ವಾಸವೇ ಇಲ್ಲದವರ ಹೆಸರು ಮತದಾರ ಪಟ್ಟಿಯಲ್ಲೇಕೆ ?
ಸಚಿವ ಆರ್. ಶಂಕರ್, ಎಂಎಲ್ಸಿ ಚಿದಾನಂದ ಗೌಡ ಹೆಸರು ಸೇರಿಸಿದ್ದಕ್ಕೆ ಪಾಲಿಕೆ ಕಾಂಗ್ರೆಸ್ ಸದಸ್ಯರ ವಿರೋಧ
Team Udayavani, Feb 4, 2021, 8:22 PM IST
ದಾವಣಗೆರೆ: ಮಹಾನಗರ ಪಾಲಿಕೆ ಮೇಯರ್, ಉಪಮೇಯರ್ ಚುನಾವಣಾ ಮತದಾರರ ಪಟ್ಟಿಯಲ್ಲಿ ಅಕ್ರಮವಾಗಿ ಸಚಿವ ಆರ್. ಶಂಕರ್, ವಿಧಾನ ಪರಿಷತ್ ಸದಸ್ಯ ಚಿದಾನಂದ ಗೌಡರ ಹೆಸರು ಸೇರಿಸಲಾಗಿದೆ ಎಂದು ಆರೋಪಿಸಿ ಕಾಂಗ್ರೆಸ್ ಸದಸ್ಯರು, ಮುಖಂಡರು ಪಾಲಿಕೆ ಆಯುಕ್ತರ ಕಚೇರಿ ಎದುರು ಬುಧವಾರ ದಿಢೀರ್ ಪ್ರತಿಭಟನೆ ನಡೆಸಿದರು.
ದಾವಣಗೆರೆಯಲ್ಲಿ ವಾಸ ಮಾಡದೇ ಇರುವಂತಹ ಸಚಿವ ಆರ್. ಶಂಕರ್, ವಿಧಾನ ಪರಿಷತ್ ಸದಸ್ಯ ಚಿದಾನಂದ ಗೌಡ ಅವರ ಹೆಸರನ್ನು ಮತದಾರರ ಪಟ್ಟಿಯಲ್ಲಿ ಸೇರಿಸುವ ಮೂಲಕ ಬಿಜೆಪಿ ಮತ್ತೆ ಅಧಿಕಾರ ಪಡೆಯುವ ಹುನ್ನಾರ ನಡೆಸಿದೆ ಎಂದು ಆರೋಪಿಸಿದ ಪ್ರತಿಭಟನಾಕಾರರು, ಬಿಜೆಪಿ ಮುಖಂಡರ ವಿರುದ್ಧ ಧಿಕ್ಕಾರದ ಘೋಷಣೆ ಕೂಗಿದರು. ಸ್ಥಾಯಿ ಸಮಿತಿ ಅಧ್ಯಕ್ಷ ಕೆ. ಪ್ರಸನ್ನಕುಮಾರ್ ಮನವಿಗೂ ಸ್ಪಂದಿಸದೆ ಪ್ರತಿಭಟನೆ ನಡೆಸಿದರು.
ಪ್ರತಿಭಟನೆಗೂ ಮುನ್ನ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವಿಪಕ್ಷ ನಾಯಕ ಎ. ನಾಗರಾಜ್, ಈ ಬಾರಿಯ ಮೇಯರ್, ಉಪ ಮೇಯರ್ ಚುನಾವಣೆಯ ಮತದಾರರ ಪಟ್ಟಿಗಾಗಿ ಜ. 17 ರಂದು ಮನವಿ ಸಲ್ಲಿಸಲಾಗಿತ್ತು ಮತ್ತು ಕಳೆದ ಬಾರಿ ಮತದಾನ ಮಾಡಿದ್ದ 11 ಜನ ವಿಧಾನ ಪರಿಷತ್ ಸದಸ್ಯರ ಹೆಸರು ರದ್ದುಪಡಿಸಬೇಕು ಎಂದು ಕೋರಲಾಗಿತ್ತು. ಸಂಬಂಧಿತ ಬಿಎಲ್ಒಗಳು ಹೆಸರು ರದ್ದತಿಗೆ ಶಿಫಾರಸು ಮಾಡಿದ ನಂತರವೂ ರದ್ದು ಮಾಡಿಲ್ಲ. ಈಗಾಗಲೇ ಪ್ರಾದೇಶಿಕ ಆಯುಕ್ತರ ಕಚೇರಿಗೆ ಮತದಾರರ ಪಟ್ಟಿ ಕಳುಹಿಸಿಕೊಡಲಾಗಿದೆ. ಆ ಪಟ್ಟಿ ನೀಡಲು ಆಯುಕ್ತರು ಒಳಗೊಂಡಂತೆ ಸಂಬಂಧಿತ ಅಧಿಕಾರಿಗಳು ಅಲೆದಾಡಿಸುತ್ತಿದ್ದಾರೆ ಎಂದು ದೂರಿದರು.
ಈ ಬಾರಿ ಸಚಿವ ಆರ್. ಶಂಕರ್, ವಿಧಾನ ಪರಿಷತ್ ಸದಸ್ಯ ಚಿದಾನಂದ ಗೌಡರ ಹೆಸರು ಸೇರಿಸಲಾಗಿದೆ. ಎರಡು ತಿಂಗಳ ಹಿಂದೆ ನಡೆದ ರಾಣೆಬೆನ್ನೂರು ನಗರಸಭೆ ಅಧ್ಯಕ್ಷರ ಚುನಾವಣೆಯಲ್ಲಿ ಮತದಾನ ಮಾಡಿರುವ ಶಂಕರ್ ಅವರ ಹೆಸರು ಸೇರ್ಪಡೆ ಮಾಡಲಾಗಿದೆ.
ಆಲ್ಲದೆ ವಿಧಾನ ಪರಿಷತ್ ಸದಸ್ಯ ಚಿದಾನಂದ ಗೌಡರ ಹೆಸರನ್ನು ಸಹ ಸೇರಿಸಲಾಗಿದೆ. ಕೂಡಲೇ ಹೆಸರು ರದ್ದುಪಡಿಸಬೇಕು. ಇಲ್ಲದಿದ್ದಲ್ಲಿ ತೀವ್ರ ಸ್ವರೂಪದ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಿದರು. ಫೆ. 18 ರಂದು ಮೇಯರ್, ಉಪ ಮೇಯರ್ ಚುನಾವಣೆ ನಡೆಯಲಿದ್ದು, ಸಚಿವ ಆರ್. ಶಂಕರ್ ಹೆಸರನ್ನು ಜಯನಗರದ 149ನೇ ಭಾಗ, ಚಿದಾನಂದ ಗೌಡರ ಹೆಸರನ್ನು ವಿದ್ಯಾನಗರದ 248ರ ಭಾಗದಲ್ಲಿ ಸೇರಿಸಲಾಗಿದೆ. ಕಾಂಗ್ರೆಸ್ ಒಳಗೊಂಡಂತೆ ಎಲ್ಲಾ 11 ಜನ ವಿಧಾನ ಪರಿಷತ್ ಸದಸ್ಯರ ಹೆಸರು ರದ್ದುಪಡಿಸುವಂತೆ ಮನವಿ ಮಾಡಲಾಗಿದೆ. ಎಂದು ತಿಳಿಸಿದರು.
ಕೆಪಿಸಿಸಿ ವಕ್ತಾರ ಡಿ. ಬಸವರಾಜ್ ಮಾತನಾಡಿ,ಕಳೆದ ಬಾರಿ ಮೇಯರ್, ಉಪ ಮೇಯರ್ ಚುನಾವಣೆಯಲ್ಲಿ ದಾವಣಗೆರೆಯಲ್ಲಿ ವಾಸ ಇರದೇ ಇದ್ದಂತಹವರನ್ನು ಮತದಾರರ ಪಟ್ಟಿಯಲ್ಲಿ ಸೇರಿಸಿ ಪ್ರಜಾಪ್ರಭುತ್ವಕ್ಕೆ ಕೊಡಲಿ ಪೆಟ್ಟು ನೀಡಲಾಗಿದೆ. ಈಗ ಸಚಿವ ಆರ್. ಶಂಕರ್, ವಿಧಾನ ಪರಿಷತ್ ಸದಸ್ಯ ಬಿ. ಚಿದಾನಂದಗೌಡರ ಹೆಸರು ಸೇರಿಸಲಾಗಿದೆ. ಮುಂದೆ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಬಂದು ಮತ ಚಲಾಯಿಸಿದರೂ ಅಚ್ಚರಿಪಡಬೇಕಿಲ್ಲ. ಟೂರಿಂಗ್ ಟಾಕೀಸ್ನಂತೆ ಆಗಿದೆ ಎಂದು ಟೀಕಿಸಿದರು. ಆಕ್ರಮವಾಗಿ ಮತದಾರರ ಪಟ್ಟಿಯಲ್ಲಿ ಹೆಸರು ಸೇರಿಸಿರುವವರ ವಿರುದ್ಧ ಸೂಕ್ತ ಕ್ರಮಕ್ಕೆ ಕೋರಿ ಸರ್ಕಾರದ ಮುಖ್ಯ ಕಾರ್ಯದರ್ಶಿಯವರಿಗೆ ಮನವಿ ಮಾಡಲಾಗಿದೆ. ಅಕ್ರಮವಾಗಿ ಮತದಾರರ ಪಟ್ಟಿಯಲ್ಲಿ ಸೇರ್ಪಡೆ ಮಾಡಲಾಗಿರುವ ಎಲ್ಲ ಸದಸ್ಯರ ಹೆಸರು ರದ್ದುಪಡಿಸಬೇಕು ಎಂದು ಒತ್ತಾಯಿಸಿದರು.
ಇದನ್ನೂ ಓದಿ:ಪರಿಷತ್ ಸಭಾಪತಿ ಸ್ಥಾನಕ್ಕೆ ಕೆ. ಪ್ರತಾಪ್ ಚಂದ್ರ ಶೆಟ್ಟಿ ರಾಜೀನಾಮೆ
ಸದಸ್ಯ ಕೆ. ಚಮನ್ ಸಾಬ್ ಮಾತನಾಡಿ, ವಿಧಾನ ಪರಿಷತ್ ಸದಸ್ಯರೇ ಮಹಾನಗರ ಪಾಲಿಕೆಯಲ್ಲಿ ಆಡಳಿತ ನಡೆಸಲಿ. ಜನಪ್ರತಿನಿಧಿಗಳಾದರೂ ಯಾಕೆ ಬೇಕು ಎಂದು ಪ್ರಶ್ನಿಸಿದರು. ಸದಸ್ಯರಾದ ಜೆ.ಎನ್. ಶ್ರೀನಿವಾಸ್, ಜಿ.ಎಸ್. ಮಂಜುನಾಥ್, ನಗರಸಭೆ ಮಾಜಿ ಅಧ್ಯಕ್ಷ ಆರ್.ಎಚ್. ನಾಗಭೂಷಣ್ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shri Krishna Matha; ವಿಶ್ವಮಟ್ಟದಲ್ಲಿ ಭಗವದ್ಗೀತೆ ಜಾಗೃತಿ: ಪುತ್ತಿಗೆ ಶ್ರೀ
Padubidri: ಮೊಬೈಲ್ ಕೊಡಿಸದ ತಾಯಿ; ಸಾಯಲು ಹೆದ್ದಾರಿಗೋಡಿದ ಮಗ; ಲಾರಿ ಡಿಕ್ಕಿ
Ullala: ಸಮುದ್ರ ವಿಹಾರಕ್ಕೆ ಆಗಮಿಸಿದ ವ್ಯಕ್ತಿ ಅಲೆಗಳಿಗೆ ಸಿಲುಕಿ ಮೃತ್ಯು!
ಕೆಪಿಎಸ್‌ಸಿ ಪರೀಕ್ಷೆಯಲ್ಲಿ ಮತ್ತೆ ಎಡವಟ್ಟು: ಒಎಂಆರ್ ಶೀಟ್-ನೋಂದಣಿ ಸಂಖ್ಯೆ ಅದಲು-ಬದಲು
ಹೊಸ ವರ್ಷದ ಶುಭಾಶಯ ನೆಪದಲ್ಲಿ ವಂಚನೆ ಸಾಧ್ಯತೆ “ಎಪಿಕೆ ಫೈಲ್’ ತೆರೆಯದಂತೆ ಪೊಲೀಸರ ಸೂಚನೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.