ರಾಕೇಶ್ ಟಿಕಾಯತ್-ಸಿಂಗ್ ಮೇಲಿನ ಹಲ್ಲೆಗೆ ಆಕ್ರೋಶ
ಹಲ್ಲೆ, ಮಸಿ ಬಳಿದಿರುವುದರ ಹಿಂದೆ ಕೋಡಿಹಳ್ಳಿ ಚಂದ್ರಶೇಖರ್ ಕೈವಾಡ ಶಂಕೆ
Team Udayavani, Jun 2, 2022, 3:06 PM IST
ದಾವಣಗೆರೆ: ಭಾರತೀಯ ಕಿಸಾನ್ ಯೂನಿಯನ್ ನ ರಾಷ್ಟ್ರೀಯ ನಾಯಕರಾದ ರಾಕೇಶ್ ಟಿಕಾಯತ್, ಯುದ್ಧವೀರ್ ಸಿಂಗ್ ಅವರ ಮುಖಕ್ಕೆ ಮಸಿ ಬಳಿದು ಹಲ್ಲೆ ನಡೆಸಿದ ಘಟನೆ ಖಂಡಿಸಿ ಮಂಗಳವಾರ ಸಂಯುಕ್ತ ಕಿಸಾನ್ ಮೋರ್ಚಾ, ಪ್ರಗತಿಪರ ಚಿಂತಕರ ವೇದಿಕೆ ಪದಾಧಿಕಾರಿಗಳು ನಗರದ ಜಯದೇವ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು.
ಬೆಂಗಳೂರಿನ ಗಾಂಧಿಭವನದಲ್ಲಿ ಸುದ್ದಿಗೋಷ್ಠಿ ನಡೆಯುತ್ತಿರುವಾಗಲೇ ರಾಕೇಶ್ ಟಿಕಾಯತ್ ಮೇಲೆ ಕಪ್ಪು ಮಸಿಯನ್ನು ಬಳಿದು ಹಲ್ಲೆ ನಡೆಸಲಾಗಿದೆ. ಯುದ್ಧವೀರ ಸಿಂಗ್ ಮೇಲೆ ಮೈಕ್ ನಿಂದ ಹಲ್ಲೆ ಇಡೀ ದೇಶದ ರೈತ ಸಮುದಾಯದ ಮೇಲೆ ನಡೆದ ಹಲ್ಲೆಯಾಗಿದೆ. ರಾಜ್ಯದ ಘನತೆಗೆ ಧಕ್ಕೆ ತಂದ ಘಟನೆಯಾಗಿದೆ. ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿದರು.
ರೈತ ಸಂಘದ ಕೋಡಿಹಳ್ಳಿ ಚಂದ್ರಶೇಖರ್ ಭ್ರಷ್ಟಾಚಾರದ ವಿರುದ್ಧ ಕ್ರಮ ಕೈಗೊಳ್ಳುವ ಬಗ್ಗೆ ರಾಕೇಶ್ ಟಿಕಾಯತ್ ಹೇಳುತ್ತಿದ್ದಂತೆ ಘಟನೆ ನಡೆದಿರುವುದು ಗಮನಿಸಿದರೆ ಇದರ ಹಿಂದೆ ಕೋಡಿಹಳ್ಳಿ ಚಂದ್ರಶೇಖರ್ ಕೈವಾಡ ಕೂಡ ಇರಬಹುದು. ಹಲ್ಲೆಕೋರರು ಮೋದಿ ಮೋದಿ ಎಂದು ಕೂಗಿರುವುದು ಗಮನಿಸಿದರೆ ಹೋರಾಟದಿಂದ ಕೇಂದ್ರ ಸರ್ಕಾರವನ್ನು ಮಣಿಸಿದರೆಂದು ಸಿಟ್ಟಿನಿಂದ ಬಿಜೆಪಿ ಕಾರ್ಯಕರ್ತರು ಈ ರೀತಿ ಮಾಡಿರಬಹುದು ಅಥವಾ ಮುಖಂಡರು ಮಾಡಿಸಿರಬಹುದು. ಹಾಗಾಗಿ ಘಟನೆಯ ಬಗ್ಗೆ ಕೂಲಂಕುಷವಾದ ತನಿಖೆ ನಡೆಸಬೇಕು ಎಂದು ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ಜಿಪಂ ಮಾಜಿ ಸದಸ್ಯ ತೇಜಸ್ವಿ ಪಟೇಲ್, ವಕೀಲ ಅನೀಸ್ ಪಾಷ, ಈ. ಶ್ರೀನಿವಾಸ್, ಹುಚ್ಚವ್ವನಹಳ್ಳಿ ಮಂಜುನಾಥ್, ಕೆ.ಎಚ್. ಆನಂದ್‌ರಾಜ್, ಮಧು ತೊಗಲೇರಿ, ಆದಿಲ್ ಖಾನ್, ಎಚ್. ಮಲ್ಲೇಶ್, ಅಬ್ದುಲ್ ಘನಿ ತಾಹಿರ್, ಜಬೀನಾ ಖಾನಂ, ಕರಿಬಸಪ್ಪ, ಹೆಗ್ಗೆರೆ ರಂಗಪ್ಪ, ಐರಣಿ ಚಂದ್ರು, ಮುಸ್ತಾಫಾ ಮೊದಲಾದವರು ಭಾಗವಹಿಸಿದ್ದರು.
ಕೊಲೆ ಯತ್ನ ಪ್ರಕರಣ ದಾಖಲಿಸಿ
ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಮೊಟಕುಗೊಳಿಸುವ ಮತ್ತು ಹೋರಾಟಗಳನ್ನು ಹತ್ತಿಕ್ಕುವ ಸಲುವಾಗಿ ಆಡಳಿತರೂಢ ಪಕ್ಷಗಳು ಕುತಂತ್ರಗಳನ್ನು ಮಾಡುತ್ತಾ ಬಂದಿವೆ. ಆದರೆ, ಭಯವನ್ನು ಹುಟ್ಟಿಸುವುದರಿಂದ ಅಥವಾ ಯಾವುದೇ ಒತ್ತಡದಿಂದ ಹೋರಾಟಗಳನ್ನು ಹತ್ತಿಕ್ಕಲು ಸಾಧ್ಯವಿಲ್ಲ. ಘಟನೆಯ ಆರೋಪಿಗಳನ್ನು ತೀವ್ರ ತನಿಖೆಗೆ ಒಳಪಡಿಸಿ ಹಿಂದೆ ಯಾರ ಕೈವಾಡ ಇದೆಯೋ ಅವರನ್ನು ತಕ್ಷಣ ಬಂಧಿಸಿ ಅವರ ವಿರುದ್ಧ ಕೊಲೆ ಪ್ರಯತ್ನದ ಪ್ರಕರಣ ದಾಖಲಿಸಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಬಿಸಿಯೂಟ ಸಿಬ್ಬಂದಿ ಇಡಿಗಂಟಿಗೆ ಸರ್ಕಾರದ ಮಾರ್ಗಸೂಚಿ ಪ್ರಕಟ
Davanagere: ಆತ್ಮಹತ್ಯೆ ಮಾಡಿಕೊಂಡಿರುವ ಸಚಿನ್ ಗುತ್ತಿಗೆದಾರನೇ ಅಲ್ಲ…
Davanagere; ಹೊಸ ವರ್ಷ ಆಚರಣೆ ವೇಳೆ ಅಪಘಾ*ತ: ಯುವಕ ಸಾ*ವು,ಇನ್ನೋರ್ವ ಗಂಭೀರ
Davanagere: ರಾಜ್ಯದಲ್ಲಿ ಕಾಂಗ್ರೆಸ್ ಸರಕಾರದಿಂದ ಅರಾಜಕತೆ ಸೃಷ್ಟಿ: ಜಗದೀಶ್ ಶೆಟ್ಟರ್
ಸಿ.ಟಿ.ರವಿ-ಸಚಿವೆ ಲಕ್ಷ್ಮೀ ದೂರು ಪ್ರಕರಣ: ಪೊಲೀಸರ ವರದಿ ಬಳಿಕ ನಿಯಮಾನುಸಾರ ಕ್ರಮ: ಹೊರಟ್ಟಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್
Test Cricket; ರೋಹಿತ್ ಆಯ್ತು, ಈಗ ವಿರಾಟ್..: ಬಿಸಿಸಿಐ ಕಳಿಸಿದ ʼಆʼ ಸಂದೇಶದಲ್ಲಿ ಏನಿದೆ?
Gangolli: ಪಂಚಾಯತ್‌ನೊಳಗೆ ನಮಾಜ್; ಹಿಂದೂ ಹಿತರಕ್ಷಣಾ ಸಮಿತಿ ಪ್ರತಿಭಟನೆ
Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ
ನಾನು ಶೀಶಮಹಲ್ ಕಟ್ಟಿಲ್ಲ, ಜನರಿಗೆ ಮನೆ ಕಟ್ಟಿಸಿದ್ದೇನೆ: ಕೇಜ್ರಿವಾಲ್ ಗೆ ಮೋದಿ ಟಾಂಗ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.