ಸಮಗ್ರ ಅಭಿವೃದ್ಧಿಗೆ 10 ಕೋಟಿ ಅನುದಾನ ಅಗತ್ಯ
Team Udayavani, Feb 28, 2018, 6:05 PM IST
ಹೊನ್ನಾಳಿ: ಪಟ್ಟಣದ ಸಮಗ್ರ ಅಭಿವೃದ್ಧಿಗೆ ಇನ್ನೂ 10 ಕೋಟಿ ರೂ. ಅನುದಾನದ ಅವಶ್ಯಕತೆ ಇದೆ ಎಂದು ಶಾಸಕ ಡಿ.ಜಿ. ಶಾಂತನಗೌಡ ಹೇಳಿದರು.
ಪಪಂ ಆವರಣದಲ್ಲಿ ಪಟ್ಟಣ ಪಂಚಾಯ್ತಿ ವತಿಯಿಂದ ನಿರ್ಮಿಸಲಾದ ಅಧ್ಯಕ್ಷರು, ಉಪಾಧ್ಯಕ್ಷರ ಕೊಠಡಿ ಹಾಗೂ ನೂತನ ಸಭಾ ಭವನವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಪಟ್ಟಣದ ವ್ಯಾಪ್ತಿಯಲ್ಲಿ ಬಹುತೇಕ ರಸ್ತೆ ಕಾಮಗಾರಿ ನಡೆದಿವೆ. ಪಟ್ಟಣದ
ಮುಖ್ಯರಸ್ತೆ ಅಭಿವೃದ್ಧಿ ಕೂಡಾ ಮುಗಿದಿದೆ. ದುರ್ಗಿಗುಡಿ ಉತ್ತರ ಹಾಗೂ ದಕ್ಷಿಣ ಭಾಗದಲ್ಲಿ ಒಂದಿಷ್ಟು ರಸ್ತೆ ಅಭಿವೃದ್ಧಿ ಬಾಕಿ ಉಳಿದಿದ್ದು,
ಮುಂದಿನ ದಿನಗಳಲ್ಲಿ ಅದಕ್ಕೆ ಅನುದಾನ ಒದಗಿಸುವ ಪ್ರಯತ್ನ ಮಾಡುತ್ತೇನೆ ಎಂದರು. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಚ್.ಬಿ. ಮಂಜಪ್ಪ
ಮಾತನಾಡಿ, ತಾವು ಪಟ್ಟಣ ಪಂಚಾಯ್ತಿ ಅಧ್ಯಕ್ಷರಾಗಿದ್ದ ಸಂದರ್ಭದಲ್ಲಿ ಸುಮಾರು 70ಕ್ಕೂ ಹೆಚ್ಚು ವಾಣಿಜ್ಯ ಮಳಿಗೆಗಳನ್ನು ಹಾಗೂ ನೂತನ ಖಾಸಗಿ ಬಸ್ ನಿಲ್ದಾಣ ನಿರ್ಮಿಸಲಾಗಿತ್ತು. ಈಗ ಅವುಗಳ ಆದಾಯದಿಂದ ಹಾಗೂ ಸರ್ಕಾರದ ಅನುದಾನದಿಂದ ಸಾಕಷ್ಟು ಅಭಿವೃದ್ಧಿ ಕಾಮಗಾರಿಗಳು ನಡೆಯುತ್ತಿವೆ ಎಂದರು.
ಪಟ್ಟಣ ಪಂಚಾಯ್ತಿ ಅಧ್ಯಕ್ಷೆ ಶ್ರೀದೇವಿ ಧರ್ಮಪ್ಪ ಮಾತನಾಡಿ, ಯಾವುದೇ ಅಭಿವೃದ್ಧಿ ಕಾಮಗಾರಿಗೆ ಹಣದ ಮೂಲಗಳನ್ನು
ಸೃಷ್ಟಿಸಬೇಕು ಎಂದರು. ಪಪಂ ಸದಸ್ಯ ಕೆ.ಪಿ. ಕುಬೇಂದ್ರಪ್ಪ ಮಾತನಾಡಿ, ಖಾಸಗಿ ಬಸ್ ನಿಲ್ದಾಣದಲ್ಲಿ ಶಾಸಕ ಡಿ.ಜಿ. ಶಾಂತನಗೌಡರು ಶುದ್ಧ ಕುಡಿಯುವ ನೀರಿನ ಘಟಕ ಸ್ಥಾಪಿಸಬೇಕು. ಇದರಿಂದ ಸಾರ್ವಜನಿಕರಿಗೆ ಅನುಕೂಲವಾಗಲಿದೆ ಎಂದರು.
ಪಪಂ ಸದಸ್ಯರಾದ ಎಚ್.ಬಿ. ಅಣ್ಣಪ್ಪ, ಎಚ್.ಡಿ. ವಿಜೇಂದ್ರಪ್ಪ ಮಾತನಾಡಿದರು. ಪಪಂ ಉಪಾಧ್ಯಕ್ಷೆ ವೀಣಾ ಸುರೇಶ್, ಸದಸ್ಯರಾದ
ಸರಳಿನಮನೆ ಮಂಜುನಾಥ, ಹೊಸಕೇರಿ ಸುರೇಶ್, ಎಂ.ಮಲ್ಲೇಶ್, ವಿಜಯಮ್ಮ, ಗುಲ್‌ಶಿರಾಖಾನಂ, ಮುಖ್ಯಾಧಿಕಾರಿ ಎಸ್.
ಆರ್. ವೀರಭದ್ರಯ್ಯ, ಎಂಜಿನಿಯರ್ ದೇವರಾಜ್, ಕಂದಾಯಾಧಿಕಾರಿ ಪಿ.ವಸಂತ್, ಮುಖಂಡರಾದ ಎಚ್.ಬಿ. ಗಿಡ್ಡಪ್ಪ, ಬಿ.ಐ.ಸಿದ್ದಪ್ಪ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere: ಗೆಳೆಯನನ್ನೇ ಕೊಲೆ ಮಾಡಿದ ಪ್ರಕರಣ… ಆರೋಪಿಗೆ ಜೀವಾವಧಿ ಶಿಕ್ಷೆ
ಮೀಸಲಾತಿಗೆ ಒತ್ತಾಯಿಸಿ ಡಿ.10ರಂದು ಸುವರ್ಣ ಸೌಧಕ್ಕೆ ಮುತ್ತಿಗೆ: ಬಸವ ಜಯಮೃತ್ಯುಂಜಯ ಸ್ವಾಮೀಜಿ
Politics: ಬಿಜೆಪಿ-ಜೆಡಿಎಸ್ ಸಮ್ಮಿಶ್ರ ಸರ್ಕಾರ ರಚನೆಗೆ ಪ್ರಯತ್ನ: ಬಿಎಸ್ ಯಡಿಯೂರಪ್ಪ
Davanagere: ʼಸೋಲಿಲ್ಲದ ಸರದಾರʼ ಎನಿಸಿದ್ದ ʼಬೆಳ್ಳೂಡಿ ಕಾಳಿʼ ಟಗರು ಅನಾರೋಗ್ಯದಿಂದ ನಿಧನ
Davanagere: ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ರಚನೆಯಾದ 3 ತಂಡಗಳೇ ಅಧಿಕೃತ: ರೇಣುಕಾಚಾರ್ಯ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.