ಪರಿವರ್ತನಾ ಯಾತ್ರೆ ಜವಾಬ್ದಾರಿ ಸ್ಥಳೀಯ ನಾಯಕರಿಗೆ
Team Udayavani, Dec 23, 2017, 1:29 PM IST
ಹರಪನಹಳ್ಳಿ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ಜ.3ರಂದು ಪಟ್ಟಣದಲ್ಲಿ ನಡೆಯುವ ಪರಿವರ್ತನಾ ಯಾತ್ರೆ ಸಂಘಟಿಸುವ ಸಂಪೂರ್ಣ ಜವಾಬ್ದಾರಿಯನ್ನು ಪಕ್ಷದ ವರಿಷ್ಠರು ಸ್ಥಳೀಯ ಬಿಜೆಪಿ ಮುಖಂಡರಿಗೆ ನೀಡಿದ್ದಾರೆ ಎಂದು ಬಿಜೆಪಿ ಮುಖಂಡ ಪಿ.ಮಹಾಬಲೇಶ್ವರೌಡ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿ ರಾಜ್ಯ ಸಮಿತಿ ಆದೇಶದಂತೆ ಜಿಲ್ಲಾ ಘಟಕದ ಅಧ್ಯಕ್ಷ ಯಶವಂತರಾವ್ ಜಾಧವ್, ಸಂಸದ ಜಿ.ಎಂ. ಸಿದ್ದೇಶ್ವರ್ ಅವರು ನಮಗೆ ಪರಿವರ್ತನಾ ಯಾತ್ರೆಯ ಸಮಾರಂಭವನ್ನು ಸಂಘಟಿಸಿ ಯಶಸ್ವಿಗೆ ಶ್ರಮಿಸಬೇಕು ಎಂದು ಸೂಚಿಸಿದ್ದಾರೆ ಎಂದು ಹೇಳಿದರು. ಪರಿವರ್ತನಾ ಯಾತ್ರೆ ಅಂಗವಾಗಿ ಈಗಾಗಲೇ ತಾಲೂಕು ಕ್ರೀಡಾಂಗಣದಲ್ಲಿ ಬೃಹತ್ ಸಮಾರಂಭ ಆಯೋಜಿಸಲು ಸ್ಥಳೀಯ ಪೊಲೀಸ್ ಇಲಾಖೆಯಿಂದ ಸ್ಥಳ ಹಾಗೂ ಮೈಕ್ ಪರವಾನಿಗೆ ತೆಗೆದುಕೊಂಡಿ¨ªೇವೆ. ನಮ್ಮಲ್ಲಿ ಯಾವುದೇ ಗೊಂದಲವಿಲ್ಲ. ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಯಾತ್ರೆಯನ್ನು ಯಶಸ್ವಿಗೊಳಿಸುತ್ತೇವೆ. ಸುಮಾರು 30-50 ಸಾವಿರ ಜನರು ಸೇರುವ ನಿರೀಕ್ಷೆ ಇದೆ ಎಂದರು. ಮುಖಂಡ ಜಿ.ನಂಜನಗೌಡ ಮಾತನಾಡಿ, ಕಳೆದ 10 ವರ್ಷಗಳ ನಂತರ ಸ್ಥಳೀಯ ನಾಯಕತ್ವಕ್ಕೆ ಮನ್ನಣೆ ಸಿಕ್ಕಿದೆ.
ವಿಧಾನಸಭಾ ಚುನಾವಣೆಗೆ ಬಿಜೆಪಿಯಿಂದ ಸ್ಥಳೀಯರೇ ಅಭ್ಯರ್ಥಿಯಾಗಬೇಕು ಎಂಬ ಕೂಗಿಗೆ ಸ್ಪಂದನೆ ದೊರೆತಿದೆ. ಪರಿವರ್ತನಾ ಯಾತ್ರೆಯಿಂದ ತಾಲೂಕಿನ ಬಿಜೆಪಿಯಲ್ಲಿಯೂ ಪರಿವರ್ತನೆಯಾಗಲಿವೆ ಎಂದರು. ಮುಖಂಡ ಎನ್.ಕೊಟ್ರೇಶ್ ಮಾತನಾಡಿ, ಯಡಿಯೂರಪ್ಪನವರ ಜೊತೆ ಮಾಜಿ ಸಚಿವರಾದ ಶೋಭಾ ಕರಂದ್ಲಾಜೆ, ಸಿ.ಟಿ. ರವಿ, ಗೋವಿಂದ ಕಾರಜೋಳ, ಅರವಿಂದ ಲಿಂಬಾವಳಿ, ಎಸ್.ಎ.ರವೀಂದ್ರನಾಥ, ಸಂಸದ ಜಿ.ಎಂ. ಸಿ¨ªೇಶ್ವರ, ಮಾಜಿ ಶಾಸಕ ಎಸ್.ವಿ. ರಾಮಚಂದ್ರಪ್ಪ, ಜಿಲ್ಲಾಧ್ಯಕ್ಷ ಯಶವಂತರಾವ್ ಜಾಧವ್ ಸೇರಿದಂತೆ ಅನೇಕ ಗಣ್ಯರು ಆಗಮಿಸಲಿದ್ದಾರೆ. ಅಂದು ಸಂಜೆ 6 ಗಂಟೆಗೆ ತಾಲೂಕು ಕ್ರೀಡಾಂಗಣದಲ್ಲಿ ಪರಿವರ್ತನಾ ರ್ಯಾಲಿ ಕಾರ್ಯಕ್ರಮ ನಡೆಯಲಿದ್ದು, ಪಟ್ಟಣದ ಹಿರೆಕೆರೆ ವೃತ್ತದಿಂದ ಡಾಂಗಣದವರೆಗೆ ಯಡಿಯೂರಪ್ಪ ಹಾಗೂ ಮುಖಂಡರ ಮೆರವಣಿಗೆ ನಡೆಯಲಿದೆ. ಕಾರ್ಯಕ್ರಮ ನಂತರ ಯಡಿಯೂರಪ್ಪನವರು ಅಂದು ಹರಪನಹಳ್ಳಿನಲ್ಲಿಯೇ ವಾಸ್ತವ್ಯ ಹೂಡಲಿದ್ದಾರೆ ಎಂದು ತಿಳಿಸಿದರು. ಮುಖಂಡರಾದ ಆರುಂಡಿ ನಾಗರಾಜ್, ತಾಪಂ ಸದಸ್ಯರಾದ ವೆಂಕಟೇಶರೆಡ್ಡಿ, ಗಣೇಶ್, ಪ್ರಕಾಶ, ಜಿಪಂ ಸದಸ್ಯ ಸಿದ್ದಪ್ಪ, ಮೈದೂರು ರಾಮಪ್ಪ, ಚಿಕ್ಕೇರಿ ವೆಂಕಪ್ಪ, ಎಚ್.ಎಂ.ಜಗದೀಶ್, ಗುಂಡಗತ್ತಿ ಮಂಜುನಾಥ್, ಓಂಕಾರಗೌಡ, ತೆಲಿಗಿ ಮಂಜುನಾಥ್, ಎನ್.ಹರೀಶ್, ತೇಜು ನೀಲಗುಂದ ಸೇರಿದಂತೆ ಅನೇಕರು ಸುದ್ದಿಗೋಷ್ಠಿಯಲ್ಲಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere: ವೃದ್ಧೆ ಮೇಲೆ ಅತ್ಯಾ*ಚಾರ; ಯುವಕನಿಗೆ 10 ವರ್ಷ ಕಠಿಣ ಶಿಕ್ಷೆ
Davanagere: ಬಿಜೆಪಿ-ಕಾಂಗ್ರೆಸ್ ಹೊಂದಾಣಿಕೆ ಆರೋಪದ ಬಗ್ಗೆ ರೇಣುಕಾಚಾರ್ಯ ಸ್ಪಷ್ಟನೆ
Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ ಕಾಂಗ್ರೆಸ್ ಶಾಸಕ
Davangere: 2021ರಲ್ಲಿ ಅಪ್ರಾಪ್ತೆಯನ್ನು ಅಪಹರಿಸಿ ಅತ್ಯಾಚಾರವೆಸಗಿದ್ದವನಿಗೆ ಶಿಕ್ಷೆ ಪ್ರಕಟ
Davanagere: ಪಾಠ ಮಾಡುತ್ತಿದ್ದಾಗಲೇ ಹೃದಯಾಘಾತ; ಶಿಕ್ಷಕ ಸಾವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Arrested: ನಟ ಸುನಿಲ್ ಪಾಲ್, ಮುಸ್ತಾಕ್ ಅಪಹರಣ; ಎನ್‌ಕೌಂಟರ್ ಮೂಲಕ ಪ್ರಮುಖ ಆರೋಪಿ ಬಂಧನ
Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ
Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್‌ಗಳ ವಿರುದ್ಧ ಕೇಸ್
ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ
Bengaluru: ಮಹಿಳೆಯರಿಗೆ ನೌಕರಿ ಆಮಿಷ ತೋರಿಸಿ ವೇಶ್ಯಾವಾಟಿಕೆಗೆ ಬಳಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.