ಸಂತ್ರಸ್ತರಿಗೆ ಶೀಘ್ರ ಪರಿಹಾರ ಒದಗಿಸಿ
•ನೆರೆ ಪರಿಸ್ಥಿತಿಯನ್ನು ರಾಷ್ಟ್ರೀಯ ವಿಪತ್ತು ಎಂದು ಘೋಷಿಸಲು ಒತ್ತಾಯ
Team Udayavani, Aug 20, 2019, 10:21 AM IST
ದಾವಣಗೆರೆ: ಉಪವಿಭಾಗಾಧಿಕಾರಿ ಕಚೇರಿ ಎದುರು ಸಿಪಿಐ ಮುಖಂಡರು, ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ದಾವಣಗೆರೆ: ರಾಜ್ಯದಲ್ಲಿನ ನೆರೆ ಪರಿಸ್ಥಿತಿಯನ್ನು ರಾಷ್ಟ್ರೀಯ ವಿಪತ್ತು ಎಂದು ಘೋಷಿಸಿ, ಸಂತ್ರಸ್ತರಿಗೆ ಶೀಘ್ರ ಪರಿಹಾರ ಒದಗಿಸಬೇಕು ಎಂದು ಒತ್ತಾಯಿಸಿ ಭಾರತ ಕಮ್ಯೂನಿಸ್ಟ್ ಪಕ್ಷ (ಸಿಪಿಐ) ಕಾರ್ಯಕರ್ತರು ಸೋಮವಾರ ಪ್ರತಿಭಟನೆ ನಡೆಸಿದರು.
ಅಶೋಕ ರಸ್ತೆಯ ಸಿಪಿಐ ಕಚೇರಿಯಿಂದ ಉಪ ವಿಭಾಗಾಧಿಕಾರಿ ಕಚೇರಿವರೆಗೆ ಮೆರವಣಿಗೆ ನಡೆಸಿದ ಮುಖಂಡರು, ಕಾರ್ಯಕರ್ತರು ಉಪ ವಿಭಾಗಾಧಿಕಾರಿ ಕಚೇರಿ ಮೂಲಕ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಮನವಿ ಸಲ್ಲಿಸಿದರು.
ಭಾರೀ ಮಳೆ, ನೆರೆಯಿಂದ ಉತ್ತರ ಕರ್ನಾಟಕದ 18 ಜಿಲ್ಲೆಯಲ್ಲಿ ಹಿಂದೆಂದೂ ಕಂಡು ಕೇಳರಿಯದಂತಹ ಭೀಕರ ಪರಿಸ್ಥಿತಿ ನಿರ್ಮಾಣವಾಗಿದೆ. 70ಕ್ಕೂ ಹೆಚ್ಚು ಜನರು ಅಸು ನೀಗಿದ್ದಾರೆ. ಸಾವಿರಾರು ಕುಟುಂಬಗಳು ಬೀದಿಗೆ ಬಂದಿವೆ. ಲಕ್ಷಾಂತರ ಜನರ ಬದುಕು ಅತಂತ್ರವಾಗಿದೆ. ಇಂತಹ ಸಂದರ್ಭದಲ್ಲಿ ಸಮರೋಪಾದಿಯಲ್ಲಿ ಅಗತ್ಯ ಪರಿಹಾರ ಕಾರ್ಯ ಕೈಗೊಳ್ಳಬೇಕಾದ ಸರ್ಕಾರವೇ ಇಲ್ಲ. ಕೇಂದ್ರ ಸರ್ಕಾರವೂ ನೆರೆ ಸಂತ್ರಸ್ತರ ನೆರವಿಗೆ ಬರುತ್ತಿಲ್ಲ.
ಸರ್ಕಾರಗಳು ಕೂಡಲೇ ನೆರೆ ಸಂತ್ರಸ್ತರಿಗೆ ಪರಿಹಾರ ಒದಗಿಸಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.
ವಿವಿಧ ಸಮೀಕ್ಷೆಯಂತೆ ನೆರೆಯಿಂದ ರಾಜ್ಯದಲ್ಲಿ 2 ಲಕ್ಷ ಮನೆ ಹಾನಿಗೊಳಗಾಗಿವೆ. 30 ಸಾವಿರ ಕುಟುಂಬಗಳ ಕೃಷಿಭೂಮಿ ನೀರು ಪಾಲಾಗಿವೆ. 20 ಲಕ್ಷ ಎಕರೆಯಲ್ಲಿನ ಬೆಳೆ ಹಾಳಾಗಿದೆ. 1 ಲಕ್ಷ ಎಕರೆ ಕೃಷಿ ಯೋಗ್ಯ ಭೂಮಿ ಕೊರೆತಕೊಳಗಾಗಿ ಹಾಳಾಗಿದೆ. ಸಾವಿರಾರು ಗ್ರಾಮಗಳು ಮುಳುಗಡೆಯಾಗಿವೆ. ಸಾರ್ವಜನಿಕ ಆಸ್ತಿ, ಮನೆಯಲ್ಲಿನ ಪೀಠೊಪಕರಣ ಹಾಳಾಗಿವೆ. ಅನೇಕರ ಬದುಕೇ ಇಲ್ಲವಾಗಿದೆ. ಮತ್ತೆ ಜೀವನ ಕಟ್ಟಿಕೊಳ್ಳಬೇಕಾದವರ ನೆರವಿಗೆ ಸರ್ಕಾರ ಮುಂದಾಗಬೇಕು ಎಂದು ಒತ್ತಾಯಿಸಿದರು.
ನೆರೆಯಿಂದ ಜನರು ಬಸವಳಿದು ಹೋಗುತ್ತಿದ್ದಾರೆ. ಕಾಟಾಚಾರಕ್ಕೆ ಎನ್ನುವಂತೆ ಸಮೀಕ್ಷೆ ನಡೆಸಿದ ಕೇಂದ್ರದ ಗೃಹ ಸಚಿವ ಅಮಿತ್ ಶಾ, ಹಣಕಾಸು ಸಚಿವೆ ನಿರ್ಮಲ ಸೀತಾರಾಮನ್ ರಾಜ್ಯಕ್ಕೆ ಬಿಡಿಗಾಸು ಪರಿಹಾರ ಘೋಷಣೆ ಮಾಡಿಲ್ಲ. ಚುನಾವಣೆ ಸಂದರ್ಭದಲ್ಲಿ 3 ದಿನಕ್ಕೊಮ್ಮೆ ರಾಜ್ಯಕ್ಕೆ ಬರುತ್ತಿದ್ದ ಮೋದಿ ಅವರಿಗೆ ಈಗ ಸಮಯವೇ ಇಲ್ಲದಂತಾಗಿದೆ. ಯಡಿಯೂರಪ್ಪ ಒನ್ ಮ್ಯಾನ್ ಶೋನಿಂದ ಯಾವುದೇ ಪ್ರಯೋಜನ ಆಗುತ್ತಿಲ್ಲ. ಕೇಂದ್ರ ಸರ್ಕಾರ ಕೂಡಲೇ ರಾಷ್ಟ್ರೀಯ ವಿಪತ್ತು… ಎಂದು ಘೋಷಿಸಿ, ಅನುದಾನ, ಸೌಲಭ್ಯ ಒದಗಿಸಬೇಕು ಎಂದು ಒತ್ತಾಯಿಸಿದರು.
ರಾಜ್ಯ, ದೇಶದ್ಯಾಂತ ದಲಿತ, ಆದಿವಾಸಿ, ಅಲ್ಪಸಂಖ್ಯಾತರು ಮತ್ತು ಮಹಿಳೆಯರ ಮೇಲೆ ನಡೆಯುತ್ತಿರುವ ದೌರ್ಜನ್ಯ, ದಾಳಿ ತಡೆಗೆ ಕೇಂದ್ರ, ರಾಜ್ಯ ಸರ್ಕಾರ ಅಗತ್ಯ ಕ್ರಮ ತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿದರು.
ಪಕ್ಷದ ಜಿಲ್ಲಾ ಕಾರ್ಯದರ್ಶಿ ಎಚ್.ಕೆ. ರಾಮಚಂದ್ರಪ್ಪ, ಆನಂದರಾಜ್, ಆವರಗೆರೆ ಚಂದ್ರು, ಆವರಗೆರೆ ವಾಸು, ಎನ್.ಟಿ. ಬಸವರಾಜ್, ಬಸವರಾಜಪ್ಪ, ಸರೋಜಾ, ಗದಿಗೇಶ್ ಪಾಳೇದ್, ಮೌನಾಚಾರಿ, ಲಿಂಗರಾಜ್, ತಿಪ್ಪೇಶ್, ಎಚ್.ಪಿ. ಉಮಾಪತಿ, ದುಗ್ಗೇಶ್, ತಿಪ್ಪೇಸ್ವಾಮಿ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere: ವೃದ್ಧೆ ಮೇಲೆ ಅತ್ಯಾ*ಚಾರ; ಯುವಕನಿಗೆ 10 ವರ್ಷ ಕಠಿಣ ಶಿಕ್ಷೆ
Davanagere: ಬಿಜೆಪಿ-ಕಾಂಗ್ರೆಸ್ ಹೊಂದಾಣಿಕೆ ಆರೋಪದ ಬಗ್ಗೆ ರೇಣುಕಾಚಾರ್ಯ ಸ್ಪಷ್ಟನೆ
Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ ಕಾಂಗ್ರೆಸ್ ಶಾಸಕ
Davangere: 2021ರಲ್ಲಿ ಅಪ್ರಾಪ್ತೆಯನ್ನು ಅಪಹರಿಸಿ ಅತ್ಯಾಚಾರವೆಸಗಿದ್ದವನಿಗೆ ಶಿಕ್ಷೆ ಪ್ರಕಟ
Davanagere: ಪಾಠ ಮಾಡುತ್ತಿದ್ದಾಗಲೇ ಹೃದಯಾಘಾತ; ಶಿಕ್ಷಕ ಸಾವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
INDvAUS: ಬಿಸಿಸಿಐ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ರಾ ಟ್ರಾವಿಸ್ ಹೆಡ್? Video
Sheikh ಹಸೀನಾರನ್ನು ಬಾಂಗ್ಲಾದೇಶಕ್ಕೆ ವಾಪಸ್ ಕಳುಹಿಸಿ: ಭಾರತಕ್ಕೆ ಬಾಂಗ್ಲಾ ಮನವಿ
Seema Haider; 4 ಮಕ್ಕಳೊಂದಿಗೆ ಭಾರತಕ್ಕೆ ಬಂದಿದ್ದ ಸೀಮಾ ಈಗ ಗರ್ಭಿಣಿ!!
Shimoga; ನಿತ್ಯ ಸುದ್ದಿಯಲ್ಲಿರಬೇಕೆಂದು ಸಿ.ಟಿ ರವಿ ʼಆʼ ಹೇಳಿಕೆ ನೀಡಿದ್ದಾರೆ: ಆಯನೂರು
Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.