ಖಾಸಗಿ ವಲಯದಲ್ಲೂ ಮೀಸಲಾತಿ ಅಗತ್ಯ: ಅನೀಸ್ ಪಾಷಾ
Team Udayavani, Jun 12, 2017, 1:40 PM IST
ದಾವಣಗೆರೆ: ಖಾಸಗಿ ವಲಯದಲ್ಲೂ ಮೀಸಲಾತಿ ದೊರಕುವಂತೆ ಸರ್ಕಾರಗಳು ಕ್ರಮ ವಹಿಸಬೇಕು ಎಂದು ಕೋಮು ಸೌಹಾರ್ದ ವೇದಿಕೆಯ ಗೌರವಾಧ್ಯಕ್ಷ ಅನೀಸ್ ಪಾಷಾ ಹೇಳಿದ್ದಾರೆ.
ಭಾನುವಾರ ರಾಜ್ಯ ವರ್ಕ್‌ಶಾಪ್ ಕಾರ್ಮಿಕರ ಕ್ಷೇಮಾಭಿವೃದ್ದಿ ಸಂಘ, ದಾವಣಗೆರೆ ಕಟ್ಟಡ ಕಾರ್ಮಿಕರ ಕ್ಷೇಮಾಭಿವೃದ್ಧಿ ಸಂಘ, ಕರ್ನಾಟಕ ವಿದ್ಯಾರ್ಥಿ ಸಂಘಟನೆಯಿಂದ ರೋಟರಿ ಬಾಲಭವನದಲ್ಲಿ ಹಮ್ಮಿಕೊಂಡಿದ್ದ ಕಾರ್ಮಿಕರ ದಿನಾಚರಣೆ, ಕಾರ್ಮಿಕರ ಮಕ್ಕಳಿಗೆ ಅಭಿನಂದನಾ ಸಮಾರಂಭ, ಇಫ್ತಿಯಾರ್ ಕೂಟ ಉದ್ಘಾಟಿಸಿ, ಮಾತನಾಡಿದರು.
ಇಂದು ಕಾರ್ಮಿಕರ ಸ್ಥಿತಿ ತೀರಾ ಶೋಚನೀಯವಾಗಿದೆ. ದಲಿತ, ಹಿಂದುಳಿದವರಂತೂ ಕೆಲಸಕ್ಕಾಗಿ ಪರದಾಡುವ ಸ್ಥಿತಿ ಇದೆ. ಸರ್ಕಾರ ಖಾಸಗಿ ವಲಯದಲ್ಲೂ ಮೀಸಲಾತಿ ನೀಡುವ ಮೂಲಕ ಎಲ್ಲಾ ರಂಗದಲ್ಲೂ ಹಿಂದುಳಿದವರಿಗೆ ಕೆಲಸ ಸಿಗುವ ಹಾಗೆಮಾಡಬೇಕಿದೆ ಎಂದರು. ಖಾಸಗಿ ವಲಯದಲ್ಲಿ ಮೀಸಲಾತಿ ನೀಡಿದರೂ ಕೆಲ ಸಮಸ್ಯೆಗಳು ಎದುರಾಗುವ ಸಾಧ್ಯತೆ ಇದೆ.
ಅವುಗಳ ಕುರಿತು ಕೂಲಂಕೂಷ ವಿಚಾರ ಮಾಡಿ, ಸೂಕ್ತ ನಿಯಮಾವಳಿ ರೂಪಿಸಿ, ಮೀಸಲಾತಿ ನೀಡಲು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು. ಎಲ್ಲಾ ಸರ್ಕಾರಿ ಸ್ವಾಮ್ಯದ ಕಂಪನಿಗಳನ್ನು ಖಾಸಗೀಕರಣಗೊಳಿಸಿ, ಸಾರ್ವಜನಿಕ ಸ್ವಾಮ್ಯಕ್ಕೆ ತರುವ ಹುನ್ನಾರ ನಡೆಯುತ್ತಿದೆ.
ಇದರಿಂದ ಸಮಾಜದಲ್ಲಿ ಸಮಾನತೆ, ಬಡವರ ಏಳಿಗೆ ಚಿಂತನೆ ಇಲ್ಲದೆ ಕೇವಲ ದುಡ್ಡು ಮತ್ತು ಆಧಿಕಾರದ ಛಲವುಳ್ಳ ಮುಮಚೂಣಿಗೆ ಬರುವ ಬಂಡವಾಳಶಾಹಿ ಕಂಪನಿಗಳಿಂದ ಕಾರ್ಮಿಕ ವಲಯಕ್ಕೆ ಅನ್ಯಾಯವಾಗಲಿದೆ ಎಂದು ಹೇಳಿದರು. ಇದೀಗ ಕಾರ್ಮಿಕ ಕ್ಷೇತ್ರದಲ್ಲಿ ಜಾತೀಯತೆ ಪ್ರವೇಶಿಸಿದ್ದು, ಜಾತಿ, ಧರ್ಮ ವಿಷ ಬೀಜವನ್ನು ಬಿತ್ತಲಾಗುತ್ತಿದೆ.
ಇದರಿಂದ ಎಲ್ಲಾ ವಿಭಾಗದಲ್ಲೂ ತಾರತಮ್ಯ ನೋಡುವಂತಹ ಸ್ಥಿತಿ ಇಂದು ನಿರ್ಮಾಣ ಆಗಿದೆ. ಜಾತಿ ಆಧಾರದಲ್ಲಿ ಕಾರ್ಮಿಕರ ನೇಮಕಮಾಡಿಕೊಳ್ಳುತ್ತಾ ಹೋದರೆ ಮುಂದೆ ದೇಶಕ್ಕೆ ದೊಡ್ಡ ಕಂಟಕ ಬಂದೊದಗಲಿದೆ ಎಂದು ಹೇಳಿದರು. ಜೆಡಿಎಸ್ ಯುವ ಘಟಕದ ಜಿಲ್ಲಾಧ್ಯಕ್ಷ ಜೆ. ಅಮಾನುಲ್ಲಾ ಖಾನ್ ಮಾತನಾಡಿದರು.
ದೇಶಕ್ಕೆ ಭದ್ರ ಬುನಾದಿ ಹಾಕಿಕೊಟ್ಟ ಕಾರ್ಮಿಕ ಶಕ್ತಿ ಪ್ರಸ್ತುತ ಪಟ್ಟಭದ್ರ ಹಿತಾಸಕ್ತಿಗಳು ಒಡೆದು ಆಳುವ ನೀತಿ ಅನುಸರಿಸುತ್ತಿರುವುದರಿಂದ ಸೌಲಭ್ಯ ಸಿಗದಂತೆ ಆಗಿದೆ. ಕಾರ್ಮಿಕರನ್ನು ಜೀತದಾಳು ರೀತಿ ನೋಡಲಾಗುತ್ತಿದೆ ಎಂದರು. ವರ್ಕ್‌ಶಾಪ್ ಕಾರ್ಮಿಕರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಜಮೀಲ್ ಅಹ್ಮದ್ ಬಳ್ಳಾರಿ ಅಧ್ಯಕ್ಷತೆ ವಹಿಸಿದ್ದರು. ಕರ್ನಾಟಕ ವಿದ್ಯಾರ್ಥಿ ಸಂಘಟನೆಯ ಸತೀಶ್ ಅರವಿಂದ್, ಸೈಯದ್ ಅಶಕ್, ಉಷಾ ಎಚ್. ಕೈಲಾಸದ್, ಇಪಾ ಕಲಾವಿದ ಐರಣಿ ಚಂದ್ರು ವೇದಿಕೆಯಲ್ಲಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere: ವೃದ್ಧೆ ಮೇಲೆ ಅತ್ಯಾ*ಚಾರ; ಯುವಕನಿಗೆ 10 ವರ್ಷ ಕಠಿಣ ಶಿಕ್ಷೆ
Davanagere: ಬಿಜೆಪಿ-ಕಾಂಗ್ರೆಸ್ ಹೊಂದಾಣಿಕೆ ಆರೋಪದ ಬಗ್ಗೆ ರೇಣುಕಾಚಾರ್ಯ ಸ್ಪಷ್ಟನೆ
Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ ಕಾಂಗ್ರೆಸ್ ಶಾಸಕ
Davangere: 2021ರಲ್ಲಿ ಅಪ್ರಾಪ್ತೆಯನ್ನು ಅಪಹರಿಸಿ ಅತ್ಯಾಚಾರವೆಸಗಿದ್ದವನಿಗೆ ಶಿಕ್ಷೆ ಪ್ರಕಟ
Davanagere: ಪಾಠ ಮಾಡುತ್ತಿದ್ದಾಗಲೇ ಹೃದಯಾಘಾತ; ಶಿಕ್ಷಕ ಸಾವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Intervention: ಗೃಹ ಇಲಾಖೆಯಲ್ಲಿ ಯಾರ ಹಸ್ತಕ್ಷೇಪವೂ ಇಲ್ಲ: ಸಚಿವ ಪರಮೇಶ್ವರ್
Encounter: ಉತ್ತರಪ್ರದೇಶದಲ್ಲಿ ಎನ್‌ಕೌಂಟರ್: 3 ಶಂಕಿತ ಖಲಿಸ್ಥಾನಿ ಉಗ್ರರ ಹತ್ಯೆ
Investment: 9.8 ಸಾವಿರ ಕೋಟಿ ರೂ. 9 ಯೋಜನೆಗೆ ಒಪ್ಪಿಗೆ: ಸಿಎಂ ಸಿದ್ದರಾಮಯ್ಯ
Growers Meet: ಕಾಫಿಗೆ ಜಗತ್ತಿನೆಲ್ಲೆಡೆ ಮಾರುಕಟ್ಟೆ ಸೃಷ್ಟಿ ಅಗತ್ಯ: ಪಿಯೂಷ್ ಗೋಯಲ್
Congress Government: ಸಿದ್ದರಾಮಯ್ಯ ಅವಧಿಯಲ್ಲೇ ದ್ವೇಷದ ರಾಜಕಾರಣ ಬೇಸರ ತಂದಿದೆ: ಸೋಮಣ್ಣ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.