Davanagere ನೇಹಾ-ಅಂಜಲಿ ಹಂತಕರಿಗೆ ಗಲ್ಲು ಶಿಕ್ಷೆ ವಿಧಿಸಿ; ಮಡಿವಾಳ ಸಮಾಜದ ಪ್ರತಿಭಟನೆ
Team Udayavani, May 20, 2024, 12:47 PM IST
ದಾವಣಗೆರೆ: ಹುಬ್ಬಳ್ಳಿಯಲ್ಲಿ ನೇಹಾ ಹಿರೇಮಠ್, ಅಂಜಲಿ ಅಂಬಿಗೇರ ಅವರನ್ನು ಹತ್ಯೆಗೈದ ಮತ್ತು ಸೇಡಂ ತಾಲ್ಲೂಕಿನ ದೇವನೂರು ಗ್ರಾಮದ ಅರ್ಜುನಪ್ಪ ಹಣಮಂತನ ಮೇಲೆ ಹಲ್ಲೆ ಮಾಡಿರುವ ಆರೋಪಿಗಳನ್ನು ಗಲ್ಲು ಶಿಕ್ಷೆಗೆ ಒಳಪಡಿಸಬೇಕು ಎಂದು ಒತ್ತಾಯಿಸಿ ಸೋಮವಾರ ದಾವಣಗೆರೆ ಜಿಲ್ಲಾ ಮಡಿವಾಳ ಮಾಚಿದೇವ ಸಂಘದ ನೇತೃತ್ವದಲ್ಲಿ ಮಡಿವಾಳ ಸಮಾಜ ಬಾಂಧವರು ಪ್ರತಿಭಟನೆ ನಡೆಸಿದರು.
ಜಯದೇವ ವೃತ್ತದಿಂದ ದಾವಣಗೆರೆ ಉಪ ವಿಭಾಗಾಧಿಕಾರಿ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದರು. ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕಾನೂನು ಸುವ್ಯವಸ್ಥೆ ಹದಗೆಡುತ್ತಿದೆ. ಅತ್ಯಾಚಾರ, ಕೊಲೆಯಂತಹ ಪ್ರಕರಣಗಳು ಹೆಚ್ಚಾಗುತ್ತಿವೆ. ಮಹಿಳೆಯರ ಮೇಲಿನ ದೌರ್ಜನ್ಯ, ಹತ್ಯೆ ಹೆಚ್ಚಾಗುತ್ತಿವೆ. ಪ್ರೀತಿ ಹೆಸರಿನಲ್ಲಿ ಹುಬ್ಬಳ್ಳಿಯ ನೇಹಾ ಹಿರೇಮಠ್ ಅವರನ್ನು ಕಾಲೇಜು ಆವರಣದಲ್ಲಿ ದುಷ್ಕರ್ಮಿ ಫಯಾಜ್ ಹಲವಾರು ಬಾರಿ ಚಾಕುವಿನಿಂದ ಇರಿದು ಕೊಲೆ ಮಾಡಿದ್ದು, ಇಡೀ ರಾಜ್ಯವೇ ಭಯಪಡುವಂತಾಗಿದೆ ಎಂದರು.
ಇದಲ್ಲದೇ ಹುಬ್ಬಳ್ಳಿಯಲ್ಲೇ ವಿಶ್ವ ಎಂಬಾತ ಅಂಜಲಿ ಅಂಬಿಗೇರ ಎನ್ನುವ ಯುವತಿಯನ್ನು ಕೊಲೆ ಮಾಡಿದ್ದಾನೆ. ಕಲಬುರುಗಿ ಜಿಲ್ಲೆಯ ಸೇಡಂ ತಾಲೂಕಿನ ದೇವನೂರು ಗ್ರಾಮದಲ್ಲಿ ಸೆಕೆಂಡ್ ಹ್ಯಾಂಡ್ ಕಾರು ಮಾರಾಟ ಮಾಡಿ ಜೀವನ ನಡೆಸುತ್ತಿದ್ದ ಅರ್ಜುನ್ ಹಣುಮಂತಪ್ಪ ಎಂಬುವರನ್ನು ಕೊಠಡಿಯಲ್ಲಿ ಕೂಡಿ ಹಾಕಿದ್ದಲ್ಲದೇ ಅವರನ್ನು ವಿವಸ್ತ್ರಗೊಳಿಸಿ, ಮಾರ್ಮಾಂಗಕ್ಕೆ ಕರೆಂಟ್ ಶಾಕ್ ನೀಡಲಾಗಿದೆ. ರಾಜ್ಯದಲ್ಲಿ ಹಲ್ಲೆ, ದೌರ್ಜನ್ಯ, ಅತ್ಯಾಚಾರ, ಕೊಲೆಯಂತಹ ಪ್ರಕರಣಗಳು ನಡೆಯುತ್ತಿದ್ದು, ರಾಜ್ಯದ ಜನರನ್ನು ಭಯಬೀತರನ್ನಾಗಿ ಮಾಡಿದೆ. ಅಮಾನವೀಯ, ವಿಕೃತವಾಗಿ ವರ್ತನೆ ಮಾಡಿರುವ ಎಲ್ಲಾ ಆರೋಪಿಗಳನ್ನು ಗಲ್ಲು ಶಿಕ್ಷೆ ವಿಧಿಸಬೇಕು ಎಂದು ಪ್ರತಿಭಟನಕಾರರು ಒತ್ತಾಯಿಸಿದರು.
ಆವರಗೆರೆ ಉಮೇಶ್ ಹುಲಿಕಟ್ಟೆ ರಾಮಚಂದ್ರಪ್ಪ, ಎಂ.ವೈ.ಸತೀಶ್, ಪೂಜಾರ್ ಅಂಜಿನಪ್ಪ, ಕಿಶೋರ್ ಕುಮಾರ್ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere: ಇನ್ಶೂರೆನ್ಸ್ ಹಣಕ್ಕಾಗಿ ಸಂಬಂಧಿಯ ಕೊಲೆ; 24 ಗಂಟೆಯೊಳಗೆ ನಾಲ್ವರ ಬಂಧನ
Davanagere: ದೇವಸ್ಥಾನಗಳ ಆಸ್ತಿಗಳ ರಕ್ಷಣೆಗೆ ರಾಜ್ಯ ಸರ್ಕಾರ ಮುಂದಾಗಬೇಕು: ಪೇಜಾವರ ಶ್ರೀ
ಅಂಗಡಿಯಲ್ಲಿ ಬಿಟ್ಟು ಹೋಗಿದ್ದ 1.20 ಲ.ರೂ ಹಿಂದಿರುಗಿಸಿ ಮಾನವೀಯತೆ ಮೆರೆದ ಶಾಸಕ ಬಸವಂತಪ್ಪ
Waqf Protest: ರೇಣುಕಾಚಾರ್ಯ, ಗಾಯಿತ್ರಿ ಸಿದ್ದೇಶ್ವರ ಸೇರಿ ಹಲವರು ಪೊಲೀಸ್ ವಶಕ್ಕೆ
Waqf Property: “ವಕ್ಫ್ ಆಸ್ತಿ ಕಬಳಿಕೆ ವಿರುದ್ಧ ಸಿಎಂ ಸಿಬಿಐ, ಎಸ್‌ಐಟಿ ತನಿಖೆ ಮಾಡಿಸಲಿ”
MUST WATCH
ಹೊಸ ಸೇರ್ಪಡೆ
Bengaluru: ಶಾಸಕ ಮುನಿರತ್ನ ಕೇಸ್: ವಿಕಾಸಸೌಧದಲ್ಲಿ ಸ್ಥಳ ಮಹಜರು
Vitla: ನಾಲ್ಕೂ ದಿಕ್ಕಿನಿಂದ ಬರುವ ರಸ್ತೆಗಳಲ್ಲಿ ಗುಂಡಿಯೋ ಗುಂಡಿ
Explainer: ಉಳಿತಾಯ ಖಾತೆಯಲ್ಲಿ ಎಷ್ಟು ನಗದು ಠೇವಣಿ ಇಡಬಹುದು? ವಾರ್ಷಿಕ ಮಿತಿ ಎಷ್ಟು….
Bellary; ವಕ್ಫ್ ಹೆಸರಲ್ಲಿ ದೇವಸ್ಥಾನ, ಮಠಗಳನ್ನು ಕಬಳಿಸಲು ಸರ್ಕಾರ ಮುಂದಾಗಿದೆ: ಜೋಶಿ
Kushtagi: ದ್ಯಾಮವ್ವ ದೇವಿ ಗುಡಿಗೆ ಭಕ್ತರಂತೆ ಹೋಗಿ ದರ್ಶನ ಪಡೆದ ವಾನರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.