Davanagere: ನಿಯಂತ್ರಣ ತಪ್ಪಿ ಮನೆಯೊಳಗೆ ನುಗ್ಗಿದ ಕಾರು… ವೃದ್ಧೆಗೆ ಗಾಯ
Team Udayavani, Dec 10, 2024, 7:52 PM IST
ದಾವಣಗೆರೆ: ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಮನೆಯ ಒಳಗೆ ನುಗ್ಗಿದ ಪರಿಣಾಮ ವೃದ್ಧೆಯೊಬ್ಬರು ಗಾಯಗೊಂಡಿರುವ ಘಟನೆ ದಾವಣಗೆರೆ ತಾಲೂಕಿನ ಕುಕ್ಕುವಾಡ ಗ್ರಾಮದಲ್ಲಿ ಸೋಮವಾರ(ಡಿ.9) ತಡರಾತ್ರಿ ಸಂಭವಿಸಿದೆ.
ಕುಕ್ಕುವಾಡ ಗ್ರಾಮದ ಸುನಂದಮ್ಮ ಎಂಬುವರು ಗಾಯಗೊಂಡಿದ್ದಾರೆ. ಚನ್ನಗಿರಿ ತಾಲೂಕಿನ ತ್ಯಾವಣಿಗೆ ಗ್ರಾಮದ ಕಡೆಯಿಂದ ಅತಿ ವೇಗವಾಗಿ ಬಂದ ಕಾರು ಮೊದಲು ಅಂಬೇಡ್ಕರ್ ವೃತ್ತದಲ್ಲಿನ ಬೆಂಚ್‌ಗೆ ಡಿಕ್ಕಿ ಹೊಡೆದು ಮುಂದೆ ಸಾಗಿ ಪಿಲ್ಲರ್‌ಗೆ ಗುದ್ದಿ ನಿಯಂತ್ರಣ ತಪ್ಪಿ ಸುನಂದಮ್ಮ ಅವರ ಮನೆಯ ಕಾಂಪೌಂಡ್ ದಾಟಿ ಗೋಡೆಗೆ ಡಿಕ್ಕಿ ಹೊಡೆದ ಪರಿಣಾಮ ಮನೆಯೊಳಗೆ ಮಲಗಿದ್ದ ಸುನಂದಮ್ಮ ಅವರು ಸಣ್ಣ ಗಾಯಗಳಿಂದ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಕಾರಿನಲ್ಲಿದ್ದ ನಾಲ್ವರು ಪಾನಮತ್ತರಾಗಿದ್ದರು ಎನ್ನಲಾಗುತ್ತಿದೆ. ಹದಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ: Delhi Poll: ಆಟೋ ಚಾಲಕರಿಗೆ 10ಲಕ್ಷ ವಿಮೆ, ಹೆಣ್ಮಕ್ಕಳ ಮದುವೆಗೆ 1ಲಕ್ಷ: ಕೇಜ್ರಿವಾಲ್ ಭರವಸೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shimoga: ರಸ್ತೆ ಬದಿಯಲ್ಲಿ ನವಜಾತ ಶಿಶು ಬಿಟ್ಟು ಹೋದ ತಾಯಿ!; ಆರೈಕೆ ಮಾಡಿದ ಸ್ಥಳೀಯರು
Udupi: 2024ನೇ ಸಾಲಿನ ಪಾರ್ತಿಸುಬ್ಬ ಪ್ರಶಸ್ತಿಗೆ ಮಾಂಬಾಡಿ ಸುಬ್ರಹ್ಮಣ್ಯ ಭಟ್ ಆಯ್ಕೆ
RenukaswamyCase: ದರ್ಶನ್ ಸೇರಿ ಎಲ್ಲಾ ಆರೋಪಿಗಳು ಕೋರ್ಟ್‌ಗೆ ಹಾಜರು; ವಿಚಾರಣೆ ಮುಂದೂಡಿಕೆ
Belagavi: ಕಾರಿನಲ್ಲಿ ಹೋಗುತ್ತಿದ್ದ ರಿಯಲ್ ಎಸ್ಟೇಟ್ ಉದ್ಯಮಿ ಮೇಲೆ ಗುಂಡಿನ ದಾಳಿ
Elephant: ಬೆಳಗಾವಿಯ ಖಾನಾಪುರದಲ್ಲಿ ಸೆರೆ ಹಿಡಿದ ಗಂಡಾನೆ ಸಕ್ರೆಬೈಲು ಆನೆ ಬಿಡಾರಕ್ಕೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.