ಕನ್ಹಯ್ಯ ಹತ್ಯೆಗೆ ರಾಜಸ್ಥಾನ ಸರ್ಕಾರವೇ ಕಾರಣ; ರೇಣುಕಾಚಾರ್ಯ
ಭಾರತ್ ಮಾತಾಕೀ ಜೈ ಎಂದು ಹೇಳುವವರಿಗೆ ಮಾತ್ರ ಈ ನೆಲದಲ್ಲಿ ವಾಸಿಸಲು ಹಕ್ಕಿದೆ
Team Udayavani, Jul 5, 2022, 5:34 PM IST
ಹೊನ್ನಾಳಿ: ರಾಜಸ್ಥಾನದ ಉದಯಪುರದ ಟೈಲರ್ ಕನ್ಹಯ್ಯ ಲಾಲ್ ಹತ್ಯೆಗೈದು ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ ಪ್ರಾಣ ಬೆದರಿಕೆ ಹಾಕಿದವರನ್ನು ಬಂಧಿಸಿದರೆ ಸಾಲದು, ಅವರನ್ನು ಗುಂಡಿಕ್ಕಿ ಕೊಲ್ಲಬೇಕು ಎಂದು ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ. ರೇಣುಕಾಚಾರ್ಯ ಹೇಳಿದರು.
ಕನ್ಹಯ್ಯ ಲಾಲ್ ಹತ್ಯೆ ಖಂಡಿಸಿ ತಾಲೂಕು ಬಿಜೆಪಿ ವತಿಯಿಂದ ಸೋಮವಾರ ಪಟ್ಟಣದಲ್ಲಿ ಹಮ್ಮಿಕೊಂಡಿದ್ದ ಪ್ರತಿಭಟನಾ ಸಭೆಯಲ್ಲಿ ಅವರು ಮಾತನಾಡಿದರು. ಕನ್ಹಯ್ಯ ಲಾಲ್ ಜೀವ ಬೆದರಿಕೆ ಇದೆ ಎಂದು ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದ್ದರೂ ಅವರು ಅದನ್ನು ಗಂಭೀರವಾಗಿ ಪರಿಗಣಿಸಲಿಲ್ಲ. ಹಾಗಾಗಿ ಕನ್ಹಯ್ಯ ಲಾಲ್ ಹತ್ಯೆಗೆ ಕಾಂಗ್ರೆಸ್ ಸರ್ಕಾರವೇ ನೇರ ಕಾರಣ. ಕೂಡಲೇ ರಾಷ್ಟ್ರಪತಿಗಳು ರಾಜಸ್ಥಾನದ ಕಾಂಗ್ರೆಸ್ ಸರ್ಕಾರವನ್ನು ವಜಾಗೊಳಿಸಿ ರಾಷ್ಟ್ರಪತಿ ಆಡಳಿತ ಜಾರಿ ಮಾಡಬೇಕೆಂದು ಆಗ್ರಹಿಸಿದರು.
ರಾಹುಲ್ ಗಾಂಧಿ ಯವರನ್ನು ಇಡಿ ಕಚೇರಿಗೆ ಕರೆದ ತಕ್ಷಣ ಪ್ರತಿಭಟನೆ ಮಾಡುವ ಕಾಂಗ್ರೆಸ್‌ನವರು, ಕನ್ಹಯ್ಯ ಲಾಲ್ ಹತ್ಯೆ ಮಾಡಿದಾಗ ಏಕೆ ಪ್ರತಿಭಟನೆ ಮಾಡಲಿಲ್ಲ ಎಂದು ಪ್ರಶ್ನಿಸಿದ ರೇಣುಕಾಚಾರ್ಯ, ಪ್ರತಿಭಟನೆ ಮಾಡದ ನಿಮಗೆ ನಾಚಿಕೆಯಾಗಬೇಕು ಎಂದು ಕುಟುಕಿದರು.
ನನಗೆ ಎಷ್ಟೇ ಏಕವಚನದಲ್ಲಿ ಬೈಯಲಿ, ನಾನು ಅದನ್ನು ಕ್ಷೇತ್ರದ ಜನರ ಪಾದ ಕಮಲಗಳಿಗೆ ಅರ್ಪಿಸುತ್ತೇನೆ. ಈಗಾಗಲೇ ಅವಳಿ ತಾಲೂಕಿನ ಜನರು ಮೂರು ಬಾರಿ ನನ್ನನ್ನು ಗೆಲ್ಲಿಸಿ ಉತ್ತರ ನೀಡಿದ್ದಾರೆ. 2023ರ ಚುನಾವಣೆಯಲ್ಲೂ ಮತ್ತೆ ಉತ್ತರ ನೀಡುತ್ತಾರೆ ಎಂದರು.
ಶಾಸಕರ ನಿವಾಸದಿಂದ ಸಂಗೊಳ್ಳಿ ರಾಯಣ್ಣ ವೃತ್ತದವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದ ಬಿಜೆಪಿಯ ನೂರಾರು ಕಾರ್ಯಕರ್ತರು ಸಂಗೊಳ್ಳಿ ರಾಯಣ್ಣ ಪ್ರತಿಮೆಗೆ ಮಾಲಾರ್ಪಣೆ ಮಾಡಿದರು. ನಂತರ ತಾಲೂಕು ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿ ತಹಶೀಲ್ದಾರ್ ರಶ್ಮಿ ಅವರಿಗೆ ಮನವಿ ಸಲ್ಲಿಸಿದರು.
ಪ್ರತಿಭಟನೆಯಲ್ಲಿ ಬಿಜೆಪಿ ತಾಲೂಕು ಅಧ್ಯಕ್ಷ ಜೆ.ಕೆ. ಸುರೇಶ್, ಪುರಸಭೆ ಅಧ್ಯಕ್ಷ ಟಿ.ಎಚ್. ರಂಗನಾಥ್, ಬಗರ್‌ಹುಕುಂ ಸಾಗುವಳಿ ಸಮಿತಿಯ ತಾಲೂಕು ಅಧ್ಯಕ್ಷ ಕೆ.ಇ. ನಾಗರಾಜ್, ಜಿಪಂ ಮಾಜಿ ಉಪಾಧ್ಯಕ್ಷ ಸುರೇಂದ್ರ ನಾಯ್ಕ ಸೇರಿದಂತೆ ಪುರಸಭೆ ಸದಸ್ಯರು, ಪಕ್ಷದ ವಿವಿಧ ಪದಾಧಿಕಾರಿಗಳು, ತಾಲೂಕು ಪಂಚಾಯಿತಿ ಮಾಜಿ ಅಧ್ಯಕ್ಷರು, ಪಕ್ಷದ ಮುಖಂಡರು, ಕಾರ್ಯಕರ್ತರು ಭಾಗವಹಿಸಿದ್ದರು.
ನಾವೆಲ್ಲಾ ಭಾರತೀಯರು, ಭಾರತ್ ಮಾತಾಕೀ ಜೈ ಎಂದು ಹೇಳುವವರಿಗೆ ಮಾತ್ರ ಈ ನೆಲದಲ್ಲಿ ವಾಸಿಸಲು ಹಕ್ಕಿದೆ. ಪಾಕಿಸ್ತಾನ ಜಿಂದಾಬಾದ್ ಎನ್ನುವವರಿಗೆ ಇಲ್ಲಿರಲು ನೈತಿಕತೆ ಇಲ್ಲ. ಕಾಂಗ್ರೆಸ್‌ನವರು ಓಟಿಗಾಗಿ ಅಲ್ಪಸಂಖ್ಯಾತರನ್ನು ಓಲೈಕೆ ಮಾಡುತ್ತಾ ಮಾಡುತ್ತಾ ಬಂದಿದ್ದಾರೆ. ನಾವೆಂದಿಗೂ ಓಟ್ ಬ್ಯಾಂಕ್ ರಾಜಕಾರಣ ಮಾಡುವುದಿಲ್ಲ.
ಎಂ.ಪಿ. ರೇಣುಕಾಚಾರ್ಯ,
ಸಿಎಂ ರಾಜಕೀಯ ಕಾರ್ಯದರ್ಶಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davangere: 2021ರಲ್ಲಿ ಅಪ್ರಾಪ್ತೆಯನ್ನು ಅಪಹರಿಸಿ ಅತ್ಯಾಚಾರವೆಸಗಿದ್ದವನಿಗೆ ಶಿಕ್ಷೆ ಪ್ರಕಟ
Davanagere: ಪಾಠ ಮಾಡುತ್ತಿದ್ದಾಗಲೇ ಹೃದಯಾಘಾತ; ಶಿಕ್ಷಕ ಸಾವು
ಸಾರಿಗೆ ಬಸ್ ಡಿಪೋ ಪ್ರಾರಂಭಿಸಬೇಕು ಎಂದು ಒತ್ತಾಯಿಸಿ ದಾವಣಗೆರೆ ತಲುಪಿದ ಪಾದಯಾತ್ರೆ
BJP; ಕುಮಾರ್ ಬಂಗಾರಪ್ಪ ರಾಜ್ಯಾಧ್ಯಕ್ಷನಾಗುವುದು ತಿರುಕನ ಕನಸು: ರೇಣುಕಾಚಾರ್ಯ
Davanagere: ಮುಂಬರುವ ಫೆಬ್ರವರಿಯಲ್ಲಿ ಬಿಎಸ್‌ವೈ ಜನ್ಮದಿನ ಅದ್ಧೂರಿ ಆಚರಣೆ: ರೇಣುಕಾಚಾರ್ಯ
MUST WATCH
ಹೊಸ ಸೇರ್ಪಡೆ
Thirthahalli: ನದಿಗೆ ಹಾರಿ ಕಾಲೇಜು ವಿದ್ಯಾರ್ಥಿ ಮೃತ್ಯು
Aranthodu: ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ; ಪ್ರಯಾಣಿಕರಿಗೆ ಗಾಯ
Umar Khalid: ದೆಹಲಿ ಗಲಭೆ ಪ್ರಕರಣದ ಆರೋಪಿ ಉಮರ್ ಖಾಲಿದ್‌ಗೆ 7 ದಿನಗಳ ಮಧ್ಯಂತರ ಜಾಮೀನು
Actress: 31ರ ನಟಿಗೆ 71 ವರ್ಷದ ಹಿರಿಯ ನಟನ ಜತೆ ಪ್ರೀತಿ..? ಫೋಟೋ ವೈರಲ್
ಹಾವೇರಿ: 8 ಕೋಟಿ ರೂ. ವೆಚ್ಚದ ಹೈಟೆಕ್ ರಂಗಮಂದಿರ ನಿರುಪಯುಕ್ತ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.