ಸಾಮೂಹಿಕ ವಿವಾಹ ಬಡವರಿಗೆ ಸಂಜೀವಿನಿ
Team Udayavani, Feb 25, 2017, 1:26 PM IST
ಹರಪನಹಳ್ಳಿ: ಜೀವನ ನಡೆಸುವುದೇ ಕಷ್ಟಕರವಾದ ಇಂದಿನ ದಿನಗಳಲ್ಲಿ ಮದುವೆ ಎಂಬುದು ಅದರಲ್ಲೂ ಹೆಣ್ಣು ಹೆತ್ತ ತಂದೆ, ತಾಯಂದಿರಗೆ ನೀಗಲಾರದ ನೋವು. ಇಂತಹ ಪರಿಸ್ಥಿತಿಯಲ್ಲಿ ಶ್ರೀಗಳು ಹಮ್ಮಿಕೊಂಡಿರುವ ಸಾಮೂಹಿಕ ವಿವಾಹ ಕಾರ್ಯ ಬಡವರಿಗೆ ಸಂಜೀವಿನಿ ಇದ್ದಂತೆ ಎಂದು ತೆಗ್ಗಿನಮಠ ಸಂಸ್ಥಾನದ ಪೀಠಾಧ್ಯಕ್ಷ ವರಸದ್ಯೋಜಾತ ಸ್ವಾಮೀಜಿ ಹೇಳಿದರು.
ತಾಲೂಕಿನ ನೀಲಗುಂದ ಗ್ರಾಮದ ಗುಡ್ಡದ ವಿರಕ್ತಮಠದ ಆವರಣದಲ್ಲಿ ಹಮ್ಮಿಕೊಂಡಿದ್ದ ಶ್ರೀಮಠದ ಜಂಗಮ ಜಾತ್ರೆ, ಹಿರಿಯ ಶ್ರೀಗಳ ಪುಣ್ಯಸ್ಮರಣೆ, ಜೀವನ ದರ್ಶನ ಮತ್ತು ಸರಳ ಸಾಮೂಹಿಕ ವಿವಾಹ ಸಮಾರಂಭದ ಸಾನ್ನಿಧ್ಯ ವಹಿಸಿ ಅವರು ಆಶೀವರ್ಚನ ನೀಡಿದರು. ಸಮಾಜದಲ್ಲಿ ಸಾಮರಸ್ಯ ಮೂಡಿಸಲು ಇಂದು ಸಾಮೂಹಿಕ ವಿವಾಹಗಳ ಅವಶ್ಯಕತೆ ಇದ್ದು, ಇವು ದುಂದು ವೆಚ್ಚಗಳಿಗೆ ಕಡಿವಾಣವನ್ನು ಹಾಕುತ್ತವೆ.
ದಾಂಪತ್ಯ ಜೀವಕ್ಕೆ ಕಾಲಿಡುತ್ತಿರುವ, ಸತಿ-ಪತಿಗಳು ಜೀವನದಲ್ಲಿ ಬರುವ ಕಷ್ಟ, ಸುಖಗಳನ್ನು ಸಮನಾಗಿ ಹಂಚಿಕೊಂಡು ಬಾಳಬೇಕು ಎಂದರು. ನೀಲಗುಂದ ಗುಡ್ಡದ ವಿರಕ್ತ ಮಠದ ಚನ್ನಬಸವ ಶಿವಯೋಗಿ ಸ್ವಾಮೀಜಿ ಮಾತನಾಡಿ, ಕಳೆದ 30 ವರ್ಷದಿಂದ ಮಠದಲ್ಲಿ ಸಾಮೂಹಿಕ ವಿವಾಹ ನಡೆಯುತ್ತವೆ. ಬಡವರಿಗೆ ಮಕ್ಕಳ ಮದುವೆ ಮಾಡುವುದು ಕಷ್ಟಕರ. ಅಂತವರಿಗೆ ಸರ್ವ ಧರ್ಮ ಸಾಮೂಹಿಕ ವಿವಾಹ ಅನುಕೂಲವಲ್ಲದೆ, ದುಂದು ವೆಚ್ಚಕ್ಕೆ ಕಡಿವಾಣ ಹಾಕಿದಂತಾಗುತ್ತದೆ.
ಮಠದಲ್ಲಿ ವಿವಾಹವಾದವರಿಗೆ ನಾವೇ ಖುದ್ದಾಗಿ ಕಚೇರಿಗಳಿಗೆ ಅಲೆದಾಡಿ ವಿವಾಹ ಪ್ರೋತ್ಸಾಹ ಧನ ಕೊಡಸಿದ ಪ್ರತಿಫಲವಾಗಿ ಪ್ರತಿವರ್ಷ ವಧು-ವರರ ಸಂಖ್ಯೆ ಹೆಚ್ಚಾಗುತ್ತಿದೆ ಎಂದು ತಿಳಿಸಿದರು. ಹೂವಿನ ಹಡಗಲಿ ಗವಿಸಿದ್ದೇಶ್ವರ ಮಠದ ಡಾ| ಹಿರಿಯ ಶಾಂತವೀರ ಸ್ವಾಮೀಜಿ ಮಾತನಾಡಿ, ಶ್ರೀಗಳು ಪ್ರತಿವರ್ಷ ಸರ್ವ ಧರ್ಮದ ಸಾಮೂಹಿಕ ವಿವಾಹಗಳನ್ನು ನಡೆಸಿ ಹೊಸ ಮನ್ವಂತರಕ್ಕೆ ಸಾಕ್ಷಿಯಾಗಿದೆ.
ಸತಿ-ಪತಿಗಳು ಪರಸ್ಪರ ಅರಿತು ಸಮರಸದ ಬದುಕನ್ನು ಸಾಗಿಸಿದಾಗ ಸಂಸಾರ ರಥವು ಸರಾಗವಾಗಿ ಸಾಗುತ್ತದೆ ಎಂದರು. ಕುಕ್ಕನೂರಿನ ಅನ್ನದಾನೇಶ್ವರ ಮಠದ ಮಹಾದೇವ ಸ್ವಾಮೀಜಿ ಮಾತನಾಡಿದರು.ಸಾಮೂಹಿಕ ವಿವಾಹದಲ್ಲಿ 32 ಜೋಡಿಗಳು ದಾಂಪತ್ಯಕ್ಕೆ ಕಾಲಿಟ್ಟರು. ಜಿಪಂ ಸದಸ್ಯ ಪರುಶುರಾಮಪ್ಪ, ತಾಪಂ ಸದಸ್ಯ ಹುಲಿಕಟ್ಟಿ ಚಂದ್ರಪ್ಪ, ಪಿಎಲ್ಡಿ ಬ್ಯಾಂಕ್ ಅಧ್ಯಕ್ಷ ಬೇಲೂರು ಸಿದ್ದೇಶ್, ಎಪಿಎಂಸಿ ನಿರ್ದೇಶಕ ಬಿ.ಚಂದ್ರಶೇಕರ್, ತಿಮ್ಮೇಶ್, ಭೋವಿ ತಿರುಪತಿ, ಚೌಡಪ್ಪ ಮತ್ತಿತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere; ಸಿಲಿಂಡರ್ ಸ್ಫೋ*ಟ: ಆವರಿಸಿದ ದಟ್ಟ ಹೊಗೆ
Caste Census: ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಜಾತಿ ಗಣತಿ ವರದಿ ಮಂಡನೆ: ಸಿಎಂ
Kanaka Jayanthi: ಮುಂದಿನ ಮೂರುವರೆ ವರ್ಷವೂ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ: ಸಚಿವ ಭೈರತಿ
Davanagere: ವಿಪಕ್ಷಗಳು ಆಧಾರವಿಲ್ಲದೆ ಆರೋಪ ಮಾಡಬಾರದು: ಸಿಎಂ ಸಿದ್ದರಾಮಯ್ಯ
Davanagere: ಯುವಜನೋತ್ಸವಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Waqf Report: ಅಮಿತ್ ಶಾ ಅಂಗಳಕ್ಕೆ ಭಿನ್ನರ ವಕ್ಫ್ ವರದಿ: ಕಿರಣ್ ರಿಜಿಜು ಮೂಲಕ ಸಲ್ಲಿಕೆ
Udupi:ಗೀತಾರ್ಥ ಚಿಂತನೆ 149: ಜಗತ್ತಿನಲ್ಲಿ ಇಷ್ಟೊಂದು ವ್ಯತ್ಯಾಸವೇಕೆ? ಪ್ರಶ್ನೆಗುತ್ತರವಿಲ್ಲ
ಮಮ್ತಾಜ್ ಅಲಿ ಆತ್ಮಹ*ತ್ಯೆ ಪ್ರಚೋದನೆ ಆರೋಪ: ಆರೋಪಿಗಳ ವಿರುದ್ದ ಆರೋಪ ಪಟ್ಟಿ ಸಲ್ಲಿಕೆ
Udupi: ಅವಕಾಶಗಳ ಸದ್ಬಳಕೆಗೆ ಮಹಿಳೆಯರು ಹಿಂಜರಿಯಬಾರದು: ಪ್ರಜ್ವಲಾ
Train; ಗೋಮಟೇಶ್ವರ ಎಕ್ಸ್ಪ್ರೆಸ್ ಮಂಗಳೂರು ಸೆಂಟ್ರಲ್ಗೆ ವಿಸ್ತರಿಸಲು ಕ್ಯಾ| ಚೌಟ ಪತ್ರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.