ಸೋಂಕಿನ ಪ್ರಮಾಣ ಕಡಿಮೆಗೊಳಿಸಿ
Team Udayavani, Jul 14, 2020, 2:48 PM IST
ದಾವಣಗೆರೆ: ಜಿಲ್ಲೆಯಲ್ಲಿ ಕೋವಿಡ್ ಸಂಬಂಧ ಕೈಗೊಳ್ಳಲಾದ ನಿಯಂತ್ರಣ ಕ್ರಮ, ಮರಣ-ಪ್ರಮಾಣ ಇಳಿಕೆ, ಮಳೆ ಬೆಳೆ, ಬೀಜ, ರಸಗೊಬ್ಬರ ಲಭ್ಯತೆ, ಕುಡಿಯುವ ನೀರಿನ ಸಮಸ್ಯೆ, ಅವಶ್ಯಕತೆ ಇರುವೆಡೆ ಬೋರ್‌ವೆಲ್ ಸೌಲಭ್ಯ ಒದಗಿಸುವಂತೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸೋಮವಾರ ವಿಡಿಯೋ ಕಾನ್ಫೆರೆನ್ಸ್‌ನಲ್ಲಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಜಿಲ್ಲೆಯಲ್ಲಿ ಈವರೆಗೆ 536 ಕೋವಿಡ್ ಪ್ರಕರಣ ದೃಢಪಟ್ಟಿದ್ದು, 410 ಜನರು ಡಿಸ್ಚಾರ್ಜ್ ಆಗಿದ್ದಾರೆ. 20 ಜನರು ಮೃತಪಟ್ಟಿದ್ದಾರೆ. 104 ಸಕ್ರಿಯ ಪ್ರಕರಣಗಳಿವೆ. ಒಟ್ಟು 126 ಕಂಟೇನ್ಮೆಂಟ್ ಝೋನ್‌ಗಳಲ್ಲಿ 46 ಡಿನೋಟಿಫೈ ಮಾಡಲಾಗಿದೆ. 32 ಸಾವಿರ ಸ್ವ್ಯಾಬ್ ಪರೀಕ್ಷೆ ಮಾಡಿಸಲಾಗಿದೆ. ಜೂನ್‌ನಲ್ಲಿ 14 ಸಾವಿರ, ಜುಲೈನಲ್ಲಿ ಈವರೆಗೆ 10,149 ಪರೀಕ್ಷೆ ನಡೆಸಲಾಗಿದೆ. 1420 ಕೋವಿಡ್ ಬೆಡ್ ಗಳ ವ್ಯವಸ್ಥೆ ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಮಾಹಿತಿ ನೀಡಿದರು.
ವೈದ್ಯಕೀಯ ಶಿಕ್ಷಣ ಸಚಿವ ಡಾ| ಸುಧಾಕರ್ ಮಾತನಾಡಿ, ಜಿಲ್ಲೆಯಲ್ಲಿ ಸುವ್ಯವಸ್ಥಿತ ವೈದ್ಯಕೀಯ ಸೌಲಭ್ಯಗಳಿದ್ದರೂ ಸಾವಿನ ಪ್ರಮಾಣ ಶೇ.3.73 ರಷ್ಟಿದೆ. ಕಡಿಮೆ ಮಾಡಲು ಕ್ರಮ ಕೈಗೊಳ್ಳಬೇಕು. ರ್ಯಾಪಿಡ್ ಆಂಟಿಜೆನ್ ಟೆಸ್ಟ್‌ನೊಂದಿಗೆ, ಸ್ವ್ಯಾಬ್ ಪರೀಕ್ಷೆ ಸಂಖ್ಯೆ ಹೆಚ್ಚಿಸಬೇಕು ಎಂದು ಸೂಚಿಸಿದರು.
ಜೆಜೆಎಂ ಮೆಡಿಕಲ್ ಕಾಲೇಜಿನ ಗೃಹ ವೈದ್ಯರಿಗೆ ಆಡಳಿತ ಮಂಡಳಿಯವರೇ ಶಿಷ್ಯವೇತನ ಭರಿಸಬೇಕು ಎಂದು ಸರ್ಕಾರ ತಿಳಿಸಿರುವಂತೆ ಆಡಳಿತ ಮಂಡಳಿ ಸಂಪರ್ಕಿಸಿ ಚರ್ಚಿಸಿ ಈ ಸಮಸ್ಯೆ ಬಗೆಹರಿಸುವಂತೆ ಜಿಲ್ಲಾಧಿಕಾರಿಗೆ ಸೂಚಿಸಿದರು. ನಾಳೆಯೇ ಆಡಳಿತ ಮಂಡಳಿಯೊಂದಿಗೆ ಸಭೆ ನಡೆಸಲಾಗುವುದು ಎಂದು ಜಿಲ್ಲಾಧಿಕಾರಿ ತಿಳಿಸಿದರು.
ಕೋವಿಡ್ ಸೋಂಕಿನ ಸರಪಳಿ ಬ್ರೇಕ್ ಮಾಡುವುದಕ್ಕೆ ಕಟ್ಟುನಿಟ್ಟಿನ ಕ್ರಮ ತೆಗೆದುಕೊಳ್ಳಬೇಕು. ಯಾವುದೇ ಕಾರಣಕ್ಕೂ ಮೈಮರೆಯುವುದು ಬೇಡ. ರೈತರಿಗೆ ಬಿತ್ತನೆ ಬೀಜ, ರಸಗೊಬ್ಬರ ಕೊರತೆಯಾಗದಂತೆ ನೋಡಿಕೊಳ್ಳಬೇಕು. ಸಮಸ್ಯೆಗಳಿದ್ದಲ್ಲಿ ಮುಖ್ಯ ಕಾರ್ಯದರ್ಶಿ, ಜಿಲ್ಲಾ ಉಸ್ತುವಾರಿ ಸಚಿವರನ್ನು ಸಂಪರ್ಕಿಸಿ ಪರಿಹರಿಸಿಕೊಳ್ಳುವಂತೆ ಮುಖ್ಯಮಂತ್ರಿಗಳು ಸೂಚಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ ಕಾಂಗ್ರೆಸ್ ಶಾಸಕ
Davangere: 2021ರಲ್ಲಿ ಅಪ್ರಾಪ್ತೆಯನ್ನು ಅಪಹರಿಸಿ ಅತ್ಯಾಚಾರವೆಸಗಿದ್ದವನಿಗೆ ಶಿಕ್ಷೆ ಪ್ರಕಟ
Davanagere: ಪಾಠ ಮಾಡುತ್ತಿದ್ದಾಗಲೇ ಹೃದಯಾಘಾತ; ಶಿಕ್ಷಕ ಸಾವು
ಸಾರಿಗೆ ಬಸ್ ಡಿಪೋ ಪ್ರಾರಂಭಿಸಬೇಕು ಎಂದು ಒತ್ತಾಯಿಸಿ ದಾವಣಗೆರೆ ತಲುಪಿದ ಪಾದಯಾತ್ರೆ
BJP; ಕುಮಾರ್ ಬಂಗಾರಪ್ಪ ರಾಜ್ಯಾಧ್ಯಕ್ಷನಾಗುವುದು ತಿರುಕನ ಕನಸು: ರೇಣುಕಾಚಾರ್ಯ
MUST WATCH
ಹೊಸ ಸೇರ್ಪಡೆ
Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾ*ವು
Kadur: ದೇಗುಲ ಕಂಪೌಂಡ್ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ
Kaup: ಸಮಸ್ಯೆಗೆ ದೂರು ನೀಡಲು 1912ಗೆ ಕರೆ ಮಾಡಿ
Shirva: ಹೊಂಡ ಗುಂಡಿ, ಧೂಳುಮಯ ಕೋಡು-ಪಂಜಿಮಾರು ರಸ್ತೆ
BBK11: ಮಂಜು ಅವರದ್ದು ಚೀಪ್ ಮೆಂಟಲಿಟಿ ಎಂದ ರಜತ್; ಭವ್ಯ – ಮೋಕ್ಷಿತಾ ವಾಗ್ವಾದ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.