ಶಿಕ್ಷಕರಿಗೆ ಸಂಶೋಧನಾ ಪ್ರವೃತ್ತಿ ಮುಖ್ಯ
Team Udayavani, Sep 13, 2020, 6:11 PM IST
ದಾವಣಗೆರೆ: ಮಕ್ಕಳಿಗೆ ಕಲಿಸುವ ಮತ್ತು ಸ್ವತಃ ಕಲಿಯುವ ವಿಚಾರದಲ್ಲಿ ಶಿಕ್ಷಕರಿಗೆ ಪ್ರೀತಿ, ವ್ಯಾಮೋಹ, ಉತ್ಸಾಹ ಇದ್ದಾಗ ಮಾತ್ರ ಸೇವೆಯಲ್ಲಿ ಸಂತೃಪ್ತಿ ಸಿಗಲು ಸಾಧ್ಯ. ಅಂತಹ ವ್ಯಾಮೋಹವನ್ನು ಪ್ರತಿಯೊಬ್ಬ ಶಿಕ್ಷಕರೂ ಬೆಳೆಸಿಕೊಳ್ಳಬೇಕು ಎಂದು ನಿವೃತ್ತ ಪ್ರಾಂಶುಪಾಲ ಡಾ| ಎಚ್.ವಿ. ವಾಮದೇವಪ್ಪ ಹೇಳಿದರು.
ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಹಮ್ಮಿಕೊಂಡಿದ್ದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸುವ, ಅವರಲ್ಲಿರುವ ಪ್ರತಿಭೆಯನ್ನು ಗುರುತಿಸಿ ಬೆಳಕಿಗೆ ತರುವ ಗುಣ ಬೇಕು. ಆಳವಾದ ಕಳಕಳಿ, ಅತ್ಯುತ್ತಮ ಕಲಿಸುವಿಕೆ ಜೊತೆಗೆ ಸಂಶೋಧನಾರ್ಥಿಯಾಗಿಯೂ ಇರಬೇಕು ಎಂದರು.
ಅಧ್ಯಕ್ಷತೆ ವಹಿಸಿದ್ದ ಕುಲಪತಿ ಪ್ರೊ| ಶರಣಪ್ಪ ವಿ. ಹಲಸೆ ಮಾತನಾಡಿ, ಮಕ್ಕಳಲ್ಲಿ ಸೃಜನಶೀಲ ಶಿಕ್ಷಣ, ಸಾಮಾಜಿಕ ಬದ್ಧತೆ, ಮಾನವೀಯ ಮೌಲ್ಯ, ಸಮುದಾಯ ಸಂಬಂಧಗಳ ಮೂಲಕ ಉನ್ನತ ಬದುಕನ್ನು ಕಟ್ಟಿಕೊಳ್ಳುವ ನಿಟ್ಟಿನಲ್ಲಿ ಶಿಕ್ಷಕರು ಪಾಠ ಕಲಿಸಬೇಕು ಎಂದು ತಿಳಿಸಿದರು.
ಕುಲಸಚಿವ ಪ್ರೊ| ಬಸವರಾಜ ಬಣಕಾರ, ಪರೀಕ್ಷಾಂಗ ಕುಲಸಚಿವೆ ಪ್ರೊ| ಎಚ್.ಎಸ್. ಅನಿತಾ, ಹಣಕಾಸು ಅಧಿಕಾರಿ ಪ್ರೊ| ಗೋಪಾಲ ಎಂ. ಅಡವಿರಾವ್, ಕಲಾ ನಿಕಾಯದ ಡೀನ್ ಪ್ರೊ| ಕೆ.ಬಿ. ರಂಗಪ್ಪ, ವಿಜ್ಞಾನ ನಿಕಾಯದ ಡೀನ್ ಪ್ರೊ| ವಿ. ಕುಮಾರ್, ಐಕ್ಯೂಎಸಿ ನಿರ್ದೇಶಕಿ ಪ್ರೊ|ಗಾಯತ್ರಿ ದೇವರಾಜ್, ಡಾ| ಭೀಮಾಶಂಕರ ಜೋಶಿ ಮಾತನಾಡಿದರು. ಹಿಂದುಳಿದ ವರ್ಗಗಳ ಅಭಿವೃದ್ಧಿ ಘಟಕದ ಸಂಯೋಜನಾಧಿಕಾರಿ ಕುಮಾರ್ ಸಿದ್ಧಮಲ್ಲಪ್ಪ ಸ್ವಾಗತಿಸಿದರು. ಡಾ| ರಮೇಶ್ ಚಂದ್ರಹಾಸ್ ವಂದಿಸಿದರು. ಡಾ| ಶಶಿಕಲಾನಿರೂಪಿಸಿದರು. ಇದೇ ಸಂದರ್ಭದಲ್ಲಿ ಕಳೆದ ಶೈಕ್ಷಣಿಕ ಸಾಲಿನಲ್ಲಿ ಅತಿ ಹೆಚ್ಚು ಸಂಶೋಧನಾ ಪ್ರಬಂಧ ಮಂಡಿಸಿದ ಪ್ರಾಧ್ಯಾಪಕರಿಗೆ ಐಕ್ಯೂಎಸಿ ವತಿಯಿಂದ ಅಭಿನಂದನಾ ಪ್ರಮಾಣಪತ್ರ ವಿತರಿಸಲಾಯಿತು.
ಮಕ್ಕಳಲ್ಲಿ ಸೃಜನಶೀಲ ಶಿಕ್ಷಣ, ಸಾಮಾಜಿಕ ಬದ್ಧತೆ, ಮಾನವೀಯ ಮೌಲ್ಯ, ಸಮುದಾಯ ಸಂಬಂಧಗಳ ಮೂಲಕ ಉನ್ನತ ಬದುಕನ್ನು ಕಟ್ಟಿಕೊಳ್ಳುವ ನಿಟ್ಟಿನಲ್ಲಿ ಶಿಕ್ಷಕರು ಬೋಧನೆ ಮಾಡಬೇಕು. – ಪ್ರೊ| ಶರಣಪ್ಪ ವಿ. ಹಲಸೆ, ದಾವಿವಿ ಕುಲಪತಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere: ಇನ್ಶೂರೆನ್ಸ್ ಹಣಕ್ಕಾಗಿ ಸಂಬಂಧಿಯ ಕೊಲೆ; 24 ಗಂಟೆಯೊಳಗೆ ನಾಲ್ವರ ಬಂಧನ
Davanagere: ದೇವಸ್ಥಾನಗಳ ಆಸ್ತಿಗಳ ರಕ್ಷಣೆಗೆ ರಾಜ್ಯ ಸರ್ಕಾರ ಮುಂದಾಗಬೇಕು: ಪೇಜಾವರ ಶ್ರೀ
ಅಂಗಡಿಯಲ್ಲಿ ಬಿಟ್ಟು ಹೋಗಿದ್ದ 1.20 ಲ.ರೂ ಹಿಂದಿರುಗಿಸಿ ಮಾನವೀಯತೆ ಮೆರೆದ ಶಾಸಕ ಬಸವಂತಪ್ಪ
Waqf Protest: ರೇಣುಕಾಚಾರ್ಯ, ಗಾಯಿತ್ರಿ ಸಿದ್ದೇಶ್ವರ ಸೇರಿ ಹಲವರು ಪೊಲೀಸ್ ವಶಕ್ಕೆ
Waqf Property: “ವಕ್ಫ್ ಆಸ್ತಿ ಕಬಳಿಕೆ ವಿರುದ್ಧ ಸಿಎಂ ಸಿಬಿಐ, ಎಸ್‌ಐಟಿ ತನಿಖೆ ಮಾಡಿಸಲಿ”
MUST WATCH
ಹೊಸ ಸೇರ್ಪಡೆ
Waqf Bill: ಜೆಪಿಸಿ ಅಧ್ಯಕ್ಷರ ಭೇಟಿ ಚುನಾವಣ ನಿಯಮ ಉಲ್ಲಂಘನೆ: ಸಚಿವ ಪ್ರಿಯಾಂಕ್
MUDA: ಆರೋಪಿ ಸ್ಥಾನದಲ್ಲಿರುವ ಸಿಎಂ ತಮ್ಮ ಬೆನ್ನು ತಾವೇ ತಟ್ಟಿಕೊಳ್ಳುತ್ತಿದ್ದಾರೆ: ಬಿವೈವಿ
By Election: ಒಬ್ಬ ಯುವಕನ ಕಟ್ಟಿ ಹಾಕಲು ಬೀಡುಬಿಟ್ಟ ಕೈ ನಾಯಕರ ದಂಡು: ಎಚ್.ಡಿ.ಕುಮಾರಸ್ವಾಮಿ
Rahul Gandhi ಗುರಿ ತಪ್ಪಿದ ಕ್ಷಿಪಣಿ, ಸೋನಿಯಾರಿಂದ ತರಬೇತಿ ಅಗತ್ಯ: ಹಿಮಾಂತ
Delhi; ಕಾನೂನು ಅಧಿಕಾರಿ ನಿವಾಸದಲ್ಲಿ 3.79 ಕೋಟಿ ನಗದು ಸಿಬಿಐನಿಂದ ವಶಕ್ಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.