ಮಳೆ ಎಫೆಕ್ಟ್ : 384 ಸರ್ಕಾರಿ ಕಟ್ಟಡಗಳಿಗೆ ಹಾನಿ

ಶಾಲಾ ಕೊಠಡಿಗಳದ್ದೇ ಸಿಂಹಪಾಲು-ಪ್ರಸ್ತಾವನೆ ಸಲ್ಲಿಸಿದ್ದರೂ ಅನುದಾನ ಬಂದಿಲ್ಲ

Team Udayavani, Jul 22, 2022, 3:44 PM IST

21

ದಾವಣಗೆರೆ: ನಡು ಕರ್ನಾಟಕದ ಕೇಂದ್ರ ಬಿಂದು ದಾವಣಗೆರೆ ಜಿಲ್ಲೆಯಲ್ಲಿ ಮುಂಗಾರು ಹಂಗಾಮಿನ ಅಬ್ಬರದ ಮಳೆಗೆ ಈವರೆಗೆ ಒಟ್ಟು 384 ಸರ್ಕಾರಿ ಕಟ್ಟಡಗಳು ಹಾನಿಗೆ ಒಳಗಾಗಿವೆ.

ಕಳೆದ ಕೆಲವೇ ದಿನಗಳ ಹಿಂದೆ ಜಿಲ್ಲೆಯಲ್ಲಿ ಮಳೆಯ ಸುಳಿವೇ ಇರಲಿಲ್ಲ. ಕೆಲ ದಿನಗಳಿಂದ ಸುರಿಯುತ್ತಿರುವ ಮಳೆಗೆ ಕಟ್ಟಡಗಳು, ಕೆರೆ, ರಸ್ತೆಗಳು ಎಲ್ಲವೂ ಹಾನಿಗೀಡಾಗಿವೆ. ಜಿಲ್ಲೆಯ ಎಲ್ಲ ತಾಲೂಕು ಕೇಂದ್ರಗಳಲ್ಲಿರುವ ಮಿನಿ ವಿಧಾನಸೌಧಗಳಲ್ಲಿ ಬಹುತೇಕ ಸರ್ಕಾರಿ ಇಲಾಖಾ ಕಚೇರಿಗಳು ಕಾರ್ಯ ನಿರ್ವಹಿಸುತ್ತಿವೆ. ಸಮಾಜಕಲ್ಯಾಣ, ಹಿಂದುಳಿದ ವರ್ಗಗಳ ಇಲಾಖೆಗಳಡಿಯಲ್ಲಿ ನಡೆಯುವ ಹಾಸ್ಟೆಲ್‌ಗ‌ಳ ಪೈಕಿ ಬಹುತೇಕ ಸ್ವಂತ ಕಟ್ಟಡ ಹೊಂದಿವೆ. ಹಾಗಾಗಿ ಮಳೆಯಿಂದ ತೊಂದರೆಗೀಡಾದ ಪ್ರಕರಣ ಅಷ್ಟಾಗಿ ಕಂಡುಬಂದಿಲ್ಲ.

ಭಾರೀ ಮಳೆಯಿಂದಾಗಿ ದಾವಣಗೆರೆ ತಾಲೂಕಿನಲ್ಲಿ 95, ಹರಿಹರದಲ್ಲಿ 40, ಹೊನ್ನಾಳಿಯಲ್ಲಿ 89, ಚನ್ನಗಿರಿಯಲ್ಲಿ 72 ಹಾಗೂ ಜಗಳೂರಿನಲ್ಲಿ 50 ಸೇರಿದಂತೆ 346 ಶಾಲೆ, ಹರಿಹರದಲ್ಲಿ 5, ಜಗಳೂರಿನಲ್ಲಿ ಮೂರು ಪ್ರಾಥಮಿಕ ಆರೋಗ್ಯ ಕೇಂದ್ರ, ದಾವಣಗೆರೆಯಲ್ಲಿ 7, ಚನ್ನಗಿರಿಯಲ್ಲಿ 4, ಜಗಳೂರಿನಲ್ಲಿ 19 ಇತರೆ ಸರ್ಕಾರಿ ಕಟ್ಟಡಗಳು ಹಾನಿಗೊಳಗಾಗಿವೆ. ಒಟ್ಟಾರೆ 384 ಸರ್ಕಾರಿ ಕಟ್ಟಡಗಳು ಹಾನಿಗೊಳಗಾಗಿವೆ.

ಶಾಲಾ ಕಟ್ಟಡಗಳೇ ಜಾಸ್ತಿ: ಜಿಲ್ಲೆಯಲ್ಲಿ ವ್ಯಾಪಕವಾಗಿ ಆಗುತ್ತಿರುವ ಮಳೆಯಿಂದ ಹಾನಿಗೆ ಒಳಗಾಗಿರುವ ಮತ್ತು ಸಣ್ಣ, ದೊಡ್ಡ ದುರಸ್ತಿಗೆ ಬಂದಿರುವ ಸರ್ಕಾರಿ ಕಟ್ಟಡಗಳಲ್ಲಿ ಶಾಲಾ ಕೊಠಡಿಗಳದ್ದೇ ಸಿಂಹಪಾಲು. 346 ಶಾಲೆಗಳ ದುರಸ್ತಿ ಕಾರ್ಯ ಆಗಬೇಕಿದೆ. ಚನ್ನಗಿರಿ ತಾಲೂಕಿನಲ್ಲಿ ಕೆಲವು ಕಡೆ ಕಟ್ಟಡದ ಕೊರತೆಯಿಂದಾಗಿ ಬಯಲೇ ಶಾಲೆಯಂತಾಗಿದೆ. ಜಿಲ್ಲೆಯಲ್ಲಿ ಬಿಟ್ಟು ಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಇನ್ನೂ ಹೆಚ್ಚಿನ ಪ್ರಮಾಣದಲ್ಲಿ ಹಾನಿ ಸಂಭವಿಸುವ ಸಾಧ್ಯತೆಯನ್ನ ಅಲ್ಲಗೆಳೆಯುವಂತಿಲ್ಲ. ಮುಖ್ಯವಾಗಿ ಗ್ರಾಮೀಣ ಭಾಗದಲ್ಲಿ ಅದರಲ್ಲೂ “ಅರೆ ಮಲೆನಾಡು’ ಖ್ಯಾತಿ ಮತ್ತು ಹಿಂದುಳಿದ ಪ್ರದೇಶದ ಜಗಳೂರು ತಾಲೂಕಿನಲ್ಲಿ ಹೆಚ್ಚಾಗಬಹುದು ಎಂಬ ನಿರೀಕ್ಷೆಯೂ ಇದೆ.

ಮಳೆಗೂ ಮುನ್ನವೇ ಚನ್ನಗಿರಿ ತಾಲೂಕಿನಲ್ಲಿ 86 ಕೊಠಡಿಗಳು, ದಾವಣಗೆರೆ ಉತ್ತರದಲ್ಲಿ 43, ದಾವಣಗೆರೆ ದಕ್ಷಿಣದಲ್ಲಿ 93, ಹರಿಹರದಲ್ಲಿ 40, ಹೊನ್ನಾಳಿ ಮತ್ತು ನ್ಯಾಮತಿಯಲ್ಲಿ 117, ಜಗಳೂರಿನಲ್ಲಿ 31 ಕೊಠಡಿಗಳು ದುರಸ್ತಿಗೆ ಬಂದಿದ್ದವು. ಮಳೆ ಗಾಯದ ಮೇಲೆ ಉಪ್ಪು ಸುರಿದಂತೆ ಇನ್ನಷ್ಟು ಹಾನಿಗೆ ಕಾರಣವಾಗುತ್ತಿದೆ. ಚನ್ನಗಿರಿ ತಾಲೂಕಿನಲ್ಲಿ 86 ಕೊಠಡಿಗಳ ದುರಸ್ತಿಗೆ 118.5ಲಕ್ಷ, ದಾವಣಗೆರೆ ಉತ್ತರದಲ್ಲಿ 43 ಕೊಠಡಿಗಳಿಗೆ 52 ಲಕ್ಷ, ದಾವಣಗೆರೆ ದಕ್ಷಿಣದಲ್ಲಿ 93 ಕೊಠಡಿಗಳಿಗೆ 177 ಲಕ್ಷ, ಹರಿಹರದಲ್ಲಿ 40 ಕೊಠಡಿಗಳಿಗೆ 96.25 ಲಕ್ಷ, ಹೊನ್ನಾಳಿ ಮತ್ತು ನ್ಯಾಮತಿಯಲ್ಲಿ 117 ಕೊಠಡಿಗಳಿಗೆ 232 ಲಕ್ಷ, ಜಗಳೂರಿನಲ್ಲಿ 31 ಕೊಠಡಿಗಳಿಗೆ 75.5 ಲಕ್ಷ ಒಟ್ಟು 751.25 ಲಕ್ಷ ಅನುದಾನಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಆದರೆ ಈವರೆಗೆ ಅನುದಾನ ಬಂದಿಲ್ಲ. ಹಾಗಾಗಿ ಶಾಲಾ ಕೊಠಡಿಗಳು ದುರಸ್ತಿ ಭಾಗ್ಯದಿಂದ ದೂರ ಉಳಿದಿವೆ. ಮಕ್ಕಳು ಇರುವ ಸೌಲಭ್ಯದಲ್ಲೇ ಪಾಠ ಕಲಿಯುವ ಅನಿವಾರ್ಯತೆ ಇದೆ.

ರಾಜ್ಯ ಸರ್ಕಾರ ಆದಷ್ಟು ಬೇಗ ಅನುದಾನ ಒದಗಿಸಿದಲ್ಲಿ ಸರ್ಕಾರಿ ಕಟ್ಟಡಗಳು ಮುಖ್ಯವಾಗಿ ಶಾಲೆಗಳು ದುರಸ್ತಿ ಆಗಲಿವೆ. ಮಕ್ಕಳು ನಿರ್ಭೀತಿಯಿಂದ ಕಲಿಯುವ ವಾತಾವರಣವೂ ನಿರ್ಮಾಣ ಆಗಲಿದೆ. ಆದಷ್ಟು ಬೇಗ ಅನುದಾನ ಬಿಡುಗಡೆ ಮಾಡಬೇಕು ಎಂಬುದು ಸಾರ್ವಜನಿಕರ ಒತ್ತಾಯ. ಮಳೆ ಮತ್ತು ಮತ್ತಿತರ ಕಾರಣಗಳಿಂದ ಶಾಲಾ ಕೊಠಡಿಗಳು ದುರಸ್ತಿಗೆ ಬಂದಿವೆ. ದುರಸ್ತಿ ಕಾರ್ಯಕ್ಕೆ ಅನುದಾನ ಕೋರಿ ಪ್ರಸ್ತಾವನೆ ಸಲ್ಲಿಸಲಾಗಿದ್ದು ಅನುದಾನ ನಿರೀಕ್ಷೆಯಲ್ಲಿದ್ದೇವೆ. ಅನುದಾನ ದೊರೆತ ನಂತರ ದುರಸ್ತಿ ಕಾರ್ಯ ಪ್ರಾರಂಭವಾಗಲಿದೆ. ∙ ಜಿ.ಆರ್‌. ತಿಪ್ಪೇಶಪ್ಪ, ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ

-ರಾ. ರವಿಬಾಬು

ಟಾಪ್ ನ್ಯೂಸ್

Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು

Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು

Allu Arjun: ನಟ ಅಲ್ಲು ಅರ್ಜುನ್‌ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ

Allu Arjun: ನಟ ಅಲ್ಲು ಅರ್ಜುನ್‌ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!

87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ

Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ

9

Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

MP-R

Davanagere: ಬಿಜೆಪಿ-ಕಾಂಗ್ರೆಸ್‌ ಹೊಂದಾಣಿಕೆ ಆರೋಪದ ಬಗ್ಗೆ ರೇಣುಕಾಚಾರ್ಯ ಸ್ಪಷ್ಟನೆ

Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ‌ ಕಾಂಗ್ರೆಸ್ ಶಾಸಕ

Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ‌ ಕಾಂಗ್ರೆಸ್ ಶಾಸಕ

7-dvg

Davangere: 2021ರಲ್ಲಿ ಅಪ್ರಾಪ್ತೆಯನ್ನು ಅಪಹರಿಸಿ ಅತ್ಯಾಚಾರವೆಸಗಿದ್ದವನಿಗೆ ಶಿಕ್ಷೆ ಪ್ರಕಟ

byndoor

Davanagere: ಪಾಠ ಮಾಡುತ್ತಿದ್ದಾಗಲೇ ಹೃದಯಾಘಾತ; ಶಿಕ್ಷಕ ಸಾವು

ಸಾರಿಗೆ ಬಸ್ ಡಿಪೋ ಪ್ರಾರಂಭಿಸಬೇಕು ಎಂದು ಒತ್ತಾಯಿಸಿ ದಾವಣಗೆರೆ ತಲುಪಿದ ಪಾದಯಾತ್ರೆ

ಸಾರಿಗೆ ಬಸ್ ಡಿಪೋ ಪ್ರಾರಂಭಿಸಬೇಕು ಎಂದು ಒತ್ತಾಯಿಸಿ ದಾವಣಗೆರೆ ತಲುಪಿದ ಪಾದಯಾತ್ರೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು

Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು

Allu Arjun: ನಟ ಅಲ್ಲು ಅರ್ಜುನ್‌ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ

Allu Arjun: ನಟ ಅಲ್ಲು ಅರ್ಜುನ್‌ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ

7

Malpe: ಮನೆ ಮನೆಗಳಲ್ಲಿ ಕ್ಯಾರೋಲ್‌ ಗಾಯನ

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!

87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.