ಪರಿಶಿಷ್ಟ ವರ್ಗಗಳ ಅಭಿವೃದ್ಧಿ ಅನುದಾನ ಇತರೆಡೆ ಬಳಕೆ!
Team Udayavani, Jan 14, 2020, 12:19 PM IST
ಚನ್ನಗಿರಿ: ರಾಜ್ಯ ಸರ್ಕಾರ ಪರಿಶಿಷ್ಟರ ಕಾಲೋನಿಗಳ ಅಭಿವೃದ್ಧಿಗೆ ಹಲವಾರು ಯೋಜನೆಗಳ ಅನುಷ್ಠಾನಕ್ಕೆ ಮುಂದಾಗಿದ್ದರೂ, ನವಗ್ರಾಮ ಯೋಜನೆಗೆ ಆಯ್ಕೆಯಾದ ಬಸವಾಪುರ ಗ್ರಾಮದಲ್ಲಿ ಪರಿಶಿಷ್ಟ ವರ್ಗವಲ್ಲದ ಕಾಲೋನಿಯಲ್ಲಿ ಪರಿಶಿಷ್ಟ ವರ್ಗ ಕಲ್ಯಾಣ ಇಲಾಖೆ ವಿಶೇಷ ಅನುದಾನದಲ್ಲಿ ಅಭಿವೃದ್ಧಿ ಕಾಮಗಾರಿ ಕೈಗೊಂಡಿರುವುದು ಪರಿಶಿಷ್ಟ ಪಂಗಡ ಇಲಾಖೆ ಹಣ ದುರ್ಬಳಕೆಗೆ ಹಿಡಿದ ಕೈಗನ್ನಡಿಯಾಗಿದೆ.
ಹೌದು, ಶಾಸಕ ಮಾಡಾಳ್ ವಿರೂಪಾಕ್ಷಪ್ಪ ತವರು ಗ್ರಾಪಂ ಚನ್ನೇಶಪುರ ವ್ಯಾಪ್ತಿಯಲ್ಲಿ ಬರುವ ಬಸವಾಪುರ ಗ್ರಾಮದಲ್ಲಿ ಇಂತಹ ಪ್ರಕರಣವೊಂದು ಬೆಳಕಿಗೆ ಬಂದಿದೆ. ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯಿಂದ ಗ್ರಾಮದ ಪರಿಶಿಷ್ಟ ವರ್ಗದ ಕಾಲೋನಿಗಳ ಅಭಿವೃದ್ಧಿಗೆ 50 ಲಕ್ಷ ರೂ. ಮಂಜೂರಾಗಿತ್ತು. ಮಂಜೂರು ಆದ ಅನುದಾನದಲ್ಲಿ ಸುಮಾರು 25 ಲಕ್ಷ ರೂ. ಹಣ ದುರ್ಬಳಕೆಯಾಗಿದೆ ಎಂಬ ಆರೋಪ ಈಗ ಕೇಳಿ ಬಂದಿದೆ.
ಗ್ರಾಮದ ಬಸವೇಶ್ವರ ದೇವಸ್ಥಾನದಿಂದ ಹಾಲಸ್ವಾಮಿ ದೇವಸ್ಥಾನದವರೆಗೆ ರಸ್ತೆಯ ಎರಡು ಭಾಗದಲ್ಲಿ ಬಾಕ್ಸ್ ಚರಂಡಿ ನಿರ್ಮಿಸಿದ್ದು. ಈ ಕಾಲೋನಿಯಲ್ಲಿ ಪರಿಶಿಷ್ಟ ವರ್ಗಕ್ಕೆ ಸೇರಿದ ಒಂದು ಮನೆ ಕೂಡ ಇಲ್ಲ. 50 ಲಕ್ಷ ರೂ. ಅನುದಾನದಲ್ಲಿ 25 ಲಕ್ಷ ರೂ.ಹಣವನ್ನು ಇಲ್ಲಿ ಖರ್ಚು ಮಾಡಲಾಗಿದೆ. ಉಳಿದ 25 ಲಕ್ಷ ರೂ. ಅನುದಾನವನ್ನು ಪರಿಶಿಷ್ಟ ವರ್ಗದ ಜನ ವಾಸವಾಗಿರುವ ಕಾಲೋನಿಗಳ ಚರಂಡಿಗಳ ಅಭಿವೃದ್ಧಿಗೆ ಬಳಸಲಾಗಿದೆ.
ಪರಿಶಿಷ್ಟ ವರ್ಗದ ಕಾಲೋನಿಗೆ ಬೇಕಿವೆ ಸೌಲಭ್ಯಗಳು: ಬಸವಾಪುರ ಗ್ರಾಮದಲ್ಲಿ ಪರಿಶಿಷ್ಟ ವರ್ಗದ ಜನರು ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಇನ್ನೂ ಕೂಡ ಈ ಗ್ರಾಮಕ್ಕೆ ಸಂಚಾರದ ವ್ಯವಸ್ಥೆಯಿಲ್ಲ, ಕೆಲ ರಸ್ತೆಗಳು ಡಾಂಬರೀಕರಣ ಅಥವಾ ಕಾಂಕ್ರೀಟ್ ಭಾಗ್ಯ ಇಲ್ಲಿವರೆಗೂ ಕಂಡಿಲ್ಲ, ಇನ್ನು ಪರಿಶಿಷ್ಟರ ಕಾಲೋನಿಗಳಲ್ಲಿ ಮೂಲಭೂತ ಸಮಸ್ಯೆ ತಾಂಡವವಾಡುತ್ತಿವೆ. ಚರಂಡಿಗಳಿಲ್ಲದೆ ನೀರು ಸಂಗ್ರಹವಾಗಿ ರೋಗರುಜಿನಗಳು ಹರಡುತ್ತಿವೆ. ಅಧಿಕಾರಿಗಳು ನಿಯಮಗಳನ್ನು ಗಾಳಿಗೆ ತೂರಿ ಪ್ರತಿಷ್ಠಿತ ಕಾಲೋನಿ ಅಭಿವೃದ್ಧಿ ಪಡಿಸಿದ್ದು, ಪರಿಶಿಷ್ಟ ವರ್ಗಗಳ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಇಷ್ಟೆಲ್ಲ ಸಮಸ್ಯೆಯಿದ್ದರೂ ಪರಿಶಿಷ್ಟರ ಅಭಿವೃದ್ಧಿಗೆ ಬಳಸಬೇಕಾದ ಹಣವನ್ನು ಇತರೆಡೆ ಬಳಸಿರುವುದು ಅಕ್ಷಮ್ಯ ಅಪರಾಧ. ತಕ್ಷಣ ಹಣ ದುರ್ಬಳಕೆ ಕುರಿತು ತನಿಖೆ ನಡೆಸಬೇಕು ಎಂಬುದು ಪರಿಶಿಷ್ಟ ವರ್ಗದ ನಿವಾಸಿಗಳ ಆಗ್ರಹವಾಗಿದೆ.
–ಶಶೀಂದ್ರ ಸಿ.ಎಸ್. ಚನ್ನಗಿರಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere: ವೃದ್ಧೆ ಮೇಲೆ ಅತ್ಯಾ*ಚಾರ; ಯುವಕನಿಗೆ 10 ವರ್ಷ ಕಠಿಣ ಶಿಕ್ಷೆ
Davanagere: ಬಿಜೆಪಿ-ಕಾಂಗ್ರೆಸ್ ಹೊಂದಾಣಿಕೆ ಆರೋಪದ ಬಗ್ಗೆ ರೇಣುಕಾಚಾರ್ಯ ಸ್ಪಷ್ಟನೆ
Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ ಕಾಂಗ್ರೆಸ್ ಶಾಸಕ
Davangere: 2021ರಲ್ಲಿ ಅಪ್ರಾಪ್ತೆಯನ್ನು ಅಪಹರಿಸಿ ಅತ್ಯಾಚಾರವೆಸಗಿದ್ದವನಿಗೆ ಶಿಕ್ಷೆ ಪ್ರಕಟ
Davanagere: ಪಾಠ ಮಾಡುತ್ತಿದ್ದಾಗಲೇ ಹೃದಯಾಘಾತ; ಶಿಕ್ಷಕ ಸಾವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Sheikh ಹಸೀನಾರನ್ನು ಬಾಂಗ್ಲಾದೇಶಕ್ಕೆ ವಾಪಸ್ ಕಳುಹಿಸಿ: ಭಾರತಕ್ಕೆ ಬಾಂಗ್ಲಾ ಮನವಿ
Seema Haider; 4 ಮಕ್ಕಳೊಂದಿಗೆ ಭಾರತಕ್ಕೆ ಬಂದಿದ್ದ ಸೀಮಾ ಈಗ ಗರ್ಭಿಣಿ!!
Shimoga; ನಿತ್ಯ ಸುದ್ದಿಯಲ್ಲಿರಬೇಕೆಂದು ಸಿ.ಟಿ ರವಿ ʼಆʼ ಹೇಳಿಕೆ ನೀಡಿದ್ದಾರೆ: ಆಯನೂರು
Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ
Drama ಬಿಟ್ಟು ಅಂಬೇಡ್ಕರ್ ಅವರಿಗೆ ನಿರಂತರ ಅವಮಾನ ಮಾಡಿದ್ದಕ್ಕೆ ಕಾಂಗ್ರೆಸ್ ಕ್ಷಮೆ ಕೇಳಲಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.