ಗಲಭೆಕೋರರನ್ನು ಗಲ್ಲಿಗೇರಿಸುವುದು ಸೂಕ್ತ: ರೇಣುಕಾಚಾರ್ಯ
Team Udayavani, Aug 18, 2020, 6:05 PM IST
ಹೊನ್ನಾಳಿ: ಕೆ.ಜೆ. ಹಳ್ಳಿ-ಡಿ.ಜೆ. ಹಳ್ಳಿ ಗಲಭೆ ಪ್ರಕರಣದ ಗಲಭೆಕೋರರನ್ನು ಬಂಧಿಸುವ ಬದಲು ಗಲ್ಲಿಗೇರಿಸುವುದೇ ಸೂಕ್ತ ಎಂದು ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ. ರೇಣುಕಾಚಾರ್ಯ ಒತ್ತಾಯಿಸಿದ್ದಾರೆ.
ಪಟ್ಟಣದ ಕಲ್ಕರೆ, ಬಾಲರಾಜ್ ಘಾಟ್, ಕೊತ್ತುಂಬರಿ ಕೇರಿ, ಆರ್ಯರ ಕೇರಿ, ತುಂಗಭದ್ರಾ ಬಡಾವಣೆಯಲ್ಲಿ ಕೋವಿಡ್ ಪಾಸಿಟಿವ್ ಪ್ರಕರಣ ಪತ್ತೆಯಾಗಿತ್ತು. ಈ ಹಿನ್ನೆಲೆಯಲ್ಲಿ ಸೀಲ್‌ಡೌನ್ ಮಾಡಲಾದ 58 ಕುಟುಂಬಗಳಿಗೆ ವೈಯಕ್ತಿಕವಾಗಿ ಆಹಾರ ಕಿಟ್ ಹಾಗೂ ಮಾಸ್ಕ್ ವಿತರಿಸಿ ಅವರು ಮಾತನಾಡಿದರು. ಕೆ.ಜೆ. ಹಳ್ಳಿ, ಡಿ.ಜೆ. ಹಳ್ಳಿಯಲ್ಲಿ ದಲಿತ ಶಾಸಕರ ಮನೆಯ ಮೇಲೆ ದೇಶದ್ರೋಹಿಗಳು ವ್ಯವಸ್ಥಿತ ಪಿತೂರಿ ನಡೆಸಿ ಹಣ, ಬಂಗಾರ ದೋಚಿ ಮನೆಗೆ ಬೆಂಕಿ ಹಚ್ಚಿದ್ದಾರೆ. ಇಂಥವರನ್ನು ಜಮೀರ್ ಅಹಮ್ಮದ್ ಹಾಗೂ ಕಾಂಗ್ರೆಸ್ ನ ಇತರ ನಾಯಕರು ಅಮಾಯಕರು ಎನ್ನುತ್ತಾರೆ. ಜಮೀರ್ ಅಹಮ್ಮದ್ ಹಾಗೂ ಮತ್ತಿತರ ದೇಶದ್ರೋಹಿಗಳ ಕುಮ್ಮಕ್ಕಿನಿಂದ ಈ ಗಲಭೆ ನಡೆದಿದೆ. ಕಾಂಗ್ರೆಸ್ ಓಟ್ ಬ್ಯಾಂಕ್ ರಾಜಕಾರಣ ಮಾಡುತ್ತಿದೆ ಎಂದು ಆರೋಪಿಸಿದರು.
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹಾಗೂ ಗೃಹ ಸಚಿವ ಬಸವರಾಜ ಬೊಮ್ಮಾಯಿ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದಾರೆ. ಈಗಾಗಲೇ 350 ಜನರನ್ನು ಬಂಧಿಸಲಾಗಿದೆ. ಎಸ್ ಡಿಪಿಐ ಸೇರಿದಂತೆ ವಿವಿಧ ಸಂಘಟನೆಗಳು ದೇಶದ್ರೋಹದ ಕೆಲಸ ಮಾಡುತ್ತಿದ್ದು ಅವುಗಳನ್ನು ನಿಷೇಧ ಮಾಡುವ ಕೆಲಸವನ್ನು ಸರ್ಕಾರ ಮಾಡುತ್ತದೆ. ದೇಶದ್ರೋಹಕ್ಕೆ ಕುಮ್ಮಕ್ಕು ಹಾಗೂ ಪ್ರಚೋದನೆ ನೀಡುವವರನ್ನು ಯಾವತ್ತೂ ಕ್ಷಮಿಸಬಾರದು ಎಂದರು.
ಸಿದ್ದರಾಮಯ್ಯ, ಡಿಕೆಶಿ, ಜಮೀರ್ ಅಹಮ್ಮದ್ ಪೊಲೀಸರ ಆತ್ಮಸ್ಥೈರ್ಯ ಕುಂದಿಸುವ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಅದನ್ನು ಬಿಟ್ಟು ಪೊಲೀಸರಲ್ಲಿ ಆತ್ಮಸ್ಥೈರ್ಯ ಮೂಡಿಸುವ ಕೆಲಸ ಮಾಡಲಿ ಎಂದು ತಾಕೀತು ಮಾಡಿದರು. ನ್ಯಾಮತಿ ತಾಪಂ ಅಧ್ಯಕ್ಷ ಎಸ್.ಪಿ. ರವಿಕುಮಾರ್ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere: ಆತ್ಮಹತ್ಯೆ ಮಾಡಿಕೊಂಡಿರುವ ಸಚಿನ್ ಗುತ್ತಿಗೆದಾರನೇ ಅಲ್ಲ…
Davanagere; ಹೊಸ ವರ್ಷ ಆಚರಣೆ ವೇಳೆ ಅಪಘಾ*ತ: ಯುವಕ ಸಾ*ವು,ಇನ್ನೋರ್ವ ಗಂಭೀರ
Davanagere: ರಾಜ್ಯದಲ್ಲಿ ಕಾಂಗ್ರೆಸ್ ಸರಕಾರದಿಂದ ಅರಾಜಕತೆ ಸೃಷ್ಟಿ: ಜಗದೀಶ್ ಶೆಟ್ಟರ್
ಸಿ.ಟಿ.ರವಿ-ಸಚಿವೆ ಲಕ್ಷ್ಮೀ ದೂರು ಪ್ರಕರಣ: ಪೊಲೀಸರ ವರದಿ ಬಳಿಕ ನಿಯಮಾನುಸಾರ ಕ್ರಮ: ಹೊರಟ್ಟಿ
Davangere: ಉತ್ತಮ ಹಿಂಗಾರು: ಬಂಪರ್ ಇಳುವರಿ ನಿರೀಕ್ಷೆಯಲ್ಲಿ ಬೆಳೆಗಾರರು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Venur; ಚಿರತೆ ಓಡಾಟ; ಸಾರ್ವಜನಿಕರಲ್ಲಿ ಆತಂಕ; ಅರಣ್ಯಾಧಿಕಾರಿ- ಸಾರ್ವಜನಿಕರ ಸಭೆ
Bengaluru:ಕುಡಿದ ಅಮಲಲ್ಲಿದ್ದ ಚಾಲಕ; ರಕ್ಷಣೆಗಾಗಿ ಚಲಿಸುತ್ತಿದ್ದ ರಿಕ್ಷಾದಿಂದ ಜಿಗಿದ ಮಹಿಳೆ
Governor: ಮಣಿಪುರದ 19 ನೇ ರಾಜ್ಯಪಾಲರಾಗಿ ಅಜಯ್ ಭಲ್ಲಾ ಪ್ರಮಾಣ ವಚನ ಸ್ವೀಕಾರ
Bidar; ಗುತ್ತಿಗೆದಾರ ಸಚಿನ್ ಕೇಸ್; ತನಿಖೆ ಆರಂಭಿಸಿದ ಸಿಐಡಿ ತಂಡ
Prajwal Devaraj; ಶಿವರಾತ್ರಿಗೆ ʼರಾಕ್ಷಸʼ ಅಬ್ಬರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.