ಸೌಲಭ್ಯಕ್ಕಾಗಿ ಮುದ್ರಣ ಕಾರ್ಮಿಕರ ಮನವಿ
Team Udayavani, Jul 6, 2017, 8:29 AM IST
ದಾವಣಗೆರೆ: ಅಸಂಘಟಿತ ವಲಯದಲ್ಲಿರುವ ಮುದ್ರಣ ಕಾರ್ಮಿಕರಿಗೆ ಕಟ್ಟಡ ಕಾರ್ಮಿಕ ಮಾದರಿ ಗುರುತಿನ ಚೀಟಿ, ವಿವಿಧ ಸೌಲಭ್ಯ ಒದಗಿಸಲು ಒತ್ತಾಯಿಸಿ ಮುದ್ರಣ ಕಾರ್ಮಿಕರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್‌ಗೆ ಮನವಿ ಮಾಡಿದ್ದಾರೆ.
ರಾಜ್ಯದಲ್ಲಿ ಸುಮಾರು 25 ಸಾವಿರದಿಂದ 30 ಸಾವಿರಕ್ಕೂ ಹೆಚ್ಚು ಮುದ್ರಣ ಕಾರ್ಮಿಕರು ಮುದ್ರಣಾಲಯದಲ್ಲಿ ದುಡಿಯುತ್ತಿದ್ದಾರೆ. ಕೆಲಸವಿದ್ದಾಗ ಕೆಲಸ ಮಾಡಿ, ಇಲ್ಲದಾಗ ಅರೆ ಬರೆ ಹೊಟ್ಟೆಯಲ್ಲಿ ಜೀವನ ನಡೆಸುತ್ತಿದ್ದಾರೆ. ಈಗ ಗಣಕಯಂತ್ರಗಳ ಪೈಪೋಟಿಯಿಂದಾಗಿ ಮುದ್ರಣ ಕಾರ್ಮಿಕರು ಬಹಳ ಸಂಕಷ್ಟದಲ್ಲಿದ್ದಾರೆ ಎಂದು ಸಚಿವರ ನಿವಾಸದಲ್ಲಿ ಭೇಟಿ ಮಾಡಿ ಕೋರಿದ್ದಾರೆ. ಅನೇಕರು ಮನೆ ಇಲ್ಲದೆ, ಮಕ್ಕಳಿಗೆ ಸರಿಯಾಗಿ ವಿದ್ಯಾಭ್ಯಾಸ ಕೊಡಿಸಲಾಗದೆ
ಕಷ್ಟಕರ ಜೀವನ ನಡೆಸುತ್ತಿದ್ದಾರೆ. ಮುದ್ರಣ ಕಾರ್ಮಿಕರ ಕಷ್ಟಗಳಿಗೆ ಸ್ಪಂದಿಸಲು ಸರ್ಕಾರಕ್ಕೆ, ಕಾರ್ಮಿಕರ ಇಲಾಖೆಗೆ ಅನೇಕ ಪತ್ರ ಬರೆಯಲಾಗಿದೆ. ಹೋರಾಟ ನಡೆಸಲಾಗಿದೆ. ಆದರೆ, ಈವರೆಗೂ ಯಾವುದೇ ಸೌಲಭ್ಯ ಒದಗಿಸಲಾಗಿಲ್ಲ. ಈಚೆಗೆ ರಾಜ್ಯ ಸರ್ಕಾರ ಸಾಮಾಜಿಕ ಭದ್ರತಾ ಮಂಡಳಿಯಲ್ಲಿ ಮುದ್ರಣ ಕಾರ್ಮಿಕರನ್ನು ಸೇರ್ಪಡಿಸಿರುವುದು ಸಂತೋಷ ವಿಷಯ ಎಂದರು.
ಕಾರ್ಮಿಕರ ಮನವಿಗೆ ಆಲಿಸಿದ ಸಚಿವರು, ಮುಂದಿನ ದಿನಗಳಲ್ಲಿ ಬೇಡಿಕೆ ಈಡೇರಿಸಲು ಸಂಬಂಧಿತರ ಗಮನಕ್ಕೆ
ತರಲಾಗುವುದು ಎಂದು ಭರವಸೆ ನೀಡಿದರು. ರಾಜ್ಯ ಅಧ್ಯಕ್ಷ ಎನ್. ರಾಜೇಂದ್ರ ಬಂಗೇರಾ, ಫಕೃದೀªನ್, ಕೆ.ಆರ್.
ಮಲ್ಲಿಕಾರ್ಜುನ್, ಜಿ.ಎನ್. ವಸಂತಕುಮಾರ್, ಮೃತ್ಯುಂಜಯ, ರಾಘವೇಂದ್ರ, ನಾಗರಾಜ ಪವಾರ್, ಯದ್ ಉಮ್ಮರ್, ಕೆ. ವೀಣಾ, ರೇಣುಕಾ, ಸೃಷ್ಟಿ ನಾಗರಾಜ್, ಗಂಗೋತ್ರಿ ಬಸವರಾಜ್, ಶಿವಕುಮಾರಸ್ವಾಮಿ ಇತರರು ಇದ್ದರು ಎಂದು ಪ್ರಕಟಣೆ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere: ವೃದ್ಧೆ ಮೇಲೆ ಅತ್ಯಾ*ಚಾರ; ಯುವಕನಿಗೆ 10 ವರ್ಷ ಕಠಿಣ ಶಿಕ್ಷೆ
Davanagere: ಬಿಜೆಪಿ-ಕಾಂಗ್ರೆಸ್ ಹೊಂದಾಣಿಕೆ ಆರೋಪದ ಬಗ್ಗೆ ರೇಣುಕಾಚಾರ್ಯ ಸ್ಪಷ್ಟನೆ
Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ ಕಾಂಗ್ರೆಸ್ ಶಾಸಕ
Davangere: 2021ರಲ್ಲಿ ಅಪ್ರಾಪ್ತೆಯನ್ನು ಅಪಹರಿಸಿ ಅತ್ಯಾಚಾರವೆಸಗಿದ್ದವನಿಗೆ ಶಿಕ್ಷೆ ಪ್ರಕಟ
Davanagere: ಪಾಠ ಮಾಡುತ್ತಿದ್ದಾಗಲೇ ಹೃದಯಾಘಾತ; ಶಿಕ್ಷಕ ಸಾವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು
Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು
BBK11: ಬಾಯಿ ಮುಚ್ಕೊಂಡು ಇರು.. ಫೈಯರ್ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!
Kashmir cold: 34 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು!
Natural Disaster: ಅನಿರೀಕ್ಷಿತ ಮಳೆಗೆ ಸೊರಗಿದ ವಿಶಿಷ್ಟ ಗುಣದ ಹೆಮ್ಮಾಡಿ ಸೇವಂತಿಗೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.