ರೈತ ವಿರೋಧಿ ನೀತಿ ಕೈಬಿಡಲು ಆಗ್ರಹಿಸಿ ಪ್ರತಿಭಟನೆ
Team Udayavani, Aug 11, 2020, 11:33 AM IST
ಸಾಂದರ್ಭಿಕ ಚಿತ್ರ
ಹೊಳಲ್ಕೆರೆ: ಸರಕಾರದ ರೈತ ವಿರೋಧಿ ನೀತಿಗಳನ್ನು ತಕ್ಷಣವೇ ರದ್ದುಗೊಳಿಸಬೇಕೆಂದು ಆಗ್ರಹಿಸಿ ತಾಲೂಕು ರೈತ ಸಂಘದ ಪದಾಧಿಕಾರಿಗಳು ಪ್ರತಿಭಟನೆ ನಡೆಸಿ ತಹಸೀಲ್ದಾರ್ ಕೆ.ನಾಗರಾಜ್‌ಗೆ ಮನವಿ ಪತ್ರ ಸಲ್ಲಿಸಿದರು.
ಸರಕಾರ ಜಾರಿಗೆ ತರಲು ಮುಂದಾಗಿರುವ ಎಪಿಎಂಸಿ ತಿದ್ದುಪಡಿ ಕಾಯ್ದೆ ರೈತರ ಸಮುದಾಯಕ್ಕೆ ಮಾರಕವಾಗಿದ್ದು, ತಿದ್ದಪಡಿಯನ್ನು ವಾಪಸ್ಸು ಪಡೆದುಕೊಳ್ಳಬೇಕು. ಭೂ ಸುಧಾರಣಾ ಕಾಯ್ದೆ ತಿದ್ದುಪಡಿಯಿಂದ ಸಣ್ಣ ಮತ್ತು ಮಧ್ಯಮ ವರ್ಗದ ರೈತರು ತಮ್ಮ ಜಮೀನುಗಳನ್ನು ಬಂಡವಾಳಗಾರರ ಹಣದ ವ್ಯಾಮೋಹಕ್ಕೆ ಸಿಕ್ಕಿ ಕಳೆದುಕೊಳ್ಳಬೇಕಾಗುತ್ತದೆ. ತಕ್ಷಣವೆ ಭೂ ಸುಧಾರಣೆ ತಿದ್ದುಪಡಿ ಕಾಯ್ದೆಯನ್ನು ವಾಪಸ್ಸುಪಡೆದುಕೊಳ್ಳಬೇಕೆಂದು ಒತ್ತಾಯಿಸಿದರು.
ವಿದ್ಯುತ್ ಕಾಯ್ದೆ ತಿದ್ದುಪಡಿಯಿಂದ ರೈತರ ಮೇಲೆ ಸಾಕು ದುಷ್ಟರಿಣಾಮ ಆಗಲಿದೆ. ವಿದ್ಯುತ್ ನಂಬಿ ಕೃಷಿ ಮಾಡುವ ರೈತರು ಅನ್ಯಾಯಕ್ಕೆ ತುತ್ತಾಗಲಿದ್ದಾರೆ. ಕೃಷಿಗೆ ಪೂರಕ ವಿದ್ಯುತ್ ಯೋಜನೆ ರೂಪಿಸಬೇಕು. ರೈತರಿಗೆ ಬೀಜದ ಹಕ್ಕು ನೀಡಬೇಕು. ಬೀಜದ ಹಕ್ಕು ಕಿತ್ತುಕೊಳ್ಳುವ ಸಂಚು ಸರಿಯಲ್ಲ. ಕೇಂದ್ರ ಸರಕಾರ ಬೀಜದ ಮೇಲಿನ ಹಕ್ಕುಗಳನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಖಾಸಗಿ ಕಂಪನಿಗಳಿಗೆ ಹಕ್ಕು ನೀಡುತ್ತಿದೆ. ಇದರಿಂದ ಪಾರಂಪರಿಕ ಕೃಷಿ ಪದ್ದತಿಯ ಮೇಲಿನ ಹಕ್ಕುಗಳಿಗೆ ಧಕ್ಕೆಯಾಗಲಿದೆ. ಅಗತ್ಯ ವಸ್ತುಗಳ ಕಾಯ್ದೆ ತಿದ್ದುಪಡಿಯನ್ನು ಸರಕಾರ ವಾಪಸು ಪಡೆಕೊಳ್ಳಬೇಕೆಂದು ಒತ್ತಾಯಿಸಿದರು.
ರಾಜ್ಯ ರೈತ ಸಂಘದ ಪ್ರಧಾನ ಕಾರ್ಯದರ್ಶಿ ಈಚಘಟ್ಟದ ಸಿದ್ದವೀರಪ್ಪ, ಅಧ್ಯಕ್ಷರಾದ ಕೊಟ್ರೆ ಶಂಕ್ರಪ್ಪ, ಬಸವರಾಜಪ್ಪ, ಲೋಕೇಶ್, ಬಸವನಕೋಟೆ ನಾಗರಾಜಪ್ಪ, ಗವಿರಾಜ್. ಟಿ.ಜಿ.ಚಂದ್ರಹಾಸ್, ಕೆ.ಸಿ.ಪರಮೇಶ್ವರಪ್ಪ, ಡಿ.ರೇವಣಸಿದ್ದಪ್ಪ, ಶಂಕರಮೂರ್ತಿ ಮತ್ತಿತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere: ಇನ್ಶೂರೆನ್ಸ್ ಹಣಕ್ಕಾಗಿ ಸಂಬಂಧಿಯ ಕೊಲೆ; 24 ಗಂಟೆಯೊಳಗೆ ನಾಲ್ವರ ಬಂಧನ
Davanagere: ದೇವಸ್ಥಾನಗಳ ಆಸ್ತಿಗಳ ರಕ್ಷಣೆಗೆ ರಾಜ್ಯ ಸರ್ಕಾರ ಮುಂದಾಗಬೇಕು: ಪೇಜಾವರ ಶ್ರೀ
ಅಂಗಡಿಯಲ್ಲಿ ಬಿಟ್ಟು ಹೋಗಿದ್ದ 1.20 ಲ.ರೂ ಹಿಂದಿರುಗಿಸಿ ಮಾನವೀಯತೆ ಮೆರೆದ ಶಾಸಕ ಬಸವಂತಪ್ಪ
Waqf Protest: ರೇಣುಕಾಚಾರ್ಯ, ಗಾಯಿತ್ರಿ ಸಿದ್ದೇಶ್ವರ ಸೇರಿ ಹಲವರು ಪೊಲೀಸ್ ವಶಕ್ಕೆ
Waqf Property: “ವಕ್ಫ್ ಆಸ್ತಿ ಕಬಳಿಕೆ ವಿರುದ್ಧ ಸಿಎಂ ಸಿಬಿಐ, ಎಸ್‌ಐಟಿ ತನಿಖೆ ಮಾಡಿಸಲಿ”
MUST WATCH
ಹೊಸ ಸೇರ್ಪಡೆ
Waqf Property: ಸಚಿವ ಜಮೀರ್ ಅಶ್ವಮೇಧ ಕುದುರೆ ತಡೆದಿದ್ದೇನೆ: ಶಾಸಕ ಯತ್ನಾಳ್
ಐತಿಹಾಸಿಕ ಮುಡಗೇರಿ ಗ್ರಾಮ ನಿರ್ಲಕ್ಷ್ಯ; ಸೋದೆ ಅರಸರ ಕೋಟೆ ಪಳೆಯುಳಿಕೆ
BGT Series: ಚೇತೇಶ್ವರ ಪೂಜಾರ ಅಂದು ತಿಂದ ಪೆಟ್ಟಿನ ನೋವು ಭಾರತೀಯರು ಮರೆಯುವುದುಂಟೇ?
Muddebihal: ವಕ್ಫ್ ಆಸ್ತಿ ವಿವಾದ: ಸಿಎಂಗೆ ಬುದ್ದಿಭ್ರಮಣೆ ಆಗಿದೆ… ನಡಹಳ್ಳಿ ವಾಗ್ದಾಳಿ
ಹಾವೇರಿ-ಸಿದ್ದರಾಮಯ್ಯ ಪಂಜರದ ಗಿಳಿ: ಕೇಂದ್ರ ಸಚಿವ ಸೋಮಣ್ಣ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.