ದೇವಸ್ಥಾನದ ಕಮಾನು ತೆರವಿಗೆ ಆಕ್ರೋಶ


Team Udayavani, Jan 24, 2017, 12:20 PM IST

dvg1.jpg

ದಾವಣಗೆರೆ: ಒಂದನೇ ವಾರ್ಡ್‌ನ ಎಸ್‌ಜೆಎಂ ನಗರದ ಚೌಡೇಶ್ವರಿ ದೇವಸ್ಥಾನ ಮುಂದಿನ ಕಮಾನನ್ನು ಮಹಾನಗರ ಪಾಲಿಕೆಯಲ್ಲಿರುವ ಹಿಂದೂ ವಿರೋಧಿ ಅಧಿಕಾರಿಗಳು ವಿನಾಕಾರಣ ತೆರವುಗೊಳಿಸಿದ್ದಾರೆ ಎಂದು ಆರೋಪಿಸಿ ಹಿಂದೂ ಜಾಗರಣ ವೇದಿಕೆ, ಯುವ ಬಿಜೆಪಿ ಕಾರ್ಯಕರ್ತರು ಸೋಮವಾರ ಉಪ ವಿಭಾಗಾಧಿಕಾರಿ ಕಚೇರಿ ವೃತ್ತದಲ್ಲಿ 2 ಗಂಟೆಗೂ ಅಧಿಕ ಕಾಲ ರಸ್ತೆ ತಡೆದು, ಪ್ರತಿಭಟನೆ ನಡೆಸಿದರು. 

ಚೌಡೇಶ್ವರಿ ದೇವಸ್ಥಾನದ ಮುಂದಿನ ಕಮಾನು ತೆರವುಗೊಳಿಸಿರುವ ನಗರಪಾಲಿಕೆ ಅಧಿಕಾರಿಗಳು ಪುನಾಃ  ಅದೇ ಸ್ಥಳದಲ್ಲಿ ಕಮಾನು ನಿರ್ಮಿಸಿ ಕೊಡಬೇಕು. ಕಮಾನನ್ನು ಅಕ್ರಮವಾಗಿ ಕಟ್ಟಲಾಗಿದೆ ಎನ್ನುವುದಾದರರೆ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿರುವ ಎಲ್ಲಾ ಅಕ್ರಮ ಕಟ್ಟಡ ತೆರವುಗೊಳಿಸಬೇಕು. ಪ್ರತಿಭಟನಾ ಸ್ಥಳಕ್ಕೆ ಜಿಲ್ಲಾಧಿಕಾರಿ ಬರಬೇಕು ಎಂದು ಪಟ್ಟು ಹಿಡಿದ ಪ್ರತಿಭಟನಾಕರು, ಟೈರ್‌ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದರು. 

2 ಗಂಟೆಗೂ ಅಧಿಕ ಕಾಲ ರಸ್ತೆ ತಡೆ ನಡೆಸಿದರು. ದಿಢೀರ್‌ ರಸ್ತೆ ತಡೆಯಿಂದ ಸಂಚಾರದಲ್ಲಿ ಸಾಕಷ್ಟು ವ್ಯತ್ಯಯ ಉಂಟಾಯಿತು. ಸ್ಥಳಕ್ಕಾಗಮಿಸಿದ ಪೊಲೀಸರು ರಸ್ತೆ ತಡೆ ತೆರವುಗೊಳಿಸುವಂತೆ ಮನವಿ ಮಾಡಿದರು. ಆದರೆ, ಪ್ರತಿಭಟನಾಕಾರರು ತಮ್ಮ ಪಟ್ಟು ಬಿಡಲಿಲ್ಲ.

ಇದರಿಂದಾಗಿ ತೀವ್ರ ಮಾತಿನ ಚಕಮಕಿ, ವಾಗ್ವಾದವೇ ನಡೆಯಿತು. ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ಉಪ ವಿಭಾಗಾಧಿಕಾರಿ ಬಿ.ಟಿ. ಕುಮಾರಸ್ವಾಮಿ, ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಲಾಗುವುದು. ಒಂದು ವಾರದಲ್ಲಿ ಸೂಕ್ತ ಕ್ರಮ ತೆಗೆದುಕೊಳ್ಳಲಾಗುವುದು ಎಂಬ ಭರವಸೆ ನೀಡಿದ ಹಿನ್ನೆಲೆಯಲ್ಲಿ ಪ್ರತಿಭಟನೆ ಹಿಂದಕ್ಕೆ ಪಡೆಯಲಾಯಿತು. 

ಪ್ರತಿಭಟನೆಗೆ ಕಾರಣ: ಎಸ್‌ಜೆಎಂ ನಗರದ ಚೌಡೇಶ್ವರಿ ದೇವಸ್ಥಾನದ ಮುಂದೆ ಅಕ್ರಮವಾಗಿ ಕಮಾನು ಕಟ್ಟಲಾಗಿದೆ ಎಂಬ ಕಾರಣದಿಂದ ನಗರಪಾಲಿಕೆ ಅಧಿಕಾರಿಗಳು ಏಕಾಏಕಿ ತೆರವುಗೊಳಿಸಿದ್ದಾರೆ ಎಂಬುದು ಪ್ರತಿಭಟನಾಕಾರರ ಪ್ರಮುಖ ಆರೋಪವಾಗಿತ್ತು.

ಧಾರ್ಮಿಕ ಶ್ರದ್ಧಾ ಕೇಂದ್ರದ ಕಮಾನನ್ನು ತೆರವುಗೊಳಿಸಿರುವಂಥಹ ಅಧಿಕಾರಿಗಳು ಕಮಾನನ್ನು ಪುನರ್‌ ನಿರ್ಮಾಣ ಮಾಡಿಕೊಡಬೇಕು ಎಂಬುದು ಪ್ರಮುಖ ಬೇಡಿಕೆಯಾಗಿತ್ತು. ಹಾಗಾಗಿ ದಿಢೀರ್‌ ಪ್ರತಿಭಟನೆ, ರಸ್ತೆ ತಡೆ ನಡೆಸಲಾಯಿತು. 

ಟಾಪ್ ನ್ಯೂಸ್

1-kims

Kalaburagi; 36 ಗಂಟೆಯಲ್ಲಿ ತಾಯಿ ಮಡಿಲು ಸೇರಿದ ಮಗು: ಪೊಲೀಸರ ಭರ್ಜರಿ ಕಾರ್ಯಾಚರಣೆ

ICC

ICC; ಚಾಂಪಿಯನ್ಸ್ ಟ್ರೋಫಿ ಸುತ್ತಲಿನ ಬಿಕ್ಕಟ್ಟು: ಶುಕ್ರವಾರ ಮಹತ್ವದ ತೀರ್ಮಾನ?

ISREL

Lebanon; ಇಸ್ರೇಲ್, ಹೆಜ್ಬುಲ್ಲಾ ಕದನ ವಿರಾಮಕ್ಕೆ ಒಪ್ಪಿಗೆ: ಯುಎಸ್ ಸಮನ್ವಯ

highcort dharwad

Bengaluru; ಪಾರ್ಕ್ ಗಳಲ್ಲಿ ನಾಯಿ ಮಲ ವಿಸರ್ಜಿಸಿದ್ರೆ ಮಾಲಿಕರಿಗೆ ದಂಡ: ಹೈಕೋರ್ಟ್

BYV-yathnal

BJP Internal Dispute: ಶಾಸಕ ಬಸನಗೌಡ ಯತ್ನಾಳ್‌ ವಿವಾದ ಇತ್ಯರ್ಥಕ್ಕೆ ಡಿ.9ರ ಗಡುವು

Pejavara-Shree–Siddu

Constitution Day: ಉಡುಪಿ ಪೇಜಾವರ ಶ್ರೀ ಮನುಸ್ಮೃತಿ ಪ್ರತಿಪಾದಕರು: ಸಿಎಂ ಸಿದ್ದರಾಮಯ್ಯ

Train: ಗೋಮಟೇಶ್ವರ ಎಕ್ಸ್‌ಪ್ರೆಸ್‌ ರೈಲು ಮಂಗಳೂರು ಸೆಂಟ್ರಲ್‌ಗೆ ಬಾರದು

Train: ಗೋಮಟೇಶ್ವರ ಎಕ್ಸ್‌ಪ್ರೆಸ್‌ ರೈಲು ಮಂಗಳೂರು ಸೆಂಟ್ರಲ್‌ಗೆ ಬಾರದು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಯಡಿಯೂರಪ್ಪ

Politics: ಬಿಜೆಪಿ-ಜೆಡಿಎಸ್ ಸಮ್ಮಿಶ್ರ ಸರ್ಕಾರ ರಚನೆಗೆ ಪ್ರಯತ್ನ: ಬಿಎಸ್‌ ಯಡಿಯೂರಪ್ಪ

DVG-Tagaru

Davanagere: ʼಸೋಲಿಲ್ಲದ ಸರದಾರʼ ಎನಿಸಿದ್ದ ʼಬೆಳ್ಳೂಡಿ ಕಾಳಿʼ ಟಗರು ಅನಾರೋಗ್ಯದಿಂದ ನಿಧನ

Renukacharya

Davanagere: ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ರಚನೆಯಾದ 3 ತಂಡಗಳೇ ಅಧಿಕೃತ: ರೇಣುಕಾಚಾರ್ಯ

8-

ಸಹಕಾರ ಭಾರತಿ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಸಾಣೂರು ನರಸಿಂಹ ಕಾಮತ್ ಆಯ್ಕೆ

Waqf Protest: People will overthrow the state government: Protest in Davangere

Waqf Protest: ರಾಜ್ಯ ಸರ್ಕಾರವನ್ನು ಜನರೇ ಕಿತ್ತೊಗೆಯಲಿದ್ದಾರೆ: ದಾವಣಗೆರೆಯಲ್ಲಿ ಪ್ರತಿಭಟನೆ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

1-kims

Kalaburagi; 36 ಗಂಟೆಯಲ್ಲಿ ತಾಯಿ ಮಡಿಲು ಸೇರಿದ ಮಗು: ಪೊಲೀಸರ ಭರ್ಜರಿ ಕಾರ್ಯಾಚರಣೆ

suicide

Ballari: ಜಿಲ್ಲಾಸ್ಪತ್ರೆಯಲ್ಲಿ ಮತ್ತೊಬ್ಬ ಬಾಣಂತಿ ಸಾವು; ಮೃತರ ಸಂಖ್ಯೆ 4ಕ್ಕೆ

ICC

ICC; ಚಾಂಪಿಯನ್ಸ್ ಟ್ರೋಫಿ ಸುತ್ತಲಿನ ಬಿಕ್ಕಟ್ಟು: ಶುಕ್ರವಾರ ಮಹತ್ವದ ತೀರ್ಮಾನ?

1-bumm

Jasprit Bumrah ನಾಯಕತ್ವದ ಜವಾಬ್ದಾರಿಯನ್ನು ಆನಂದಿಸುತ್ತಾರೆ: ರವಿಶಾಸ್ತ್ರಿ

ISREL

Lebanon; ಇಸ್ರೇಲ್, ಹೆಜ್ಬುಲ್ಲಾ ಕದನ ವಿರಾಮಕ್ಕೆ ಒಪ್ಪಿಗೆ: ಯುಎಸ್ ಸಮನ್ವಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.