ಫಲಿತಾಂಶ ಲೋಪದೋಷ ಸರಿಪಡಿಸಲು ಮನವಿ
Team Udayavani, Jul 30, 2019, 9:24 AM IST
ದಾವಣಗೆರೆ: ಎಐಡಿಎಸ್‌ಒ ನೇತೃತ್ವದಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆ.
ದಾವಣಗೆರೆ: ಪದವಿ ಫಲಿತಾಂಶದಲ್ಲಿ ಆಗಿರುವ ತಾಂತ್ರಿಕ ದೋಷ ಸರಿಪಡಿಸಬೇಕು ಎಂದು ಒತ್ತಾಯಿಸಿ ಸೋಮವಾರ ಆಲ್ ಇಂಡಿಯಾ ಡೆಮಾಕ್ರಟಿಕ್ ಸ್ಟೂಡೆಂಟ್ ಆರ್ಗನೈಸೇಷನ್(ಎಐಡಿಎಸ್‌ಒ) ನೇತೃತ್ವದಲ್ಲಿ ದಾವಣಗೆರೆ ವಿಶ್ವವಿದ್ಯಾಲಯ ಎದುರು ಪ್ರತಿಭಟನೆ ನಡೆಸಲಾಯಿತು.
ದಾವಣಗೆರೆ ವಿಶ್ವವಿದ್ಯಾಲಯ ಪ್ರಕಟಿಸಿರುವ ಪದವಿ ಫಲಿತಾಂಶಗಳಲ್ಲಿ ಹಲವಾರು ತಾಂತ್ರಿಕ ದೋಷಗಳಿವೆ. 2ನೇ ಸೆಮಿಸ್ಟರ್‌ನ ವಿದ್ಯಾರ್ಥಿಗಳ ಫಲಿತಾಂಶ ಇದುವರೆಗೂ ಪ್ರಕಟಿಸಿಲ್ಲ. ಕೆಲವು ಪದವಿ ವಿದ್ಯಾರ್ಥಿಗಳಿಗೆ ಮರು ಮೌಲ್ಯಮಾಪನದ ಅಂತಿಮ ಅವಧಿ ಮುಗಿದ ನಂತರವೂ ಫಲಿತಾಂಶ ಪ್ರಕಟಿಸದೇ ಇರುವುದು ದುರಂತ ಎಂದು ಪ್ರತಿಭಟನಾಕಾರರು ದೂರಿದರು. ಹಲವು ವಿದ್ಯಾರ್ಥಿಗಳ ಅಂಕಪಟ್ಟಿಯಲ್ಲಿ ಹಲವಾರು ತಾಂತ್ರಿಕ ಲೋಪದೋಷಗಳು ಇವೆ. ಹಲವು ವಿದ್ಯಾರ್ಥಿಗಳಿಗೆ ಫಲಿತಾಂಶದಲ್ಲಿ 0 ಮತ್ತು -1 ಎಂದು ನಮೂದಿಸಲಾಗಿದೆ. ಉತ್ತೀರ್ಣರಾದ ವಿಷಯವನ್ನು ಮೌಲ್ಯಮಾಪನದ ನಂತರ ಬಂದ ಫಲಿತಾಂಶದಲ್ಲಿಯೂ ಅನುತ್ತೀರ್ಣವಾಗಿದೆ ಎಂದು ಪ್ರಕಟಿಸಲಾಗಿದೆ. ವಿದ್ಯಾರ್ಥಿಗಳ ಭವಿಷ್ಯದೊಂದಿಗೆ ಚೆಲ್ಲಾಟವಾಡುತ್ತಿರುವ ಬೇಜವಾಬ್ದಾರಿತನ ಅತ್ಯಂತ ಖಂಡನೀಯ. ಮರು ಮೌಲ್ಯಮಾಪನದಲ್ಲಿ ಉತ್ತೀರ್ಣರಾಗಿರುವ ವಿದ್ಯಾರ್ಥಿಗಳಿಗೆ ಮರುಮೌಲ್ಯಮಾಪನದ ಶುಲ್ಕ ಹಿಂದಿರುಗಿಸಬೇಕು ಎಂದು ಒತ್ತಾಯಿಸಿದರು.
ಪ್ರತಿಭಟನಾಕಾರರ ಮನವಿಗೆ ಸ್ಪಂದಿಸಿ ಕುಲಸಚಿವರು, ತಾಂತ್ರಿಕ ಲೋಪದೋಷಗಳನ್ನು ಸರಿಪಡಿಸಲಾಗುವುದು. 2ನೇ ಸೆಮಿಸ್ಟರ್‌ನ ಫಲಿತಾಂಶವನ್ನು ಒಂದು ವಾರದೊಳಗೆ ಪ್ರಕಟಿಸುತ್ತೇವೆ. ಇನ್ನು ಮುಂದೆ ಈ ರೀತಿ ಆಗದಂತೆ ನೋಡಿಕೊಳ್ಳುವುದಾಗಿ ಭರವಸೆ ನೀಡಿದರು. ಸಂಘಟನೆ ಜಿಲ್ಲಾ ಕಾರ್ಯದರ್ಶಿ ನಾಗಜ್ಯೋತಿ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Govt Hospital: ಡಿ ಗ್ರೂಪ್ ಸಿಬ್ಬಂದಿಗೆ ಶೀಘ್ರನೇರ ಪಾವತಿ: ಸಚಿವ ದಿನೇಶ್ ಗುಂಡೂರಾವ್
ರಾಜ್ಯದ ರೈತರಿಗೆ ಕೇಂದ್ರ ಸರ್ಕಾರದಿಂದ ಭಾರಿ ಅನ್ಯಾಯವಾಗಿದೆ: ದಿನೇಶ್ ಗುಂಡೂರಾವ್
Davanagere: ಶಾಸಕರ ಖರೀದಿ ಆರೋಪ; ತನಿಖೆಗೆ ಎಸ್‌ಐಟಿ ರಚಿಸಿ: ಎಂ.ಪಿ.ರೇಣುಕಾಚಾರ್ಯ
Market: ಇಳುವರಿ ಕೊರತೆ: ತೆಂಗಿನಕಾಯಿ ಬೆಲೆ 58ರಿಂದ 60 ರೂಪಾಯಿ!
Davanagere: ಯತ್ನಾಳ್ ಫೋರ್ತ್ ಗ್ರೇಡ್ ರಾಜಕಾರಣಿ..: ರೇಣುಕಾಚಾರ್ಯ ವಾಗ್ದಾಳಿ
MUST WATCH
ಹೊಸ ಸೇರ್ಪಡೆ
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
BBK11: ಸೆಡೆಗಳನ್ನೆಲ್ಲ ಕಳ್ಸಿಯೇ ನಾನು ಮನೆಗೆ ಹೋಗೋದು- ಮತ್ತೆ ಗುಡುಗಿದ ರಜತ್
Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ
Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.