ಅನ್ನದಾತರ ಸಂಕಷ್ಟಕ್ಕೆ ಸ್ಪಂದಿಸಿ
Team Udayavani, Nov 10, 2017, 3:06 PM IST
ದಾವಣಗೆರೆ: ಬೆಳೆ ನಷ್ಟ ಪರಿಹಾರ ಸೇರಿ ವಿವಿಧ ಬೇಡಿಕೆ ಈಡೇರಿಸಲು ಆಗ್ರಹಿಸಿ, ಭಾರತೀಯ ಕಿಸಾನ್ ಸಂಘ ಗುರುವಾರ ಮೆರವಣಿಗೆ ನಡೆಸಿ, ಜಿಲ್ಲಾಧಿಕಾರಿ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದೆ.
ಜಯದೇವ ವೃತ್ತದಿಂದ ಮೆರವಣಿಗೆ ಆರಂಭಿಸಿದ ಸಂಘದ ಕಾರ್ಯಕರ್ತರು ಪಿಬಿ ರಸ್ತೆ ಮೂಲಕ ಉಪವಿಭಾಗಾಧಿಕಾರಿ ಕಚೇರಿ ತಲುಪಿ, ಮನವಿ ಸಲ್ಲಿಸಿದ್ದಾರೆ. ಇದಕ್ಕೂ ಮುನ್ನ ಬಹಿರಂಗ ಸಭೆ ಉದ್ದೇಶಿಸಿ ಮಾತನಾಡಿದ ಸಂಘದ ಕಾರ್ಯದರ್ಶಿ ಪ್ರವೀಣ್ ರಾಂಪುರ, ಮಳೆ ಕೊರತೆಯಿಂದಾಗಿ ಮಳೆಯಾಶ್ರಿತ ಪ್ರದೇಶಗಳಲ್ಲಿ, ವಿದ್ಯುತ್ ಸಮಸ್ಯೆಯಿಂದ ನೀರಾವರಿ ಪ್ರದೇಶದಲ್ಲಿ ಮೆಕ್ಕೆಜೋಳ, ಅಡಕೆ, ರಾಗಿ, ಭತ್ತ, ಕಬ್ಬು ಮುಂತಾದ ಬೆಳೆ ನಿರೀಕ್ಷಿತ ಇಳುವರಿ ಸಿಕ್ಕಿಲ್ಲ. ಕೆಲ ಕಡೆ ಸಂಪೂರ್ಣ ಕೈಕೊಟ್ಟಿವೆ. ಆದರೂ ಬೆಳೆ ನಷ್ಟ ಪರಿಹಾರದ ವಿಷಯದಲ್ಲಿ ಸರ್ಕಾರ ತಾರತಮ್ಯ ಎಸಗುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಇನ್ನು ಬೆಳೆ ವಿಮೆ ವಿಷಯದಲ್ಲೂ ರೈತರಿಗೆ ಅನ್ಯಾಯ ಆಗಿದೆ. ಎಲ್ಲಾ ರೈತರು ವೈಯುಕ್ತಿಕವಾಗಿ ವಿಮೆ ಕಟ್ಟಿದ್ದಾರೆ. ಇದರ
ಆಧಾರದಲ್ಲಿ ವಿಮಾ ಕಂಪನಿ ಪರಿಹಾರ ನೀಡಬೇಕು. ಆದರೆ, ವಿಮಾ ಕಂಪನಿ ತನ್ನದೇ ನಿಯಮ ಪಾಲಿಸಿ, ವಿಮಾ ಹಣ
ನೀಡುವುದಾಗಿ ಹೇಳುತ್ತಿದೆ. ಇದು ಅನ್ಯಾಯ. ಇದನ್ನ ಸರ್ಕಾರ ಮೌನವಾಗಿ ನೋಡಿಕೊಂಡು ಹೋಗುತ್ತಿರುವುದು ಬೇಸರದ ಸಂಗತಿ ಎಂದು ಅವರು ತಿಳಿಸಿದರು. ಮೆಕ್ಕೆಜೋಳ, ರಾಗಿ, ತರಕಾರಿ ಬೆಳೆಗೆ ಇದೀಗ ಸೈನಿಕ ಹುಳು ಬಾಧೆಯಿಂದ ಬೆಳೆ ಸಂಪೂರ್ಣ ನಾಶವಾಗಿದೆ. ಇಂತಹ ಸಂದರ್ಭದಲ್ಲಿ ಸರ್ಕಾರ ರೈತರ ಕಡೆ ನೋಡಲು ಸಿದ್ಧವಿಲ್ಲ. ಇತ್ತ ರೈತರು ನಿತ್ಯ ಜೀವನ ನಡೆಸಲು ಪರದಾಡುತ್ತಿದ್ದಾರೆ. ಇದನ್ನು ಅರಿತು ಸರ್ಕಾರ ಪರಿಹಾರ ನೀಡಬೇಕು. ಭದ್ರಾ ಮೇಲ್ದಂಡೆ ಯೋಜನೆ ಹಾಗೂ ಬಾಕಿ ಇರುವ ಇತರೆ ನೀರಾವರಿ ಯೋಜನೆ ಕಾಮಗಾರಿಗಳು ತುರ್ತಾಗಿ ಪೂರ್ಣಗೊಳಿಸಬೇಕು ಎಂದು ಆಗ್ರಹಿಸಿದರು.
ಶೇಖರಪ್ಪ, ಪ್ರಸನ್ನ, ಮಂಜುನಾಥ, ಧನಂಜಯ, ವೆಂಕಟೇಶ, ನೀಲಕಂಠಪ್ಪ, ಶ್ರೀನಿವಾಸ್, ಶಾಂತಪ್ಪಗೌಡ, ಮಹಾರುದ್ರಪ್ಪ,
ಕಲ್ಲಪ್ಪ ಕಕ್ಕರಗೊಳ್ಳ ಮೆರವಣಿಗೆ ನೇತೃತ್ವ ವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Save Life: ಆಯತಪ್ಪಿ ಬಿದ್ದು ರೈಲಿನಡಿ ಸಿಲುಕುತ್ತಿದ್ದ ಪ್ರಯಾಣಿಕನ ಕಾಪಾಡಿದ ಹೋಂಗಾರ್ಡ್!
Davanagere: ಕಾಂತರಾಜ್ ವರದಿ ಸ್ವೀಕರಿಸಿ ಬಹಿರಂಗಪಡಿಸಿ: ಸಿಎಂಗೆ ಆಂಜನೇಯ ಮನವಿ
Davangere: ಮದುವೆಯಾಗುವುದಾಗಿ ಯುವತಿಯರಿಗೆ 62 ಲಕ್ಷ ರೂ.ಗೂ ಹೆಚ್ಚು ವಂಚಿಸಿದವನ ಬಂಧನ
Davangere: ಮಹಿಳೆಯ ಮೇಲೆ ಕರಡಿ ದಾಳಿ
Congress Govt.,: ಅಬಕಾರಿ ಡೀಲರ್‌ಗಳಿಂದ ಸರ್ಕಾರಕ್ಕೆ 900 ಕೋಟಿ ರೂ. ಸಲ್ಲಿಕೆ: ಅಶೋಕ್
MUST WATCH
ಹೊಸ ಸೇರ್ಪಡೆ
Padubidri: ನವವಿವಾಹಿತೆಗೆ ಕಿರುಕುಳ; ಪತಿಯ ಮನೆಮಂದಿ ವಿರುದ್ಧ ದೂರು
Karkala: ಗೋವಾ ಮದ್ಯ ಅಕ್ರಮ ದಾಸ್ತಾನು ಪ್ರಕರಣ; ಆರೋಪಿಗಳ ಪತ್ತೆಗೆ ವಿಶೇಷ ತಂಡ ರಚನೆ
Karkala: ದ್ವೇಷ ಭಾವನೆ ಕೆರಳಿಸುವ ಆರೋಪ; ದೂರು ದಾಖಲು
PoK ಪ್ರದೇಶದಲ್ಲಿ ಚಾಂಪಿಯನ್ಸ್ ಟ್ರೋಫಿ ಪಂದ್ಯಗಳು: ಬಿಸಿಸಿಐ ನಿಂದ ತೀವ್ರ ಖಂಡನೆ
Congress: ಸರ್ಕಾರದಲ್ಲಿ ಒಬ್ಬರು ಏತಿ ಅಂದರೆ ಮತ್ತೊಬ್ಬರು ಪ್ರೇತಿ ಅಂತಾರೆ: ಆರ್.ಅಶೋಕ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.