ಮಾಧ್ಯಮದಲ್ಲಿ ಸರಿಗನ್ನಡ ಬಳಕೆ ಅಭಿಯಾನ: ಯರ್ರಿಸ್ವಾಮಿ
Team Udayavani, Mar 31, 2021, 8:22 PM IST
ದಾವಣಗೆರೆ : ಕನ್ನಡ ಅಭಿವೃದ್ಧಿ ಪ್ರಾಧಿಕಾರ ನವೆಂಬರ್ 2020ರಿಂದ ಅಕ್ಟೋಬರ್ 2021ರವರೆಗೆ ಕನ್ನಡ ಕಾಯಕ ವರ್ಷವನ್ನಾಗಿ ಆಚರಿಸಲು ನಿರ್ಧರಿಸಿದೆ. ಈಗ ಮಾಧ್ಯಮಗಳಲ್ಲಿ ಸರಿಗನ್ನಡ ಬಳಕೆ ಅಭಿಯಾನ ಆರಂಭಿಸಿದ್ದು, ಅಭಿಯಾನದ ಅಂಗವಾಗಿ ಜಿಲ್ಲೆಯ ಮಾಧ್ಯಮ ಕಚೇರಿಗಳಿಗೆ ಹೋಗಿ ಈ ಕುರಿತು ಜಾಗೃತಿ ಮೂಡಿಸಲಾಗುವುದು ಎಂದು ಜಿಲ್ಲಾ ಕನ್ನಡ ಜಾಗೃತ ಸಮಿತಿ ಸದಸ್ಯ ಎನ್.ಟಿ. ಯರ್ರಿಸ್ವಾಮಿ ತಿಳಿಸಿದರು.
ಮಂಗಳವಾರ ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಕುರಿತು ಪ್ರಾಧಿಕಾರದಿಂದ ಪತ್ರಕರ್ತರಿಗೆ ಕಾರ್ಯಾಗಾರ, ಪದಕೋಶ ಪಟ್ಟಿ ವಿತರಣೆಯ ಚಿಂತನೆಯೂ ನಡೆದಿದೆ. ಈ ಅಭಿಯಾನವನ್ನು ಪರಿಣಾಮಕಾರಿಯಾಗಿ ಯಶಸ್ವಿಗೊಳಿಸಲು ಕನ್ನಡ ಅಭಿವೃದ್ಧಿ ಪ್ರಾಧಿಕಾರ ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘ ಹಾಗೂಎಲ್ಲ ದೃಶ್ಯ, ಶ್ರವ್ಯ ಮತ್ತು ಮುದ್ರಣ ಮಾಧ್ಯಮಗಳ ಸಂಪಾದಕರು, ಮುಖ್ಯಸ್ಥರು ಮತ್ತು ಎಲ್ಲ ಮಾಧ್ಯಮ ಪ್ರತಿನಿಧಿಗಳ ಸಹಕಾರ ಬಯಸುತ್ತದೆ ಎಂದರು.
ಪ್ರಾಧಿಕಾರವು ಆಡಳಿತದಲ್ಲಿ ಕನ್ನಡ, ಬ್ಯಾಂಕ್ ಗಳಲ್ಲಿ ಕನ್ನಡ, ನಾಮಫಲಕಗಳಲ್ಲಿ ಕನ್ನಡ ಹಾಗೂ ನ್ಯಾಯಾಲಯಗಳಲ್ಲಿ ಕನ್ನಡ ಎಂಬ ಕಾರ್ಯಕ್ರಮಗಳ ಮೂಲಕ ಕನ್ನಡ ಜಾಗೃತಿ ಮೂಡಿಸುವ ಕೆಲಸ ಮಾಡುತ್ತಿದೆ. ಸವಿಗನ್ನಡ ಸರಿಗನ್ನಡವಾಗಬೇಕು ಎಂದು ಮಾಧ್ಯಮಗಳಲ್ಲಿ ಸರಿಗನ್ನಡ ಬಳಕೆ ಅಭಿಯಾನ ಹಮ್ಮಿಕೊಂಡಿದೆ ಎಂದರು.
ಇನ್ನೋರ್ವ ಸದಸ್ಯ ಭಾ.ಮ. ಬಸವರಾಜಯ್ಯ ಮಾತನಾಡಿ, ವ್ಯಾಪಾರ ಪರವಾನಗಿ ನೀಡುವ ಅಧಿಕಾರವನ್ನು ಸ್ಥಳೀಯ ಸಂಸ್ಥೆಗಳಿಗೆ ನೀಡಿದರೆ ಕನ್ನಡದಲ್ಲಿ ನಾಮಫಲಕ ಕಡ್ಡಾಯಗೊಳಿಸಲು ಸಹಕಾರಿಯಾಗುತ್ತದೆ ಎಂದು ಸಲಹೆ ನೀಡಿದರು. ಕನ್ನಡ ಜಾಗೃತ ವೇದಿಕೆ ಸದಸ್ಯರಾದ ಮಹಾಲಿಂಗಪ್ಪ, ಭಿಕ್ಷಾವರ್ತಿಮಠ, ಸತ್ಯಭಾಮ, ದೇವಿಕಾ, ದಿಳ್ಳೆಪ್ಪ ಇನ್ನಿತರರು ಸುದ್ದಿಗೋಷ್ಠಿಯಲ್ಲಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere: ವೃದ್ಧೆ ಮೇಲೆ ಅತ್ಯಾ*ಚಾರ; ಯುವಕನಿಗೆ 10 ವರ್ಷ ಕಠಿಣ ಶಿಕ್ಷೆ
Davanagere: ಬಿಜೆಪಿ-ಕಾಂಗ್ರೆಸ್ ಹೊಂದಾಣಿಕೆ ಆರೋಪದ ಬಗ್ಗೆ ರೇಣುಕಾಚಾರ್ಯ ಸ್ಪಷ್ಟನೆ
Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ ಕಾಂಗ್ರೆಸ್ ಶಾಸಕ
Davangere: 2021ರಲ್ಲಿ ಅಪ್ರಾಪ್ತೆಯನ್ನು ಅಪಹರಿಸಿ ಅತ್ಯಾಚಾರವೆಸಗಿದ್ದವನಿಗೆ ಶಿಕ್ಷೆ ಪ್ರಕಟ
Davanagere: ಪಾಠ ಮಾಡುತ್ತಿದ್ದಾಗಲೇ ಹೃದಯಾಘಾತ; ಶಿಕ್ಷಕ ಸಾವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Session: ಕಾಂಗ್ರೆಸಿಗರ ವೀಡಿಯೋಗೆ ಯಾವ ಬೆಲೆಯೂ ಇಲ್ಲ: ಎಂಎಲ್‌ಸಿ ರವಿಕುಮಾರ್
Parliament: ಸಂಸದರ ತಳ್ಳಾಟ: ಇಂದು ಸಂಸತ್ ಭವನಕ್ಕೆ ದಿಲ್ಲಿ ಪೊಲೀಸರ ಭೇಟಿ?
Former Supreme Court Judge ವಿ.ಸುಬ್ರಹ್ಮಣಿಯನ್ ಎನ್‌ಎಚ್‌ಆರ್‌ಸಿ ಮುಖ್ಯಸ್ಥ
Shatrughan Sinha ಪುತ್ರಿ ವಿವಾಹ ಬಗ್ಗೆ ವಿಶ್ವಾಸ್ ವಿವಾದಾಸ್ಪದ ಹೇಳಿಕೆ
Maharashtra: ನಿಗದಿತ ಮಾರ್ಗ ಬಿಟ್ಟು ಬೇರೆಡೆ ಸಾಗಿದ ವಂದೇ ಭಾರತ್ ರೈಲು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.