ಪಾಲಿಕೆಯಲ್ಲಿ ರಾಜ್ಯೋತ್ಸವ ಸಂಭ್ರಮ


Team Udayavani, Nov 23, 2018, 1:22 PM IST

dvg-2.jpg

ದಾವಣಗೆರೆ: ಮಹಾನಗರ ಪಾಲಿಕೆ, ಕನ್ನಡ ಪರ ಸಂಘ-ಸಂಸ್ಥೆಗಳು ಮತ್ತು ಪತ್ರಕರ್ತರ ಸಂಯುಕ್ತಾಶ್ರಯದಲ್ಲಿ 63ನೇ ಕನ್ನಡ ರಾಜ್ಯೋತ್ಸವ ಸಮಾರಂಭ ನ. 23ರಿಂದ 25ರ ವರೆಗೆ ಮಹಾನಗರ ಪಾಲಿಕೆ ಆವರಣದ ಶ್ರೀಮತಿ ರಾಧಮ್ಮ ಚನ್ನಗಿರಿ ರಂಗಪ್ಪ ಸ್ಮಾರಕ ರಂಗಮಂದಿರದಲ್ಲಿ ಏರ್ಪಡಿಸಲಾಗಿದೆ ಎಂದು ಮೇಯರ್‌ ಶೋಭಾ ಪಲ್ಲಾಗಟ್ಟೆ ತಿಳಿಸಿದ್ದಾರೆ.

ಮೂರು ದಿನಗಳ ರಾಜ್ಯೋತ್ಸವ ಸಮಾರಂಭದಲ್ಲಿ ವಿವಿಧ ಕ್ಷೇತ್ರದ ಸಾಧಕರಿಗೆ ಸನ್ಮಾನ, ಉಪನ್ಯಾಸ, ಕವಿಗೋಷ್ಠಿ, ಸಾಂಸ್ಕೃತಿಕ, ಮನೋರಂಜನೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಗುರುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಶುಕ್ರವಾರ ಬೆಳಗ್ಗೆ 7.30ಕ್ಕೆ ಕನ್ನಡದ ಧ್ವಜಾರೋಹಣ ನೆರವೇರಲಿದೆ. ಸಂಜೆ 5.30ಕ್ಕೆ ಪ್ರಥಮ ದಿನ ಕಾರ್ಯಕ್ರಮಕ್ಕೆ
ಜಿಲ್ಲಾ ಉಸ್ತುವಾರಿ ಸಚಿವ ಎಸ್‌. ಆರ್‌. ಶ್ರೀನಿವಾಸ್‌(ವಾಸು) ಚಾಲನೆ ನೀಡುವರು. ಶಾಸಕ ಶಾಮನೂರು ಶಿವಶಂಕರಪ್ಪ ಭುವನೇಶ್ವರಿಗೆ ಪುಷ್ಪಾರ್ಚನೆ ಮಾಡುವರು. ಖ್ಯಾತ ಸಾಹಿತಿ ಬಿ.ಆರ್‌. ಲಕ್ಷ್ಮಣರಾವ್‌ ವಿಶೇಷ ಉಪನ್ಯಾಸ ನೀಡುವರು. ಉಪ ಮೇಯರ್‌ ಕೆ. ಚಮನ್‌ಸಾಬ್‌, ಮಾಜಿ ಶಾಸಕ ಕೆ. ಮಲ್ಲಪ್ಪ, ವರದಿಗಾರರ ಕೂಟದ ಅಧ್ಯಕ್ಷ ಬಿ. ಎನ್‌. ಮಲ್ಲೇಶ್‌, ನಾಗೇಂದ್ರ ಬಂಡೀಕರ್‌ ಇತರರು ಭಾಗವಹಿಸುವರು ಎಂದು ತಿಳಿಸಿದರು.

ಶನಿವಾರ ಬೆಳಗ್ಗೆ 11ಕ್ಕೆ ರೋಟರಿ ಬಾಲಭವನದಲ್ಲಿ ಕವಿಗೋಷ್ಠಿ ನಡೆಯಲಿದೆ. ಅಂದು ಸಂಜೆ 5.30ಕ್ಕೆ ಎರಡನೇ ದಿನದ ಕಾರ್ಯಕ್ರಮಕ್ಕೆ ದಾವಣಗೆರೆ ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕ ಎಸ್‌.ಎ. ರವೀಂದ್ರನಾಥ್‌ ಚಾಲನೆ ನೀಡಲಿದ್ದು, ಸಂಸದ ಜಿ.ಎಂ. ಸಿದ್ದೇಶ್ವರ್‌, ಉಪ ಮೇಯರ್‌ ಕೆ. ಚಮನ್‌ಸಾಬ್‌, ಮಹಾನಗರ ಪಾಲಿಕೆ ಮಾಜಿ ಸದಸ್ಯಕೆ.ಜಿ. ಶಿವಕುಮಾರ್‌, ಪತ್ರಕರ್ತರಾದ ಸದಾನಂದ ಹೆಗಡೆ, ಎನ್‌. ವಿಶಾಖ, ಕೆ.ಏಕಾಂತಪ್ಪ, ಜಿಲ್ಲಾ ರಕ್ಷಣಾಧಿಕಾರಿ ಆರ್‌. ಚೇತನ್‌ ಇತರರು ಭಾಗವಹಿಸವರು. ಸಾಹಿತಿ ಲೋಕೇಶ್‌ ಅಗಸನಕಟ್ಟೆ ವಿಶೇಷ ಉಪನ್ಯಾಸ ನೀಡುವರು ಎಂದು ತಿಳಿಸಿದರು.

ಭಾನುವಾರ ಸಂಜೆ 5.30ಕ್ಕೆ ಮೂರನೇ ದಿನದ ಕಾರ್ಯಕ್ರಮದಲ್ಲಿ ಶಾಸಕ ಶಾಮನೂರು ಶಿವಶಂಕರಪ್ಪ,ಮಾಜಿ ಸಚಿವ ಎಸ್‌.ಎಸ್‌. ಮಲ್ಲಿಕಾರ್ಜುನ್‌, ವಿಧಾನ ಪರಿಷತ್‌ ಸದಸ್ಯರಾದ ಕೆ.ಸಿ. ಕೊಂಡಯ್ಯ, ಕೆ. ಅಬ್ದುಲ್‌ ಜಬ್ಟಾರ್‌, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‌ ಅಧ್ಯಕ್ಷ ಡಾ| ಎಚ್‌.ಎಸ್‌. ಮಂಜುನಾಥ್‌ ಕುರ್ಕಿ, ನಿವೃತ್ತ ಪ್ರಾಚಾರ್ಯ ಡಾ| ಎಂ.ಜಿ. ಈಶ್ವರಪ್ಪ, ಜಿಲ್ಲಾ ಪಂಚಾಯತ್‌ ಮುಖ್ಯ ಕಾರ್ಯ ನಿರ್ವಹಕಾಧಿಕಾರಿ ಎಸ್‌. ಅಶ್ವತಿ ಇತರರು ಭಾಗವಹಿಸುವರು. ಮಾಜಿ ಸಚಿವೆ ಉಮಾಶ್ರೀ ವಿಶೇಷ ಉಪನ್ಯಾಸ ನೀಡುವರು ಎಂದು ತಿಳಿಸಿದರು.
 
ನಗರಪಾಲಿಕೆ ಸದಸ್ಯ ದಿನೇಶ್‌ ಕೆ. ಶೆಟ್ಟಿ ಮಾತನಾಡಿ, ಸದಾ ಕನ್ನಡದ ಧ್ವಜ ಹಾರಿಸುವ ಖ್ಯಾತಿಗೆ ಪಾತ್ರವಾಗಿರುವ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ದಿನಂಪ್ರತಿ 60 ಎಂಎಲ್‌ಡಿ ನೀರು ಸರಬರಾಜು, 140 ಟನ್‌ಗೂ ಅಧಿಕ ಕಸ ವಿಲೇವಾರಿ ಜೊತೆಗೆ ದೈನಂದಿನ ಕೆಲಸ-ಕಾರ್ಯಗಳ ಒತ್ತಡದ ನಡುವೆಯೂ ಕನ್ನಡ ರಾಜ್ಯೋತ್ಸವವನ್ನ ಅದ್ಧೂರಿಯಾಗಿ ಆಚರಿಸಿಕೊಂಡು ಬರುತ್ತಿದೆ. ರಾಜ್ಯೋತ್ಸವದ ಹಿನ್ನೆಲೆಯಲ್ಲಿ ನಾಲ್ಕು ಕಡೆ ಪ್ರವೇಶ ದ್ವಾರಗಳಿಗೆ ಡಾ| ರಾಜ್‌ಕುಮಾರ್‌, ಡಾ| ವಿಷ್ಣುವರ್ಧನ್‌, ಶಂಕರ್‌ನಾಗ್‌, ಚಿಂದೋಡಿ ಲೀಲಾ ಹೆಸರಿಡಲಾಗಿದೆ.

ಪ್ರಥಮ ದಿನ ವೇದಿಕೆಗೆ ಮಾಜಿ ಶಾಸಕ ಪಂಪಾಪತಿ, ಎರಡನೇ ದಿನ ನಗರಸಭೆ ಮಾಜಿ ಅಧ್ಯಕ್ಷ ಜೆ. ಗಣೇಶರಾವ್‌, ಮೂರನೇ ದಿನ ಜಂಬಗಿ ಶರಣಪ್ಪ ಹೆಸರಿಡಲಾಗುವುದು ಎಂದು ತಿಳಿಸಿದರು. ನಗರಪಾಲಿಕೆ ಸ್ಥಾಯಿ ಸಮಿತಿ ಅಧ್ಯಕ್ಷ ಎಚ್‌. ತಿಪ್ಪಣ್ಣ, ನಗರಪಾಲಿಕೆ ಮಾಜಿ ಸದಸ್ಯ ಕೆ.ಜಿ. ಶಿವಕುಮಾರ್‌, ಕೆ.ಜಿ. ಯಲ್ಲಪ್ಪ, ಎ. ನಾಗರಾಜ್‌ ಇತರರು ಸುದ್ದಿಗೋಷ್ಠಿಯಲ್ಲಿದ್ದರು.

ಪ್ರಶಸ್ತಿ ಆಯ್ಕೆ ಪಟ್ಟಿಗೆ ಆಕ್ಷೇಪ
ದಾವಣಗೆರೆ: 63ನೇ ಕನ್ನಡ ರಾಜ್ಯೋತ್ಸವ ಅಂಗವಾಗಿ ಈ ಬಾರಿ ಮಹಾನಗರಪಾಲಿಕೆಯಿಂದ ವಿವಿಧ ಕ್ಷೇತ್ರಗಳ ಸಾಧಕರಿಗೆ ಕೊಡಮಾಡುವ ಪ್ರಶಸ್ತಿ ಆಯ್ಕೆ ಪ್ರಕ್ರಿಯೆ ಅವೈಜ್ಞಾನಿಕವಾಗಿದೆ ಎಂದು ಅಖಂಡ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಪ್ರತಿಭಟಿಸಿದರು.

ಗುರುವಾರ, ಮಹಾನಗರಪಾಲಿಕೆ ಮುಂಭಾಗ ಪ್ರತಿಭಟಿಸಿದ ಕಾರ್ಯಕತರು, ಪ್ರತಿವರ್ಷ ಮಹಾನಗರ ಪಾಲಿಕೆಯಿಂದ ವಿವಿಧ ಕ್ಷೇತ್ರಗಳ ಸಾಧಕರನ್ನ ಸನ್ಮಾನಿಸುವುದು ವಾಡಿಕೆ. ಆದರೆ ಈ ಸಾಧಕರನ್ನು ಆಯ್ಕೆ ಮಾಡುವ ಸಮಿತಿಯು  ಜೇಷ್ಠತೆ ಮತ್ತು ಶ್ರೇಷ್ಠತೆ ಪರಿಗಣಿಸಿ ಆಯ್ಕೆ ಮಾಡುವ ಬದಲು ತಮ್ಮಗಿಷ್ಟದಂತೆ ಈ ಬಾರಿ ಆಯ್ಕೆ ಮಾಡಿದೆ. ಹಾಗಾಗಿ ಅರ್ಹರು ಪ್ರಶಸ್ತಿಗೆ ಭಾಜನರಾಗಲು ವಂಚಿತರಾಗುವಂತಾಗಿದೆ ಎಂದು ಆರೋಪಿಸಿದರು. 

ಪ್ರಶಸ್ತಿಗೆ ತನ್ನದೇ ಆದ ಶ್ರೇಷ್ಠತೆ ಇರುವುದರಿಂದ ಕೂಡಲೇ ಈ ಅವೈಜ್ಞಾನಿಕ ಆಯ್ಕೆ ಪ್ರಕ್ರಿಯೆಯನ್ನು ಪುನರ್‌ ಪರಿಶೀಲನೆ ಮಾಡಬೇಕು ಎಂದು ಪ್ರತಿಭಟನಾಕಾರರು ಪಾಲಿಕೆಗೆ ಒತ್ತಾಯಿಸಿದರು. ವೇದಿಕೆ ರಾಜ್ಯಾಧ್ಯಕ್ಷ ಎಸ್‌.ಜಿ.ಸೋಮಶೇಖರ್‌, ರಾಜ್ಯ ಉಪಾಧ್ಯಕ್ಷ ಟಿ.ಆರ್‌. ಸುರೇಶ್‌, ಕಾರ್ಯದರ್ಶಿ ಇಮ್ರಾನ್‌ ರಜಾಕ್‌, ಖಜಾಂಚಿ ಎಲ್‌. ದೇವರಾಜ್‌, ಮಹಮ್ಮದ್‌ ಗುಲಾಮ್‌, ಶಬೀºರ್‌, ಡಿ.ಎನ್‌. ಅಲ್ತಾಫ್‌, ಇತರರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ಟಾಪ್ ನ್ಯೂಸ್

ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜೀನಾಮೆ ನೀಡುವುದು ಉತ್ತಮ: ಲಾಲು ಪ್ರಸಾದ್ ಯಾದವ್

ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜೀನಾಮೆ ನೀಡುವುದು ಉತ್ತಮ: ಲಾಲು ಪ್ರಸಾದ್ ಯಾದವ್ ಕಿಡಿ

Is Ashwin made a hasty decision: Is this how much Kohli is worth in the dressing room?

BGT 24: ಆತುರದ ನಿರ್ಧಾರ ಮಾಡಿದ್ರಾ ಅಶ್ವಿನ್ :‌ ಟೀಂ ಇಂಡಿಯಾದಲ್ಲಿ ಕೊಹ್ಲಿ ಬೆಲೆ ಇಷ್ಟೇನಾ?

1-a-ct

Belagavi Session ಉದ್ವಿಗ್ನ:ಹೆಬ್ಬಾಳ್ಕರ್ ವಿರುದ್ದ ಅವಾಚ್ಯ ಪದ ಬಳಸಿದರೆ ಸಿ.ಟಿ.ರವಿ?

Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್‌ಗಳಲ್ಲಿ 31 ಬಾರಿ ಕಪಾಳ ಮೋಕ್ಷ

Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್‌ಗಳಲ್ಲಿ 31 ಬಾರಿ ಕಪಾಳ ಮೋಕ್ಷ

Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾವು

Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾ*ವು

Kadur: ದೇಗುಲ ಕಂಪೌಂಡ್‌ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ

Kadur: ದೇಗುಲ ಕಂಪೌಂಡ್‌ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ

0055

BBK11: ಮಂಜು ಅವರದ್ದು ಚೀಪ್ ಮೆಂಟಲಿಟಿ‌ ಎಂದ ರಜತ್; ಭವ್ಯ – ಮೋಕ್ಷಿತಾ ವಾಗ್ವಾದ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ‌ ಕಾಂಗ್ರೆಸ್ ಶಾಸಕ

Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ‌ ಕಾಂಗ್ರೆಸ್ ಶಾಸಕ

7-dvg

Davangere: 2021ರಲ್ಲಿ ಅಪ್ರಾಪ್ತೆಯನ್ನು ಅಪಹರಿಸಿ ಅತ್ಯಾಚಾರವೆಸಗಿದ್ದವನಿಗೆ ಶಿಕ್ಷೆ ಪ್ರಕಟ

byndoor

Davanagere: ಪಾಠ ಮಾಡುತ್ತಿದ್ದಾಗಲೇ ಹೃದಯಾಘಾತ; ಶಿಕ್ಷಕ ಸಾವು

ಸಾರಿಗೆ ಬಸ್ ಡಿಪೋ ಪ್ರಾರಂಭಿಸಬೇಕು ಎಂದು ಒತ್ತಾಯಿಸಿ ದಾವಣಗೆರೆ ತಲುಪಿದ ಪಾದಯಾತ್ರೆ

ಸಾರಿಗೆ ಬಸ್ ಡಿಪೋ ಪ್ರಾರಂಭಿಸಬೇಕು ಎಂದು ಒತ್ತಾಯಿಸಿ ದಾವಣಗೆರೆ ತಲುಪಿದ ಪಾದಯಾತ್ರೆ

1—-kumr-renuka

BJP; ಕುಮಾರ್ ಬಂಗಾರಪ್ಪ ರಾಜ್ಯಾಧ್ಯಕ್ಷನಾಗುವುದು ತಿರುಕನ ಕನಸು: ರೇಣುಕಾಚಾರ್ಯ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜೀನಾಮೆ ನೀಡುವುದು ಉತ್ತಮ: ಲಾಲು ಪ್ರಸಾದ್ ಯಾದವ್

ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜೀನಾಮೆ ನೀಡುವುದು ಉತ್ತಮ: ಲಾಲು ಪ್ರಸಾದ್ ಯಾದವ್ ಕಿಡಿ

Is Ashwin made a hasty decision: Is this how much Kohli is worth in the dressing room?

BGT 24: ಆತುರದ ನಿರ್ಧಾರ ಮಾಡಿದ್ರಾ ಅಶ್ವಿನ್ :‌ ಟೀಂ ಇಂಡಿಯಾದಲ್ಲಿ ಕೊಹ್ಲಿ ಬೆಲೆ ಇಷ್ಟೇನಾ?

1-a-ct

Belagavi Session ಉದ್ವಿಗ್ನ:ಹೆಬ್ಬಾಳ್ಕರ್ ವಿರುದ್ದ ಅವಾಚ್ಯ ಪದ ಬಳಸಿದರೆ ಸಿ.ಟಿ.ರವಿ?

10

Year Ender: Horror movies-2024 ರ ಟಾಪ್‌ 5 ಹಾರರ್ ಚಲನಚಿತ್ರಗಳು

Udupi: ಗೀತೋತ್ಸವದಲ್ಲಿ ಹಾಸ್ಯೋತ್ಸವ; ನಕ್ಕು ನಲಿದ ಜನಸ್ತೋಮ

Udupi: ಗೀತೋತ್ಸವದಲ್ಲಿ ಹಾಸ್ಯೋತ್ಸವ; ನಕ್ಕು ನಲಿದ ಜನಸ್ತೋಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.