ಹೈಕ ಸೌಲಭ್ಯ ಪ್ರಮಾಣಪತ್ರ ವಿತರಿಸಲು ಆಗ್ರಹ
Team Udayavani, Jul 10, 2018, 4:02 PM IST
ಹರಪನಹಳ್ಳಿ: ಹೈ.ಕ ಸೌಲಭ್ಯದ 371ಜೆ ಕಲಂ ಅನ್ವಯದ ದೃಢೀಕರಣ ಪತ್ರ ವಿತರಣೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿ ಸಿಪಿಐ (ಎಂ.ಎಲ್) ಕಾರ್ಯಕರ್ತರು ಸೋಮವಾರ ಪಟ್ಟಣದಲ್ಲಿ ಪ್ರತಿಭಟನೆ ನಡೆಸಿ ತಹಶೀಲ್ದಾರ್‌ಗೆ ಮನವಿ ಸಲ್ಲಿಸಿದರು.
ಸಂಘಟನೆಯ ಜಿಲ್ಲಾ ಕಾರ್ಯದರ್ಶಿ ಇದ್ಲಿ ರಾಮಪ್ಪ ಮಾತನಾಡಿ, ಜೆ.ಎಚ್. ಪಟೇಲರು ನೂತನ ಜಿಲ್ಲೆಗಳನ್ನು ರಚಿಸಿದ ಸಂದರ್ಭದಲ್ಲಿ ಬಳ್ಳಾರಿಯಲ್ಲಿದ್ದ ಹರಪನಹಳ್ಳಿ ತಾಲೂಕನ್ನು ದಾವಣಗೆರೆ ಜಿಲ್ಲೆಗೆ ಸೇರ್ಪಡೆಗೊಳಿಸಿದರು.
ಪರಿಣಾಮ ತಾಲೂಕಿಗೆ 371ಜೆ ಕಲಂ ಸೌಲಭ್ಯ ಕೈ ತಪ್ಪಿತ್ತು. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕಳೆದ ಸರ್ಕಾರದಲ್ಲಿ ಪುನಃ ತಾಲೂಕನ್ನು ಬಳ್ಳಾರಿ ಜಿಲ್ಲೆಗೆ ಸೇರಿಸಿ ನ್ಯಾಯ ಒದಗಿಸುವ ಕೆಲಸ ಮಾಡಿದ್ದಾರೆ. ಆದರೆ ಇದುವರೆಗೂ ಇಲ್ಲಿಯ ಜನತೆಗೆ ಹೈ.ಕ ಭಾಗದ 371ಜೆ ಕಲಂ ಸೌಲಭ್ಯ ದೊರಕಿಸುವ ಪ್ರಮಾಣ ಪತ್ರವನ್ನು ವಿತರಿಸಿಲ್ಲ. ಕೂಡಲೇ 371ಜೆ ಕಲಂ ದೃಢೀಕರಣ ಪತ್ರ ವಿತರಿಸಬೇಕು ಎಂದು ಆಗ್ರಹಿಸಿದರು.
ತಾಲೂಕಿನ ಎಲ್ಲಾ ಇಲಾಖೆಗಳಲ್ಲಿ ಅಧಿಕಾರಿಗಳ ಲಂಚಗುಳಿತನದಿಂದ ಜನಸಾಮಾನ್ಯರ ಕೆಲಸ ಕಾರ್ಯಗಳು ನಡೆಯದ ಪರಿಸ್ಥಿತಿ ನಿರ್ಮಾಣವಾಗಿದೆ. ಆದ್ದರಿಂದ ಭ್ರಷ್ಟ ಅಧಿಕಾರಿಗಳನ್ನು ಕೂಡಲೇ ಅಮಾನತುಗೊಳಿಸಬೇಕು.
ಬಗರ್ ಹುಕುಂ ಸಾಗುವಳಿ ಪತ್ರ ವಿತರಣೆಯಲ್ಲಿ ಭಾರಿ ಅವ್ಯವಹಾರ ನಡೆದಿದ್ದು, ಕಾನೂನು ಬಾಹಿರವಾಗಿ ಶ್ರೀಮಂತರು ಮತ್ತು ದೊಡ್ಡ ಜಮೀನುದಾರರಿಗೆ ಪಟ್ಟಾ ವಿತರಿಸಲಾಗಿದ್ದು, ಕೂಡಲೇ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು. ಹಾಗೂ ಕಡು ಬಡವರಿಗೆ ಪಟ್ಟಾ ವಿತರಿಸಬೇಕು ಎಂದು ಒತ್ತಾಯಿಸಿದರು.
ಪಿಟಿಸಿಎಲ್‌ಗೆ ಸಂಬಂಧಿಸಿದ ಜಮೀನುಗಳನ್ನು ನೋಂದಣಿ ಮಾಡುತ್ತಿರುವ ತಾಲೂಕಿನ ಸಬ್ ರಜಿಸ್ಟಾರ್ ಅವರನ್ನು ಅಮಾನತುಗೊಳಿಸಬೇಕು. ಅರಸೀಕೆರೆ, ತೆಲಿಗಿ, ಚಿಗಟೇರಿ ಹೋಬಳಿ ಕೇಂದ್ರಗಳಲ್ಲಿ ಪಹಣಿ ವಿತರಣೆಗೆ ಕ್ರಮ ಕೈಗೊಳ್ಳಬೇಕು. ಪಟ್ಟಣದ ಹಿರೇಕೆರೆ ಸೇರಿದಂತೆ ವಿವಿಧ ಕೆರೆಗಳ ಸಮಗ್ರ ಪುನಶ್ಚೇತನ ಕಾಮಗಾರಿಗಳಲ್ಲಿ ನಡೆದಿರುವ ಅವ್ಯವಹಾರ ತನಿಖೆ ನಡೆಸಿ ಸಣ್ಣ ನೀರಾವರಿ ಇಂಜಿನಿಯರ್ ಅಮಾನತು ಮಾಡಬೇಕು ಎಂದು ಆಗ್ರಹಿಸಿದರು.
ತಾಲೂಕಿನಲ್ಲಿ ಖಾಸಗಿ ಮತ್ತು ಅನುದಾನಿತ ಶಿಕ್ಷಣ ಸಂಸ್ಥೆಗಳು ಕಾನೂನುಬಾಹಿರವಾಗಿ ಪಡೆದಿರುವ ಹೆಚ್ಚುವರಿ ಶುಲ್ಕ ಮತ್ತು ಡೊನೇಷನ್ ಪಡೆದಿರುವ ಸಂಸ್ಥೆಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು. ಹಾಗೂ ತಾಲೂಕಿನಲ್ಲಿ ಅಕ್ರಮ ಮರಳುಗಾರಿಕೆಯನ್ನು ತಡೆಯಬೇಕು. ಅಕ್ರಮ ಮದ್ಯ ಮಾರಾಟಕ್ಕೆ ಕಡಿವಾಣ ಹಾಕಬೇಕು.
ತಾಲೂಕಿನ ಎಲ್ಲಾ ಹಾಸ್ಟೆಲ್‌ಗಳಲ್ಲಿ ವಿದ್ಯಾರ್ಥಿಗಳಿಗೆ ಗುಣಮಟ್ಟದ ಆಹಾರವನ್ನು ಪೂರೈಸಬೇಕು ಎಂದು ಒತ್ತಾಯಿಸಿದರು. ಸಂಘಟನೆ ಮುಖಂಡರಾದ ಸಂದೇರ ಪರುಶುರಾಮ, ಗುಳೇದಹಟ್ಟಿ ಸಂತೋಷ್, ಅಜ್ಜಪ್ಪ, ಕೊಟ್ರೇಶಪ್ಪ, ನಿಂಗಪ್ಪ, ಸುರೇಶ್, ಗುಡ್ಡಪ್ಪ, ಮಾಲತೇಶ್, ಇಬ್ರಾಹಿಂ, ನಾಗರಾಜ್ ಇತರರು ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere: ಬಿಜೆಪಿ-ಕಾಂಗ್ರೆಸ್ ಹೊಂದಾಣಿಕೆ ಆರೋಪದ ಬಗ್ಗೆ ರೇಣುಕಾಚಾರ್ಯ ಸ್ಪಷ್ಟನೆ
Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ ಕಾಂಗ್ರೆಸ್ ಶಾಸಕ
Davangere: 2021ರಲ್ಲಿ ಅಪ್ರಾಪ್ತೆಯನ್ನು ಅಪಹರಿಸಿ ಅತ್ಯಾಚಾರವೆಸಗಿದ್ದವನಿಗೆ ಶಿಕ್ಷೆ ಪ್ರಕಟ
Davanagere: ಪಾಠ ಮಾಡುತ್ತಿದ್ದಾಗಲೇ ಹೃದಯಾಘಾತ; ಶಿಕ್ಷಕ ಸಾವು
ಸಾರಿಗೆ ಬಸ್ ಡಿಪೋ ಪ್ರಾರಂಭಿಸಬೇಕು ಎಂದು ಒತ್ತಾಯಿಸಿ ದಾವಣಗೆರೆ ತಲುಪಿದ ಪಾದಯಾತ್ರೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kundapura ದೊಡ್ಡಾಸ್ಪತ್ರೆಗೆ ವೈದ್ಯರ ಕೊರತೆ
Nelamangala: ಐಷಾರಾಮಿ ಕಾರಿನ ಮೇಲೆ ಬಿದ್ದ ಕಂಟೈನರ್… ಒಂದೇ ಕುಟುಂಬದ 6 ಮಂದಿ ಸಾ*ವು
Google Layoffs: ಉನ್ನತ ಹುದ್ದೆಯ ಉದ್ಯೋಗಿಗಳ ವಜಾ: ಗೂಗಲ್ ಸಿಇಒ ಸುಂದರ್ ಪಿಚೈ
Arrest Warrant: ರಾಬಿನ್ ಉತ್ತಪ್ಪ ವಿರುದ್ದ ಬಂಧನ ವಾರೆಂಟ್; ಜೈಲು ಪಾಲಾಗ್ತಾರಾ ಕ್ರಿಕೆಟಿಗ
Mangaluru: ಕರಾವಳಿ ಉತ್ಸವದಲ್ಲಿ ಹೆಲಿಕಾಪ್ಟರ್ ಮೂಲಕ ನಗರದ ದರ್ಶನಕ್ಕೆ ಅವಕಾಶ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.