇಶನ್ ತಾಲೂಕು ಅಧ್ಯಕ್ಷೆ ಚನ್ನಮ್ಮ, ಗೌರವಾಧ್ಯಕ್ಷೆ ಗೀತಾ, ಕಾರ್ಯದರ್ಶಿ ವಸಂತಮ್ಮ, ಉಪಾಧ್ಯಕ್ಷೆ ರೇಣುಕಮ್ಮ, ಖಜಾಂಚಿ ಶಾರದಾದೇವಿ ಮಾತನಾಡಿದರು. ತಾಲೂಕಿನ ಅಂಗನವಾಡಿ ಕಾರ್ಯರ್ತೆಯರು ಹಾಗೂ ಸಹಾಯಕಿಯರು ಭಾಗಹಿಸಿದ್ದರು.
ಹರಪನಹಳ್ಳಿ; ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಫೆಡರೇಷನ್ ಕಾರ್ಯಕರ್ತರು ಶನಿವಾರ ಪಟ್ಟಣದಲ್ಲಿ ಪ್ರತಿಭಟನೆ ನಡೆಸಿ ತಹಶೀಲ್ದಾರ್‌ಗೆ ಮನವಿ ಸಲ್ಲಿಸಿದರು.
ಕೇಂದ್ರ ಸರ್ಕಾರ ಜಾರಿಗೆ ತರಲು ಹೊರಟಿರುವ ಪ್ಯಾಕೇಜ್ ಸಿಸ್ಟ್‌ಂ, ಆಹಾರ ವಿತರಣೆ ಮತ್ತು ನಗದು ವರ್ಗಾವಣೆ ಕ್ರಮವನ್ನು ಕೈಬಿಡಬೇಕು ಹಾಗೂ ಐಸಿಡಿಎಸ್‌ಗೆ ಅಧಾರ ಕಾರ್ಡ್ ಕಡ್ಡಾಯಗೊಳಿಸಬಾರದು ಮತ್ತು ಖಾಸಗೀಕರಣಗೊಳಿಸಬಾರದು. 18 ಸಾವಿರ ರೂ. ಕನಿಷ್ಠ ವೇತನವನ್ನು ಎಲ್ಲಾ ಕಾರ್ಯಕರ್ತೆ ಮತ್ತು ಸಹಾಯಕರಿಗೆ ನೀಡಬೇಕು. ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಚುನಾವಣೆ ಪೂರ್ವ ತಮ್ಮ ಪಕ್ಷದ ಪ್ರಣಾಳಿಕೆಯಲ್ಲಿ ಹೇಳಿದಂತೆ ಪಿಂಚಣಿ 6 ಸಾವಿರ ರೂ. ಯೋಜನೆ ಜಾರಿಗೊಳಿಸಬೇಕು ಎಂದು ಒತ್ತಾಯಿಸಿದರು.
ಅಂಗನವಾಡಿ ಕಾರ್ಯಕರ್ತೆಯರ ವಿದ್ಯಾರ್ಹತೆ ಹಾಗೂ ಸೇವಾ ಅವಧಿ ಪರಿಗಣಿಸಿ ಸರ್ಕಾರದ ವಿವಿಧ ಇಲಾಖೆ ನೇಮಕಾತಿಯಲ್ಲಿ ಆದ್ಯತೆ ನೀಡಬೇಕು. ಸರ್ಕಾರಿ ಶಾಲೆಗಳಲ್ಲಿ ಎಲ್‌ಕೆಜಿ, ಯುಕೆಜಿ, ಇಂಗ್ಲಿಷ್ ಮಾಧ್ಯಮ ಪ್ರಾರಂಭಿಸಿದರೆ ಅಂಗನವಾಡಿ ಕಾರ್ಯಕರ್ತೆಯರನ್ನೇ ನೇಮಕ ಮಾಡಿಕೊಳ್ಳಬೇಕು. ಇಲ್ಲವಾದಲ್ಲಿ ಅಂಗನವಾಡಿ ಕೇಂದ್ರಗಳನ್ನು ಎಲ್‌ಕೆಜಿ, ಯುಕೆಜಿ ತರಗತಿಗಳನ್ನಾಗಿ ಪರಿವರ್ತಿಸಬೇಕು ಎಂದು ಆಗ್ರಹಿಸಿದರು.
ಫೆಡರೇಷನ್ ಪದಾಧಿಕಾರಿಗಳಾದ ಸುಮ, ವಿಜಯಲಕ್ಷ್ಮಿ, ಸರಿತಾ, ಕೊಟ್ರಮ್ಮ, ನಾಗಲಕ್ಷ್ಮಿ, ಗುಡಿಹಳ್ಳಿ ಹಾಲೇಶ್, ಎಚ್.ಎಂ. ಕೊಟ್ರೇಶ್, ಎಂ. ಮಲ್ಲಿಕಾರ್ಜುನ್ ಮತ್ತಿತರರು ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davangere: 2021ರಲ್ಲಿ ಅಪ್ರಾಪ್ತೆಯನ್ನು ಅಪಹರಿಸಿ ಅತ್ಯಾಚಾರವೆಸಗಿದ್ದವನಿಗೆ ಶಿಕ್ಷೆ ಪ್ರಕಟ
Davanagere: ಪಾಠ ಮಾಡುತ್ತಿದ್ದಾಗಲೇ ಹೃದಯಾಘಾತ; ಶಿಕ್ಷಕ ಸಾವು
ಸಾರಿಗೆ ಬಸ್ ಡಿಪೋ ಪ್ರಾರಂಭಿಸಬೇಕು ಎಂದು ಒತ್ತಾಯಿಸಿ ದಾವಣಗೆರೆ ತಲುಪಿದ ಪಾದಯಾತ್ರೆ
BJP; ಕುಮಾರ್ ಬಂಗಾರಪ್ಪ ರಾಜ್ಯಾಧ್ಯಕ್ಷನಾಗುವುದು ತಿರುಕನ ಕನಸು: ರೇಣುಕಾಚಾರ್ಯ
Davanagere: ಮುಂಬರುವ ಫೆಬ್ರವರಿಯಲ್ಲಿ ಬಿಎಸ್‌ವೈ ಜನ್ಮದಿನ ಅದ್ಧೂರಿ ಆಚರಣೆ: ರೇಣುಕಾಚಾರ್ಯ
MUST WATCH
ಹೊಸ ಸೇರ್ಪಡೆ
Mumbai Coast: ಗೇಟ್‌ವೇ ಆಫ್ ಇಂಡಿಯಾ ಬಳಿ ದೋಣಿ ದುರಂತ: 13 ಮಂದಿ ದುರ್ಮರಣ!
Daily Horoscope: ಸಕಾರಾತ್ಮಕ ಚಿಂತನೆಯಿಂದ ಯಶಸ್ಸು, ಪ್ರತಿಭೆ ವೃದ್ಧಿಗೆ ಅವಕಾಶ
Internal Dissent: ಪ್ರಧಾನಿ ಮೋದಿ ಭೇಟಿಯಾದ ವಿಜಯೇಂದ್ರ ದೂರದಿದ್ದರೂ ‘ಸಂದೇಶ’ ರವಾನೆ
Narendra Modi: 43 ವರ್ಷದ ಬಳಿಕ ಭಾರತ ಪ್ರಧಾನಿ ಕುವೈಟ್ ಭೇಟಿ: 21ರಿಂದ ಮೋದಿ ಪ್ರವಾಸ
Whale: ಅಂಬರ್ ಗ್ರೀಸ್ ಮಾರಾಟ ಜಾಲ ಶಂಕೆ: ಕಾರ್ಯಾಚರಣೆಗೆ ಬಂದಿದ್ದ ಅಧಿಕಾರಿಗಳಿಗೆ ಹಲ್ಲೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.