ಝಾಡಮಾಲಿಗಳಿಗೆ ಪುನರ್ವಸತಿ ಒದಗಿಸಿ
Team Udayavani, Dec 31, 2019, 11:46 AM IST
ದಾವಣಗೆರೆ: ಮ್ಯಾನ್ಯುಯಲ್ ಸ್ಕಾವೆಂಜರ್ಸ್‌ಗಳಿಗೆ ಪುನವರ್ಸತಿ ಒದಗಿಸುವ ಪುನವರ್ಸತಿ ಕಾಯ್ದೆ-2013ರ ಸಮರ್ಪಕ ಜಾರಿ, ತಲೆ ಮೇಲೆ ಮಲ ಹೊರುವ ಪದ್ಧತಿ ನಿಷೇಧ ಒಳಗೊಂಡಂತೆ ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಜನ ಜಾಗೃತಿ ಅಭಿಯಾನ ಹಮ್ಮಿಕೊಳ್ಳಲಾಗಿದೆ ಎಂದು ಸಫಾಯಿ ಕರ್ಮಚಾರಿ ಕಾವಲು ಸಮಿತಿ ರಾಜ್ಯ ಸಂಚಾಲಕ ಕೆ.ಬಿ. ಓಬಳೇಶ್ ತಿಳಿಸಿದ್ದಾರೆ.
ಆಧುನಿಕ ಯುಗದಲ್ಲೂ ಇರುವ ತಲೆ ಮೇಲೆ ಮಲ ಹೊರುವ ಪದ್ಧತಿ ನಿಷೇಧ ಮಾಡುವ ಜೊತೆಗೆ ಆ ಕೆಲಸದಲ್ಲಿ ತೊಡಗಿಸಿಕೊಂಡವರಿಗೆ ಪುನವರ್ಸತಿ ಒದಗಿಸಬೇಕು. ಸ್ಥಳೀಯ ಸಂಸ್ಥೆಯಲ್ಲಿನ ಪೌರ ಕಾರ್ಮಿಕರನ್ನ ಖಾಯಂ ಮಾಡಬೇಕು ಎಂದು ರಾಜ್ಯವ್ಯಾಪಿ ಎರಡು ಹಂತದಲ್ಲಿ ಜಾಗೃತಿ ಆಂದೋಲನ ನಡೆಸಲಾಗುತ್ತಿದೆ ಎಂದು ಸೋಮವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ರಾಜ್ಯದಲ್ಲಿ 3 ಸಾವಿರ ಮ್ಯಾನ್ಯುಯಲ್ ಸ್ಕಾವೆಂಜರ್ಸ್ ಗಳನ್ನು ಗುರುತಿಸಲಾಗಿದೆ. ಈವರೆಗೆ ಪುನವರ್ಸತಿ ಕಾಯ್ದೆ-2013ರಡಿ ಪುನವರ್ಸತಿ ಒದಗಿಸಿಲ್ಲ. ಕಳೆದ ಫೆಬ್ರವರಿಯಲ್ಲಿ ಬಿಡುಗಡೆ ಮಾಡಿರುವ 1 ಲಕ್ಷ ಅನುದಾನವನ್ನೂ ಬಳಸಲಾಗಿಲ್ಲ. ಪರ್ಯಾಯ ಉದ್ಯೋಗಕ್ಕೂ ಆರ್ಥಿಕ ನೆರವು ನೀಡುತ್ತಿಲ್ಲ ಎಂದು ದೂರಿದರು.
ಜಿಲ್ಲಾ ಕಾವಲು ಸಮಿತಿಯ ಆರ್.ವಿ. ಚಂದ್ರಶೇಖರ್ ಮಾತನಾಡಿ, ಜಿಲ್ಲೆಯಲ್ಲಿ ಮ್ಯಾನ್ಯುಯಲ್ ಸ್ಕಾವೆಂಜರ್ಸ್ ಕುಟುಂಬಗಳ ಸಮೀಕ್ಷಾ ಕಾರ್ಯಕ್ಕೆ ಆಯಾಯ ತಾಲೂಕು ಸಮಾಜ ಕಲ್ಯಾಣಾಧಿಕಾರಿಗಳನ್ನ ನೋಡಲ್ ಅಧಿಕಾರಿಗಳನ್ನಾಗಿ ನೇಮಕ ಮಾಡಲಾಗಿದೆ. ದಾವಣಗೆರೆಯಲ್ಲಿ ಜ.10, ಹೊನ್ನಾಳಿಯಲ್ಲಿ 6, ಚನ್ನಗಿರಿಯಲ್ಲಿ 7, ಹರಿಹರದಲ್ಲಿ 8, ಜಗಳೂರಿನಲ್ಲಿ 9 ರಂದು ಸಮೀಕ್ಷೆ ನಡೆಯಲಿದೆ. ಅಧಿಕಾರಿಗಳು ಸಮೀಕ್ಷೆಗೆ ಬಂದಾಗ ಸಮಗ್ರ ಮಾಹಿತಿ ನೀಡಬೇಕು ಎಂದು ಮನವಿ ಮಾಡಿದರು.
ಸಫಾಯಿ ಕರ್ಮಚಾರಿ ಕಾವಲು ಸಮಿತಿಯ ಡಿ.ಎಸ್. ಬಾಬಣ್ಣ, ಉಚ್ಚೆಂಗೆಪ್ಪ, ಮ್ಯಾಥು ಇತರರು ಸುದ್ದಿಗೋಷ್ಠಿಯಲ್ಲಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere: ಯತ್ನಾಳ್ ಫೋರ್ತ್ ಗ್ರೇಡ್ ರಾಜಕಾರಣಿ..: ರೇಣುಕಾಚಾರ್ಯ ವಾಗ್ದಾಳಿ
Davanagere: ಮೊಟ್ಟೆ ವಿತರಣೆಯಲ್ಲಿ ಲೋಪ; ಮುಖ್ಯ ಶಿಕ್ಷಕಿ, ದೈಹಿಕ ಶಿಕ್ಷಣ ಶಿಕ್ಷಕ ಅಮಾನತು
Davanagere: ಮೊಟ್ಟೆ ವಿತರಣೆಯಲ್ಲಿ ಲೋಪ; ಮುಖ್ಯ ಶಿಕ್ಷಕಿ, ದೈಹಿಕ ಶಿಕ್ಷಣ ಶಿಕ್ಷಕ ಅಮಾನತು
BJP;ಯತ್ನಾಳ್ ರನ್ನು ತಡೆಯದಿದ್ದರೆ ನಾನೂ ಪ್ರತ್ಯೇಕ ಪಾದಯಾತ್ರೆ ಮಾಡುತ್ತೇನೆ:ರೇಣುಕಾಚಾರ್ಯ
Save Life: ಆಯತಪ್ಪಿ ಬಿದ್ದು ರೈಲಿನಡಿ ಸಿಲುಕುತ್ತಿದ್ದ ಪ್ರಯಾಣಿಕನ ಕಾಪಾಡಿದ ಹೋಂಗಾರ್ಡ್!
MUST WATCH
ಹೊಸ ಸೇರ್ಪಡೆ
Udupi: ಶ್ರೀಕೃಷ್ಣ ಮಠ: ಗೀತೋತ್ಸವಕ್ಕೆ ಪರ್ತಗಾಳಿ ಶ್ರೀಗಳಿಗೆ ಆಹ್ವಾನ
Udupi: ಸಮಾಜ ರೂಪಿಸುವಲ್ಲಿ ಯಕ್ಷಗಾನ ಪಾತ್ರ ಹಿರಿದು: ಪೇಜಾವರ ಶ್ರೀ
Kaup: ಹೊಸ ಮಾರಿಗುಡಿ ದೇವಸ್ಥಾನ: ಬೆಂಗಳೂರಿನಲ್ಲಿ ವಾಗೀಶ್ವರಿ ಪೂಜೆ, ಲೇಖನ ಸಂಕಲ್ಪ
Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ
ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಚಿತ್ತೂರು ಪ್ರಭಾಕರ ಆಚಾರ್ಯರಿಗೆ ಗೌರವಾರ್ಪಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.