ನೆರೆ ಸಂತ್ರಸ್ತರಿಗೆ ಸೂಕ್ತ ಪರಿಹಾರ ನೀಡಿ
Team Udayavani, Sep 10, 2019, 10:10 AM IST
ದಾವಣಗೆರೆ: ಡಿಸಿ ಕಚೇರಿ ಎದುರು ಪೀಪಲ್ಸ್ ಲಾಯರ್ ಗಿಲ್ಡ್ ವತಿಯಿಂದ ಪ್ರತಿಭಟನೆ.
ದಾವಣಗೆರೆ: ಭಾರೀ ಮಳೆ, ನೆರೆ, ಪ್ರವಾಹದಿಂದ ಅತೀವ ಸಂಕಷ್ಟಕ್ಕೀಡಾಗಿರುವ ಉತ್ತರ ಕರ್ನಾಟಕ ಹಾಗೂ ಇತರೆ ಜಿಲ್ಲೆಯಲ್ಲಿನ ಜನರಿಗೆ ಕೇಂದ್ರ ಸರ್ಕಾರ ಕೂಡಲೇ ಸೂಕ್ತ ಪರಿಹಾರ ನೀಡಬೇಕು ಎಂದು ಒತ್ತಾಯಿಸಿ ಸೋಮವಾರ ಜಿಲ್ಲಾಧಿಕಾರಿ ಕಚೇರಿ ಎದುರು ಪೀಪಲ್ಸ್ ಲಾಯರ್ ಗಿಲ್ಡ್ ವತಿಯಿಂದ ವಕೀಲರು ಪ್ರತಿಭಟನೆ ನಡೆಸಿದರು.
ಕಳೆದ ಆಗಸ್ಟ್ ಮತ್ತು ಈಚೆಗೆ ಸುರಿದ ಭಾರೀ ಮಳೆಯಿಂದ ರಾಜ್ಯದ ಸುಮಾರು 21 ಜಿಲ್ಲೆಗಳಲ್ಲಿ ನೆರೆಯ ಪರಿಣಾಮ ಲಕ್ಷಾಂತರ ಜನರು ಬೀದಿ ಬಂದಿದ್ದಾರೆ. ಸಾವಿರಾರು ಕುಟುಂಬಗಳು ಮನೆ, ಬೆಳೆ ಎಲ್ಲವನ್ನೂ ಕಳೆದುಕೊಂಡು ಅಕ್ಷರಶಃ ಅನಾಥರಾಗಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ರಾಜ್ಯಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿಲ್ಲ. ಕೇಂದ್ರ ಸರ್ಕಾರ ಈವರೆಗೆ ನಯಾ ಪೈಸೆ ಪರಿಹಾರ ಬಿಡುಗಡೆ ಮಾಡಿಲ್ಲ. ಕೂಡಲೇ ಪರಿಹಾರ ಬಿಡುಗಡೆ ಮಾಡುವ ಮೂಲಕ ಸಂಕಷ್ಟದಲ್ಲಿರುವ ಜನರಿಗೆ ನೆರವಾಗಬೇಕು ಎಂದು ನ್ಯಾಯವಾದಿಗಳು ಒತ್ತಾಯಿಸಿದರು.
ಹಿಂದೆಂದು ಕಂಡು ಕೇಳರಿಯದಂತಹ ಪ್ರವಾಹದ ಹೊಡೆತಕ್ಕೆ ಸಿಲುಕಿರುವ ಲಕ್ಷಾಂತರ ಜನರು ಒಂದು ಹೊತ್ತಿನ ಊಟಕ್ಕೂ ಪರಿತಪಿಸುತ್ತಿದ್ದಾರೆ. ಹಿಂದೊಮ್ಮೆ ಅನೇಕ ಜನರಿಗೆ ನೆರವು ನೀಡಿರುವ ಜನರೇ ಈಗ ಅಂಗಲಾಚುವ ಪರಿಸ್ಥಿತಿಗೆ ತಲುಪುವಂತಾಗಿದ್ದಾರೆ. ಮನೆ ಕಳೆದುಕೊಂಡು ಬಯಲಿನಲ್ಲೇ ಮಳೆ, ಚಳಿ ಎನ್ನದೆ ಜೀವ ಕೈಯಲ್ಲಿ ಹಿಡಿದುಕೊಂಡು ಬದುಕು ಸಾಗಿಸುತ್ತಿದ್ದಾರೆ. ಸರ್ಕಾರದಿಂದ ದೊರೆತಂತಹ ಭರವಸೆಯಿಂದ ಯಾವುದೇ ಪ್ರಯೋಜನ ಆಗುವುದಿಲ್ಲ. ನಿಜವಾಗಿಯೂ ಸಂತ್ರಸ್ತರಿಗೆ ನೆರವು ನೀಡುವ ಕೆಲಸ ಸಮಾರೋಪಾದಿಯಲ್ಲಿ ಆಗಬೇಕು ಎಂದು ಒತ್ತಾಯಿಸಿದರು.
ನೆರೆ ಸಂಭವಿಸಿ ತಿಂಗಳು ಉರುಳಿದರೂ ಕೇಂದ್ರ ಸರ್ಕಾರದಿಂದ ಯಾವುದೇ ರೀತಿಯ ಪರಿಹಾರ ಬಂದಿಲ್ಲ. ಒಂದು ನಯಾ ಪೈಸೆಯನ್ನಾಗಲಿ ನೆರೆಪೀಡಿತರಿಗೆ ನೀಡಿರುವುದಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಕರ್ನಾಟಕದಲ್ಲೂ ಕೂಡ ಬಿಜೆಪಿ ಸರ್ಕಾರವೇ ಅಧಿಕಾರದಲ್ಲಿದೆ. ರಾಜ್ಯದಿಂದ 25 ಜನ ಸಂಸದರನ್ನು ಆರಿಸಿ ಕಳುಹಿಸಿದರೂ ಕೂಡ ಪರಿಹಾರವನ್ನು ಕೇಂದ್ರ ಸರ್ಕಾರದಿಂದ ಪಡೆದುಕೊಳ್ಳಲು ಯಾವುದೇ ಕ್ರಮ ತೆಗೆದುಕೊಳ್ಳುತ್ತಿಲ್ಲ. ಕೇಂದ್ರ ಸರ್ಕಾರಕ್ಕೆ ಕರ್ನಾಟಕ 20 ಸಾವಿರ ಕೋಟಿ ಬೇಡಿಕೆಯಿಟ್ಟಿದ್ದರೂ ಅನಾವೃಷ್ಟಿ ಪರಿಹಾರ ಸೇರಿ 1,026 ಕೋಟಿ ಮಾತ್ರ ಬಿಡುಗಡೆ ಮಾಡಲಾಗಿದೆ. ನೆರೆಗೆ ಸಂಬಂಧಿಸಿದಂತೆ ನೆರವು ನೀಡಿಲ್ಲ ಎಂದು ದೂರಿದರು.
ಕೇಂದ್ರ ಸರ್ಕಾರ ನಿಸ್ಸೀಮ ನಿರ್ಲಕ್ಷ್ಯ ತೋರುತ್ತಿದೆ. ಬಿಜೆಪಿಯ ಯಾವುದೇ ಸಂಸದರು ನೆರವು ತರುವ ಬಗ್ಗೆ ಮಾತನಾಡುತ್ತಿಲ್ಲ. ತಮಗೂ ರಾಜ್ಯದಲ್ಲಿನ ಸ್ಥಿತಿಗೂ ಯಾವುದೇ ಸಂಬಂಧವೇ ಇಲ್ಲದಂತೆ ವರ್ತಿಸುತ್ತಿದ್ದಾರೆ. ಕೇಂದ್ರ ಸರ್ಕಾರ ಕೂಡಲೇ ಪರಿಹಾರ ಬಿಡುಗಡೆಯ ಜೊತೆಗೆ ಅಗತ್ಯ ನೆರವು ನೀಡಬೇಕು ಎಂದು ಒತ್ತಾಯಿಸಿದರು.
ಗಿಲ್ಡ್ನ ಅನೀಸ್ ಪಾಷಾ, ಎಲ್.ಎಚ್. ಅರುಣ್‌ಕುಮಾರ್, ಮಂಜುಳಾ ಹಲಗೇರಿ, ಉಷಾ ಕೈಲಾಸದ್, ರಾಮಚಂದ್ರ ಕಲಾಲ್, ಬಿ.ಟಿ. ವಿಶ್ವನಾಥ್, ಎನ್. ರಂಗಸ್ವಾಮಿ, ಎ.ಎಲ್. ಅಬ್ದುಲ್, ನಜೀರ್ ಅಹಮ್ಮದ್, ಸಿರಾಜುದ್ದೀನ್ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere; ಸಿಲಿಂಡರ್ ಸ್ಫೋ*ಟ: ಆವರಿಸಿದ ದಟ್ಟ ಹೊಗೆ
Caste Census: ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಜಾತಿ ಗಣತಿ ವರದಿ ಮಂಡನೆ: ಸಿಎಂ
Kanaka Jayanthi: ಮುಂದಿನ ಮೂರುವರೆ ವರ್ಷವೂ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ: ಸಚಿವ ಭೈರತಿ
Davanagere: ವಿಪಕ್ಷಗಳು ಆಧಾರವಿಲ್ಲದೆ ಆರೋಪ ಮಾಡಬಾರದು: ಸಿಎಂ ಸಿದ್ದರಾಮಯ್ಯ
Davanagere: ಯುವಜನೋತ್ಸವಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
BJP Leader; ಇಂಡಿಯಾ ಗೇಟ್‌ಗೆ “ಭಾರತ್ ಮಾತಾ ದ್ವಾರ’ ಹೆಸರಿಡಿ: ಮೋದಿಗೆ ಪತ್ರ
Pakistan; ಖರ್ಚು ಉಳಿಸಲು 6 ಸೋದರರಿಂದ 6 ಮಂದಿ ಸೋದರಿಯರ ವಿವಾಹ!
Team India; ದ್ರಾವಿಡ್ ಇದ್ದಾಗ ಎಲ್ಲ ಸರಿಯಿತ್ತು: ಹರ್ಭಜನ್
Team India; ಆಯ್ಕೆಗಾರರ ಕೈಯಲ್ಲಿ ರೋಹಿತ್, ವಿರಾಟ್ ಕೊಹ್ಲಿ ಭವಿಷ್ಯ: ಗಾವಸ್ಕರ್
Thalassery: ಸಿಪಿಎಂ ನಾಯಕನ ಹತ್ಯೆ ಪ್ರಕರಣ: ಆರೆಸ್ಸೆಸ್‌ನ 9 ಸದಸ್ಯರಿಗೆ ಜೀವಾವಧಿ ಶಿಕ್ಷೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.