ಮೈಮೇಲೆ ಕಸ ಸುರಿದುಕೊಂಡು ಪ್ರತಿಭಟನೆ
Team Udayavani, Nov 21, 2017, 5:59 PM IST
ದಾವಣಗೆರೆ: ಯಾವುದೇ ಕಾರಣ ನೀಡದೇ ಏಕಾಏಕಿ ಕೆಲಸದಿಂದ ತೆಗೆದು ಹಾಕಿರುವುದನ್ನು ವಿರೋಧಿಸಿ ಸೋಮವಾರ ಜಯದೇವ ವೃತ್ತದಲ್ಲಿ ಮಹಿಳೆಯರು ಸೇರಿ 10 ಮಂದಿ ಪೌರ ಕಾರ್ಮಿಕರು ಮೈಮೇಲೆ ಕಸ ಸುರಿದುಕೊಂಡು, ಆ ಕಸದ ರಾಶಿಯಲ್ಲೇ ಕುಳಿತು ಪ್ರತಿಭಟಿಸಿದ್ದಾರೆ.
ಗುತ್ತಿಗೆ ಆಧಾರಿತ ಪೌರ ಕಾರ್ಮಿಕರ ಪ್ರತಿಭಟನೆ ಹಿನ್ನೆಲೆಯಲ್ಲಿ ಸಂಜೆ ತುರ್ತು ಸಭೆ ನಡೆಸಿ, ಪೌರ ಕಾರ್ಮಿಕರಿಗೆ ಆಗಿರುವ ಅನ್ಯಾಯ ಪರಿಶೀಲನೆಗೆ ಮೇಯರ್ ಅಧ್ಯಕ್ಷತೆಯಲ್ಲಿ ತಲಾ ಐವರು ನಗರಪಾಲಿಕೆ ಸದಸ್ಯರು, ಅಧಿಕಾರಿಗಳನ್ನೊಳಗೊಂಡ ಸಮಿತಿ ರಚಿಸಲಾಗಿದೆ.
ಪ್ರತಿಭಟನೆ ಏಕೆ…?: 2002 ರಿಂದ ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿದ್ದ ರತ್ನಮ್ಮ, ಏಕಾಂತಪ್ಪ, ಸಾವಿತ್ರಮ್ಮ, ಹೊನ್ನಮ್ಮ, ಲಲಿತಮ್ಮ, ಜಯಮ್ಮ ಒಳಗೊಂಡಂತೆ 10 ಜನರನ್ನು ಏಕಾಏಕಿ ಕೆಲಸದಿಂದ ತೆಗೆದುಹಾಕಿರುವುದನ್ನು ವಿರೋಧಿಸಿ ಕಾರ್ಮಿಕರು ದಿಢೀರ್ ಪ್ರತಿಭಟನೆ ನಡೆಸಿದರು. 15 ವರ್ಷದಿಂದ ಕೆಲಸ ಮಾಡಿಕೊಂಡು ಬರುತ್ತಿದ್ದೇವೆ. ತಿಂಗಳಿಗೆ 800 ರೂಪಾಯಿಗೆ ಕೆಲಸಕ್ಕೆ ಸೇರಿಕೊಂಡಿದ್ದೆವು. ಇದೇ ಕೆಲಸ ನಂಬಿಕೊಂಡು ಜೀವನ ನಡೆಸುತ್ತಿದ್ದೇವೆ. ಏಕಾಏಕಿ ಕೆಲಸಕ್ಕೆ ಬರಬೇಡಿ, ನಿಮ್ಮನ್ನು ತೆಗೆದುಹಾಕಿದ್ದೇವೆ ಎಂದರೆ ನಾವು ಎಲ್ಲಿಗೆ ಹೋಗಬೇಕು ಎಂದು ಪ್ರತಿಭಟನಾಕಾರರು ಪ್ರಶ್ನಿಸಿದರು.
20 ಜನ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುತ್ತಿದ್ದೆವು. 10 ಜನರನ್ನು ಕೆಲಸದಿಂದ ತೆಗೆದು ಹಾಕಿದ್ದು, ಅವರು ಕೋರ್ಟ್ ಮೊರೆ ಹೋಗಿದ್ದಾರೆ. ನಾವು ದಿನ ಕೆಲಸ ಮಾಡಿಕೊಂಡು ಬರುತ್ತಿದ್ದೆವು. ಬೆಳಗ್ಗೆ 5.30 ರ ಹೊತ್ತಿಗೆ ಜಯದೇವ ಸರ್ಕಲ್‌ಗೆ ಕೆಲಸಕ್ಕೆ ಬಂದಾಗ, ನೀವು ಕೆಲಸಕ್ಕೆ ಬರಬೇಡಿ. ನಿಮ್ಮನ್ನು ತೆಗೆದು ಹಾಕಲಾಗಿದೆ ಎಂದರು. ಯಾವ ಕಾರಣಕ್ಕೆ ತೆಗೆದು ಹಾಕಿದ್ದೀರಿ ಎಂದು ಕೇಳಿದರೆ ಯಾರೂ ಏನೂ ಹೇಳುತ್ತಿಲ್ಲ. ನಮ್ಮನ್ನು ಇದ್ದಕ್ಕಿದ್ದಂತೆ ಕೆಲಸದಿಂದ ತೆಗೆದುಹಾಕಿ ಬೇರೆಯವರನ್ನು ಸೇರಿಸಿಕೊಂಡಿದ್ದಾರೆ. ಇದಕ್ಕೆ ಕಾರಣ ಏನು ಎಂಬುದರ ಬಗ್ಗೆ ಯಾರೂ ಮಾತನಾಡುತ್ತಿಲ್ಲ ಎಂದು ಅಳಲು ತೋಡಿಕೊಂಡರು.
ತಿರುಗಿ ನೋಡಲೇ ಇಲ್ಲ
ಯಾವುದೇ ಮುನ್ಸೂಚನೆ ಇಲ್ಲದೆ ಏಕಾಏಕಿ ಕೆಲಸದಿಂದ ತೆಗೆದುಹಾಕಿರುವುದನ್ನು ವಿರೋಧಿಸಿ ಮಹಿಳೆಯರು ಒಳಗೊಂಡಂತೆ 10 ಪೌರ ಕಾರ್ಮಿಕರು ಮೈಮೇಲೆ ಕಸ ಸುರಿದುಕೊಂಡಿದ್ದಲ್ಲದೆ ಕಸದ ರಾಶಿಯಲ್ಲೇ ಕುಳಿತು 5 ಗಂಟೆಗಳಿಗೂ ಹೆಚ್ಚು ಕಾಲ ಪ್ರತಿಭಟನೆ ನಡೆಸಿದರೂ ಯಾವೊಬ್ಬ ಅಧಿಕಾರಿಯೂ ಪ್ರತಿಭಟನಾಕಾರರತ್ತ ತಿರುಗಿಯೂ ನೋಡಲಿಲ್ಲ. ಯಾವ ಕಾರಣಕ್ಕೆ ಕೆಲಸದಿಂದ ತೆಗೆದು ಹಾಕಲಾಗಿದೆ ಎಂಬುದರ ಬಗ್ಗೆಯಾದರೂ ತಿಳಿಸಿ ಎಂದರೂ ಉತ್ತರ ನೀಡಲು ಯಾರೂ ಇರಲೇ ಇಲ್ಲ. ಕೆಲ ಮಹಿಳಾ ಪೌರ ಕಾರ್ಮಿಕರು ತಮ್ಮ ಪುಟ್ಟ ಮಕ್ಕಳೊಂದಿಗೆ ನಡು ರಸ್ತೆಯಲ್ಲೇ ಕಸದ ರಾಶಿಯಲ್ಲಿ ಕುಳಿತುಕೊಂಡು ಪ್ರತಿಭಟನೆ ನಡೆಸಿದರು. ಸೌಜನ್ಯಕ್ಕೂ ಅಧಿಕಾರಿಗಳು ಅತ್ತ ಸುಳಿಯಲೇ ಇಲ್ಲ. ಬೇರೆಯವರು ಪ್ರತಿಭಟನಾಕಾರರಿಗೆ ತಿಂಡಿ ವ್ಯವಸ್ಥೆ ಮಾಡಿದರು.
ಬೇನಾಮಿ ಕೆಲಸಗಾರರು?
ಗುತ್ತಿಗೆ ಆಧಾರಿತ ಪೌರ ಕಾರ್ಮಿಕರ ಖಾಯಂ ಮಾಡುವ ವೇಳೆಗೆ ಪಟ್ಟಿಯಲ್ಲಿ ಕಾಲೇಜು ವಿದ್ಯಾರ್ಥಿನಿ ಒಳಗೊಂಡಂತೆ
ಮುಖಂಡರಿಗೆ ತೀರಾ ಬೇಕಾದವರ ಹೆಸರು ಸೇರಿಸುವ ಪ್ರಯತ್ನ ನಡೆದಿದೆ ಎಂಬ ಮಾತು ಕೇಳಿ ಬರುತ್ತಿವೆ. ಪ್ರತಿಭಟನೆ ನಡೆಸಿದ ಕಾರ್ಮಿಕರ ಖಾತೆಗೆ ನೇರವಾಗಿ ವೇತನ ಪಾವತಿ ಮಾಡಲಾಗುತ್ತಿದೆ. ಅಲ್ಲದೆ ಆರೋಗ್ಯ ವಿಮೆ, ಭವಿಷ್ಯ ನಿಧಿ ವಂತಿಗೆ ವೇತನದಲ್ಲಿ ಕಡಿತ ಮಾಡಲಾಗುತ್ತಿದೆ. ಆದರೂ, ಯಾವುದೇ ಕಾರಣ ಇಲ್ಲದೆ ಏಕಾಏಕಿ ಕೆಲಸದಿಂದ ತೆಗೆದುಹಾಕಿರುವ ಹಿಂದೆ ತಮ್ಮವರಿಗೆ ಅನುಕೂಲ ಮಾಡಿಕೊಡುವ ಇರಾದೆಯೇ ಪ್ರಮುಖ ಕಾರಣ ಎನ್ನಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere: ಗೆಳೆಯನನ್ನೇ ಕೊಲೆ ಮಾಡಿದ ಪ್ರಕರಣ… ಆರೋಪಿಗೆ ಜೀವಾವಧಿ ಶಿಕ್ಷೆ
ಮೀಸಲಾತಿಗೆ ಒತ್ತಾಯಿಸಿ ಡಿ.10ರಂದು ಸುವರ್ಣ ಸೌಧಕ್ಕೆ ಮುತ್ತಿಗೆ: ಬಸವ ಜಯಮೃತ್ಯುಂಜಯ ಸ್ವಾಮೀಜಿ
Politics: ಬಿಜೆಪಿ-ಜೆಡಿಎಸ್ ಸಮ್ಮಿಶ್ರ ಸರ್ಕಾರ ರಚನೆಗೆ ಪ್ರಯತ್ನ: ಬಿಎಸ್ ಯಡಿಯೂರಪ್ಪ
Davanagere: ʼಸೋಲಿಲ್ಲದ ಸರದಾರʼ ಎನಿಸಿದ್ದ ʼಬೆಳ್ಳೂಡಿ ಕಾಳಿʼ ಟಗರು ಅನಾರೋಗ್ಯದಿಂದ ನಿಧನ
Davanagere: ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ರಚನೆಯಾದ 3 ತಂಡಗಳೇ ಅಧಿಕೃತ: ರೇಣುಕಾಚಾರ್ಯ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.