ಕೆರೆಗಳಿಗೆ ಸಮರ್ಪಕವಾಗಿ ಹರಿಯದ ನದಿ ನೀರು: ಶ್ರೀ ಬೇಸರ


Team Udayavani, Oct 22, 2018, 3:33 PM IST

dvg-4.jpg

ಜಗಳೂರು: ತಾಲೂಕಿನ ತುಪ್ಪದಹಳ್ಳಿ, ಬಿಳಿಚೋಡು, ಹಾಲೇಕಲ್ಲು ಸೇರಿದಂತೆ 22 ಕೆರೆಗಳಿಗೆ ಸಮರ್ಪಕವಾಗಿ ನೀರು ಹರಿಯುತ್ತಿಲ್ಲ ಎಂದು ಸಿರಿಗೆರೆ ತರಳುಬಾಳು ಮಠದ ಡಾ| ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ಇಂದಿಲ್ಲಿ ಬೇಸರ ವ್ಯಕ್ತಪಡಿಸಿದರು. ತಾಲೂಕಿನ ಮುಚ್ಚುನೂರು ಗ್ರಾಮದಲ್ಲಿ ಮರುಳ ಸಿದ್ದೇಶ್ವರ ದೇವಸ್ಥಾನದವರೆಗೆ 35 ಲಕ್ಷ ವೆಚ್ಚದ ಸಿಸಿ ರಸ್ತೆ ಕಾಮಗಾರಿಯ ಶಂಕುಸ್ಥಾಪನೆ ಸಮಾರಂಭದ ಸಾನ್ನಿಧ್ಯವಹಿಸಿ ಅವರು ಮಾತನಾಡಿದರು.

ತಾಂತ್ರಿಕ ಕಾರಣ ಒಂದು ಕಡೆಯಾದರೆ ನಮ್ಮ ಕೆರೆಗಳಿಗೆ ನೀರು ತುಂಬಲಿ ಎಂಬುದಾಗಿ ಜನ ವಾಲ್ವಗಳನ್ನು ತಿರುವಿಕೊಳ್ಳುತ್ತಿರುವುದು ದೊಡ್ಡ ಸಮಸ್ಯೆಯಾಗಿದೆ ಎಂದು ವಿಷಾದ ವ್ಯಕ್ತಪಡಿಸಿದರು.

ಕೆರೆಗಳಿಗೆ ನೀರು ಹರಿಯುವ ಜಾಕ್‌ವೆಲ್‌ ಒಂದರಲ್ಲಿ ಸಮಸ್ಯೆಯಾಗಿದ್ದು, ಈ ಕುರಿತು ಸೂಕ್ತ ನಿರ್ಣಯ ಕೈಗೊಳ್ಳಲು ಅ. 30 ರಂದು ನೀರಾವರಿ ಇಲಾಖೆಯ ಎಂ.ಡಿ. ಸಮಕ್ಷಮ ಅಧಿಕಾರಿಗಳ ಸಭೆ ಕರೆಯಲಾಗಿದೆ ಎಂದರು. 

ಸಂಸದ ಜಿ.ಎಂ. ಸಿದ್ದೇಶ್ವರ ಮಾತನಾಡಿ, ಜಗಳೂರು ತಾಲೂಕು ಬರಪಿಡಿತ ಪಟ್ಟಿಗೆ ತಡವಾಗಿ ಸೇರ್ಪಡೆಯಾಗಿದೆ. ಕೆಂದ್ರ ಸರ್ಕಾರ ಮೆಕ್ಕೆಜೋಳಕ್ಕೆ 1700 ರೂ. ಬೆಂಬಲ ಬೆಲೆ ಘೋಷಿಸಿದ್ದು, ರಾಜ್ಯ ಸರ್ಕಾರ ಕೂಡಲೇ ಖರೀದಿ ಕೇಂದ್ರ ಪ್ರಾರಂಭಿಸಬೇಕು ಎಂದು ಆಗ್ರಹಿಸಿದರು. ಶಾಸಕ ಎಸ್‌.ವಿ. ರಾಮಚಂದ್ರ ಮಾತನಾಡಿ, ತರಳು ಬಾಳು ಹುಣ್ಣಿಮೆ ನೆನಪಲ್ಲಿ ಸರ್ಕಾರದ ಮೇಲೆ ಒತ್ತಡ ಹಾಕಿ 52 ಕೆರೆಗಳಿಗೆ ನೀರು ತುಂಬಿಸುವ ಯೋಜನೆ ಜಾರಿಗೊಳಿಸಲಾಗಿದೆ. ಈಗಾಗಲೇ ಸರ್ಕಾರದಿಂದ 250 ಕೋಟಿ ರೂ. ಮಂಜೂರಾಗಿದೆ. ಜನಪ್ರತಿನಿಧಿಗಳ ಕೈಲಿ ಆಗದ ಕೆಲಸವನ್ನು ಸಿರಿಗೆರೆ ಶ್ರೀಗಳು ಮಾಡಿ ತೋರಿಸಿದ್ದಾರೆ ಎಂದರು.

ಈ ಸಂದರ್ಭದಲ್ಲಿ ಜಿಪಂ ಅಧ್ಯಕ್ಷೆ ಮಂಜುಳಾ, ಉಪಾಧ್ಯಕ್ಷರಾದ ರಶ್ಮಿ ರಾಜಪ್ಪ, ಸದಸ್ಯರಾದ ಎಸ್‌.ಕೆ. ಮಂಜುನಾಥ್‌, ಉಮಾ ವೆಂಕಟೇಶ್‌, ಯರಬಳ್ಳಿ ಸಿದ್ದಪ್ಪ, 22 ಕೆರೆಗಳ ಏತ ನೀರಾವರಿ ಹೋರಾಟ ಸಮಿತಿ ಅಧ್ಯಕ್ಷ ಡಾ|ಮಂಜುನಾಥ್‌ಗೌಡ್ರು, ತಾಲೂಕು ಬಿಜೆಪಿ ಅಧ್ಯಕ್ಷ ಡಿ.ವಿ. ನಾಗಪ್ಪ, ಭೂಸೇನಾ ನಿಗಮದ ಅಧಿಕಾರಿ ವೀರಯ್ಯ, ಚಂದ್ರಶೇಖರ್‌, ನಿವೃತ್ತ ಉಪನ್ಯಾಸಕ ಸುಭಾಶ್ಚಂದ್ರ ಬೋಸ್‌, ಇತರರು ಇದ್ದರು.

ಟಾಪ್ ನ್ಯೂಸ್

Katapadi: ಹೃದಯ ವಿದ್ರಾವಕ ಘಟನೆ: ಸಾವಿನಲ್ಲೂ ಒಂದಾದ ದಂಪತಿ

Katapadi: ಹೃದಯ ವಿದ್ರಾವಕ ಘಟನೆ: ಸಾವಿನಲ್ಲೂ ಒಂದಾದ ದಂಪತಿ

1-jjjjj

ODI; ಟೀಮ್ ಇಂಡಿಯಾದ ಹೊಸ ಜೆರ್ಸಿ ಬಿಡುಗಡೆ ಮಾಡಿದ ಜಯ್ ಶಾ,ಹರ್ಮನ್ ಪ್ರೀತ್

1-allu

”Pushpa 2′′ ಭಾಷೆಯ ತಡೆಯನ್ನು ಮುರಿಯುತ್ತಿದೆ, ತೆಲುಗು ಜನರಿಗೆ ಹೆಮ್ಮೆ: ಅಲ್ಲು ಅರ್ಜುನ್

arrested

Indiranagar; ಅಸ್ಸಾಂ ಯುವತಿ ಹ*ತ್ಯೆ ಕೇಸ್: ಆರೋಪಿ ಬಂಧಿಸಿದ ಪೊಲೀಸರು

Kalaburagi: ಅನುಭವ ಮಂಟಪ ಸ್ಥಳ ಮರಳಿ ಪಡೆಯಲು ದೆಹಲಿ ಚಲೋ

Kalaburagi: ಅನುಭವ ಮಂಟಪ ಸ್ಥಳ ಮರಳಿ ಪಡೆಯಲು ದೆಹಲಿ ಚಲೋ

Dharwad: 15 ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆ, ನಾನೂ ಕೂಡ ಆಕಾಂಕ್ಷಿ: ವಿನಯ್ ಕುಲಕರ್ಣಿ

Dharwad: 15 ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆ, ನಾನೂ ಕೂಡ ಆಕಾಂಕ್ಷಿ: ವಿನಯ್ ಕುಲಕರ್ಣಿ

Karnataka Govt.,: ರಾಜ್ಯ ಪ್ರವಾಸೋದ್ಯಮ ನೀತಿಗೆ ಸಂಸದ ಕಾಗೇರಿ ಖಂಡನೆ

Karnataka Govt.,: ರಾಜ್ಯ ಪ್ರವಾಸೋದ್ಯಮ ನೀತಿಗೆ ಸಂಸದ ಕಾಗೇರಿ ಖಂಡನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Davanagere: ಗೆಳೆಯನನ್ನೇ ಕೊಲೆ ಮಾಡಿದ ಪ್ರಕರಣ… ಆರೋಪಿಗೆ ಜೀವಾವಧಿ ಶಿಕ್ಷೆ

Davanagere: ಗೆಳೆಯನನ್ನೇ ಕೊಲೆ ಮಾಡಿದ ಪ್ರಕರಣ… ಆರೋಪಿಗೆ ಜೀವಾವಧಿ ಶಿಕ್ಷೆ

ಮೀಸಲಾತಿಗೆ ಒತ್ತಾಯಿಸಿ ಡಿ.10ರಂದು ಸುವರ್ಣ ಸೌಧಕ್ಕೆ ಮುತ್ತಿಗೆ: ಬಸವ ಜಯಮೃತ್ಯುಂಜಯ ಸ್ವಾಮೀಜಿ

ಮೀಸಲಾತಿಗೆ ಒತ್ತಾಯಿಸಿ ಡಿ.10ರಂದು ಸುವರ್ಣ ಸೌಧಕ್ಕೆ ಮುತ್ತಿಗೆ: ಬಸವ ಜಯಮೃತ್ಯುಂಜಯ ಸ್ವಾಮೀಜಿ

ಯಡಿಯೂರಪ್ಪ

Politics: ಬಿಜೆಪಿ-ಜೆಡಿಎಸ್ ಸಮ್ಮಿಶ್ರ ಸರ್ಕಾರ ರಚನೆಗೆ ಪ್ರಯತ್ನ: ಬಿಎಸ್‌ ಯಡಿಯೂರಪ್ಪ

DVG-Tagaru

Davanagere: ʼಸೋಲಿಲ್ಲದ ಸರದಾರʼ ಎನಿಸಿದ್ದ ʼಬೆಳ್ಳೂಡಿ ಕಾಳಿʼ ಟಗರು ಅನಾರೋಗ್ಯದಿಂದ ನಿಧನ

Renukacharya

Davanagere: ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ರಚನೆಯಾದ 3 ತಂಡಗಳೇ ಅಧಿಕೃತ: ರೇಣುಕಾಚಾರ್ಯ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

byndoor

Bantwal: ಅಪಘಾತ; ಗಾಯಾಳು ಸಾವು

POlice

Kumble: ಬುರ್ಖಾಧಾರಿ ಯುವಕ ವಶಕ್ಕೆ; ಕುಖ್ಯಾತ ಕಳವು ತಂಡದ ಸದಸ್ಯನೇ ಎಂಬ ಬಗ್ಗೆ ತನಿಖೆ

5

Mangaluru: ಎಎಸ್‌ಐಗೆ ಗಾಯ; ಡಿವೈಎಫ್ಐ ವಿರುದ್ಧ ಪ್ರಕರಣ

Katapadi: ಹೃದಯ ವಿದ್ರಾವಕ ಘಟನೆ: ಸಾವಿನಲ್ಲೂ ಒಂದಾದ ದಂಪತಿ

Katapadi: ಹೃದಯ ವಿದ್ರಾವಕ ಘಟನೆ: ಸಾವಿನಲ್ಲೂ ಒಂದಾದ ದಂಪತಿ

Untitled-1

Missing case: ಎರಡು ಪ್ರತ್ಯೇಕ ನಾಪತ್ತೆ ಪ್ರಕರಣ; ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.