ರೈತ ಸಂಘದಿಂದ ನಾಳೆ ರಸ್ತೆ ತಡೆ
Team Udayavani, Jul 5, 2020, 10:27 AM IST
ದಾವಣಗೆರೆ: ತಾಲೂಕಿನ ಎಚ್. ಕಲ್ಪನಹಳ್ಳಿ, ಹೊನ್ನೂರು ಗೊಲ್ಲರಹಟ್ಟಿ ಬಳಿ ರಾಷ್ಟ್ರೀಯ ಹೆದ್ದಾರಿ ಸೇತುವೆ ನಿರ್ಮಾಣಕ್ಕೆ ಒತ್ತಾಯಿಸಿ ಜು. 6 ರಂದು ಜನ ಮತ್ತು ಜಾನುವಾರುಗಳೊಂದಿಗೆ ರಸ್ತೆ ತಡೆ ನಡೆಸಲಾಗುವುದು ಎಂದು ರೈತ ಸಂಘ ಮತ್ತು ಹಸಿರು ಸೇನೆ ರಾಜ್ಯ ಕಾರ್ಯದರ್ಶಿ ಹೊನ್ನೂರು ಮುನಿಯಪ್ಪ ತಿಳಿಸಿದ್ದಾರೆ.
ಎಚ್. ಕಲ್ಪನಹಳ್ಳಿ, ಹೊನ್ನೂರು ಗೊಲ್ಲರಹಟ್ಟಿ ಬಳಿ ರಾಷ್ಟ್ರೀಯ ಹೆದ್ದಾರಿ ಸೇತುವೆ ನಿರ್ಮಾಣಕ್ಕೆ ಒತ್ತಾಯಿಸಿ ಹಲವಾರು ಬಾರಿ ರಸ್ತೆ ತಡೆ, ಹೋರಾಟ ನಡೆಸಿದ ಸಂದರ್ಭದಲ್ಲಿ ಸೇತುವೆ ನಿರ್ಮಾಣದ ಭರವಸೆ ನೀಡಿದ್ದ ಅಧಿಕಾರಿಗಳು ಈಗ ಹಣದ ಕೊರತೆ ನೆಪದಲ್ಲಿ ಸೇತುವೆ ನಿರ್ಮಾಣ ಸಾಧ್ಯ ಇಲ್ಲ ಎಂದು ಹೇಳುತ್ತಿದ್ದಾರೆ. ಎರಡು ದಿನಗಳಲ್ಲಿ ಸೇತುವೆ ಕಾಮಗಾರಿ ಪ್ರಾರಂಭಿಸಬೇಕು ಎಂದು ಶನಿವಾರ ಸುದ್ದಿಗೋಷ್ಠಿಯಲ್ಲಿ ಒತ್ತಾಯಿಸಿದರು. ಸೋಮವಾರದ ವೇಳೆಗೆ ಕಾಮಗಾರಿ ಪ್ರಾರಂಭವಾಗದಿದ್ದಲ್ಲಿ ಅನಿವಾರ್ಯವಾಗಿ ರಸ್ತೆ ತಡೆ ನಡೆಸಲಾಗುವುದು. ಆಗ ಆಗುವಂತಹ ಎಲ್ಲ ರೀತಿಯ ಅನಾಹುತಕ್ಕೆ ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಪ್ರಾಧಿಕಾರ, ಸಂಬಂಧಿತ ಅಧಿಕಾರಿ ವರ್ಗವೇ ನೇರ ಹೊಣೆಗಾರರಾಗಬೇಕಾಗುತ್ತದೆ ಎಂದು ಎಚ್ಚರಿಸಿದರು. ಎಚ್. ಕಲ್ಪನಹಳ್ಳಿ ಗ್ರಾಮವೇ ಇಬ್ಭಾಗವಾಗಿದೆ.
ಒಂದು ಕಡೆ ಶಾಲೆ, ಪಶು ಆಸ್ಪತ್ರೆ, ದೇವಸ್ಥಾನಗಳಿವೆ. ಒಂದು ಕಡೆಯಿಂದ ಮತ್ತೂಂದು ಕಡೆಗೆ ಹೋಗಲಿಕ್ಕೆ ಅವಕಾಶವೇ ಇಲ್ಲ. 2 ಕಿಲೋಮೀಟರ್ ದೂರದವರೆಗೆ ಹೋಗಿ ಗ್ರಾಮದ ಮತ್ತೂಂದು ಕಡೆಗೆ ಬರಬೇಕಾಗುತ್ತದೆ. ಅಷ್ಟೊಂದು ಅವೈಜ್ಞಾನಿಕವಾದ ಕೆಲಸ ಮಾಡಲಾಗಿದೆ. ಕೆಳ ಸೇತುವೆ ಮಾಡಿದ್ದೇವೆ ಎಂದು ಅಧಿಕಾರಿಗಳು ಹೇಳುತ್ತಾರೆ. ಆ ಸೇತುವೆ ಮಾಡಿರುವುದು ರೈತರು, ಜನ ಅನುಕೂಲಕ್ಕೆ ಅಲ್ಲ, ಉದ್ಯಮಿಗಳು, ಜನಪ್ರತಿನಿಧಿಗಳ ಅನುಕೂಲಕ್ಕಾಗಿ ಎಂದು ದೂರಿದರು.
ಜಿಲ್ಲಾ ಪ್ರಧಾನ ಕಾರ್ಯದರ್ಶಿ ಚಿನ್ನಸಮುದ್ರ ಶೇಖರ ನಾಯ್ಕ ಮಾತನಾಡಿ, ಎಚ್. ಕಲ್ಪನಹಳ್ಳಿ, ಹೊನ್ನೂರು ಗೊಲ್ಲರಹಟ್ಟಿ ಬಳಿ ರಾಷ್ಟ್ರೀಯ ಹೆದ್ದಾರಿ ಸೇತುವೆ ನಿರ್ಮಾಣಕ್ಕೆ ಒತ್ತಾಯಿಸಿ ಹೋರಾಟ ನಡೆಸಿದಾಗ ಸ್ಥಳಕ್ಕೆ ಭೇಟಿ ನೀಡಿದ್ದ ಅಂದಿನ ಜಿಲ್ಲಾಧಿಕಾರಿ ಡಿ.ಎಸ್. ರಮೇಶ್ ಅವರೇ ಕಾಮಗಾರಿ ಅವೈಜ್ಞಾನಿಕವಾಗಿದೆ. ಸೇತುವೆ ನಿರ್ಮಾಣ ಮಾಡಿಕೊಡಲಾಗುವುದು ಎಂಬ ಭರವಸೆ ನೀಡಿದ್ದರು. ಅದರಂತೆ ಸೇತುವೆ ನಿರ್ಮಾಣ ಮಾಡಬೇಕು ಎಂದು ಒತ್ತಾಯಿಸಿದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere: ಮಹಾನಗರ ಪಾಲಿಕೆ ವ್ಯಾಪ್ತಿಯ ಅನಧಿಕೃತ ಹೋರ್ಡಿಂಗ್ ತೆರವು
BJP: ತಾಕತ್ತಿದ್ರೆ ವಿಜಯೇಂದ್ರರನ್ನು ರಾಜ್ಯಾಧ್ಯಕ್ಷ ಸ್ಥಾನದಿಂದ ಕೆಳಕ್ಕಿಳಿಸಿ: ರೇಣುಕಾಚಾರ್ಯ
Davanagere ಮಹಾನಗರ ಪಾಲಿಕೆ ಸಾಮಾನ್ಯ ಸಭೆ ಪ್ರಾರಂಭಕ್ಕೆ ತಿಕ್ಕಾಟ; ಕೊನೆಗೆ ಮುಂದೂಡಿಕೆ
Honnali: ಮಹಿಳೆಯನ್ನು ತವರಿನಿಂದ ಒತ್ತಾಯಪೂರ್ವಕವಾಗಿ ಕರೆದುಕೊಂಡ ಹೋದ ಪತಿ, ಸಂಬಂಧಿಕರು
ಬಜೆಟ್‌ನಲ್ಲಿ ಹಿಂದುಳಿದ ವರ್ಗಗಳ ನಿಗಮಗಳಿಗೆ ಅನುದಾನಕ್ಕೆ ಪ್ರಣವಾನಂದ ಸ್ವಾಮೀಜಿ ಆಗ್ರಹ
MUST WATCH
ಹೊಸ ಸೇರ್ಪಡೆ
BCCI 10-point ಆದೇಶ ಸಮಸ್ಯೆ; ಮೀಸಲಾತಿ ಹೊಂದಿದ್ದೇವೆ ಎಂದು ರೋಹಿತ್ ಸುಳಿವು
Ranji Trophy; ಸೌರಾಷ್ಟ್ರ ವಿರುದ್ಧ ರಣಜಿ ಪಂದ್ಯದಿಂದ ಹೊರಗುಳಿದ ಕೊಹ್ಲಿ
ವಿಜಯೇಂದ್ರ ಪೂರ್ಣಾವಧಿ ಬಿಜೆಪಿ ಅಧ್ಯಕ್ಷರಾಗಿರ್ತಾರೆನ್ನುವ ವಿಶ್ವಾಸವಿದೆಯಾ?: ಎಂ.ಬಿ.ಪಾಟೀಲ್
Puthige Matha: ವಿಶ್ವ ಗೀತಾ ಪರ್ಯಾಯಕ್ಕೆ ಇಂದಿಗೆ ವರ್ಷ ಪೂರ್ಣ
Saif Ali Khan ಪ್ರಕರಣ: ಶಂಕಿತ ಆರೋಪಿ ಛತ್ತೀಸ್‌ಘಡದಲ್ಲಿ ರೈಲ್ವೆ ಪೊಲೀಸರ ಬಲೆಗೆ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.