ಮಗು ಪತ್ತೆಗೆ ಸಹಕರಿಸಿದವರಿಗೆ ಸನ್ಮಾನ  

ಪೊಲೀಸರ ನಿರಂತರ ತನಿಖೆಯಿಂದ ಸತ್ಯಾಂಶ ಬಯಲು: ಜಿಲ್ಲಾ ರಕ್ಷಣಾಧಿಕಾರಿ ರಿಷ್ಯಂತ್‌ ಶ್ಲಾಘನೆ

Team Udayavani, Apr 14, 2022, 3:37 PM IST

police

 ದಾವಣಗೆರೆ: ಇಲ್ಲಿನ ಚಾಮರಾಜಪೇಟೆಯ ಸರ್ಕಾರಿ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಮಾ. 16ರಂದು ಅಪಹರಣಕ್ಕೆ ಒಳಗಾಗಿದ್ದ ಮಗುವಿನ ಪತ್ತೆಗೆ ಸಹಕರಿಸಿದ ಪೊಲೀಸ್‌ ಅಧಿಕಾರಿಗಳು ಹಾಗೂ ಸಿಬ್ಬಂದಿಯನ್ನು ಬುಧವಾರ ಜಿಲ್ಲಾ ಪೊಲೀಸ್‌ ರಕ್ಷಣಾಧಿಕಾರಿ ಕಚೇರಿ ಸಭಾಂಗಣದಲ್ಲಿ ಆತ್ಮೀಯವಾಗಿ ಸನ್ಮಾನಿಸಲಾಯಿತು.

ದಾವಣಗೆರೆ ನಗರ ಪೊಲೀಸ್‌ ಉಪಾಧಿಧೀಕ್ಷಕ ನರಸಿಂಹ ತಾಮ್ರಧ್ವಜ, ಮಹಿಳಾ ಪೊಲೀಸ್‌ ಠಾಣೆ ನಿರೀಕ್ಷಕಿ ಶಿಲ್ಪಾ, ಎಸ್.ಐ ಪ್ರಭು ಹಾಗೂ ಇತರೆ ಸಿಬ್ಬಂದಿ ಮತ್ತು ಮಗು ಪತ್ತೆ ಹಚ್ಚಲು ನೆರವಾದ ದಾವಣಗೆರೆ ಎಸ್‌ಪಿಎಸ್‌ ನಗರದ ಚಂದ್ರಮ್ಮ ಅವರನ್ನು 25 ಸಾವಿರ ರೂ. ನಗದು ಬಹುಮಾನದೊಂದಿಗೆ ಗೌರವಿಸಲಾಯಿತು.

ಜಿಲ್ಲಾ ರಕ್ಷಣಾಧಿಕಾರಿ ಸಿ.ಬಿ. ರಿಷ್ಯಂತ್‌ ಮಾತನಾಡಿ, ಚಾಮರಾಜಪೇಟೆಯ ಸರ್ಕಾರಿ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಯಿಂದ ಮಾ. 16ರಂದು ಅಪಹರಣಕ್ಕೆ ಒಳಗಾಗಿದ್ದ ಮಗುವಿನ ಪತ್ತೆಗೆ ಸಹಕರಿಸಿದ ನಮ್ಮ ಇಲಾಖೆ ಅಧಿಕಾರಿಗಳು, ಸಿಬ್ಬಂದಿ ಮತ್ತು ಚಂದ್ರಮ್ಮ ಅವರಿಗೆ ಸನ್ಮಾನಿಸಲಾಗಿದೆ. ಮುಂದೆಯೂ ಅವರು ಒಳ್ಳೆಯ ಕೆಲಸ ಮಾಡಲಿ ಎಂದು ಆಶಿಸಿದರು.

ಮಗುವಿನ ಅಪಹರಣ ಪ್ರಕರಣಕ್ಕೆ ಸಂಬಂಧಿ ಸಿದಂತೆ ಗುಲ್ಜಾರ್‌ ಬಾನು, ಫಾತೀಮಾ ಬೇಗಂ ಎಂಬ ಇಬ್ಬರನ್ನು ವಶಕ್ಕೆ ಪಡೆಯಲಾಗಿದೆ. ಇನ್ನೂ ಹೆಚ್ಚಿನ ವಿಚಾರಣೆ ನಡೆಸಲಾಗುವುದು. ಅಂದು ಮಗು ಜನಿಸಿದ ಕೆಲವೇ ಸಮಯದಲ್ಲಿ ನಮ್ಮದೇ ಮಗು ಎಂದು ಹೇಳಿದ ಮಹಿಳೆಯೊಬ್ಬರು ಮಗುವನ್ನು ಕರೆದೊಯ್ದು ಬೆಂಗಳೂರಿನ ಮಗಳ ಮನೆಗೆ ಕೊಟ್ಟು ಬಂದಿದ್ದರು. ಮಗುವಿನ ಪತ್ತೆಗೆ ಒತ್ತಾಯಿಸಿ ವಿವಿಧ ಸಂಘಟನೆಗಳ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದರು. ಮಗುವಿನ ಪತ್ತೆಗಾಗಿ ಪೊಲೀಸ್‌ ಉಪಾಧಿಧೀಕ್ಷಕ ನರಸಿಂಹ ತಾಮ್ರಧ್ವಜ, ಮಹಿಳಾ ಪೊಲೀಸ್‌ ಠಾಣೆ ನಿರೀಕ್ಷಕಿ ಶಿಲ್ಪಾ, ಎಸ್‌ಐ ಪ್ರಭು ಅವರನ್ನೊಳಗೊಂಡ ತಂಡ ರಚಿಸಲಾಗಿತ್ತು. ಪ್ರತಿಯೊಂದು ಮನೆಯಲ್ಲೂ ಹುಡುಕಾಟ ಪ್ರಾರಂಭಿಸಿದಾಗ ಸಿಕ್ಕಿ ಬೀಳಬಹುದು ಎಂದು ಆರೋಪಿ ಗುಲ್ಜಾರ್‌ ಬಾನು ಬೆಂಗಳೂರಿನಿಂದ ಮಗುವನ್ನು ಕರೆಸಿ ಬಸ್‌ ನಿಲ್ದಾಣದಲ್ಲಿ ಚಂದ್ರಮ್ಮ ಎಂಬುವರಿಗೆ ಕೊಟ್ಟು ಹೋಗಿದ್ದರು ಎಂದು ತಿಳಿಸಿದರು.

ಮಗು ಕೊಟ್ಟು ಹೋದವರು ಎಷ್ಟು ಹೊತ್ತಾದರೂ ಬರಲಿಲ್ಲ ಎಂಬ ಕಾರಣಕ್ಕೆ ಚಂದ್ರಮ್ಮ ಸಮಯಪ್ರಜ್ಞೆ ತೋರಿ ನಮ್ಮ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡಿದರು. ಮಗುವನ್ನು ಪೋಷಕರಿಗೆ ಒಪ್ಪಿಸಲಾಯಿತು. ಮಗುವಿನ ಪತ್ತೆಗೆ ಸಹಕರಿಸಿದ ಚಂದ್ರಮ್ಮ ಅವರಿಗೆ 25 ಸಾವಿರ ರೂ. ಬಹುಮಾನ ನೀಡಲಾಗಿದೆ ಎಂದರು.

ಆಗ ತಾನೇ ಜನಿಸಿದ ಮಗುವಿಗೆ ಯಾವುದೇ ಗುರುತು ಇರುವುದೇ ಇಲ್ಲ. ಹಾಗಾಗಿ ಪತ್ತೆ ಹಚ್ಚುವುದು ಬಹಳ ಕಷ್ಟವಾಗಿತ್ತು. ನಮ್ಮ ಅಧಿಕಾರಿಗಳು, ಸಿಬ್ಬಂದಿ ಹಗಲಿರುಳು ತನಿಖೆ ನಡೆಸಿದ್ದರ ಪರಿಣಾಮ ಮಗು ಸಿಕ್ಕಿದೆ. ಹಾಸನದಲ್ಲಿ ಕೆಲ ವರ್ಷಗಳ ಹಿಂದೆ ಹಾಗೂ ಹುಬ್ಬಳ್ಳಿಯಲ್ಲೂ ಇಂಥದ್ದೇ ಪ್ರಕರಣ ನಡೆದಿತ್ತು. ಎಲ್ಲ ಆಯಾಮಗಳಲ್ಲಿ ತನಿಖೆ ನಡೆಸಿ ಮಗುವನ್ನು ಪತ್ತೆ ಹಚ್ಚಲಾಗಿದೆ ಎಂದು ತಿಳಿಸಿದರು.

ದಾವಣಗೆರೆ ನಗರ ಪೊಲೀಸ್‌ ಉಪಾಧೀಕ್ಷಕ ನರಸಿಂಹ ತಾಮ್ರಧ್ವಜ, ಮಹಿಳಾ ಪೊಲೀಸ್‌ ಠಾಣೆ ನಿರೀಕ್ಷಕಿ ಶಿಲ್ಪಾ, ಎಸ್‌.ಐ. ಪ್ರಭು ಇತರರು ಇದ್ದರು.

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

Fake Gold: ಎಚ್ಚರ ವಹಿಸಲು ಡಿಸಿಸಿ ಬ್ಯಾಂಕ್‌ಗಳಿಗೆ ಸೂಚನೆ: ಸಚಿವ ಕೆ.ಎನ್‌. ರಾಜಣ್ಣ

Fake Gold: ಎಚ್ಚರ ವಹಿಸಲು ಡಿಸಿಸಿ ಬ್ಯಾಂಕ್‌ಗಳಿಗೆ ಸೂಚನೆ: ಸಚಿವ ಕೆ.ಎನ್‌. ರಾಜಣ್ಣ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-dvg

Davangere: 2021ರಲ್ಲಿ ಅಪ್ರಾಪ್ತೆಯನ್ನು ಅಪಹರಿಸಿ ಅತ್ಯಾಚಾರವೆಸಗಿದ್ದವನಿಗೆ ಶಿಕ್ಷೆ ಪ್ರಕಟ

byndoor

Davanagere: ಪಾಠ ಮಾಡುತ್ತಿದ್ದಾಗಲೇ ಹೃದಯಾಘಾತ; ಶಿಕ್ಷಕ ಸಾವು

ಸಾರಿಗೆ ಬಸ್ ಡಿಪೋ ಪ್ರಾರಂಭಿಸಬೇಕು ಎಂದು ಒತ್ತಾಯಿಸಿ ದಾವಣಗೆರೆ ತಲುಪಿದ ಪಾದಯಾತ್ರೆ

ಸಾರಿಗೆ ಬಸ್ ಡಿಪೋ ಪ್ರಾರಂಭಿಸಬೇಕು ಎಂದು ಒತ್ತಾಯಿಸಿ ದಾವಣಗೆರೆ ತಲುಪಿದ ಪಾದಯಾತ್ರೆ

1—-kumr-renuka

BJP; ಕುಮಾರ್ ಬಂಗಾರಪ್ಪ ರಾಜ್ಯಾಧ್ಯಕ್ಷನಾಗುವುದು ತಿರುಕನ ಕನಸು: ರೇಣುಕಾಚಾರ್ಯ

DVG-Duggamma

Davanagere: ಮುಂಬರುವ ಫೆಬ್ರವರಿಯಲ್ಲಿ ಬಿಎಸ್‌ವೈ ಜನ್ಮದಿನ ಅದ್ಧೂರಿ ಆಚರಣೆ: ರೇಣುಕಾಚಾರ್ಯ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.