ಪಿಯು ಪರೀಕ್ಷೆ: ಓರ್ವ ಡಿಬಾರ್
Team Udayavani, Mar 10, 2017, 12:37 PM IST
ದಾವಣಗೆರೆ: ಜಿಲ್ಲೆಯ 35 ಪರೀಕ್ಷಾ ಕೇಂದ್ರದಲ್ಲಿ ಗುರುವಾರ ದ್ವಿತೀಯ ಪಿಯು ಪರೀಕ್ಷೆ ಪ್ರಾರಂಭವಾಗಿದ್ದು, ಪರೀಕ್ಷಾ ಕೇಂದ್ರದಿಂದ ವಿದ್ಯಾರ್ಥಿಯೊಬ್ಬ ಉತ್ತರ ಪತ್ರಿಕೆಯೊಂದಿಗೆ ಪರಾರಿಯಾಗಿದ್ದರೆ, ಮತ್ತೂಂದು ಕೇಂದ್ರದಲ್ಲಿ ವಿದ್ಯಾರ್ಥಿ ಡಿಬಾರ್ ಆಗಿದ್ದಾನೆ.
ಹರಪನಹಳ್ಳಿಯ ಸರ್ಕಾರಿ ಪದವಿ ಪೂರ್ವ ಕಾಲೇಜು ಪರೀಕ್ಷಾ ಕೇಂದ್ರದ ಕೊಠಡಿ 11ರಲ್ಲಿ ಇತಿಹಾಸ ಪರೀಕ್ಷೆಗೆ ಹಾಜರಾಗಿದ್ದ ಶಿಂಗ್ರಿಹಳ್ಳಿ ಸರ್ಕಾರಿ ಪಿಯು ಕಾಲೇಜಿನ ಬಿ. ಸುಹೇಲ್ ಉತ್ತರ ಪತ್ರಿಕೆಯೊಂದಿಗೆ ಪರಾರಿಯಾದ ವಿದ್ಯಾರ್ಥಿ. ದಾವಣಗೆರೆಯ ನೂತನ ಪಿಯು ಕಾಲೇಜು ಪರೀಕ್ಷಾ ಕೇಂದ್ರದಲ್ಲಿ ಇತಿಹಾಸ ಪತ್ರಿಕೆ ನಕಲು ಮಾಡುತ್ತಿದ್ದ ಓರ್ವ ವಿದ್ಯಾರ್ಥಿಯನ್ನು ಡಿಬಾರ್ ಮಾಡಲಾಗಿದೆ.
ಕಲಾ ವಿಭಾಗದ ಇತಿಹಾಸ ಪತ್ರಿಕೆಗೆ ಒಟ್ಟು 9,987 ವಿದ್ಯಾರ್ಥಿಗಳು ನೋಂದಣಿ ಮಾಡಿಸಿದ್ದು, 797 ವಿದ್ಯಾರ್ಥಿಗಳು ಗೈರಾಗಿದ್ದರು. 9,190 ವಿದ್ಯಾರ್ಥಿಗಳು ಪರೀಕ್ಷೆ ಬರೆದರು. ವಿಜ್ಞಾನ ವಿಭಾಗದ ಜೀವಶಾಸ್ತ್ರ ಪತ್ರಿಕೆಗೆ 7,384 ವಿದ್ಯಾರ್ಥಿಗಳು ನೋಂದಣಿ ಮಾಡಿಸಿದ್ದು, 7,220 ವಿದ್ಯಾರ್ಥಿಗಳು ಹಾಜರಾಗಿದ್ದರು.
164 ವಿದ್ಯಾರ್ಥಿಗಳು ಗೈರಾಗಿದ್ದರು. ವೇತನ ಪರಿಷ್ಕರಣೆ ಒಳಗೊಂಡಂತೆ ವಿವಿಧ ಬೇಡಿಕೆಯ ಬಗ್ಗೆ ಸರ್ಕಾರದ ಗಮನ ಸೆಳೆಯುವ ಉದ್ದೇಶದಿಂದ ಉಪನ್ಯಾಸಕರು ಕೈಗೆ ಕಪ್ಪುಪಟ್ಟಿ ಕಟ್ಟಿಕೊಂಡು ಪರೀಕ್ಷಾ ಕಾರ್ಯ ನಿರ್ವಹಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸೇತುವೆ ನಿರ್ಮಾಣಕ್ಕೆ ಆಗ್ರಹಿಸಿ ರಸ್ತೆ ತಡೆದು ಹಳೇ ಕುಂದುವಾಡ ಗ್ರಾಮಸ್ಥರಿಂದ ಪ್ರತಿಭಟನೆ
Davanagere; ಸಿಲಿಂಡರ್ ಸ್ಫೋ*ಟ: ಆವರಿಸಿದ ದಟ್ಟ ಹೊಗೆ
Caste Census: ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಜಾತಿ ಗಣತಿ ವರದಿ ಮಂಡನೆ: ಸಿಎಂ
Kanaka Jayanthi: ಮುಂದಿನ ಮೂರುವರೆ ವರ್ಷವೂ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ: ಸಚಿವ ಭೈರತಿ
Davanagere: ವಿಪಕ್ಷಗಳು ಆಧಾರವಿಲ್ಲದೆ ಆರೋಪ ಮಾಡಬಾರದು: ಸಿಎಂ ಸಿದ್ದರಾಮಯ್ಯ
MUST WATCH
ಹೊಸ ಸೇರ್ಪಡೆ
Mega Concert: Black ಮಾರ್ಕೆಟ್ ಟಿಕೆಟ್ ಮಾರಾಟ ತಡೆಗೆ ಮಾರ್ಗಸೂಚಿ ಬೇಕು: ಪಿಐಎಲ್ ವಜಾ
Gudibanda: ಬಸ್ಗೆ ಟಿಪ್ಪರ್ ಡಿಕ್ಕಿ; ತಪ್ಪಿದ ಭಾರಿ ಅನಾಹುತ; ಇಬ್ಬರಿಗೆ ಗಾಯ
Maharashtra ವಿಧಾನಸಭೆಯಲ್ಲಿ ಬಿಜೆಪಿ ಗೆಲುವಿಗೆ ಆರ್ಎಸ್ಎಸ್ ಕಾರಣ: ಶರದ್ ಪವಾರ್
Tumkuru; ಬಿಜೆಪಿ ಕಾರ್ಯಕರ್ತೆ ಶಕುಂತಲಾ ನಟರಾಜ್ ಪುತ್ರ ಆತ್ಮಹ*ತ್ಯೆ
Mangaluru: ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.