ಸೌರಶಕ್ತಿಯಿಂದ ಇ-ವಾಹನ ತಯಾರಿಗೆ ಸಂಶೋಧನೆ
ವಿದ್ಯುತ್ ಚಾಲಿತ, ಹೈಬ್ರಿಡ್ ವಾಹನಗಳಲ್ಲಿ ಸೌರಶಕ್ತಿ ಬಳಕೆ ಕಾರ್ಯ ಸಾಧ್ಯ
Team Udayavani, Mar 13, 2022, 10:55 AM IST
ದಾವಣಗೆರೆ: ಯಾವುದೇ ಅಡೆತಡೆ ಇಲ್ಲದೆ ನಿರಂತರ ಇ-ವಾಹನ ಚಲಾಯಿಸಲು ಸಾಧ್ಯವಾಗಬಹುದಾದ ಹೈಬ್ರಿಡ್ ಸೌರಶಕ್ತಿ ಅಭಿವೃದ್ಧಿಪಡಿಸುವ ಪರಿಕಲ್ಪನೆಯ ಪಿವಿ-ಸೆಲ್ ಮತ್ತು ಡಿಎಸ್‌ಎಸ್‌ಸಿ ಸಂಯೋಜನೆಯ ಸಂಶೋಧನೆ ನಗರದ ಬಾಪೂಜಿ ಎಂಜಿನಿಯರಿಂಗ್ ಕಾಲೇಜಿನಲ್ಲಿ ನಡೆದಿದೆ ಎಂದು ಕಾಲೇಜಿನ ಪ್ರಾಂಶುಪಾಲ ಡಾ| ಎಚ್.ಬಿ. ಅರವಿಂದ್ ತಿಳಿಸಿದರು.
ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಂಗಳೂರಿನ ರೋವ್ ಲ್ಯಾಬ್ಸ್ ಪ್ರೈ ಲಿಮಿಟೆಡ್ ಸಹಯೋಗದಲ್ಲಿ ಕಾಲೇಜಿನಲ್ಲಿ ಸಾಕಷ್ಟು ಸಂಶೋಧನಾ ಯೋಜನೆಗಳನ್ನು ಅಭಿವೃದ್ಧಿಪಡಿಸಲಾಗುತ್ತಿದೆ. ಹೆಚ್ಚುತ್ತಿರುವ ಇಂಧನ ಬೆಲೆಗಳು, ವಾಯುಮಾಲಿನ್ಯ ತಡೆ, ಇಂಧನ ಉಳಿತಾಯದ ಅಗತ್ಯದ ಹಿನ್ನೆಲೆಯಲ್ಲಿ ಸೌರಶಕ್ತಿ ಪರಿಹಾರವಾಗಿದೆ. ವಿದ್ಯುತ್ ಚಾಲಿತ, ಹೈಬ್ರಿಡ್ ವಾಹನಗಳಲ್ಲಿ ಸೌರಶಕ್ತಿ ಬಳಕೆ ಕಾರ್ಯ ಸಾಧ್ಯ. ಅದೇ ರೀತಿ ಕೊಳಚೆ ನೀರಿನಿಂದ ದ್ರವರೂಪದ ನ್ಯಾನೋ ಗೊಬ್ಬರ ತಯಾರಿಸುವ ನಿಟ್ಟಿನಲ್ಲಿ ತಮ್ಮ ಕಾಲೇಜು ವಿದ್ಯಾರ್ಥಿಗಳು ಬೋಧಕರ ಮಾರ್ಗದರ್ಶನದಲ್ಲಿ ಮುಂದಾಗಿದ್ದಾರೆ. ರಾಜ್ಯದ ಪ್ರತಿಷ್ಠಿತ ಎಂಜಿನಿಯರಿಂಗ್ ಕಾಲೇಜುಗಳಲ್ಲೊಂದಾದ ಬಿಐಇಟಿಯಲ್ಲಿ ಸುಮಾರು 25 ಸಾವಿರ ವಿದ್ಯಾರ್ಥಿಗಳು ಓದಿದ್ದು 8ಸಾವಿರಕ್ಕೂ ಅಧಿಕ ವಿದ್ಯಾರ್ಥಿಗಳು ವಿಶ್ವದ ವಿವಿಧೆಡೆ ಪ್ರತಿಷ್ಠಿತ ಕಂಪನಿಗಳಲ್ಲಿ, ಸ್ವಂತ ಕಂಪನಿಗಳನ್ನು ಸ್ಥಾಪಿಸಿಕೊಂಡು
ಸಾಧನೆ ಮಾಡುತ್ತಿದ್ದಾರೆ ಎಂದರು.
ಪ್ರಾಧ್ಯಾಪಕಿ ಡಾ| ಆಶಾಲತಾ ಮಾತನಾಡಿ, ಮಾ. 14ರಂದು ಬೆಳಿಗ್ಗೆ 10:30ಕ್ಕೆ ಕಾಲೇಜಿನ ಎಸ್ಸೆಸ್ಸೆಂ ಸಾಂಸ್ಕೃತಿಕ ಸಭಾಂಗಣದಲ್ಲಿ ವಿಶ್ವ ಮಹಿಳಾ ದಿನಾಚರಣೆ ಹಮ್ಮಿಕೊಂಡಿದ್ದೇವೆ. ಡಾ| ಪ್ರಭಾ ಮಲ್ಲಿಕಾರ್ಜುನ, ಡಾ| ಟಿ.ಕೆ. ಅನುರಾಧ, ಡಾ| ಬಿ.ಇ. ರಂಗಸ್ವಾಮಿ
ಮುಖ್ಯ ಅತಿಥಿಯಾಗಿ ಭಾಗವಹಿಸುವರು. ಕಾಲೇಜು ನಿರ್ದೇಶಕ ಪ್ರೊ.ವೈ.ವೃಷಭೇಂದ್ರಪ್ಪ, ಪ್ರಾಚಾರ್ಯ ಡಾ.ಎಚ್.ಬಿ.ಅರವಿಂದ ಇತರರು ಪಾಲ್ಗೊಳ್ಳುವರು ಎಂದು ತಿಳಿಸಿದರು.
ಕಾಲೇಜಿನ ಬೋಧಕ ಸಾರ್ವಜನಿಕ ಸಂಪರ್ಕ ಡೀನ್ ಡಾ| ಈ.ಪಿ. ದೇಸಾಯಿ, ಡಾ| ಶಂಕರಮೂರ್ತಿ, ಡಾ| ನಿರ್ಮಲ, ಡಾ| ಶರಣ್ ಇತರರು ಸುದ್ದಿಗೋಷ್ಠಿಯಲ್ಲಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere: ವೃದ್ಧೆ ಮೇಲೆ ಅತ್ಯಾ*ಚಾರ; ಯುವಕನಿಗೆ 10 ವರ್ಷ ಕಠಿಣ ಶಿಕ್ಷೆ
Davanagere: ಬಿಜೆಪಿ-ಕಾಂಗ್ರೆಸ್ ಹೊಂದಾಣಿಕೆ ಆರೋಪದ ಬಗ್ಗೆ ರೇಣುಕಾಚಾರ್ಯ ಸ್ಪಷ್ಟನೆ
Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ ಕಾಂಗ್ರೆಸ್ ಶಾಸಕ
Davangere: 2021ರಲ್ಲಿ ಅಪ್ರಾಪ್ತೆಯನ್ನು ಅಪಹರಿಸಿ ಅತ್ಯಾಚಾರವೆಸಗಿದ್ದವನಿಗೆ ಶಿಕ್ಷೆ ಪ್ರಕಟ
Davanagere: ಪಾಠ ಮಾಡುತ್ತಿದ್ದಾಗಲೇ ಹೃದಯಾಘಾತ; ಶಿಕ್ಷಕ ಸಾವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Rule; 5, 8ನೇ ತರಗತಿಯಲ್ಲಿ ಫೈಲ್ ಆದರೆ ಭಡ್ತಿ ನೀಡುವಂತಿಲ್ಲ; ಅದೇ ಕ್ಲಾಸಲ್ಲಿ ಮುಂದುವರಿಕೆ!
Manipur; ಪೊಲೀಸ್ ಇಲಾಖೆಯಲ್ಲಿ ಮೈತೇಯಿ ಮತ್ತು ಕುಕಿಗಳು ಒಟ್ಟಾಗಿ ಕೆಲಸ ಮಾಡಬೇಕು
Team India; ಅಶ್ವಿನ್ ಬದಲಿಯಾಗಿ ಟೀಂ ಇಂಡಿಯಾ ಸೇರಿದ ಕರ್ನಾಟಕ ಕರಾವಳಿ ಮೂಲದ ಸ್ಪಿನ್ನರ್
Kerala; ಸರಕಾರಿ ಶಾಲೆಯಲ್ಲಿ ಕ್ರಿಸ್ಮಸ್ ಆಚರಣೆಗೆ ಅಡ್ಡಿ,ಗೋದಲಿ ಧ್ವಂಸ: ವ್ಯಾಪಕ ಆಕ್ರೋಶ
Kambli Health: ಮಾಜಿ ಕ್ರಿಕೆಟಿಗ ವಿನೋದ್ ಕಾಂಬ್ಳಿ ಆರೋಗ್ಯ ಸ್ಥಿತಿ ಗಂಭೀರ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.