ಅಚ್ಚಳಿಯದ ನೆನಪು ಬಿಟ್ಟು ಹೋದ ಅಪ್ಪು  


Team Udayavani, Oct 31, 2021, 2:39 PM IST

ಅಚ್ಚಳಿಯದ ನೆನಪು ಬಿಟ್ಟು ಹೋದ ಅಪ್ಪು  

ದಾವಣಗೆರೆ: “ಅಪ್ಪು’ ಎಂದೇ ಅಭಿಮಾನಿಗಳಿಂದ ಕರೆಯಲ್ಪಡುತ್ತಿದ್ದ ಪವರ್‌ ಸ್ಟಾರ್‌ ಪುನೀತ್‌ ರಾಜ್‌ಕುಮಾರ್‌, ಜಿಲ್ಲೆಯಲ್ಲಿ ಅಚ್ಚಳಿಯದ ನೆನಪುಗಳನ್ನು ಬಿಟ್ಟು ಹೋಗಿದ್ದಾರೆ.

ತಮ್ಮ ತಂದೆ ಡಾ| ರಾಜ್‌ಕುಮಾರ್‌ ಆವರೊಂದಿಗೆ ಚಿಕ್ಕ ವಯಸ್ಸಿನಲ್ಲೇ ದಾವಣಗೆರೆಗೆ ಬಂದು ಹೋಗುತ್ತಿದ್ದ ಪುನೀತ್‌ಗೆ ದಾವಣಗೆರೆ ಎಂದರೆ ಫೇವರಿಟ್‌. ಚಿತ್ರಗಳ ಪ್ರಚಾರ, ಸಂಭ್ರಮಾಚರಣೆಗೆ ಬಂದ ಸಂದರ್ಭದಲ್ಲಿ ರಾಜ್‌ಕುಮಾರ್‌ ರವರು ದಾವಣಗೆರೆಯ ಬಗ್ಗೆ ಹೇಳುತ್ತಿದ್ದುದ್ದನ್ನು ಸದಾ ಸ್ಮರಿಸುತ್ತಿದ್ದರು.

ಅಂತಹ ದಾವಣಗೆರೆ ಜಿಲ್ಲೆಯಲ್ಲಿ ಪುನೀತ್‌ ರಾಜ್‌ ಕುಮಾರ್‌ ಹಲವಾರು ನೆನಪುಗಳ ಬಿಟ್ಟು ಹೋಗಿದ್ದಾರೆ. ಕನ್ನಡ ಚಿತ್ರರಂಗದಲ್ಲಿ ರಾಜ್‌ ಕುಮಾರ್‌ರವರ ಮನೆಗೆ ಕರೆಯಲಾಗುವ ದೊಡ್ಮನೆ ಹೆಸರನ್ನೇ ಆಧಾರವಾಗಿಟ್ಟು ಕೊಂಡು ತಯಾರಾಗಿದ್ದ “ದೊಡ್ಮನೆ ಹುಡುಗ’ ಚಿತ್ರದ ಚಿತ್ರೀಕರಣ ಸಂತೇಬೆನ್ನೂರಿನ ಐತಿಹಾಸಿಕ ಪುಷ್ಕರಣಿಯಲ್ಲಿ ನಡೆದಿತ್ತು. ಪುನೀತ್‌ ರಾಜ್‌ ಕುಮಾರ್‌ ಮನೋಜ್ಞವಾಗಿ ಅಭಿನಯಿಸಿದ್ದು ಸಂತೇಬೆನ್ನೂರು ಮತ್ತು ಸುತ್ತಮುತ್ತಲಿನ ಜನಮಾನಸದಲ್ಲಿ ಅಚ್ಚಳಿಯದೆ ಉಳಿದಿದೆ.

ಸಂತೇಬೆನ್ನೂರಿನ ಪುಷ್ಕರಣಿಯ ಸೊಬಗಿಗೆ ಮಾರು ಹೋಗಿದ್ದ ಪುನೀತ್‌ ರಾಜ್‌ಕುಮಾರ್‌, ಚಿತ್ರಕರಣದ ದಿನವಿಡೀ ಪುಷ್ಕರಣಿಯ ಕಲಾತ್ಮಕತೆಯನ್ನುಕಣ್ತುಂಬಿಸಿಕೊಂಡಿದ್ದರು. ಹಿರಿಯ ನಟ ಎಸ್‌.ಎಲ್‌. ಸ್ವಾಮಿ, ನಟಿ ರಾಧಿಕಾ ಪಂಡಿತ್‌ ಅವರೊಂದಿಗೆ ಸಾಕಷ್ಟು ಬಾರಿ ಚರ್ಚಿಸಿದ್ದರು. ಈಗ ಅದು ಬರೀ ನೆನಪು ಮಾತ್ರ.

ಶ್ರೀನಗರ ಕಿಟ್ಟಿ, “ಲೂಸ್‌ ಮಾದ’ ಖ್ಯಾತಿಯ ಯೋಗಿ ಅವರೊಂದಿಗೆ ಪುನೀತ್‌ ರಾಜ್‌ಕುಮಾರ್‌ ನಟಿಸಿದ್ದ “ಹುಡುಗರು’ ಚಿತ್ರದ ಚಿತ್ರೀಕರಣ ದಾವಣಗೆರೆ ಜಿಲ್ಲೆಯ ಜಗಳೂರಿನಲ್ಲೇ 2011ರಲ್ಲಿ ನಡೆದಿತ್ತು. ಚಿತ್ರದ ದೃಶ್ಯವೊಂದರಲ್ಲಿ ಯೋಗಿ, ನಾವು ಈಗ ಎಲ್ಲಿಗೆ ಹೋಗುತ್ತಿದ್ದೇವೆ ಎಂದು ಕೇಳಿದಾಗ ಶ್ರೀನಗರ ಕಿಟ್ಟಿ, ಚಿತ್ರದುರ್ಗ ಹತ್ತಿರದ ಜಗಳೂರಿಗೆ ಎಂದು ಹೇಳುತ್ತಾರೆ. ಆ ಮಾತು ಬರೀ ಡೈಲಾಗ್‌ಗೆ ಮಾತ್ರ ಸೀಮಿತವಾಗದೆ ನಿಜವಾಗಿಯೂ ಜಗಳೂರಿನ ಸಾರ್ವಜನಿಕ ಆಸ್ಪತ್ರೆ ರಸ್ತೆ, ಪೊಲೀಸ್‌ ಠಾಣೆ ಮುಂಭಾಗ ಚಿತ್ರೀಕರಣವೂ ನಡೆದಿತ್ತು. ಪುನೀತ್‌ ರಾಜ್‌ಕುಮಾರ್‌ ಅಭಿನಯಿಸಿದ್ದರು.

ಜಗಳೂರಿನಂತಹ ಸಣ್ಣ ಪಟ್ಟಣವನ್ನು ಆಯ್ಕೆ ಮಾಡಿಕೊಂಡು ಚಿತ್ರೀಕರಣ ನಡೆಸಿದ್ದನ್ನು ಜನರು ಮರೆಯುವಂತೆಯೇ ಇಲ್ಲ. ದಾನಶೂರ ಕರ್ಣನಾಗಿದ್ದರು: ಬಲಗೈಯಲ್ಲಿ ಕೊಟ್ಟಿದ್ದು ಎಡಗೈಗೂ ಗೊತ್ತಾಗದಂತೆ ದಾನ, ಧರ್ಮ, ಸಹಾಯ ಮಾಡಬೇಕು ಎನ್ನುವ ಮಾತಿ ನಂತೆ ನಡೆದುಕೊಳ್ಳುತ್ತಿದ್ದ ಪುನೀತ್‌ ರಾಜ್‌ಕುಮಾರ್‌, ಅನೇಕರಿಗೆ ಒಂದಲ್ಲ ಒಂದು ರೀತಿಯಲ್ಲಿ ಸಹಾಯ ಮಾಡಿದ್ದಾರೆ.

ಚನ್ನಗಿರಿ ಪಟ್ಟಣದ ಕಣಸಾಲು  ಬಡಾವಣೆ ನಿವಾಸಿ ಕುಮಾರ್‌ ಮತ್ತು ಮಂಜುಳಾ ದಂಪತಿ ಪುತ್ರಿ ಪ್ರೀತಿಯೂ ಸಹಾಯ ಪಡೆದವರಲ್ಲಿ ಒಬ್ಬರು. ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದ ಪ್ರೀತಿಯ ಶಸ್ತ್ರಚಿಕಿತ್ಸೆಗೆ 12.5 ಲಕ್ಷ ರೂ.ಗಳನ್ನು ಪುನೀತ್‌ ರಾಜ್‌ ಕುಮಾರ್‌ರವರೇ ಭರಿಸಿದ್ದರು. ಮಗಳಿಗೆ ಪುನರ್ಜನ್ಮ ನೀಡಿರುವ ಪುನೀತ್‌ ರಾಜ್‌ ಕುಮಾರ್‌ ಅವರ ಅಕಾಲಿಕ ನಿಧನಕ್ಕೆ ಕುಮಾರ್‌ ಕುಟುಂಬ ಕಂಬನಿ ಮಿಡಿದಿದೆ.

ದೊಡ್ಮನೆ ಹುಡುಗ, ನಟಸಾರ್ವಭೌಮ, ಯುವರತ್ನ ಚಿತ್ರಗಳ ಪ್ರಚಾರ, ಸಂಭ್ರಮಾಚರಣೆಗೆ ದಾವಣಗೆರೆಗೆ ಪುನೀತ್‌ ರಾಜ್‌ಕುಮಾರ್‌ ಬಂದಿದ್ದರು. ಅವರು ಬಹಳ ಇಷ್ಟಪಡುತ್ತಿದ್ದ ರಾಘವೇಂದ್ರ ರಾಜ್‌ಕುಮಾರ್‌ ಪುತ್ರ ವಿನಯ್‌ ರಾಜ್‌ ಕುಮಾರ್‌ ಚಿಕ್ಕಪ್ಪನಿಗೆ ಸಾಥ್‌ ನೀಡಿದ್ದರು. ನಟಸಾರ್ವಭೌಮ ಚಿತ್ರದ 25ನೇ ದಿನದ ಸಂಭ್ರಮಾಚರಣೆಗೆ ದಾವಣಗೆರೆಗೆ ಬಂದಿದ್ದ

ಸಂದರ್ಭದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ್ದ ಪುನೀತ್‌ ರಾಜ್‌ಕುಮಾರ್‌, ಒಂದೊಳ್ಳೆಯ ಕಥೆ ದೊರೆತಲ್ಲಿ ನಾನು, ಶಿವಣ್ಣ, ರಾಘಣ್ಣ ಒಟ್ಟಿಗೆ ಫಿಲ್ಮ್ ಮಾಡುತ್ತೇವೆ. ಕಥೆಗಾಗಿ ಹುಡುಕಾಟ ನಡೆಯುತ್ತಿದೆ ಎಂದಿದ್ದರು. ಆದರೆ ವಿಧಿಯಾಟದ ಮುಂದೆ  ಈ ಕನಸು ನನಸಾಗಲೇ ಇಲ್ಲ.

ಕಳೆದ ಜ.18 ರಂದು ಹರಿಹರ ಪೀಠದಲ್ಲಿ ನಡೆದ ಹರ ಜಾತ್ರಾ ಮಹೋತ್ಸವದಲ್ಲಿ ಸಚಿವ ಮುನಿರತ್ನಂ ಅವರೊಂದಿಗೆ ಬಂದಿದ್ದ ಪುನೀತ್‌ ರಾಜ್‌ಕುಮಾರ್‌ ಈಗ ನೆನಪುಮಾತ್ರ. ದಾವಣಗೆರೆ ಜಿಲ್ಲೆಯ ವಿವಿಧೆಡೆ ಅಚ್ಚಳಿಯದ ನೆನಪುಗಳ ಬಿಟ್ಟು ಬಾರದ ಲೋಕಕ್ಕೆ ತೆರಳಿದ್ದಾರೆ.

-ರಾ. ರವಿಬಾಬು

ಟಾಪ್ ನ್ಯೂಸ್

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!

87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ

Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ

9

Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು

CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್‌ ರನ್ ಆರಂಭಿಸಿದ ಸಿ.ಟಿ.ರವಿ

CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್‌ ರನ್ ಆರಂಭಿಸಿದ ಸಿ.ಟಿ.ರವಿ

Minister Priyank Kharge stays away from Jayadeva Hospital inauguration ceremony

Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

MP-R

Davanagere: ಬಿಜೆಪಿ-ಕಾಂಗ್ರೆಸ್‌ ಹೊಂದಾಣಿಕೆ ಆರೋಪದ ಬಗ್ಗೆ ರೇಣುಕಾಚಾರ್ಯ ಸ್ಪಷ್ಟನೆ

Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ‌ ಕಾಂಗ್ರೆಸ್ ಶಾಸಕ

Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ‌ ಕಾಂಗ್ರೆಸ್ ಶಾಸಕ

7-dvg

Davangere: 2021ರಲ್ಲಿ ಅಪ್ರಾಪ್ತೆಯನ್ನು ಅಪಹರಿಸಿ ಅತ್ಯಾಚಾರವೆಸಗಿದ್ದವನಿಗೆ ಶಿಕ್ಷೆ ಪ್ರಕಟ

byndoor

Davanagere: ಪಾಠ ಮಾಡುತ್ತಿದ್ದಾಗಲೇ ಹೃದಯಾಘಾತ; ಶಿಕ್ಷಕ ಸಾವು

ಸಾರಿಗೆ ಬಸ್ ಡಿಪೋ ಪ್ರಾರಂಭಿಸಬೇಕು ಎಂದು ಒತ್ತಾಯಿಸಿ ದಾವಣಗೆರೆ ತಲುಪಿದ ಪಾದಯಾತ್ರೆ

ಸಾರಿಗೆ ಬಸ್ ಡಿಪೋ ಪ್ರಾರಂಭಿಸಬೇಕು ಎಂದು ಒತ್ತಾಯಿಸಿ ದಾವಣಗೆರೆ ತಲುಪಿದ ಪಾದಯಾತ್ರೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

7

Malpe: ಮನೆ ಮನೆಗಳಲ್ಲಿ ಕ್ಯಾರೋಲ್‌ ಗಾಯನ

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!

87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!

6

Mangaluru: ಕ್ರಿಸ್ಮಸ್‌ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು

5

Health: ಶೀಘ್ರ ಕ್ಯಾನ್ಸರ್‌ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.