ಸಹಕಾರ ಭಾರತಿ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಸಾಣೂರು ನರಸಿಂಹ ಕಾಮತ್ ಆಯ್ಕೆ
Team Udayavani, Nov 23, 2024, 12:26 PM IST
ದಾವಣಗೆರೆ: ಇಲ್ಲಿನ ಶ್ರೀ ಶಾಮನೂರು ಶಿವಶಂಕರಪ್ಪ ಸಭಾಭವನದಲ್ಲಿ ನ.22ರ ಶುಕ್ರವಾರ ನಡೆದ ಸಹಕಾರ ಭಾರತಿಯ 7ನೇ ರಾಜ್ಯ ಅಧಿವೇಶನದಲ್ಲಿ ಸಾಣೂರು ನರಸಿಂಹ ಕಾಮತ್ ಅವರನ್ನು ಮುಂದಿನ 3 ವರ್ಷದ ಅವಧಿಗೆ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಅವಿರೋಧವಾಗಿ ಸರ್ವಾನುಮತದಿಂದ ಆರಿಸಲಾಯಿತು.
ಚುನಾವಣಾ ಅಧಿಕಾರಿಯಾಗಿದ್ದ ಹಿರಿಯ ಸಹಕಾರಿ ಬಾಗಲಕೋಟೆಯ ಜಿ.ಎನ್. ಪಾಟೀಲ್ ಅವರು ಈ ಆಯ್ಕೆಯನ್ನು ಘೋಷಿಸಿದರು.
ನಿರ್ಗಮನ ಪ್ರಧಾನ ಕಾರ್ಯದರ್ಶಿ ಉತ್ತರ ಕನ್ನಡ ಜಿಲ್ಲಾ ಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ಮೋಹನ್ ದಾಸ್ ನಾಯಕ ಅವರು ಸಹಕಾರಿ ಧ್ವಜವನ್ನು ಹಸ್ತಾಂತರಿಸುವುದರ ಮೂಲಕ ಜವಾಬ್ದಾರಿಯ ವರ್ಗಾವಣೆ ಮಾಡಿದರು.
ಈ ಸಂದರ್ಭದಲ್ಲಿ ಸಹಕಾರ ಭಾರತಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಸಂಜಯ ಪಾಚ್ಪುರೆ, ರಾಷ್ಟ್ರೀಯ ಸಂರಕ್ಷಕ, ಕೊಪ್ಪಳದ ರಮೇಶ್ ವೈದ್ಯ, ರಾಷ್ಟ್ರೀಯ ಸ್ವಯಂಸೇವಕ ಸಂಘದ ದಕ್ಷಿಣ ಪ್ರಾಂತ ಕಾರ್ಯವಾಹ ಪಟ್ಟಾಭಿರಾಮ ಮತ್ತೂರು, ಉತ್ತರ ಪ್ರಾಂತ ಸಂಘದ ಹಿರಿಯ ಅರವಿಂದ ದೇಶಪಾಂಡೆ, ಹುಬ್ಬಳ್ಳಿ ನಿರ್ಗಮನ ಅಧ್ಯಕ್ಷ ಬಾಗಲಕೋಟೆಯ ರಾಜಶೇಖರ ಶೀಲವಂತ, ನೂತನ ಅಧ್ಯಕ್ಷ ದಾವಣಗೆರೆಯ ಪ್ರಭುದೇವ ಆರ್.ಎಂ., ರಾಯಚೂರು ಡಿಸಿಸಿ ಬ್ಯಾಂಕಿನ ಅಧ್ಯಕ್ಷ ವಿಶ್ವನಾಥ ಪಾಟೀಲ್ ಉಪಸ್ಥಿತರಿದ್ದರು.
ಕೆಎಂಎಫ್ ಮಂಗಳೂರು ಮತ್ತು ಭಾರತಿ ಟೂರಿಸಂ ಡೆವಲಪ್ಮೆಂಟ್ ಕೋ ಆಪರೇಟಿವ್ ನ ನಿರ್ದೇಶಕ ಸಾಣೂರು ನರಸಿಂಹ ಕಾಮತ್ ಅವರು ಕಳೆದ 2 ದಶಕಗಳಿಂದ ಸಹಕಾರಿ ಕ್ಷೇತ್ರದಲ್ಲಿ ಸಕ್ರಿಯರಾಗಿದ್ದು, ಸಹಕಾರ ಭಾರತಿಯ ರಾಜ್ಯ ಹಾಲು ಪ್ರಕೋಷ್ಟದ ಸಂಚಾಲಕರಾಗಿ ಕಾರ್ಯನಿರ್ವಹಿಸಿದ್ದರು.
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಷಯ ತಜ್ಞರಾಗಿರುವ ಇವರು ಸಾಣೂರು ಗ್ರಾಮ ಪಂಚಾಯತ್ ನಲ್ಲಿ 2 ಅವಧಿಗೆ ಅಧ್ಯಕ್ಷರಾಗಿದ್ದು ಅಂತರಾಷ್ಟ್ರೀಯ ಗೂಗಲ್ ಗ್ರಾಮ ಪಂಚಾಯತ್ ಪುರಸ್ಕಾರ ಮತ್ತು ರಾಷ್ಟ್ರಪತಿಗಳ ನಿರ್ಮಲ ಗ್ರಾಮ ಪುರಸ್ಕಾರವನ್ನು ಪಡೆದಿದ್ದರು.
ಪ್ರಶಿಕ್ಷಣ ಮತ್ತು ಪಂಚಾಯತ್ ರಾಜ್ ಪ್ರಕೋಷ್ಟಗಳಲ್ಲಿ ಜಿಲ್ಲೆ ಮತ್ತು ರಾಜ್ಯಮಟ್ಟಗಳ ಜವಾಬ್ದಾರಿಯನ್ನು ನಿರ್ವಹಣೆ ಮಾಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere: ವೃದ್ಧೆ ಮೇಲೆ ಅತ್ಯಾ*ಚಾರ; ಯುವಕನಿಗೆ 10 ವರ್ಷ ಕಠಿಣ ಶಿಕ್ಷೆ
Davanagere: ಬಿಜೆಪಿ-ಕಾಂಗ್ರೆಸ್ ಹೊಂದಾಣಿಕೆ ಆರೋಪದ ಬಗ್ಗೆ ರೇಣುಕಾಚಾರ್ಯ ಸ್ಪಷ್ಟನೆ
Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ ಕಾಂಗ್ರೆಸ್ ಶಾಸಕ
Davangere: 2021ರಲ್ಲಿ ಅಪ್ರಾಪ್ತೆಯನ್ನು ಅಪಹರಿಸಿ ಅತ್ಯಾಚಾರವೆಸಗಿದ್ದವನಿಗೆ ಶಿಕ್ಷೆ ಪ್ರಕಟ
Davanagere: ಪಾಠ ಮಾಡುತ್ತಿದ್ದಾಗಲೇ ಹೃದಯಾಘಾತ; ಶಿಕ್ಷಕ ಸಾವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.