ಮನುಷ್ಯಗೆ ಅನ್ನ-ನೀರಂತೆ ಧರ್ಮವೂ ಅಷ್ಟೇ ಮುಖ್ಯ


Team Udayavani, Jul 21, 2017, 2:26 PM IST

21-DV-3.gif

ದಾವಣಗೆರೆ: ಮನುಷ್ಯರು ಬದುಕಿ ಬಾಳಲು ಅನ್ನ, ನೀರು, ಗಾಳಿಯಂತೆ ಧರ್ಮವೂ ಅಷ್ಟೇ ಮುಖ್ಯ ಎಂದು ರಂಭಾಪುರಿ ಪೀಠದ
ಜಗದ್ಗುರು ಡಾ| ವೀರಸೋಮೇಶ್ವರ ರಾಜದೇಶಿಕೇಂದ್ರ ಶಿವಾಚಾರ್ಯ ಭಗವತ್ಪಾದರು ಪ್ರತಿಪಾದಿಸಿದ್ದಾರೆ.

ರೇಣುಕ ಮಂದಿರದಲ್ಲಿ ಆಷಾಢ ಮಾಸದ ಇಷ್ಟಲಿಂಗ ಮಹಾಪೂಜಾ ಹಾಗೂ ಜನಜಾಗೃತಿ ಧರ್ಮ ಸಮಾವೇಶದ 3ನೇ ದಿನ
ಕಾರ್ಯಕ್ರಮದ ಸಾನ್ನಿಧ್ಯ ವಹಿಸಿ ಮಾತನಾಡಿದ ಅವರು, ಸತ್ಯಾನ್ವೇಷಣೆಯ ಹಾದಿಯಲ್ಲಿ ನಡೆದಾಗ ಜೀವನ ಮೌಲ್ಯ ಸಮೃದ್ಧಿಗೊಳ್ಳಲು ಸಾಧ್ಯ ಎಂದರು. ಯಾವುದೇ ಕಾರಣಕ್ಕೂ ಸ್ವಾರ್ಥಕ್ಕಾಗಿ ಜೀವನದ ಆದರ್ಶ, ಮೌಲ್ಯಗಳನ್ನು ಬಲಿ ಕೊಡಬಾರದು. ಸುಖ ಬಂದಾಗ ಹಿಗ್ಗದೇ ಕಷ್ಟ ಬಂದಾಗ ಕುಗ್ಗಬಾರದು. ಪ್ರತಿ ಸಂದರ್ಭದಲ್ಲೂ ಸಮತೋಲನದಿದ ಬದುಕಿ ಬಾಳಬೇಕು. ಏಕೆಂದರೆ ಜೀವನದ ಮಹತ್ವವೇ ಇರುವುದು ಅಲ್ಲಿಯೇ. ಜೀವನ ಸುಖ-ದು:ಖಗಳ ಸಮಿಶ್ರಣ ಎಂದು ತಿಳಿಸಿದರು.

ಧರ್ಮ, ಅರ್ಥ, ಕಾಮ, ಮೋಕ್ಷ…ಎಂಬ ನಾಲ್ಕು ಪುರುಷಾರ್ಥಗಳಲ್ಲಿ ಒಂದನ್ನಾದರೂ ಸಂಪಾದಿಸದಿದ್ದರೆ ಜೀವನ ವ್ಯರ್ಥವಾಗುವುದು.
ಮನುಷ್ಯ ತಿಳಿದಿರುವುದಕ್ಕಿಂತ ತಿಳಿಯಬೇಕಾದುದು ಬಹಳಷ್ಟಿದೆ. ಧರ್ಮ ಜ್ಞಾನದ ತಂಗಾಳಿ ಜೀವನ ಉನ್ನತಿಗೆ ಸಹಕಾರಿ
ಎಂದು ತಿಳಿಸಿದರು. ಶಸ್ತ್ರ, ಪ್ರಭುತ್ವ ಮತ್ತು ಸಂಪತ್ತು ಅಜ್ಞಾನಿಯ ಕೈಯಲ್ಲಿದ್ದರೆ ಸರ್ವ ನಾಶ. ಆ ಎಲ್ಲವೂ ಸಜ್ಜನರಲ್ಲಿದ್ದರೆ ಜನರ ಕಲ್ಯಾಣ ಆಗುವುದು. ಸುಳ್ಳು ಹೇಳಲು ಅನೇಕ ದಾರಿಗಳಿವೆ. ಆದರೆ, ಸತ್ಯಕ್ಕೆ ಧರ್ಮಕ್ಕೆ ಒಂದೇ ದಾರಿ. ಕೆಡಕುಗಳನ್ನು ಮೆಟ್ಟಿ ನಿಂತು ಒಳಿತಿನತ್ತ ಹೆಜ್ಜೆ ಹಾಕುವುದೇ ಮಾನವನ ಗುರಿಯಾಗಬೇಕು ಎಂದು ಶ್ರೀ ಜಗದ್ಗುರು ರೇಣುಕಾಚಾರ್ಯರು ಸಿದ್ಧಾಂತ ಶಿಖಾಮಣಿಯಲ್ಲಿ ಪ್ರತಿಪಾದಿಸಿದ್ದಾರೆ ಎಂದು ತಿಳಿಸಿದರು.

ಶಿವಗಂಗೆಯ ಶ್ರೀ ಮಲಯ ಶಾಂತಮುನಿ ಶಿವಾಚಾರ್ಯ ಸ್ವಾಮೀಜಿ ಮಾತನಾಡಿ, ದಾವಣಗೆರೆ ತಾಲೂಕಿನ ನಾಗರಸನಹಳ್ಳಿ
ಗ್ರಾಮದಲ್ಲಿ ನಿರ್ಮಾಣವಾಗಲಿರುವ ಶ್ರೀ ವೀರಭದ್ರೇಶ್ವರಸ್ವಾಮಿ ಕಲ್ಯಾಣ ಮಂಟಪಕ್ಕೆ 1 ಲಕ್ಷ ನೀಡಿರುವ ರಂಭಾಪುರಿ ಜಗದ್ಗುರು
ಡಾ| ವೀರಸೋಮೇಶ್ವರ ಶಿವಾಚಾರ್ಯ ಭಗವತ್ಪಾದರದ್ದು ಮಾತೃ ಹೃದಯ. ಕಲ್ಯಾಣ ಮಂಟಪದ ಉದ್ಘಾಟನೆಯೂ
ಜಗದ್ಗುರುಗಳಿಂದಲೇ ಆಗಬೇಕು ಎನ್ನುವುದು ಗ್ರಾಮಸ್ಥರ ಮಹದಾಸೆ. ಅದನ್ನು ಜಗದ್ಗುರುಗಳು ನೆರವೇರಿಸಿಕೊಡಬೇಕು ಎಂದು ಮನವಿ ಮಾಡಿದರು. ವಿಭೂತಿಪುರಮಠದ ಡಾ|ಮಹಂತಲಿಂಗ ಶಿವಾಚಾರ್ಯ ಸ್ವಾಮೀಜಿ ಮಾತನಾಡಿ, ಆಡುವ ಮಾತು ಕಮ್ಮಿ ಮಾಡಿ ಹೆಚ್ಚು ಕಾರ್ಯ ಮಾಡುವ ಪ್ರವೃತ್ತಿ ಬೆಳೆಯಲಿ. ವೀರಶೈವ ಧರ್ಮ ಕಾಯಕ ಜೀವನಕ್ಕೆ ಒತ್ತು ಕೊಟ್ಟಿದೆ ಎಂದರು. 

ಮಳಲಿ ಮಠದ ಶ್ರೀ ನಾಗಭೂಷಣ ಶಿವಾಚಾರ್ಯ ಸ್ವಾಮೀಜಿ, ಬೆಳಗುವ ದೀಪಕ್ಕೆ ಎಣ್ಣೆ ಎಷ್ಟು ಮುಖ್ಯವೋ ಮನುಷ್ಯನ ಉಜ್ವಲ
ಭವಿಷ್ಯಕ್ಕೆ ಆತ್ಮವಿಶ್ವಾಸ ಅಷ್ಟೇ ಮುಖ್ಯ. ಜಗದ್ಗುರು ರೇಣುಕಾಚಾರ್ಯರು ವಿಶ್ವ ಬಂಧುತ್ವದ ಆದರ್ಶ ಚಿಂತನಗಳನ್ನು ಯಾರೂ ಮರೆಯಬಾರದು ಎಂದು ಹೇಳಿದರು. ಶ್ರೀ ಕನ್ಯಕಾ ಪರಮೇಶ್ವರಿ ದೇವಸ್ಥಾನ ಸಮಿತಿ ಅಧ್ಯಕ್ಷ ಆರ್‌.ಜಿ. ಶ್ರೀನಿವಾಸಮೂರ್ತಿ ಗೆ ದೈವ
ಭಕ್ತ ಸಂಪನ್ನ… ಪ್ರಶಸ್ತಿ ಪ್ರದಾನ ಮಾಡಲಾಯಿತು. ನಿವೃತ್ತ ಪ್ರಾಚಾರ್ಯೆ ಪ್ರೊ. ಶಕುಂತಲ ಗುರುಸಿದ್ಧಯ್ಯ, ನಿವೃತ್ತ ಶಿಕ್ಷಕಿ ನೀಲಗುಂದ
ಜಯಮ್ಮ ಇತರರು ಇದ್ದರು. ಡಿ.ವಿ. ಆರಾಧ್ಯಮಠ ಸ್ವಾಗತಿಸಿದರು. ಎನ್‌. ಮಲ್ಲಯ್ಯ ನಿರೂಪಿಸಿದರು. ಶಿವಮೊಗ್ಗದ ಕೆ.ಆರ್‌. ಭೂಮಿಕಾ ಭರತನಾಟ್ಯ ಪ್ರದರ್ಶಿಸಿದರು.

ಟಾಪ್ ನ್ಯೂಸ್

Max movie review

Max movie review: ಮಾಸ್‌ ಮನಸುಗಳಿಗೆ ʼಮ್ಯಾಕ್ಸ್‌ʼ ಅಭಿಷೇಕ

Mangaluru: ಹುಟ್ಟೂರಿನತ್ತ ಯೋಧ ಅನೂಪ್ ಪಾರ್ಥಿವ ಶರೀರ… ಸಂಸದರಿಂದ ಅಂತಿಮ ನಮನ

Mangaluru: ಹುಟ್ಟೂರಿನತ್ತ ಯೋಧ ಅನೂಪ್ ಪಾರ್ಥಿವ ಶರೀರ… ಸಂಸದರಿಂದ ಅಂತಿಮ ನಮನ

ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: ಚಿಕಿತ್ಸೆ ಫಲಿಸದೆ ಇಬ್ಬರು ಮಾಲಾಧಾರಿಗಳು ಮೃ*ತ್ಯು

ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: ಚಿಕಿತ್ಸೆ ಫಲಿಸದೆ ಇಬ್ಬರು ಮಾಲಾಧಾರಿಗಳು ಮೃ*ತ್ಯು

Goa: ಕ್ಯಾಲಂಗುಟ್ ಬೀಚ್‌ನಲ್ಲಿ ಪ್ರವಾಸಿ ಬೋಟ್ ಮುಳುಗಿ ಓರ್ವ ಸಾವು, 20 ಮಂದಿ ರಕ್ಷಣೆ

Goa: ಕ್ಯಾಲಂಗುಟ್ ಬೀಚ್‌ನಲ್ಲಿ ಪ್ರವಾಸಿ ಬೋಟ್ ಮುಳುಗಿ ಓರ್ವ ಸಾ*ವು, 20 ಮಂದಿ ರಕ್ಷಣೆ

Basavaraj-horatti

Negotiation: ಸಿ.ಟಿ.ರವಿ – ಸಚಿವೆ ಹೆಬ್ಬಾಳ್ಕರ್‌ ಸಂಧಾನಕ್ಕೆ ಸಭಾಪತಿ ಹೊರಟ್ಟಿ ಪ್ರಯತ್ನ?

BGV-Gandhi-bharatha

Congress Session: ಬೆಳಗಾವಿಯಲ್ಲಿಂದು, ನಾಳೆ ಗಾಂಧಿ ಮಹಾಧಿವೇಶನ

1-horoscope

Daily Horoscope: ಬೇರೆಯವರ ತಪ್ಪುಗಳನ್ನು ಹುಡುಕಬೇಡಿ, ಜವಾಬ್ದಾರಿ ಕೊಂಚ ಬದಲಾವಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-dvg

Davangere:ಡಾ| ಬಿ.ಆರ್. ಅಂಬೇಡ್ಕರ್ ಅವಹೇಳನ; ಶಾ ರಾಜೀನಾಮೆಗೆ ಒತ್ತಾಯಿಸಿ ಬೃಹತ್ ಪ್ರತಿಭಟನೆ

1-dvg

Davanagere:ಅಮಿತ್ ಶಾರನ್ನು ಸಂಪುಟದಿಂದ ವಜಾ ಮಾಡಬೇಕೆಂದು ಒತ್ತಾಯಿಸಿ ಅರೆಬೆತ್ತಲೆ ಮೆರವಣಿಗೆ

sullia

Davanagere: ವೃದ್ಧೆ ಮೇಲೆ ಅತ್ಯಾ*ಚಾರ; ಯುವಕನಿಗೆ 10 ವರ್ಷ ಕಠಿಣ ಶಿಕ್ಷೆ

MP-R

Davanagere: ಬಿಜೆಪಿ-ಕಾಂಗ್ರೆಸ್‌ ಹೊಂದಾಣಿಕೆ ಆರೋಪದ ಬಗ್ಗೆ ರೇಣುಕಾಚಾರ್ಯ ಸ್ಪಷ್ಟನೆ

Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ‌ ಕಾಂಗ್ರೆಸ್ ಶಾಸಕ

Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ‌ ಕಾಂಗ್ರೆಸ್ ಶಾಸಕ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

3-madikeri

Madikeri: ಶ್ರೀಗಂಧದ ಮರ ಕಳ್ಳತನ ಪ್ರಕರಣ: ಆರೋಪಿಗಳ ಬಂಧನ

Max movie review

Max movie review: ಮಾಸ್‌ ಮನಸುಗಳಿಗೆ ʼಮ್ಯಾಕ್ಸ್‌ʼ ಅಭಿಷೇಕ

Mangaluru: ಹುಟ್ಟೂರಿನತ್ತ ಯೋಧ ಅನೂಪ್ ಪಾರ್ಥಿವ ಶರೀರ… ಸಂಸದರಿಂದ ಅಂತಿಮ ನಮನ

Mangaluru: ಹುಟ್ಟೂರಿನತ್ತ ಯೋಧ ಅನೂಪ್ ಪಾರ್ಥಿವ ಶರೀರ… ಸಂಸದರಿಂದ ಅಂತಿಮ ನಮನ

2-shirva

Shirva ಹ‌ಳೆವಿದ್ಯಾರ್ಥಿ ಸಂಘ; ಡಿ.29: ದಶಮಾನೋತ್ಸವ, ನೂತನ ಉಪಹಾರ ಗೃಹ ಸಮರ್ಪಣೆ

ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: ಚಿಕಿತ್ಸೆ ಫಲಿಸದೆ ಇಬ್ಬರು ಮಾಲಾಧಾರಿಗಳು ಮೃ*ತ್ಯು

ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: ಚಿಕಿತ್ಸೆ ಫಲಿಸದೆ ಇಬ್ಬರು ಮಾಲಾಧಾರಿಗಳು ಮೃ*ತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.